← Jeremiah (2/52) → |
1. | ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ-- |
2. | ನೀನು ಹೋಗಿ ಯೆರೂಸಲೇಮಿನ ಕಿವಿಗಳಲ್ಲಿ ಕೂಗಿ ಹೇಳ ಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ನಾನು ನಿನ್ನನ್ನು ನಿನ್ನ ಯೌವನದ ವಾತ್ಸಲ್ಯವನ್ನೂ ನಿನ್ನ ನಿಶ್ಚಿತಾರ್ಥದ ಪ್ರೀತಿಯನ್ನೂ ನೀನು ಅರಣ್ಯದಲ್ಲಿ ಬಿತ್ತಲ್ಪಡದ ದೇಶದಲ್ಲಿ ನನ್ನನ್ನು ಹಿಂಬಾಲಿಸಿದ್ದನ್ನೂ ಜ್ಞಾಪಕಮಾಡಿಕೊಳ್ಳುತ್ತೇನೆ. |
3. | ಇಸ್ರಾಯೇಲು ಕರ್ತನಿಗೆ ಪರಿಶುದ್ಧವೂ ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿತ್ತು; ಅದನ್ನು ತಿಂದುಬಿಟ್ಟವರೆಲ್ಲರೂ ಅಪರಾಧಿ ಗಳಾಗುವರು; ಅವರಿಗೆ ಕೇಡು ಬರುವದೆಂದು ಕರ್ತನು ಅನ್ನುತ್ತಾನೆ. |
4. | ಓ ಯಾಕೋಬಿನ ಮನೆತನವೇ, ಇಸ್ರಾಯೇಲಿನ ಮನೆತನದ ಎಲ್ಲಾ ಕುಟುಂಬಗಳೇ, ಕರ್ತನ ವಾಕ್ಯವನ್ನು ನೀವು ಕೇಳಿರಿ. |
5. | ಕರ್ತನು ಹೀಗೆ ಹೇಳುತ್ತಾನೆ, ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ ವ್ಯರ್ಥವಾಗುವ ಹಾಗೆ ನನ್ನಲ್ಲಿ ಯಾವ ಅಕ್ರಮವನ್ನು ಕಂಡಿದ್ದಾರೆ? |
6. | ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ನಮ್ಮನ್ನು ಅರಣ್ಯದಲ್ಲಿ ಕಾಡೂ ಕುಣಿಗಳೂ ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದು ಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡಿಸಿದ ಕರ್ತನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲ. |
7. | ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಫಲವನ್ನೂ ಮೇಲನ್ನೂ ತಿನ್ನುವ ಹಾಗೆ ಕರಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸ್ವಾಸ್ತ್ಯವನ್ನು ಅಸಹ್ಯ ಮಾಡಿದಿರಿ. |
8. | ಯಾಜಕರು--ಕರ್ತನು ಎಲ್ಲಿದ್ದಾನೆ ಎಂದು ಹೇಳಲಿಲ್ಲ; ನ್ಯಾಯ ಪ್ರಮಾಣವನ್ನು ಉಪಯೋಗಿಸುವವರು ನನ್ನನ್ನು ತಿಳಿಯಲಿಲ್ಲ; ಪಾಲಕರು ನನಗೆ ವಿರೋಧವಾಗಿ ದ್ರೋಹಮಾಡಿದರು; ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು; ಪ್ರಯೋಜನವಿಲ್ಲದವುಗಳನ್ನು ಹಿಂದ ಟ್ಟಿದರು. |
9. | ಆದದರಿಂದ ಇನ್ನು ನಿಮ್ಮ ಸಂಗಡ ವ್ಯಾಜ್ಯ ವಾಡುವೆನೆಂದು ಕರ್ತನು ಅನ್ನುತ್ತಾನೆ; ಇದಲ್ಲದೆ ನಿಮ್ಮ ಮಕ್ಕಳ ಮಕ್ಕಳ ಸಂಗಡ ವ್ಯಾಜ್ಯವಾಡುವೆನು. |
10. | ಕಿತ್ತೀಮ್ ದ್ವೀಪಗಳಿಗೆ ದಾಟಿ ಹೋಗಿ ನೋಡಿರಿ; ಕೇದಾರಿಗೆ ಕಳುಹಿಸಿ ಚೆನ್ನಾಗಿ ತಿಳುಕೊಳ್ಳಿರಿ; ಅಂಥದ್ದು (ಎಲ್ಲಿಯಾದರೂ) ಉಂಟೋ? ನೋಡಿರಿ. |
11. | ಜನಾಂ ಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದಾಗ್ಯೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ. |
12. | ಓ ಆಕಾಶಗಳೇ, ಇದಕ್ಕೆ ನೀವು ಆಶ್ಚರ್ಯಪಡಿರಿ, ಭಯಭ್ರಾಂತಿಗೊಳ್ಳಿರಿ, ತೀರ ಹಾಳಾಗಿರಿ ಎಂದು ಕರ್ತನು ಅನ್ನುತ್ತಾನೆ. |
13. | ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ. |
14. | ಇಸ್ರಾಯೇಲನು ಸೇವಕನೋ? ಮನೆಯಲ್ಲಿ ಹುಟ್ಟಿದ ಗುಲಾಮನೋ? ಅವನು ಯಾಕೆ ಸುಲಿಗೆಯಾದನು? |
15. | ಪ್ರಾಯದ ಸಿಂಹಗಳು ಅವನಿಗೆ ವಿರೋಧವಾಗಿ ಘರ್ಜಿಸಿ, ಅಬ್ಬ ರಿಸುತ್ತವೆ. ಅವನ ದೇಶವನ್ನು ಹಾಳುಮಾಡುತ್ತವೆ; ಅವನ ಪಟ್ಟಣಗಳು ನಿವಾಸವಿಲ್ಲದೆ ಸುಟ್ಟುಹೋಗಿವೆ. |
16. | ನೋಫ್ ಮತ್ತು ತಪನೆಯ ಮಕ್ಕಳೂ ಸಹ ನಿನ್ನ ತಲೆಯ ಕಿರೀಟವನ್ನು ಮುರಿದುಬಿಟ್ಟಿದ್ದಾರೆ. |
17. | ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡಿ ಅಲ್ಲವೋ? |
18. | ಈಗ ಸಿಹೋರಿನ ನೀರು ಕುಡಿಯುವದಕ್ಕಾಗಿ ಐಗುಪ್ತದ ದಾರಿಯಲ್ಲಿ ನಿನಗೇನು ಕೆಲಸ? ಇಲ್ಲವೆ ನದಿಯ ನೀರು ಕುಡಿ ಯುವದಕ್ಕಾಗಿ ಅಶ್ಶೂರಿನ ದಾರಿಯಲ್ಲಿ ನಿನಗೇನು ಕೆಲಸ? |
19. | ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ. |
20. | ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ. |
21. | ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ? |
22. | ನೀನು ಸೌಳಿನಿಂದ ತೊಳಕೊಂಡರೂ ಬಹಳ ಸಾಬೂನು ಹಾಕಿಕೊಂಡರೂ ನಿನ್ನ ಅಕ್ರಮವು ನನ್ನ ಮುಂದೆ ಕಳಂಕವಾಗಿದೆ ಎಂದು ಕರ್ತನಾದ ದೇವರು ಅನ್ನುತ್ತಾನೆ. |
23. | ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ ಎಂದು ನೀನು ಹೇಳುವದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು; ನೀನು ಮಾಡಿದ್ದನ್ನು ತಿಳುಕೋ; ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ; |
24. | ಅರಣ್ಯದ ಅಭ್ಯಾಸ ವುಳ್ಳ ಕಾಡುಕತ್ತೆಯೇ; ಅವಳ ಅತ್ಯಾಶೆಯಲ್ಲಿ ಗಾಳಿ ಯನ್ನು ಹೀರಿಕೊಳ್ಳುತ್ತಾಳೆ; ಅವಳ ಮದವನ್ನು ಯಾರು ತಡೆಯುವರು? ಅವಳನ್ನು ಹುಡುಕುವವ ರೆಲ್ಲರೂ ಆಯಾಸಪಡುವದಿಲ್ಲ; ಅವಳ ತಿಂಗಳಲ್ಲಿ ಅವಳನ್ನು ಕಾಣುವರು. |
25. | ನಿನ್ನ ಕಾಲು ಬರೀ ಕಾಲಾ ಗದ ಹಾಗೆಯೂ ನಿನ್ನ ಗಂಟಲು ನೀರಡಿಕೆ ಪಡದ ಹಾಗೆಯೂ ಹಿಂತೆಗೆ; ಆದರೆ ನೀನು--ಇಲ್ಲ, ನಿರೀಕ್ಷೆ ಯಿಲ್ಲ, ಯಾಕಂದರೆ ನಾನು ಅನ್ಯರನ್ನು ಪ್ರೀತಿ ಮಾಡಿದ್ದೇನೆ. ಅವರ ಹಿಂದೆ ನಾನು ಹೋಗುತ್ತೇನೆ ಎಂದು ನೀನು ಹೇಳಿದಿ. |
26. | ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲಿನ ಮನೆತನ ದವರಿಗೆ ನಾಚಿಕೆಯಾಯಿತು; ಅವರಿಗೂ ಅವರ ಅರಸರಿಗೂ ಸಾಮಂತರಿಗೂ ಯಾಜಕರಿಗೂ ಅವರ ಪ್ರವಾದಿಗಳಿಗೂ ನಾಚಿಕೆಯಾಯಿತು. |
27. | ಅವರು ಮರಕ್ಕೆ ನೀನು ನನ್ನ ತಂದೆ ಎಂದೂ ಕಲ್ಲಿಗೆ--ನೀನು ನನ್ನನ್ನು ಹೆತ್ತಿದ್ದೀ ಎಂದೂ ಹೇಳುತ್ತಾರಲ್ಲಾ? ಯಾಕಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ಅವರ ಕಷ್ಟ ಕಾಲದಲ್ಲಿ--ಎದ್ದು, ನಮ್ಮನ್ನು ರಕ್ಷಿಸು ಎಂದು ಹೇಳುವರು. |
28. | ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟ ಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಯಾಕಂದರೆ ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ. |
29. | ಏಕೆ ನನ್ನ ಸಂಗಡ ವಾದಿಸುತ್ತೀರಿ? ನೀವೆಲ್ಲರು ನನಗೆ ವಿರೋಧವಾಗಿ ದ್ರೋಹಮಾಡಿ ದ್ದೀರಿ ಎಂದು ಕರ್ತನು ಅನ್ನುತ್ತಾನೆ. |
30. | ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ. |
31. | ಓ ಸಂತತಿಯೇ, ನೀವು ಕರ್ತನ ವಾಕ್ಯವನ್ನು ನೋಡಿರಿ; ನಾನು ಇಸ್ರಾಯೇಲಿನ ಅರಣ್ಯವಾ ದೆನೋ? ಕತ್ತಲೆಯ ದೇಶವಾದೆನೋ? ಯಾತಕ್ಕೆ ನನ್ನ ಜನರು--ನಾವು ಪ್ರಭುಗಳು, ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವದಿಲ್ಲ ಎಂದು ಹೇಳುತ್ತಾರೆ. |
32. | ಯುವತಿಯು ತನ್ನ ಆಭರಣಗಳನ್ನೂ ಮದಲಗಿತ್ತಿಯು ತನ್ನ ಒಡ್ಯಾಣವನ್ನೂ ಮರೆತುಬಿಡುವಳೋ? ಆದಾಗ್ಯೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ. |
33. | ಪ್ರೀತಿಯನ್ನು ಹುಡುಕುವ ಹಾಗೆ ನಿನ್ನ ಮಾರ್ಗವನ್ನು ಯಾಕೆ ಚಂದ ಮಾಡಿಕೊಳ್ಳುತ್ತೀ? ಕೆಟ್ಟ ಹೆಂಗಸರಿಗೂ ನಿನ್ನ ಮಾರ್ಗವನ್ನು ಕಲಿಸಿದ್ದೀ. |
34. | ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ. |
35. | ಆದಾಗ್ಯೂ ನೀನು--ನಾನು ನಿರಪರಾಧಿಯಾಗಿರುವ ಕಾರಣ ನಿಶ್ಚಯವಾಗಿ ಆತನ ಕೋಪವು ನನ್ನನ್ನು ಬಿಟ್ಟು ತಿರುಗುವದೆಂದು ಹೇಳುತ್ತೀ; ನಾನು ಪಾಪ ಮಾಡಲಿಲ್ಲವೆಂದು ನೀನು ಹೇಳುವದ ರಿಂದ ಇಗೋ, ನಾನು ನಿನಗೆ ನ್ಯಾಯತೀರಿಸುವೆನು. |
36. | ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ. |
37. | ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ. |
← Jeremiah (2/52) → |