← Jeremiah (49/52) → |
1. | ಅಮ್ಮೋನ್ಯರ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿಗೆ ಕುಮಾರರಿ ಲ್ಲವೋ? ಅವನಿಗೆ ಬಾಧ್ಯನಿಲ್ಲವೋ? ಅವರ ಅರಸನು ಗಾದನ್ನು ಬಾಧ್ಯವಾಗಿ ತಕ್ಕೊಳ್ಳುವದು ಯಾಕೆ? ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವದು ಯಾಕೆ? |
2. | ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ನಾನು ಮಾಡುವೆನು; ಅದು ಹಾಳು ದಿಬ್ಬೆಯಾಗುವದು; ಅದರ ಕುಮಾರ್ತೆಯರು ಸಹ ಬೆಂಕಿಯಿಂದ ಸುಡಲ್ಪಡು ವರು; ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯ ವನ್ನು ಹೊಂದುವದೆಂದು ಕರ್ತನು ಹೇಳುತ್ತಾನೆ. |
3. | ಹೆಷ್ಬೋನೇ, ಗೋಳಾಡು; ಆಯಿ ಹಾಳಾಯಿತು; ರಬ್ಬಾದ ಕುಮಾರ್ತೆಯರೇ ಕೂಗಿರಿ; ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಬೇಲಿಗಳ ಬಳಿಯಲ್ಲಿ ಅತ್ತಿತ್ತ ಓಡಾಡಿರಿ; ಅವರ ಅರಸನೂ ಅವನ ಯಾಜಕರೂ ಅವನ ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು. |
4. | ಹಿಂತಿರುಗು, ಹಿಂಜರಿದು ಹೋದ ಮಗಳೇ, ನನ್ನ ಬಳಿಗೆ ಬರುವವರು ಯಾರೆಂದು ಹೇಳಿ ನಿನ್ನ ಬೊಕ್ಕಸ ಗಳಲ್ಲಿ ನಂಬಿಕೆ ಇಟ್ಟವಳೇ, ನಿನ್ನ ತಗ್ಗು ಹರಿದು ಹೋಗುತ್ತದಲ್ಲಾ? ತಗ್ಗುಗಳ ವಿಷಯ ಯಾಕೆ ಹೆಚ್ಚಳ ಪಡುತ್ತೀ? |
5. | ಇಗೋ, ನಾನು ನಿನ್ನ ಸುತ್ತಲಿರುವ ವರೆಲ್ಲರಿಂದ ನಿನ್ನ ಮೇಲೆ ಭಯವನ್ನು ಬರಮಾಡು ವೆನೆಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ. ಆಗ ನಿಮ್ಮಲ್ಲಿ ಒಬ್ಬೊಬ್ಬನು ಮುಂದಕ್ಕೆ ಓಡಿಸಲ್ಪಡುವನು; ಅಲೆದಾಡುವವನನ್ನು ಕೂಡಿಸುವವನೂ ಒಬ್ಬನೂ ಇರುವದಿಲ್ಲ. |
6. | ಆದರೆ ತರುವಾಯ ಅಮ್ಮೋನನ ಮಕ್ಕಳನ್ನು ಸೆರೆಯಿಂದ ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ. |
7. | ಎದೋಮಿನ ವಿಷಯವಾಗಿ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತೇಮಾನ್‌ನಲ್ಲಿ ಇನ್ನು ಮೇಲೆ ಜ್ಞಾನವಿರುವದಿಲ್ಲವೋ? ವಿವೇಕಿಗಳಿಂದ ಆಲೋಚ ನೆಯು ನಾಶವಾಯಿತೋ? ಅವರ ಜ್ಞಾನವು ಕಾಣದೆ ಹೋಯಿತೋ? |
8. | ದೇದಾನಿನ ನಿವಾಸಿಗಳೇ, ಓಡಿ ಹೋಗಿರಿ, ತಿರುಗಿಕೊಳ್ಳಿರಿ, ಆಳವಾದ ಸ್ಥಳದಲ್ಲಿ ವಾಸಮಾಡಿರಿ. ಏಸಾವಿನ ಆಪತ್ತನ್ನೂ ನಾನು ಅವನನ್ನು ವಿಚಾರಿಸುವ ಕಾಲವನ್ನು ಅವನ ಮೇಲೆ ಬರಮಾಡು ತ್ತೇನೆ. |
9. | ದ್ರಾಕ್ಷೇ ಕೂಡಿಸುವವರು ನಿನ್ನ ಬಳಿಗೆ ಬಂದಿದ್ದರೆ ಹಕ್ಕಲನ್ನಾದರೂ ಉಳಿಸರೇ? ರಾತ್ರಿಯಲ್ಲಿ ಕಳ್ಳರು ಬಂದಿದ್ದರೆ ತಮಗೆ ಸಾಕಾಗುವಷ್ಟು ಕೆಡಿಸುವವರಲ್ಲವೇ? |
10. | ಆದರೆ ನಾನು ಏಸಾವನನ್ನು ಬರಿದುಮಾಡಿದ್ದೇನೆ; ಅದರ ರಹಸ್ಯ ಸ್ಥಳಗಳನ್ನು ತೆರೆದಿದ್ದೇನೆ; ಅವನು ತನ್ನನ್ನು ತಾನೇ ಅಡಗಿಸಿಕೊಳ್ಳಲಾರನು; ಅವನ ಸಂತಾನವು ಹಾಳಾಯಿತು; ಅವನ ಸಹೋದರರೂ ನೆರೆಯವರೂ ಅವನೂ ಇಲ್ಲವಾದರು. |
11. | ನಿನ್ನ ದಿಕ್ಕಿಲ್ಲದ ಮಕ್ಕಳನ್ನು ಬಿಡು; ನಾನೇ ರಕ್ಷಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ನಂಬಿಕೆ ಇಡಲಿ. |
12. | ಕರ್ತನು ಹೀಗೆ ಹೇಳು ತ್ತಾನೆ--ಇಗೋ ಪಾತ್ರೆಯಲ್ಲಿ ಕುಡಿಯುವದಕ್ಕೆ ಯಾರಿಗೆ ನ್ಯಾಯತೀರ್ವಿಕೆ ಆಗಲಿಲ್ಲವೋ? ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಅಪರಾಧ ವಿಲ್ಲದೆ ಇರುವಿಯೋ? ಅಪರಾಧವಿಲ್ಲದೆ ಇರುವದಿಲ್ಲ ನಿಶ್ಚಯವಾಗಿ ಕುಡಿಯುವಿ. |
13. | ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವದೆಂದು ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾ ಗುವವೆಂದೂ ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆಂದು ಕರ್ತನು ಅನ್ನುತ್ತಾನೆ. |
14. | ಕರ್ತನಿಂದ ನಾನು ಸುದ್ದಿಯನ್ನು ಕೇಳಿದ್ದೇನೆ; ಅನ್ಯಜನಾಂಗಗಳೊಳಗೆ ರಾಯಭಾರಿಯು ಕಳುಹಿಸಲ್ಪಟ್ಟಿದ್ದಾನೆ; ನೀವು ಒಟ್ಟು ಗೂಡಿಕೊಂಡು ಅದಕ್ಕೆ ವಿರೋಧವಾಗಿ ಬನ್ನಿರಿ, ಯುದ್ಧಕ್ಕಾಗಿ ಏಳಿರಿ. |
15. | ಇಗೋ, ನಿನ್ನನ್ನು ಅನ್ಯಜನಾಂಗ ಗಳಲ್ಲಿ ಹೀನವಾಗಿಯೂ ಮನುಷ್ಯರಲ್ಲಿ ತಿರಸ್ಕರಿಸಲ್ಪಟ್ಟವ ನನ್ನಾಗಿಯೂ ಮಾಡುವೆನು. |
16. | ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ ಗುಡ್ಡದ ಕೊನೆಯನ್ನು ಹಿಡಿಯುವವನೇ, ನಿನ್ನ ಭಯಂಕರತ್ವವೂ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದವು; ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಮಾಡಿದರೂ ಅಲ್ಲಿಂದ ನಿನ್ನನ್ನು ಇಳಿಸುತ್ತೇನೆಂದು ಕರ್ತನು ಅನ್ನುತ್ತಾನೆ. |
17. | ಎದೋಮು ಸಹ ಹಾಳಾಗುವದು; ಅದರ ಬಳಿಯಲ್ಲಿ ಹಾದು ಹೋಗುವವರೆಲ್ಲರೂ ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು. |
18. | ಸೊದೋಮ್ ಗೊಮೋರ ಅವುಗಳ ಸವಿಾಪ ದಲ್ಲಿದ್ದ ಪಟ್ಟಣಗಳೂ ಕೆಡವಲ್ಪಟ್ಟಾಗ ಹಾಗೆಯೇ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ, ಅದರಲ್ಲಿ ಯಾವ ಮನುಷ್ಯನ ಪುತ್ರನಾದರೂ ತಂಗುವದಿಲ್ಲವೆಂದು ಕರ್ತನು ಅನ್ನುತ್ತಾನೆ. |
19. | ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಬ್ಬುವಿಕೆಯಿಂದ ಬಲವಾದ ನಿವಾಸಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಅವನನ್ನು ಕ್ಷಣಮಾತ್ರದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು. ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ನನಗೆ ಕಾಲವನ್ನು ನೇಮಿಸು ವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು? |
20. | ಆದದರಿಂದ ಕರ್ತನು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಅವನು ಮಾಡಿದ ಯೋಚನೆಗಳನ್ನೂ ಕೇಳಿರಿ. ನಿಶ್ಚಯವಾಗಿ ಮಂದೆಯ ಮರಿಗಳು ಅವರನ್ನು ಎಳೆಯುವವು, ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡು ವನು. |
21. | ಅವರು ಬೀಳುವ ಶಬ್ದದಿಂದ ಭೂಮಿಯು ಕದಲುವದು ಅವರ ಕೂಗಿನ ಶಬ್ದವು ಕೆಂಪು ಸಮುದ್ರ ದಲ್ಲಿ ಕೇಳಬರುವದು. |
22. | ಇಗೋ, ಅವನು ಹದ್ದಿನಂತೆ ಹಾರುವನು; ಬೊಚ್ರದ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು; ಎದೋಮಿನ ಪರಾಕ್ರಮ ಶಾಲಿಗಳ ಹೃದಯವು ಆ ದಿವಸದಲ್ಲಿ ಪ್ರಸವ ವೇದನೆಯುಳ್ಳ ಸ್ತ್ರೀಯ ಹೃದಯದ ಹಾಗೆ ಇರುವದು. |
23. | ದಮಸ್ಕದ ವಿಷಯವಾಗಿ ಹಮಾತೂ ಅರ್ಪಾದೂ ನಾಚಿಕೆಪಡುತ್ತವೆ; ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯ ಪಟ್ಟಿವೆ. ಸಮುದ್ರದಂತೆ ಕಳವಳಪಡುತ್ತದೆ, ಅದು ಸಮ್ಮನಿರಲಾರದು. |
24. | ದಮಸ್ಕವು ನಿತ್ರಾಣವಾಯಿತು; ಓಡಿ ಹೋಗುವದಕ್ಕೆ ತಿರುಗಿಕೊಳ್ಳುತ್ತದೆ; ಭಯವು ಅದನ್ನು ಹಿಡುಕೊಂಡಿದೆ. ಹೆರುವ ಸ್ತ್ರೀಯ ಹಾಗೆ ಸಂಕಟವೂ ವೇದನೆಗಳೂ ಅದನ್ನು ಹಿಡಿದವೆ. |
25. | ಹೊಗಳಿಕೆಯ ಪಟ್ಟಣವೂ ನನ್ನ ಸಂತೋಷದ ಪಟ್ಟಣವೂ ಬಿಡಲ್ಪಟ್ಟಿದೆಯಲ್ಲವೋ? |
26. | ಆದದರಿಂದ ಅದರ ಯೌವನಸ್ಥರು ಚೌಕಗಳಲ್ಲಿ ಬೀಳುವರು; ಯುದ್ಧಸ್ಥರೆಲ್ಲರೂ ಆ ದಿನದಲ್ಲಿ ಕಡಿದುಹಾಕಲ್ಪಡುವರು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. |
27. | ನಾನು ದಮಸ್ಕದ ಗೋಡೆಯಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಬೆನ್‌ಹದದನ ಅರಮನೆಗಳನ್ನು ತಿಂದುಬಿಡುವದು. |
28. | ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆಯಲಿಕ್ಕಿರುವ ಕೇದಾರಿನ ವಿಷಯವಾಗಿಯೂ ಹಾಚೋರಿನ ರಾಜ್ಯಗಳ ವಿಷಯವಾಗಿಯೂ ಕರ್ತನು ಹೀಗೆ ಹೇಳುತ್ತಾನೆ--ಏಳಿರಿ, ಕೇದಾರಿನ ಬಳಿಗೆ ಏರಿ ಹೋಗಿರಿ! ಪೂರ್ವದಿಕ್ಕಿನ ಮನುಷ್ಯರನ್ನು ಸುಲು ಕೊಳ್ಳಿರಿ. |
29. | ಅವರ ಗುಡಾರಗಳನ್ನೂ ಮಂದೆಗಳನ್ನೂ ತಕ್ಕೊಳ್ಳುವರು; ಅವರ ತೆರೆಗಳನ್ನೂ ಎಲ್ಲಾ ಪಾತ್ರೆ ಗಳನ್ನೂ ಒಂಟೆಗಳನ್ನೂ ವಶಮಾಡಿಕೊಳ್ಳುವರು; ಸುತ್ತಲೂ ಭಯವೆಂದು ಅವರಿಗೆ ಕೂಗುವರು. |
30. | ಹಾಚೋರಿನ ನಿವಾಸಿಗಳೇ, ಓಡಿಹೋಗಿರಿ, ದೂರಕ್ಕೆ ಹೋಗಿಬಿಡಿರಿ, ಆಳವಾದ ಸ್ಥಳದಲ್ಲಿ ವಾಸ ವಾಗಿರ್ರಿ ಎಂದು ಕರ್ತನು ಅನ್ನುತ್ತಾನೆ. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ವಿರೋಧವಾಗಿ ಆಲೋಚನೆಯನ್ನೂ ಕಲ್ಪನೆಯನ್ನೂ ಮಾಡಿದ್ದಾನೆ. |
31. | ಏಳಿರಿ, ಭದ್ರವಾಗಿ ವಾಸಿಸುವ ಸುಖವುಳ್ಳ ಜನಾಂಗದ ಬಳಿಗೆ ಹೋಗಿರಿ ಎಂದು ಕರ್ತನು ಅನ್ನುತ್ತಾನೆ; ಅದಕ್ಕೆ ಬಾಗಲುಗಳು ಇಲ್ಲ; ಅಗುಳಿಗಳು ಇಲ್ಲ; ಏಕಾಂತವಾಗಿ ವಾಸಮಾಡುತ್ತದೆ. |
32. | ಅವರ ಒಂಟೆಗಳು ಕೊಳ್ಳೆಯಾಗುವವು, ದನಗಳ ಸಮೂಹವು ಸುಲಿಗೆಯಾಗುವವು; ದನಗಳ ಸಮೂಹವು ಸುಲಿಗೆ ಯಾಗುವದು; ಕಟ್ಟ ಕಡೆಯ ಮೂಲೆಗಳಲ್ಲಿ ಇರುವ ವರನ್ನು ಎಲ್ಲಾ ದಿಕ್ಕುಗಳಿಗೂ ಚದರಿಸುತ್ತೇನೆ; ಎಲ್ಲಾ ಕಡೆಯಿಂದ ಅವರನ್ನು ಸಂಹರಿಸುತ್ತೇನೆಂದು ಕರ್ತನು ಅನ್ನುತ್ತಾನೆ. |
33. | ಹಾಚೋರು ಮೃಗಗಳ ನಿವಾಸವೂ ಎಂದೆಂದಿಗೂ ಹಾಳಾದ ಸ್ಥಳವೂ ಆಗುವದು; ಅಲ್ಲಿ ಯಾವನಾದರೂ ವಾಸಮಾಡುವದಿಲ್ಲ; ಅಲ್ಲಿ ಯಾವ ನರಪುತ್ರನಾದರೂ ತಂಗುವದಿಲ್ಲ. |
34. | ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆವಿಾಯನಿಗೆ ಕರ್ತ ನಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು ಏನಂದರೆ-- |
35. | ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ- ಇಗೋ, ನಾನು ಏಲಾಮಿನ ಬಿಲ್ಲನ್ನೂ ಅವರ ಪರಾ ಕ್ರಮವನ್ನೂ ಶ್ರೇಷ್ಠತ್ವವನ್ನೂ ಮುರಿಯುತ್ತೇನೆ. |
36. | ಆಕಾಶದ ನಾಲ್ಕು ಗಾಳಿಗಳನ್ನು ತಂದು ಅವರನ್ನು ಆ ಎಲ್ಲಾ ದಿಕ್ಕುಗಳ ಕಡೆಗೆ ಚದರಿಸುವೆನು; ಏಲಾಮಿ ನಿಂದ ಓಡಿಸಲ್ಪಟ್ಟವರು ಸೇರದ ಜನಾಂಗವು ಇರುವ ದಿಲ್ಲ. |
37. | ಏಲಾಮನ್ನು ಅವರ ಶತ್ರುಗಳ ಮುಂದೆಯೂ ಪ್ರಾಣವನ್ನು ಹುಡುಕುವವರ ಮುಂದೆಯೂ ಹೆದರ ಮಾಡುವೆನು; ಅವರ ಮೇಲೆ ಕೇಡನ್ನೂ ನನ್ನ ಕೋಪದ ಉಗ್ರವನ್ನೂ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ; ಅವರನ್ನು ಮುಗಿಸಿ ಬಿಡುವವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುವೆನು. |
38. | ಇದಲ್ಲದೆ ಏಲಾಮಿನಲ್ಲಿ ನನ್ನ ಸಿಂಹಾಸನವನ್ನಿಟ್ಟು, ಅದರೊಳಗಿಂದ ಅರಸನನ್ನೂ ಪ್ರಧಾನರನ್ನೂ ನಾಶಮಾಡುವೆನೆಂದು ಕರ್ತನು ಅನ್ನುತ್ತಾನೆ. |
39. | ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವದೇನಂದರೆ--ನಾನು ಏಲಾಮಿನ ಸೆರೆಯನ್ನು ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ. |
← Jeremiah (49/52) → |