← Jeremiah (6/52) → |
1. | ಓ ಬೆನ್ಯಾವಿಾನನ ಮಕ್ಕಳೇ! ಯೆರೂಸಲೇಮಿನೊಳಗಿಂದ ಓಡಿಹೋಗುವದಕ್ಕೆ ನೀವು ಕೂಡಿಕೊಳ್ಳಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್‌ಹಕ್ಕೆರೆಮಿನಲ್ಲಿ ಬೆಂಕಿಯ ಗುರುತನ್ನು ಹಚ್ಚಿರಿ; ಯಾಕಂದರೆ ಕೇಡೂ ದೊಡ್ಡ ನಾಶನವೂ ಉತ್ತರದ ಕಡೆಯಿಂದ ತೋರುತ್ತವೆ. |
2. | ಚೀಯೋನಿನ ಮಗಳನ್ನು ಸೌಂದರ್ಯವಾದ ಮತ್ತು ಕೋಮಲವಾದವಳಿಗೆ ನಾನು ಹೋಲಿಸುತ್ತೇನೆ. |
3. | ಅವಳ ಬಳಿಗೆ ಕುರುಬರು ತಮ್ಮ ಮಂದೆಗಳ ಸಂಗಡ ಬರುವರು; ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು; ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು. |
4. | ಅವಳಿಗೆ ವಿರೋಧವಾಗಿ ಯುದ್ಧವನ್ನು ಸಿದ್ಧಮಾಡಿರಿ; ಏಳಿರಿ, ಮಧ್ಯಾಹ್ನದಲ್ಲಿ ಏರಿ ಹೋಗೋಣ, ನಮಗೆ ಅಯ್ಯೋ! ಹೊತ್ತು ಮುಣುಗುತ್ತದಲ್ಲಾ; ಸಂಜೆಯ ನೆರಳುಗಳು ಉದ್ದವಾ ಗುತ್ತವೆ. |
5. | ಏಳಿರಿ, ರಾತ್ರಿಯಲ್ಲಿ ಏರಿಹೋಗಿ ಅವಳ ಅರಮನೆಗಳನ್ನು ನಾಶಮಾಡೋಣ; |
6. | ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಮರಗಳನ್ನು ಕಡಿಯಿರಿ; ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ; ವಿಚಾರಿಸಲ್ಪಡತಕ್ಕ ಪಟ್ಟಣವು ಇದೇ; ಅವಳಲ್ಲಿ ತುಂಬ ಬಲಾತ್ಕಾರ ಅದೆ. |
7. | ಬುಗ್ಗೆಯು ತನ್ನ ನೀರನ್ನು ಹರಿಯ ಮಾಡುವ ಹಾಗೆ ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ; ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳಬರುತ್ತವೆ. ದುಃಖವೂ ಗಾಯಗಳೂ ಯಾವಾ ಗಲೂ ನನ್ನ ಮುಂದೆ ಅವೆ. |
8. | ಯೆರೂಸಲೇಮೇ, ನನ್ನ ಪ್ರಾಣವು ನಿನ್ನ ಕಡೆಯಿಂದ ಹೊರಟು ಹೋಗದ ಹಾಗೆ ನಾನು ನಿಮ್ಮನ್ನು ಹಾಳಾಗಿಯೂ ನಿವಾಸಿಗಳಿಲ್ಲದ ದೇಶವಾಗಿಯೂ ಮಾಡದ ಹಾಗೆ ಶಿಕ್ಷಣವನ್ನು ತಕ್ಕೋ. |
9. | ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಶೇಷವನ್ನು ದ್ರಾಕ್ಷೇಗಿಡದ ಹಾಗೆ ಪೂರ್ಣ ವಾಗಿ ಹಕ್ಕಲಾಯುವರು, ದ್ರಾಕ್ಷೇ ಕೂಡಿಸುವವನ ಹಾಗೆ ನಿನ್ನ ಕೈಯನ್ನು ಪುಟ್ಟಿಗಳಲ್ಲಿ ಹಿಂದಕ್ಕೆ ತಿರುಗಿಸು. |
10. | ನಾನು ಯಾರ ಸಂಗಡ ಮಾತನಾಡಲಿ? ಅವರು ಕೇಳುವ ಹಾಗೆ ಯಾರನ್ನು ಎಚ್ಚರಿಸಲಿ? ಇಗೋ, ಅವರು ಆಲೈಸಲಾರದ ಹಾಗೆ ಅವರ ಕಿವಿ ಪರಿಛೇದನೆ ಯಿಲ್ಲದಾಗಿದೆ; ಇಗೋ, ಕರ್ತನ ವಾಕ್ಯವು ಅವರಿಗೆ ನಿಂದೆಯಾಗಿದೆ, ಅದರಲ್ಲಿ ಅವರಿಗೆ ಸಂತೋಷವಿಲ್ಲ. |
11. | ಆದದರಿಂದ ಕರ್ತನ ಕೋಪದಿಂದ ನಾನು ತುಂಬಿ ದ್ದೇನೆ, ಅದನ್ನು ನನ್ನೊಳಗೆ ಬಿಗಿಹಿಡಿದು ನನಗೆ ಸಾಕಾಯಿತು; ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ನಿಶ್ಚಯವಾಗಿ ಗಂಡನು ಹೆಂಡತಿಯ ಸಂಗಡಲೂ ಮುದುಕನು ದಿನ ತುಂಬಿದವನ ಸಂಗ ಡಲೂ ಹಿಡಿಯಲ್ಪಡುವರು. |
12. | ಅವರ ಮನೆಗಳೂ ಹೊಲಗಳೂ ಹೆಂಡತಿಯರೂ ಸಹಿತವಾಗಿ ಬೇರೊಬ್ಬ ರಿಗೆ ಆಗುವವು; ದೇಶದ ನಿವಾಸಿಗಳ ಮೇಲೆ ನನ್ನ ಕೈ ಚಾಚುವೆನು ಎಂದು ಕರ್ತನು ಅನ್ನುತ್ತಾನೆ. |
13. | ಅವ ರಲ್ಲಿ ಚಿಕ್ಕವನು ಮೊದಲುಗೊಂಡು ದೊಡ್ಡವರ ವರೆಗೆ ಅವರೆಲ್ಲರೂ ತಮ್ಮನ್ನು ಲೋಭಕ್ಕೆ ಒಪ್ಪಿಸಿ ಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರ ವರೆಗೆ ಪ್ರತಿ ಯೊಬ್ಬನು ಸುಳ್ಳಾಗಿ ನಡಕೊಳ್ಳುತ್ತಾನೆ. |
14. | ಸಮಾಧಾನ ವಿಲ್ಲದಿರುವಾಗ--ಸಮಾಧಾನ ಎಂದು ಹೇಳಿ ನನ್ನ ಜನರ ಕುಮಾರ್ತೆಯ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ. |
15. | ಅಸಹ್ಯವನ್ನು ಮಾಡಿದ ಮೇಲೆ ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆಪಡ ಲಿಲ್ಲ; ಇಲ್ಲವೆ ಲಜ್ಜೆಯನ್ನು ಅರಿಯರು; ಆದದರಿಂದ ಅವರು ಬೀಳುವವರೊಳಗೆ ಬೀಳುವರು; ನಾನು ಅವ ರನ್ನು ವಿಚಾರಿಸುವ ಕಾಲದಲ್ಲಿ ಅವರು ಕೆಳಗೆ ಹಾಕ ಲ್ಪಡುವರು ಎಂದು ಕರ್ತನು ಹೇಳುತ್ತಾನೆ. |
16. | ಕರ್ತನು ಹೀಗೆ ಹೇಳುತ್ತಾನೆ--ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ; ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ; ಒಳ್ಳೇ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ; ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕು ವದು ಅಂದನು. ಆದರೆ ಅವರು--ನಾವು ನಡೆ ಯುವದಿಲ್ಲ ಅಂದರು. |
17. | ಇದಲ್ಲದೆ ನಿಮ್ಮ ಮೇಲೆ ಕಾವಲುಗಾರರನ್ನು ಇರಿಸಿ ತುತೂರಿಯ ಶಬ್ದವನ್ನು ಆಲೈ ಸಿರಿ ಅಂದೆನು; ಆದರೆ ಅವರು--ನಾವು ಆಲೈಸುವ ದಿಲ್ಲ ಅಂದರು. |
18. | ಆದದರಿಂದ ಜನಾಂಗಗಳೇ, ಕೇಳಿರಿ; ಸಭೆಯೇ, ಅವರಲ್ಲಿ ಇರುವಂಥದ್ದನ್ನು ತಿಳುಕೊಳ್ಳಿರಿ. |
19. | ಭೂಮಿಯೇ, ಕೇಳು, ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು, ನನ್ನ ನ್ಯಾಯಪ್ರಮಾಣವನ್ನು ತಿರಸ್ಕರಿಸಿ ದರು. |
20. | ಶೇಬದಿಂದ ಸಾಂಬ್ರಾಣಿಯೂ ದೂರ ದೇಶದಿಂದ ಒಳ್ಳೇ ಸುಗಂಧವೂ ನನಗೆ ಬರುವದು ಯಾತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚಿಕೆಯಾಗಲಿಲ್ಲ; ನಿಮ್ಮ ಬಲಿಗಳು ನನಗೆ ರುಚಿ ಇಲ್ಲ. |
21. | ಆದದರಿಂದ ಕರ್ತನು ಹೀಗೆ ಹೇಳುತ್ತಾನೆ. ಇಗೋ, ನಾನು ಈ ಜನರ ಮುಂದೆ ಎಡೆತಡೆಗಳನ್ನು ಇಡುತ್ತೇನೆ; ತಂದೆ ಗಳೂ ಮಕ್ಕಳೂ ಕೂಡ ಅವುಗಳ ಮೇಲೆ ಬೀಳುವರು; ನೆರೆಯವನೂ ಅವನ ಸ್ನೇಹಿತನೂ ನಾಶವಾಗುವನು. |
22. | ಕರ್ತನು ಹೀಗೆ ಹೇಳುತ್ತಾನೆ--ಇಗೋ, ಒಂದು ಜನವು ಉತ್ತರ ದೇಶದಿಂದ ಬರುತ್ತದೆ; ದೊಡ್ಡ ಜನಾಂಗವು ಭೂಮಿಯ ಮೇರೆಗಳಿಂದ ಎದ್ದು ಬರು ತ್ತದೆ. |
23. | ಅವರು ಬಿಲ್ಲನ್ನೂ ಬಲ್ಲೆಯನ್ನೂ ಹಿಡಿದ ಕ್ರೂರಿಗಳಾಗಿದ್ದಾರೆ, ಕನಿಕರ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುತ್ತದೆ; ಕುದುರೆ ಗಳ ಮೇಲೆ ಸವಾರಿ ಮಾಡುತ್ತಾರೆ; ಚೀಯೋನಿನ ಕುಮಾರಿಯೇ, ನಿನಗೆ ವಿರೋಧವಾಗಿ ಯುದ್ದ ಮಾಡುವ ಮನುಷ್ಯರಂತೆ ಸಿದ್ಧಮಾಡಿಕೊಂಡಿದ್ದಾರೆ; |
24. | ಅದರ ಕೀರ್ತಿಯನ್ನು ಕೇಳಿದ್ದೇವೆ, ನಮ್ಮ ಕೈಗಳು ಜೋಲಾ ಡುತ್ತವೆ; ಸಂಕಟವೂ ಹೆರುವವಳಂತಿರುವ ನೋವೂ ನಮ್ಮನ್ನು ಹಿಡಿಯಿತು. |
25. | ಹೊಲಕ್ಕೆ ಹೊರಡಬೇಡ; ದಾರಿಯಲ್ಲಿ ನಡೆಯಬೇಡ; ಯಾಕಂದರೆ ಶತ್ರುವಿನ ಕತ್ತಿಯೂ ಅಂಜಿಕೆಯೂ ಸುತ್ತಲು ಆವೆ. |
26. | ನನ್ನ ಜನರ ಕುಮಾರಿಯೇ, ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು; ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ ಬಹುಕಠಿಣವಾದ ಗೋಳಾಟವನ್ನು ಮಾಡು; ಸೂರೆ ಮಾಡುವವನು ಫಕ್ಕನೆ ನಮ್ಮ ಮೇಲೆ ಬರುವನು. |
27. | ನೀನು ಅವರ ಮಾರ್ಗವನ್ನು ತಿಳಿದು ಶೋಧಿಸುವ ಹಾಗೆ ನಿನ್ನನ್ನು ನನ್ನ ಜನರಲ್ಲಿ ಬುರುಜನ್ನಾಗಿಯೂ ಕೋಟೆಯನ್ನಾಗಿಯೂ ಇಟ್ಟಿದ್ದೇನೆ. |
28. | ಅವರೆಲ್ಲರು ಘೋರವಾಗಿ ತಿರುಗಿ ಬೀಳುವವರೇ; ಚಾಡಿಕೋರರಾಗಿ ನಡೆಯುತ್ತಾರೆ; ಹಿತ್ತಾಳೆಯೂ ಕಬ್ಬಿಣವೂ ಆಗಿದ್ದಾರೆ; ಅವರೆಲ್ಲರೂ ಕೆಡಿಸುವವರೇ. |
29. | ತಿದಿಯು ಸುಡುತ್ತದೆ, ಬೆಂಕಿಯೊಳಗಿಂದ ಸೀಸವು ಕರಗುತ್ತದೆ; ಪುಟಕ್ಕೆ ಹಾಕುವವನು ವ್ಯರ್ಥವಾಗಿ ಹಾಕುತ್ತಾನೆ; ಕೆಟ್ಟವರು ಕಿತ್ತು ತೆಗೆಯಲ್ಪಡಲಿಲ್ಲ; |
30. | ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವದು; ಕರ್ತನು ಅವರನ್ನು ತಳ್ಳಿದ್ದಾನೆ. |
← Jeremiah (6/52) → |