← Jeremiah (36/52) → |
1. | ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೇ ವರುಷದಲ್ಲಿ ಆದದ್ದೇನಂದರೆ--ಯೆರೆವಿಾಯ ನಿಗೆ ಕರ್ತನಿಂದ ಈ ವಾಕ್ಯ ಉಂಟಾಯಿತು, ಯಾವ ದಂದರೆ-- |
2. | ಪುಸ್ತಕದ ಸುರಳಿಯನ್ನು ತಕ್ಕೊಂಡು ನಾನು ಇಸ್ರಾಯೇಲಿಗೂ ಯೆಹೂದಕ್ಕೂ ಎಲ್ಲಾ ಜನಾಂಗ ಗಳಿಗೂ ವಿರೋಧವಾಗಿ ನಿನ್ನ ಸಂಗಡ ಮಾತಾಡಿ ದಂದಿನಿಂದ ಯೋಷೀಯನ ದಿನಗಳು ಮೊದಲು ಗೊಂಡು ಈ ದಿನದ ವರೆಗೂ ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ. |
3. | ಒಂದು ವೇಳೆ ಯೆಹೂ ದದ ಮನೆತನದವರು ನಾನು ಅವರಿಗೆ ಮಾಡುವದಕ್ಕೆ ನೆನಸುವ ಕೇಡನ್ನೆಲ್ಲಾ ಕೇಳಿ ನಾನು ಅವರ ಅಕ್ರಮವನ್ನೂ ಪಾಪವನ್ನೂ ಮನ್ನಿಸುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು ಅಂದನು. |
4. | ಆಗ ಯೆರೆವಿಾಯನು ನೇರೀಯನ ಮಗನಾದ ಬಾರೂಕನನ್ನು ಕರೆದನು; ಬಾರೂಕನು ಯೆರೆವಿಾಯನ ಬಾಯಿಂದ ಕರ್ತನು ಅವನಿಗೆ ಹೇಳಿದ್ದ ಮಾತು ಗಳನ್ನೆಲ್ಲಾ ಕೇಳಿ ಪುಸ್ತಕದ ಸುರಳಿಯಲ್ಲಿ ಬರೆ ದನು. |
5. | ಆಮೇಲೆ ಯೆರೆವಿಾಯನು ಬಾರೂಕನಿಗೆ ಆಜ್ಞಾಪಿ ಸಿದ್ದೇನಂದರೆ--ನಾನು ಸೆರೆಯಲ್ಲಿಡಲ್ಪಟ್ಟಿದ್ದೇನೆ, ಕರ್ತನ ಆಲಯಕ್ಕೆ ಹೋಗಲಾರೆನು. |
6. | ಆದದರಿಂದ ನೀನು ಹೋಗಿ ನನ್ನ ಬಾಯಿಂದ ಕೇಳಿ ನೀನು ಬರೆದ ಸುರಳಿಯಲ್ಲಿ ಕರ್ತನ ಆಲಯದೊಳಗೆ ಉಪವಾಸದ ದಿವಸದಲ್ಲಿ ಕರ್ತನ ವಾಕ್ಯಗಳನ್ನು ಜನರಿಗೆ ಕೇಳುವಂತೆ ಓದಿ ಹೇಳು ಮತ್ತು ತಮ್ಮ ಪಟ್ಟಣಗಳಿಂದ ಬರುವ ಯೆಹೂದದವರೆಲ್ಲರೂ ಕೇಳುವಂತೆಯೂ ಅವುಗಳನ್ನು ಓದಿ ಹೇಳಬೇಕು. |
7. | ಒಂದು ವೇಳೆ ಅವರ ವಿಜ್ಞಾಪನೆ ಕರ್ತನ ಮುಂದೆ ಬಂದೀತು; ಅವರು ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು; ಕರ್ತನು ಈ ಜನರಿಗೆ ವಿರೋಧವಾಗಿ ಪ್ರಕಟಿಸಿರುವ ಕೋಪವೂ ಉರಿಯೂ ಅಪಾರವಾಗಿದೆ ಅಂದನು. |
8. | ಆಗ ಪ್ರವಾದಿ ಯಾದ ಯೆರೆವಿಾಯನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಬಾರೂಕನು ಮಾಡಿ ಕರ್ತನ ವಾಕ್ಯಗಳನ್ನು ಪುಸ್ತಕ ದಿಂದ ಕರ್ತನ ಆಲಯದಲ್ಲಿ ಓದಿದನು. |
9. | ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾ ಕೀಮನ ಐದನೇ ವರುಷದ ಒಂಭತ್ತನೇ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿರುವ ಎಲ್ಲಾ ಜನರಿಗೂ ಯೆಹೂದದ ಪಟ್ಟಣಗಳಿಂದ ಯೆರೂಸಲೇಮಿಗೆ ಬಂದ ಜನರೆಲ್ಲರಿಗೂ ಕರ್ತನ ಸನ್ನಿಧಿಯಲ್ಲಿ ಉಪವಾಸವನ್ನು ಸಾರಿದರು. |
10. | ಆಗ ಬಾರೂಕನು ಪುಸ್ತಕದಿಂದ ಯೆರೆ ವಿಾಯನ ವಾಕ್ಯಗಳನ್ನು ಕರ್ತನ ಆಲಯದಲ್ಲಿ ಲೇಖಕ ನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೊಠಡಿ ಯಲ್ಲಿ, ಮೇಲಿನ ಅಂಗಳದಲ್ಲಿ, ಕರ್ತನ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಎಲ್ಲಾ ಜನರ ಕಿವಿಗಳಲ್ಲಿ ಓದಿ ಹೇಳಿದನು. |
11. | ಶಾಫಾನನ ಮಗನಾದ ಗೆಮ ರ್ಯನ ಮಗನಾದ ವಿಾಕಾಯನು ಕರ್ತನ ವಾಕ್ಯಗಳ ನ್ನೆಲ್ಲಾ ಆ ಪುಸ್ತಕದ ಮೇರೆಗೆ ಕೇಳಿದ ತರುವಾಯ ಅವನು ಅರಸನ ಮನೆಗೆ, |
12. | ಲೇಖಕನ ಕೊಠಡಿಗೆ ಇಳಿದು ಹೋದನು; ಅಗೋ, ಅಲ್ಲಿ ಪ್ರಧಾನರೆಲ್ಲರು ಕೂತುಕೊಂಡಿದ್ದರು; ಯಾರಂದರೆ--ಲೇಖಕನಾದ ಎಲೀಷಾಮನೂ ಶೆಮಾಯನ ಮಗನಾದ ದೆಲಾ ಯನೂ ಅಕ್ಬೋರನ ಮಗನಾದ ಎಲ್ನಾಥಾನೂ ಶಾಫಾ ನನ ಮಗನಾದ ಗೆಮರ್ಯನೂ ಹನನೀಯನ ಮಗ ನಾದ ಚಿದ್ಕೀಯನೂ ಇವರೇ. |
13. | ಆಗ ಬಾರೂಕನು ಆ ಪುಸ್ತಕವನ್ನು ಜನರಿಗೆ ಓದಿ ಹೇಳಿದಾಗ ವಿಾಕಾ ಯನು ತಾನು ಕೇಳಿದ ವಾಕ್ಯಗಳನ್ನೆಲ್ಲಾ ಅವರಿಗೆ ತಿಳಿಸಿದನು. |
14. | ಆದದರಿಂದ ಪ್ರಧಾನರೆಲ್ಲರೂ ಕೂಷಿಯ ಮಗನಾದ ಶೆಲೆಮ್ಯನ ಮಗನಾದ ನೆಥನ್ಯನ ಮಗನಾದ ಯೆಹೂದಿಯನ್ನು ಬಾರೂಕನ ಬಳಿಗೆ ಕಳುಹಿಸಿ--ನೀನು ಜನರಿಗೆ ಓದಿ ಹೇಳಿದ ಸುರಳಿಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಬಾ ಎಂದು ಹೇಳಿದರು; ಹಾಗೆಯೇ ನೇರೀಯನ ಮಗನಾದ ಬಾರೂಕನು ಸುರಳಿಯನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಅವರ ಬಳಿಗೆ ಬಂದನು. |
15. | ಆಗ ಅವರು ಅವನಿಗೆ--ಈಗ ಕೂತುಕೊಂಡು ನಮಗೆ ಓದಿ ಹೇಳು ಅಂದರು; ಆಗ ಬಾರೂಕನು ಅವರಿಗೆ ಓದಿ ಹೇಳಿದನು. |
16. | ಆಗ ಆದದ್ದೇನಂದರೆ--ಅವರು ಆ ವಾಕ್ಯಗಳನ್ನೆಲ್ಲಾ ಕೇಳಿದ ಮೇಲೆ ಒಬ್ಬರಿಗೊಬ್ಬರು ಹೆದರಿಕೊಂಡು--ನಾವು ನಿಶ್ಚಯವಾಗಿ ಈ ವಾಕ್ಯಗಳನ್ನೆಲ್ಲಾ ಅರಸನಿಗೆ ತಿಳಿಸುತ್ತೇ ವೆಂದು ಬಾರೂಕನಿಗೆ ಹೇಳಿದರು. |
17. | ಅವರು ಬಾರೂಕ ನಿಗೆ--ನೀನು ಅವನ ಬಾಯಿಂದ ಈ ವಾಕ್ಯಗಳನ್ನೆಲ್ಲಾ ಹೇಗೆ ಬರೆದದ್ದನ್ನು ನಮಗೆ ತಿಳಿಸು ಅಂದರು. |
18. | ಆಗ ಬಾರೂಕನು ಅವರಿಗೆ--ಅವನು ಬಾಯಿಂದ ಈ ವಾಕ್ಯ ಗಳನ್ನೆಲ್ಲಾ ನನಗೆ ಹೇಳಿಕೊಟ್ಟನು; ನಾನು ಅವುಗಳನ್ನು ಮಸಿಯಿಂದ ಪುಸ್ತಕದಲ್ಲಿ ಬರೆದೆನು ಅಂದನು. |
19. | ಆಗ ಪ್ರಧಾನರು ಬಾರೂಕನಿಗೆ--ನೀನೂ ಯೆರೆವಿಾಯನೂ ಹೋಗಿ ಅಡಗಿಕೊಳ್ಳಿರಿ; ನೀವು ಎಲ್ಲಿದ್ದೀರೆಂಬದು ಯಾರಿಗೂ ತಿಳಿಯಲ್ಪಡದೆ ಇರಲಿ ಅಂದರು. |
20. | ಆಮೇಲೆ ಅವರು ಅರಸನ ಬಳಿಗೆ ಅಂಗಳಕ್ಕೆ ಹೋದರು; ಆದರೆ ಆ ಸುರಳಿಯನ್ನು ಲೇಖಕನಾದ ಎಲೀಷಾಮನ ಕೊಠಡಿಯಲ್ಲಿ ಇಟ್ಟುಬಿಟ್ಟರು; ಅರಸನಿಗೆ ಆ ವಾಕ್ಯಗಳನ್ನೆಲ್ಲಾ ಹೇಳಿದರು. |
21. | ಆಗ ಅರಸನು ಆ ಸುರಳಿಯನ್ನು ತಕ್ಕೊಂಡು ಬರುವ ಹಾಗೆ ಯೆಹೂದಿಯನ್ನು ಕಳುಹಿಸಿದನು; ಅವನು ಅದನ್ನು ಲೇಖಕನಾದ ಎಲೀಷಾಮನ ಕೊಠಡಿಯೊಳಗಿಂದ ತೆಗೆದುಕೊಂಡನು; ಯೆಹೂದಿಯು ಅದನ್ನು ಅರಸನ ಮತ್ತು ಅವನ ಬಳಿಯಲ್ಲಿ ನಿಂತ ಎಲ್ಲಾ ಪ್ರಧಾನ ರಿಗೂ ಓದಿ ಹೇಳಿದನು. |
22. | ಆಗ ಒಂಭತ್ತನೇ ತಿಂಗಳಲ್ಲಿ ಅರಸನು ಚಳಿಗಾಲದ ಮನೆಯಲ್ಲಿ ಕೂತುಕೊಂಡಿದ್ದನು; ಅವನ ಮುಂದೆ ಅಗ್ಗಿಷ್ಟಿಕೆಯಲ್ಲಿ ಬೆಂಕಿ ಉರಿಯುತ್ತಿತ್ತು. |
23. | ಆಗ ಆದದ್ದೇನಂದರೆ--ಯೆಹೂದಿಯು ಮೂರು ನಾಲ್ಕು ಪುಟಗಳನ್ನು ಓದಿದ ಮೇಲೆ ಅದನ್ನು ಚೂರಿ ಯಿಂದ ಕೊಯ್ದು ಅಗ್ಗಿಷ್ಟಿಕೆಯಲ್ಲಿದ್ದ ಬೆಂಕಿಯೊಳಗೆ ಸುರಳಿಯನ್ನೆಲ್ಲಾ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಸುಟ್ಟು ಹೋಗುವ ವರೆಗೂ ಹಾಕಿಬಿಟ್ಟನು. |
24. | ಆದಾಗ್ಯೂ ಈ ವಾಕ್ಯಗಳನ್ನೆಲ್ಲಾ ಕೇಳಿದ ಅರಸನಾದರೂ ಅವನ ಸೇವಕರಲ್ಲಿ ಒಬ್ಬನಾದರೂ ಹೆದರಲಿಲ್ಲ, ತಮ್ಮವಸ್ತ್ರ ಗಳನ್ನು ಹರಕೊಳ್ಳಲಿಲ್ಲ. |
25. | ಹೀಗಾದರೂ ಎಲ್ನಾಥಾ ನನೂ ದೆಲಾಯನೂ ಗೆಮರ್ಯನೂ ಆ ಸುರಳಿಯು ಸುಡಲ್ಪಡದ ಹಾಗೆ ಅರಸನಿಗೆ ಬಿನ್ನಹ ಮಾಡಿದರು; ಆದರೆ ಅವನು ಅವರಿಗೆ ಕಿವಿಗೊಡಲಿಲ್ಲ. |
26. | ಅರಸನು ಎರಖ್ಮೆಯೆಲನ ಮಗನಾದ ಯೆರೆಮ್ಮೇಲನಿಗೂ ಅಜ್ರಿ ಯೇಲನ ಮಗನಾದ ಸೆರಾಯನಿಗೂ ಅಬ್ದೆಯೇಲನ ಮಗನಾದ ಶೆಲೆಮ್ಯನಿಗೂ ಲೇಖಕನಾದ ಬಾರೂಕ ನನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ಹಿಡಿಯ ಬೇಕೆಂದು ಆಜ್ಞಾಪಿಸಿದನು; ಆದರೆ ಕರ್ತನು ಅವರನ್ನು ಅಡಗಿಸಿದನು. |
27. | ಆಗ ಅರಸನು ಆ ಸುರಳಿಯನ್ನೂ ಬಾರೂಕನು ಯೆರೆವಿಾಯನ ಬಾಯಿಂದ ಬರೆದಿದ್ದ ವಾಕ್ಯಗಳನ್ನೂ ಸುಟ್ಟಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ-- |
28. | ನೀನು ಮತ್ತೊಂದು ಸುರಳಿಯನ್ನು ತಕ್ಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರಳಿ ಯಲ್ಲಿದ್ದ ಮುಂಚಿನ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ. |
29. | ಯೆಹೂದದ ಅರಸನಾದ ಯೆಹೋಯಾಕೀಮನಿಗೆ ನೀನು ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ಬಾಬೆಲಿನ ಅರಸನು ನಿಶ್ಚಯವಾಗಿ ಬಂದು ಈ ದೇಶವನ್ನು ನಾಶಮಾಡಿ ಮನುಷ್ಯರನ್ನೂ ಪ್ರಾಣ ಗಳನ್ನೂ ಅದರೊಳಗಿಂದ ಹಾಳು ಮಾಡುವದು ಖಂಡಿತ ಎಂದು ಇದರಲ್ಲಿ ಯಾಕೆ ಬರೆದಿದ್ದೀ ಎಂದು ಹೇಳಿ ನೀನು ಈ ಸುರಳಿಯನ್ನು ಸುಟ್ಟಿದ್ದೀ. |
30. | ಆದದರಿಂದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೇಳುವದೇನಂದರೆ--ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವವನು ಅವನಿಗೆ ಇರು ವದಿಲ್ಲ; ಅವನ ಹೆಣವು ಹಗಲಿನಲ್ಲಿ ಬಿಸಲಿಗೂ ರಾತ್ರಿಯಲ್ಲಿ ಹಿಮಕ್ಕೂ ಬಿಸಾಡಲ್ಪಡುವದು. |
31. | ಅವ ನನ್ನೂ ಅವನ ಸಂತಾನವನ್ನೂ ಸೇವಕರನ್ನೂ ಅವರ ಅಕ್ರಮಕ್ಕಾಗಿ ದಂಡಿಸುವೆನು; ಅವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಯೆಹೂದದ ಮನುಷ್ಯರ ಮೇಲೆಯೂ ನಾನು ಅವರಿಗೆ ವಿರೋಧವಾಗಿ ಮಾತಾಡಿದಂಥ ಅವರು ಕಿವಿಗೊಡ ದಂಥ ಕೇಡನ್ನೆಲ್ಲಾ ಬರಮಾಡುವೆನು. |
32. | ಆಗ ಯೆರೆವಿಾ ಯನು ಮತ್ತೊಂದು ಸುರಳಿಯನ್ನು ತಕ್ಕೊಂಡು ನೇರೀಯನ ಮಗನಾದ ಲೇಖಕನಾದ ಬಾರೂಕನಿಗೆ ಕೊಟ್ಟನು; ಇವನು ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಪುಸ್ತಕದ ವಾಕ್ಯಗಳನ್ನೆಲ್ಲಾ ಯೆರೆವಿಾಯನ ಬಾಯಿಂದ ಬಂದ ಹಾಗೆ ಬರೆದನು; ಇದಲ್ಲದೆ ಅವುಗಳ ಹಾಗಿರುವ ಅನೇಕ ವಾಕ್ಯಗಳು ಅವುಗಳ ಸಂಗಡ ಕೂಡಿಸಲ್ಪಟ್ಟವು. |
← Jeremiah (36/52) → |