← Job (21/42) → |
1. | ಯೋಬನು ಉತ್ತರಕೊಟ್ಟು ಹೇಳಿದ್ದೇನಂದರೆ-- |
2. | ನನ್ನ ಮಾತನ್ನು ಲಕ್ಷ್ಯವಿಟ್ಟು ಕೇಳಿರಿ; ಇವು ನಿಮ್ಮ ಆದರಣೆಗಳಾಗಿರಲಿ. |
3. | ನನ್ನನ್ನು ತಾಳಿಕೊಳ್ಳಿರಿ, ನಾನು ಮಾತನಾಡುವೆನು; ನಾನು ಮಾತ ನಾಡಿದ ಮೇಲೆ ಹಾಸ್ಯ ಮಾಡಬಹುದು. |
4. | ನಾನಾದರೆ ಮನುಷ್ಯನಿಗೆ ನನ್ನ ದೂರು ಹೇಳುವೆನೋ? ಹೇಳಿ ದರೂ ನನ್ನ ಆತ್ಮವು ಯಾಕೆ ವ್ಯಾಕುಲಪಡಬಾರದು? |
5. | ನನ್ನನ್ನು ಗಮನಿಸಿ ಆಶ್ಚರ್ಯಪಡಿರಿ; ಬಾಯಿಯ ಮೇಲೆ ಕೈ ಇಟ್ಟುಕೊಳ್ಳಿರಿ. |
6. | ನಾನು ನೆನಪು ಮಾಡಿಕೊಂಡರೆ ತಲ್ಲಣ ಪಡುತ್ತೇನೆ; ನಡುಗುವಿಕೆಯು ನನ್ನ ಮಾಂಸವನ್ನು ಹಿಡಿಯುತ್ತದೆ. |
7. | ದುಷ್ಟರು ಯಾಕೆ ಬದುಕಿ ಮುದುಕರಾಗಿ ಹೌದು, ತ್ರಾಣದಿಂದ ಬಲಗೊಳ್ಳುತ್ತಾರೆ? |
8. | ಅವರ ಸಂತಾನದವರು ಅವರ ಮುಂದೆ ಅವರ ಸಂಗಡ ದೃಢವಾಗಿದ್ದಾರೆ; ಅವರ ಸಂತಾನದವರು ಅವರ ಕಣ್ಣು ಗಳ ಮುಂದೆ ಇದ್ದಾರೆ. |
9. | ಅವರ ಮನೆಗಳು ಅಂಜಿಕೆ ಇಲ್ಲದೆ ಸಮಾಧಾನವಾಗಿವೆ; ದೇವರ ಕೋಲು ಅವರ ಮೇಲೆ ಇಲ್ಲ. |
10. | ಅವನ ಗೂಳಿ ಹೇಸದೆ ಬಸುರು ಮಾಡುತ್ತದೆ; ಅವನ ಆಕಳು ತಪ್ಪದೆ ಈಯುತ್ತದೆ; |
11. | ತಮ್ಮ ಚಿಕ್ಕವರನ್ನು ಮಂದೆಯ ಹಾಗೆ ಕಳುಹಿಸು ತ್ತಾರೆ; ಅವರ ಮಕ್ಕಳು ಕುಣಿದಾಡುತ್ತಾರೆ. |
12. | ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಹಾಡುತ್ತಾರೆ; ಕೊಳಲಿನ ಶಬ್ದಕ್ಕೆ ಸಂತೋಷಿಸುತ್ತಾರೆ. |
13. | ಸಂಪತ್ತಿನಲ್ಲಿ ತಮ್ಮ ದಿವಸ ಗಳನ್ನು ಕಳೆಯುತ್ತಾರೆ; ಕ್ಷಣದಲ್ಲಿ ಪಾತಾಳಕ್ಕೆ ಇಳಿ ಯುತ್ತಾರೆ. |
14. | ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ. |
15. | ನಾವು ಆತನನ್ನು ಸೇವಿಸುವ ಹಾಗೆ ಸರ್ವಶಕ್ತನು ಯಾರು? ನಾವು ಆತನಿಗೆ ಬಿನ್ನಹ ಮಾಡುವದರಲ್ಲಿ ನಮಗೆ ಪ್ರಯೋಜನವೇನು ಎಂದು ಹೇಳುತ್ತಾರೆ. |
16. | ಇಗೋ, ಅವರ ಸುಖವು ಅವರ ಕೈಯಲ್ಲಿ ಇಲ್ಲ; ದುಷ್ಟರ ಆಲೋಚನೆ ನನಗೆ ದೂರ ವಾಗಿದೆ. |
17. | ಎಷ್ಟು ಸಾರಿ ದುಷ್ಟರ ದೀಪವು ಆರಿ ಹೋಗುತ್ತದೆ; ಅವರ ನಾಶನವು ಅವರ ಮೇಲೆ ಬರುತ್ತದೆ; ದೇವರು ವೇದನೆಗಳನ್ನು ತನ್ನ ಕೋಪ ದಿಂದ ಹಂಚುತ್ತಾನೆ. |
18. | ಅವರು ಗಾಳಿಯ ಮುಂದೆ ಇರುವ ಹುಲ್ಲಿನ ಹಾಗೆಯೂ ಬಿರುಗಾಳಿಯು ಬಡ ಕೊಂಡು ಹೋಗುವ ಹೊಟ್ಟಿನ ಹಾಗೆಯೂ ಇದ್ದಾರೆ. |
19. | ದೇವರು ಅವನ ಮಕ್ಕಳಿಗೆ ಅವನ ಅಪರಾಧವನ್ನು ಇಡುತ್ತಾನೆ; ಅವನು ತಿಳುಕೊಳ್ಳುವ ಹಾಗೆ ಅವನಿಗೆ ಮುಯ್ಯಿಗೆ ಮುಯ್ಯಿ ಕೊಡುತ್ತಾನೆ. |
20. | ಅವನ ಕಣ್ಣುಗಳು ಅವನ ನಾಶನವನ್ನು ನೋಡುವವು; ಸರ್ವಶಕ್ತನ ಉಗ್ರವನ್ನು ಅವನು ಕುಡಿಯುವನು. |
21. | ಅವನ ಬಳಿಕ ಅವನ ತಿಂಗಳಲೆಕ್ಕ ಮಧ್ಯದಲ್ಲಿ ಹರಿದ ಮೇಲೆ ಅವನ ಮನೆಯಲ್ಲಿ ಅವನಿಗೆ ಏನು ಸಂತೋಷ? |
22. | ದೇವರಿಗೆ ತಿಳುವಳಿಕೆಯನ್ನು ಕಲಿಸುವದುಂಟೇ? ಉನ್ನತವಾದವರಿಗೆ ಆತನೇ ನ್ಯಾಯತೀರಿಸುತ್ತಾನಲ್ಲಾ! |
23. | ಎಲ್ಲಾ ಶಾಂತವಾಗಿಯೂ ಸುಖವಾಗಿಯೂ ಇರು ವಾಗಲೇ ಒಬ್ಬನು ತನ್ನ ಬಲ ಸಂಪೂರ್ಣತ್ವದಲ್ಲಿ ಸಾಯುತ್ತಾನೆ. |
24. | ಅವನ ತೊಟ್ಟಿಗಳು ಹಾಲು ತುಂಬಿ ಯವೆ, ಅವನ ಎಲುಬುಗಳು ಮಜ್ಜೆಯಿಂದ ಹಸಿ ಯಾಗಿವೆ. |
25. | ಮತ್ತೊಬ್ಬನು ಕಹಿಯಾದ ಪ್ರಾಣದಿಂದ ಸಾಯುತ್ತಾನೆ; ಅವನು ಸಂತೋಷದಲ್ಲಿ ಏನೂ ಉಣ್ಣು ವದಿಲ್ಲ. |
26. | ಧೂಳಿನಲ್ಲಿ ಮಲಗುತ್ತಾರೆ; ಹುಳಗಳು ಅವರನ್ನು ಅಡಗಿಸುತ್ತವೆ. |
27. | ಇಗೋ, ನಿಮ್ಮ ಆಲೋಚನೆಗಳನ್ನೂ ನೀವು ನನ್ನ ಮೇಲೆ ಬಲಾತ್ಕಾರಿಗಳಾಗಿ ಮಾಡುವ ಯೋಚನೆ ಗಳನ್ನೂ ತಿಳಿದಿದ್ದೇನೆ. |
28. | ನೀವು ಅನ್ನುತ್ತೀರಿ--ಪ್ರಧಾನಿಯ ಮನೆ ಎಲ್ಲಿ? ದುಷ್ಟರ ನಿವಾಸಗಳ ಗುಡಾ ರವು ಎಲ್ಲಿ? |
29. | ಮಾರ್ಗದಲ್ಲಿ ಹಾದುಹೋಗುವ ವರನ್ನು ಕೇಳಲಿಲ್ಲವೋ? ಅವರ ಗುರುತುಗಳನ್ನು ನೀವು ಗೊತ್ತುಮಾಡಲಿಲ್ಲವೋ? |
30. | ಆಪತ್ತಿನ ದಿವಸಕ್ಕೆ ಕೆಟ್ಟ ವನು ಇರಿಸಲ್ಪಟ್ಟಿದ್ದಾನೆ. ಉಗ್ರದ ದಿವಸಕ್ಕೆ ಹೊರಗೆ ತರಲ್ಪಡುವನು. |
31. | ಅವನ ಮಾರ್ಗವನ್ನು ಮುಖಾ ಮುಖಿಯಾಗಿ ಅವನಿಗೆ ತೋರಿಸಿ ಅವನು ಮಾಡಿದ್ದ ಕ್ಕೋಸ್ಕರ ಅವನಿಗೆ ಮುಯ್ಯಿಗೆಮುಯ್ಯಿ ಕೊಡುವವನು ಯಾರು? |
32. | ಅವನು ಸಮಾಧಿಗಳಿಗೆ ಒಯ್ಯಲ್ಪಡು ವನು; ಗೋರಿಯ ಮೇಲೆ ಇರುವನು. |
33. | ತಗ್ಗಿನ ಗಡ್ಡೆಗಳು ಅವನಿಗೆ ರಮ್ಯವಾಗಿರುವವು; ಎಲ್ಲಾ ಮನು ಷ್ಯರನ್ನು ತನ್ನ ಹಿಂದೆ ಎಳೆಯುತ್ತಾನೆ; ಅವನ ಮುಂದಿನ ವರಿಗೆ ಲೆಕ್ಕವಿಲ್ಲ. |
34. | ವ್ಯರ್ಥತ್ವದಿಂದ ನೀವು ನನ್ನನ್ನು ಸಂತೈಸುವದು ಹೇಗೆ? ನಿಮ್ಮ ಉತ್ತರಗಳಲ್ಲಿ ಸುಳ್ಳು ಉಳುಕೊಳ್ಳುವದು. |
← Job (21/42) → |