← Jeremiah (37/52) → |
1. | ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದ ದೇಶದಲ್ಲಿ ಅರಸನಾಗಿ ಇಟ್ಟ ಯೆಹೋಯಾಕೀಮನ ಮಗನಾದ ಕೊನ್ಯನಿಗೆ ಬದ ಲಾಗಿ ಯೋಷೀಯನ ಮಗನಾದ ಚಿದ್ಕೀಯನು ಅರಸ ನಾಗಿ ಆಳಿದನು. |
2. | ಆದರೆ ಕರ್ತನು ಪ್ರವಾದಿಯಾದ ಯೆರೆವಿಾಯನಿಂದ ಹೇಳಿಸಿದ ವಾಕ್ಯಗಳಿಗೆ ಅವನೂ ಅವನ ಸೇವಕರೂ ದೇಶದ ಜನರೂ ಕಿವಿಗೊಡಲಿಲ್ಲ. |
3. | ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನೂ ಯಾಜಕನಾದ ಮಾಸೇಯನ ಮಗನಾದ ಚೆಫನ್ಯನನ್ನೂ ಪ್ರವಾದಿಯಾದ ಯೆರೆವಿಾಯನ ಬಳಿಗೆ ಕಳುಹಿಸಿ--ನಮ್ಮ ದೇವರಾದ ಕರ್ತನಿಗೆ ನಮಗೋಸ್ಕರ ಪ್ರಾರ್ಥನೆ ಮಾಡೆಂದು ಹೇಳಿಸಿದನು. |
4. | ಆಗ ಯೆರೆವಿಾಯನು ಜನರೊಳಗೆ ಬರುತ್ತಾ ಹೋಗುತ್ತಾ ಇದ್ದನು; ಯಾಕಂದರೆ ಅವರು ಅವನನ್ನು ಸೆರೆಮನೆಯಲ್ಲಿ ಇಡಲಿಲ್ಲ. |
5. | ಫರೋಹನ ಸೈನ್ಯವು ಐಗುಪ್ತದಿಂದ ಹೊರಟಿತು; ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿದ್ದ ಕಸ್ದೀಯರು ಅದರ ಸುದ್ದಿಯನ್ನು ಕೇಳಿ ಯೆರೂಸಲೇಮನ್ನು ಬಿಟ್ಟುಹೋದರು. |
6. | ಆಗ ಕರ್ತನ ವಾಕ್ಯವು ಪ್ರವಾದಿಯಾದ ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- |
7. | ನನ್ನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನಂದರೆ--ಇಗೋ, ನಿಮ್ಮ ಸಹಾಯಕ್ಕೆ ಹೊರಟ ಫರೋಹನ ಸೈನ್ಯವು ಅದರ ಸ್ವದೇಶವಾದ ಐಗುಪ್ತಕ್ಕೆ ಹಿಂತಿರುಗುವದು. |
8. | ಕಸ್ದೀಯರು ತಿರುಗಿಕೊಂಡು ಈ ಪಟ್ಟಣಕ್ಕೆ ವಿರೋಧ ವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡುವರು. |
9. | ಕರ್ತನು ಹೀಗೆ ಹೇಳುತ್ತಾನೆ--ಕಸ್ದೀ ಯರು ನಿಜವಾಗಿ ನಮ್ಮನ್ನು ಬಿಟ್ಟುಹೋಗುವರೆಂದು ನಿಮಗೆ ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವದೇ ಇಲ್ಲ. |
10. | ನಿಮ್ಮ ಸಂಗಡ ಯುದ್ಧ ಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿ ದ್ದಾಗ್ಯೂ ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು. |
11. | ಕಸ್ದೀಯರ ದಂಡು ಫರೋಹನ ದಂಡಿನ ಭಯದ ನಿಮಿತ್ತ ಯೆರೂಸಲೇಮನ್ನು ಬಿಟ್ಟು ಹೋದಮೇಲೆ |
12. | ಯೆರೆವಿಾಯನು ಬೆನ್ಯಾವಿಾನನ ದೇಶಕ್ಕೆ ಹೋಗು ವದಕ್ಕೂ ಜನರ ಮಧ್ಯದಿಂದ ತನ್ನ ಪಾಲನ್ನು ತಕ್ಕೊಳ್ಳು ವದಕ್ಕೂ ಯೆರೂಸಲೇಮಿನಿಂದ ಹೊರಟನು. |
13. | ಆಗ ಅವನು ಬೆನ್ಯಾವಿಾನನ ಬಾಗಲಲ್ಲಿ ಇರುವಾಗ ಅಲ್ಲಿ ಹೆನನ್ಯನ ಮಗನಾದ ಶೆಲೆಮ್ಯನ ಮಗನಾದ ಇರೀಯ ನೆಂಬ ಪಹರೆಯ ನಾಯಕನು ಇದ್ದನು; ಇವನು ಪ್ರವಾದಿಯಾದ ಯೆರೆವಿಾಯನನ್ನು--ನೀನು ಕಸ್ದೀ ಯರ ಕಡೆಗೆ ಬೀಳುತ್ತಿ ಎಂದು ಹೇಳಿ ಹಿಡಿದನು. |
14. | ಆದರೆ ಯೆರೆವಿಾಯನು ಹೇಳಿದ್ದೇನಂದರೆ--ಸುಳ್ಳು; ನಾನು ಕಸ್ದೀಯರ ಕಡೆಗೆ ಬೀಳುವವನಲ್ಲ ಅಂದನು. ಆದರೆ ಇರೀಯನು ಅವನಿಗೆ ಕಿವಿಗೊಡದೆ ಯೆರೆವಿಾ ಯನನ್ನು ಹಿಡಿದು ಪ್ರಧಾನರ ಬಳಿಗೆ ತಂದನು. |
15. | ಆಗ ಪ್ರಧಾನರು ಯೆರೆವಿಾಯನ ಮೇಲೆ ಕೋಪಗೊಂಡು ಅವನನ್ನು ಹೊಡೆದು ಲೇಖಕನಾದ ಯೋನಾತಾನನ ಮನೆಯ ಬಂಧನದಲ್ಲಿ ಇಟ್ಟರು; ಯಾಕಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು. |
16. | ಯೆರೆವಿಾಯನು ನೆಲಮಾಳಿಗೆಯಲ್ಲಿಯೂ ಸಣ್ಣಕೋಣೆಯಲ್ಲಿಯೂ ಪ್ರವೇಶಿಸಿ ಬಹಳ ದಿವಸ ಅಲ್ಲಿ ಇದ್ದ ಮೇಲೆ ಅರಸನಾದ ಚಿದ್ಕೀಯನು |
17. | ಅವನನ್ನು ಹೊರಗೆ ತನ್ನ ಮನೆಯಲ್ಲಿ ಕರತರಿಸಿ--ರಹಸ್ಯವಾಗಿ ಕರ್ತನಿಂದ ವಾಕ್ಯ ಉಂಟೋ ಎಂದು ಅವನನ್ನು ಕೇಳಿದನು; ಉಂಟು ಎಂದು ಯೆರೆವಿಾಯನು ಹೇಳಿ ರಹಸ್ಯವಾಗಿ ನೀನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವಿ ಅಂದನು. |
18. | ಇದಲ್ಲದೆ ಯೆರೆವಿಾಯನು ಅರಸನಾದ ಚಿದ್ಕೀಯನಿಗೆ ಹೇಳಿದ್ದೇ ನಂದರೆ--ನೀವು ನನ್ನನ್ನು ಸೆರೆಮನೆಯಲ್ಲಿ ಹಾಕುವ ಹಾಗೆ ನಾನು ನಿನಗೂ ನಿನ್ನ ಸೇವಕರಿಗೂ ಈ ಜನರಿಗೂ ವಿರೋಧವಾಗಿ ಏನು ಅಡ್ಡಿ ಮಾಡಿದ್ದೇನೆ? ಇದಲ್ಲದೆ |
19. | ಬಾಬೆಲಿನ ಅರಸನು ನಿಮ್ಮ ಮೇಲೆಯೂ ಈ ದೇಶದ ಮೇಲೆಯೂ ಬರುವದಿಲ್ಲವೆಂದು ನಿಮಗೆ ಪ್ರವಾದಿಸಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ? ಆದದರಿಂದ ಈಗ ಕಿವಿಗೊಡು, |
20. | ಅರಸನಾದ ನನ್ನೊ ಡೆಯನೇ, ನನ್ನ ವಿಜ್ಞಾಪನೆ ನಿನ್ನ ಮುಂದೆ ಅಂಗೀ ಕಾರವಾಗಲಿ, ಲೇಖಕನಾದ ಯೋನಾತಾನನ ಮನೆ ಯಲ್ಲಿ ನಾನು ಸಾಯದ ಹಾಗೆ ನನ್ನನ್ನು ತಿರುಗಿ ಕಳುಹಿಸಬೇಡ ಅಂದನು |
21. | ಆಗ ಅರಸನಾದ ಚಿದ್ಕೀ ಯನು ಯೆರೆವಿಾಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವ ವರೆಗೆ ಅವನಿಗೆ ರೊಟ್ಟಿಗಾರರ ಅಂಗಡಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿಕೊಡ ಬೇಕೆಂದೂ ಆಜ್ಞಾಪಿಸಿದನು; ಹಾಗೆಯೇ ಯೆರೆವಿಾ ಯನು ಸೆರೆಮನೆಯ ಅಂಗಳದಲ್ಲಿ ವಾಸಿಸಿದನು. |
← Jeremiah (37/52) → |