← Job (19/42) → |
1. | ಯೋಬನು ಉತ್ತರಕೊಟ್ಟು ಹೇಳಿದ್ದೇನಂದರೆ-- |
2. | ಎಷ್ಟರ ವರೆಗೆ ನನ್ನ ಪ್ರಾಣ ವನ್ನು ನೋಯಿಸಿ, ನನ್ನನ್ನು ಮಾತುಗಳಿಂದ ಜಜ್ಜುವಿರಿ? |
3. | ಈಗ ಹತ್ತು ಸಾರಿ ನನ್ನನ್ನು ಅವಮಾನಪಡಿಸಿದಿರಿ; ನೀವು ನನಗೆ ಅನ್ಯರಂತೆ ಮಾಡುವುದಕ್ಕೆ ನಾಚಿಕೆಪಡು ವದಿಲ್ಲ. |
4. | ನಿಶ್ಚಯವಾಗಿ ನಾನು ತಪ್ಪು ಮಾಡಿದ್ದರೆ ನನ್ನ ತಪ್ಪು ನನ್ನ ಸಂಗಡ ಉಳುಕೊಳ್ಳುವದು. |
5. | ನಿಶ್ಚಯವಾಗಿ ನನ್ನ ಮೇಲೆ ನಿಮ್ಮನ್ನು ಹೆಚ್ಚಿಸಿ ಕೊಂಡರೆ, ನನ್ನ ನಿಂದೆಯನ್ನು ನನ್ನ ಮೇಲೆ ಹೊರಿಸಿ ವಾದಿಸಿದರೆ, |
6. | ದೇವರು ನನ್ನನ್ನು ತೊಲಗಿಸಿಬಿಟ್ಟು, ತನ್ನ ಬಲೆಯನ್ನು ನನ್ನ ಮೇಲೆ ಬೀಸಿದನೆಂದು ತಿಳಿಯಬೇಕಷ್ಟೆ. |
7. | ಇಗೋ, ತಪ್ಪಿನೊಳಗಿಂದ ಕೂಗುತ್ತೇನೆ, ಉತ್ತರ ಕೊಡುವವನಿಲ್ಲ; ಗಟ್ಟಿಯಾಗಿ ಕೂಗುತ್ತೇನೆ, ನ್ಯಾಯ ತೀರ್ವಿಕೆ ಇಲ್ಲ. |
8. | ನಾನು ದಾಟ ಕೂಡದ ಹಾಗೆ ಆತನು ನನ್ನ ದಾರಿಗೆ ಬೇಲಿ ಹಾಕಿದ್ದಾನೆ; ನನ್ನ ದಾರಿಗಳಲ್ಲಿ ಕತ್ತಲೆ ಇಡುತ್ತಾನೆ. |
9. | ನನ್ನ ಘನತೆಯನ್ನು ನನ್ನಲ್ಲಿಂದ ಸುಲಿದುಕೊಂಡನು; ನನ್ನ ತಲೆಯ ಕಿರೀ ಟವನ್ನು ತೆಗೆದುಹಾಕಿದನು. |
10. | ಸುತ್ತಲೂ ನನ್ನನ್ನು ನಾಶ ಪಡಿಸಿದ್ದರಿಂದ ನಾನು ಹೋಗುತ್ತೇನೆ; ಮರವನ್ನು ಕೀಳುವ ಹಾಗೆ ನನ್ನ ನಿರೀಕ್ಷೆಯನ್ನು ಕಿತ್ತುಬಿಟ್ಟನು. |
11. | ಆತನ ಕೋಪವು ನನ್ನ ಮೇಲೆ ಹೊತ್ತಿ ಅದೆ; ತನ್ನ ವೈರಿಗಳ ಹಾಗೆ ನನ್ನನ್ನು ಎಣಿಸುತ್ತಾನೆ. |
12. | ಆತನ ಗುಂಪುಗಳು ಸಹ ಬಂದು ನನಗೆ ವಿರೋಧವಾಗಿ ತಮ್ಮ ಮಾರ್ಗ ಕಟ್ಟುತ್ತವೆ. ನನ್ನ ಗುಡಾರದ ಸುತ್ತುದಂಡು ಇಳಿಯುತ್ತದೆ. |
13. | ನನ್ನ ಸಹೋದರರನ್ನು ನನಗೆ ದೂರ ಮಾಡು ತ್ತಾನೆ; ನನ್ನ ಪರಿಚಯದ ಸ್ನೇಹಿತರು ನನಗೆ ಅನ್ಯರೇ ಆದರು. |
14. | ನನ್ನ ನೆರೆಯವರು ತಡೆಯುತ್ತಾರೆ; ನನ್ನ ಪರಿಚಯದ ಸ್ನೇಹಿತರು ನನ್ನನ್ನು ಮರೆತ್ತಿದ್ದಾರೆ. |
15. | ನನ್ನ ಮನೆಯಲ್ಲಿ ತಂಗುವವರೂ ನನ್ನ ದಾಸಿಗಳೂ ನನ್ನನ್ನೂ ಪರನೆಂದು ಎಣಿಸುತ್ತಾರೆ; ಅವರ ದೃಷ್ಟಿಯಲ್ಲಿ ನಾನು ಪರದೇಶದವನ ಹಾಗೆ ಇದ್ದೇನೆ. |
16. | ನನ್ನ ಸೇವಕನನ್ನು ಕರೆದರೆ, ಅವನು ನನಗೆ ಉತ್ತರ ಕೊಡುವದಿಲ್ಲ; ನನ್ನ ಬಾಯಿಯಿಂದ ಅವನನ್ನು ಬೇಡಿಕೊಳ್ಳಬೇಕಾ ಯಿತು. |
17. | ನನ್ನ ಶ್ವಾಸವು ನನ್ನ ಹೆಂಡತಿಗೆ ತಿಳಿಯದ್ದಾಗಿದೆ; ನನ್ನ ಹೊಟ್ಟೆಯ ಮಕ್ಕಳನ್ನು ಬೇಡುತ್ತೇನೆ. |
18. | ಬಾಲಕರು ಸಹ ನನ್ನನ್ನು ತಿರಸ್ಕರಿಸುತ್ತಾರೆ; ನಾನು ಎದ್ದರೆ ನನಗೆ ಎದುರು ಮಾತಾಡುತ್ತಾರೆ. |
19. | ನನ್ನ ಆಪ್ತ ಸ್ನೇಹಿತರೆಲ್ಲಾ ನನ್ನನ್ನು ಅಸಹ್ಯಿಸುತ್ತಾರೆ; ನಾನು ಪ್ರೀತಿಮಾಡಿದವರೇ ನನಗೆ ವಿರೋಧವಾಗಿ ತಿರುಗಿ ದ್ದಾರೆ. |
20. | ನನ್ನ ಚರ್ಮಕ್ಕೂ ನನ್ನ ಮಾಂಸಕ್ಕೂ ನನ್ನ ಎಲುಬು ಅಂಟುತ್ತದೆ; ನನ್ನ ಹಲ್ಲುಗಳ ತೊಗಲಿ ನೊಂದಿಗೆ ತಪ್ಪಿಸಿಕೊಂಡೆನು. |
21. | ನನ್ನ ಸ್ನೇಹಿತರಾದ ನೀವೇ ನನ್ನನ್ನು ಕನಿಕರಿಸಿರಿ, ನನ್ನನ್ನು ಕನಿಕರಿಸಿರಿ; ಯಾಕಂದರೆ ದೇವರ ಕೈ ನನ್ನನ್ನು ಮುಟ್ಟಿದೆ. |
22. | ದೇವರ ಹಾಗೆ ನೀವು ಯಾಕೆ ನನ್ನನ್ನು ಹಿಂಸಿಸಿ; ನನ್ನ ಮಾಂಸದಿಂದ ತೃಪ್ತಿಯಾಗದೆ ಇದ್ದೀರಿ. |
23. | ಹಾ! ನನ್ನ ಮಾತುಗಳು ಬರಯಲ್ಪಟ್ಟಿದ್ದರೆ, ಅವು ಪುಸ್ತಕದಲ್ಲಿ ರಚಿಸಲ್ಪಟ್ಟಿದ್ದರೆ |
24. | ಕಬ್ಬಿಣದ ಕಂಠದಿಂದ ಸೀಸದ ಸಂಗಡ ನಿತ್ಯವಾಗಿ ಬಂಡೆಯಲ್ಲಿ ಅವುಗಳು ಕೆತ್ತಲ್ಪಟ್ಟಿದ್ದರೆ, ಎಷ್ಟೋ ಒಳ್ಳೇದು! |
25. | ನನ್ನ ವಿಮೋಚಕನು ಜೀವಿಸುತ್ತಾನೆಂದೂ ಆತನು ಕಡೆಯ ದಿನದಲ್ಲಿ ಭೂಮಿಯ ಮೇಲೆ ನಿಲ್ಲುವನೆಂದೂ ತಿಳಿದಿದ್ದೇನೆ; |
26. | ನನ್ನ ಚರ್ಮದ ಹುಳಗಳು ಈ ದೇಹ ವನ್ನು ನಾಶಪಡಿಸಿದಾಗ್ಯೂ ನಾನು ನನ್ನ ಶರೀರದಿಂದ ದೇವರನ್ನು ನೋಡುವೆನು. |
27. | ಆತನನ್ನು ನನಗೆ ನಾನೇ ದೃಷ್ಟಿಸುವೆನು; ನನ್ನ ಕಣ್ಣುಗಳೇ ನೋಡುವವು, ಬೇರೆ ಯವರಲ್ಲ.; ನನ್ನೊಳಗೆ ನನ್ನ ಅಂತರಿಂದ್ರಿಯಗಳು ಲಯವಾಗಿವೆ. |
28. | ನೀವು ಹೇಳುವಿರು--ಅವನನ್ನು ಯಾಕೆ ಹಿಂಸಿಸು ತ್ತೇವೆ? ಮಾತಿನ ಬೇರು ನನ್ನಲ್ಲಿ ಸಿಕ್ಕುವದು. |
29. | ಕತ್ತಿಯ ಮುಂದೆ ಅಂಜಿಕೊಳ್ಳಿರಿ; ನ್ಯಾಯತೀರ್ವಿಕೆ ಉಂಟೆಂದು ನೀವು ತಿಳುಕೊಳ್ಳುವ ಹಾಗೆ ಕೋಪವು ಕತ್ತಿಯ ದಂಡನೆಗಳನ್ನು ಬರಮಾಡುತ್ತದೆ. |
← Job (19/42) → |