← Job (24/42) → |
1. | ಸರ್ವಶಕ್ತನಿಗೆ ಕಾಲಗಳು ಮರೆಯಾಗದೆ ಇರಲಾಗಿ, ಆತನನ್ನು ತಿಳಿದವರು ಆತನ ದಿವಸಗಳನ್ನು ನೋಡದೆ ಇರುವದು ಯಾಕೆ? |
2. | ಗಡಿ ಗಳನ್ನು ಬದಲಿಸುತ್ತಾರೆ, ಮಂದೆಗಳನ್ನು ಬಲಾತ್ಕಾರ ದಿಂದ ತಕ್ಕೊಂಡು ಅವುಗಳನ್ನು ಸಾಕಿಕೊಳ್ಳುತ್ತಾರೆ. |
3. | ದಿಕ್ಕಿಲ್ಲದವರ ಕತ್ತೆಯನ್ನು ತಕ್ಕೊಂಡು ಹೋಗುತ್ತಾರೆ; ವಿಧವೆಯ ಎತ್ತನ್ನು ಒತ್ತೆಯಾಗಿ ತಕ್ಕೊಳ್ಳುತ್ತಾರೆ. |
4. | ದರಿದ್ರನನ್ನು ಮಾರ್ಗದಿಂದ ತೊಲಗಿಸುತ್ತಾರೆ; ದೇಶದ ದೀನರು ಕೂಡಾ ಅಡಗಿಕೊಳ್ಳುತ್ತಾರೆ. |
5. | ಇಗೋ, ಅವರು ಕಾಡುಕತ್ತೆಗಳ ಹಾಗೆ ತಮ್ಮ ಕೆಲಸಕ್ಕೆ ಹೊರಡುತ್ತಾರೆ. ಬೆಳಿಗ್ಗೆ ಕೊಳ್ಳೆ ಹುಡುಕುತ್ತಾರೆ; ಅರಣ್ಯವು ಅವರಿಗೂ ಮಕ್ಕಳಿಗೂ ಆಹಾರ ಕೊಡು ತ್ತದೆ. |
6. | ಹೊಲದಲ್ಲಿ ತಮ್ಮ ತಮ್ಮ ಬೆಳೆಯನ್ನು ಕೊಯ್ದು ದುಷ್ಟನ ದ್ರಾಕ್ಷೆಯ ತೋಟದಲ್ಲಿ ಹಣ್ಣು ಆರಿಸುತ್ತಾರೆ. |
7. | ಬೆತ್ತಲೆಯಾಗಿ ಬಟ್ಟೆ ಇಲ್ಲದೆ ಮಲಗುವಂತೆ ಮಾಡುತ್ತಾರೆ. ಚಳಿಯಲ್ಲಿ ಅವರಿಗೆ ಹೊದ್ದು ಕೊಳ್ಳು ವದಕ್ಕೆ ಇಲ್ಲ. |
8. | ಬೆಟ್ಟಗಳ ಮಳೆಯಿಂದ ತೊಯ್ದಿ ದ್ದಾರೆ; ಆಶ್ರಯವಿಲ್ಲದೆ ಬಂಡೆಯನ್ನು ಅಪ್ಪಿಕೊಳ್ಳುತ್ತಾರೆ. |
9. | ದಿಕ್ಕಿಲ್ಲದವರನ್ನು ತಾಯಿಯ ಮೊಲೆಯಿಂದ ಕಸಕೊಳ್ಳುತ್ತಾರೆ; ಬಡವನಿಂದ ಒತ್ತೆಯಾಗಿ ತಕ್ಕೊಳ್ಳು ತ್ತಾರೆ. |
10. | ವಸ್ತ್ರವಿಲ್ಲದೆ ಬೆತ್ತಲೆಯಾಗಿರುವವರನ್ನು ತಿರು ಗಾಡಿಸುತ್ತಾರೆ; ಹಸಿದವರು ಸೂಡುಗಳನ್ನು ಹೊರು ತ್ತಾರೆ |
11. | ಅವರ ಗೋಡೆಗಳ ನಡುವೆ ಇದ್ದುಕೊಂಡು ಎಣ್ಣೆಯನ್ನು ತೆಗೆಯುತ್ತಾರೆ; ತೊಟ್ಟಿಗಳನ್ನು ತುಳಿದು ದಾಹಪಡುತ್ತಾರೆ. |
12. | ಪಟ್ಟಣದೊಳಗಿಂದ ಮನುಷ್ಯರು ನರಳುತ್ತಾರೆ; ಗಾಯಪಟ್ಟವರ ಪ್ರಾಣವು ಕೂಗುತ್ತದೆ; ಆದರೂ ದೇವರು ತಪ್ಪುಹೊರಿಸುವದಿಲ್ಲ. |
13. | ಅವರು ಬೆಳಕಿಗೆ ವಿರೋಧವಾಗಿ ದಂಗೆಎದ್ದಿದ್ದಾರೆ; ಅದರ ಮಾರ್ಗ ಗಳನ್ನು ಅವರು ಅರಿಯರು; ಇಲ್ಲವೆ ಅದರ ದಾರಿಗಳಲ್ಲಿ ವಾಸವಾಗಿರರು. |
14. | ಬೆಳಿಗ್ಗೆ ಕೊಲೆಗಾರನು ಎದ್ದು ದೀನನನ್ನೂ ದರಿದ್ರನನ್ನೂ ಕೊಲ್ಲುತ್ತಾನೆ; ರಾತ್ರಿ ಯಲ್ಲಿ ಕಳ್ಳನ ಹಾಗೆ ಇದ್ದಾನೆ. |
15. | ವ್ಯಭಿಚಾರಿಯ ಕಣ್ಣು ಮುಂಗತ್ತಲೆಗೆ ಕಾದುಕೊಂಡು -- ಯಾವ ಕಣ್ಣೂ ನನ್ನನ್ನು ನೋಡುವದಿಲ್ಲವೆಂದು ಹೇಳುತ್ತದೆ; ಮುಖ ವನ್ನು ಮುಚ್ಚಿಕೊಳ್ಳುತ್ತಾನೆ. |
16. | ಹಗಲು ಹೊತ್ತು ಗೊತ್ತು ಮಾಡಿಕೊಂಡ ಮನೆಗಳನ್ನು ಕತ್ತಲೆಯಲ್ಲಿ ಕೊರೆಯು ತ್ತಾರೆ; ಅವರು ಬೆಳಕನ್ನು ತಿಳಿಯರು. |
17. | ಉದಯ ಕಾಲವು ಅವರಿಗೆ ಮರಣದ ನೆರಳಿನ ಹಾಗೆಯೇ ಇರುವದು; ಮರಣದ ನೆರಳಿನ ದಿಗಿಲುಗಳನ್ನು ತಿಳು ಕೊಳ್ಳುತ್ತಾರೆ. |
18. | ನೀರುಗಳ ಹಾಗೆ ಅವನು ತೀವ್ರವಾಗಿದ್ದಾನೆ; ಅವನ ಭಾಗವು ಭೂಮಿಯ ಮೇಲೆ ಶಪಿಸಲ್ಪಟ್ಟಿದೆ; ಅವನು ದ್ರಾಕ್ಷೇ ತೋಟಗಳ ಮಾರ್ಗಕ್ಕೆ ತಿರುಗು ವದಿಲ್ಲ. |
19. | ಹಿಮದ ನೀರನ್ನು ಒಣ ಭೂಮಿಯೂ ಬಿಸಿಲೂ ಹೀರಿಕೊಳ್ಳುವಂತೆ ಪಾಪಮಾಡಿದವರನ್ನು ಸಮಾಧಿಯು ಹೀರಿಕೊಳ್ಳುತ್ತದೆ. |
20. | ಗರ್ಭವು ಅವನನ್ನು ಮರೆತುಬಿಡುವದು; ಹುಳವು ಅವನಲ್ಲಿ ಸವಿ ಊಟ ಹೊಂದುವದು; ಇನ್ನು ಅವನ ನೆನಪು ಇರುವದಿಲ್ಲ; ಮರದ ಹಾಗೆ ಅನ್ಯಾಯವು ಮುರಿಯಲ್ಪಡುವದು. |
21. | ಹೆರದ ಬಂಜೆಯನ್ನು ಅವನು ಉಪದ್ರವಪಡಿಸಿ ದನು; ವಿಧವೆಗೆ ಉಪಕಾರಮಾಡಲಿಲ್ಲ. |
22. | ಬಲಿಷ್ಠರನ್ನು ತನ್ನ ಶಕ್ತಿಯಿಂದ ಎಳೆಯುತ್ತಾನೆ. ಅವನು ಎದ್ದರೆ ಅವನ ಜೀವದಲ್ಲಿ ಯಾವ ಮನುಷ್ಯನಿಗೂ ನಂಬಿಕೆ ಇಲ್ಲ. |
23. | ಅವನನ್ನು ಭದ್ರಪಡಿಸುತ್ತಾನೆ; ಅವನು ವಿಶ್ರಾಂತಿ ತೆಗೆದುಕೊಳ್ಳುತ್ತಾನೆ; ಆದಾಗ್ಯೂ ಆತನ ಕಣ್ಣುಗಳು ಅವರ ಮಾರ್ಗಗಳ ಮೇಲೆ ಅವೆ. |
24. | ಸ್ವಲ್ಪಕಾಲ ಅವರು ಉನ್ನತವಾಗಿದ್ದು ಇಲ್ಲದೆ ಹೋಗುತ್ತಾರೆ; ಅವರು ಕುಗ್ಗಿ ಹೋಗುತ್ತಾರೆ; ಎಲ್ಲರ ಹಾಗೆ ಅವರು ಮಾರ್ಗದಿಂದ ತೆಗೆದುಹಾಕಲ್ಪಡುತ್ತಾರೆ; ಅವರು ತೆನೆಗಳ ತಲೆಯಂತೆ ಕೊಯ್ಯಲ್ಪಡುತ್ತಾರೆ. |
25. | ಈಗ ಹೀಗೆ ಇಲ್ಲದಿದ್ದರೆ ಯಾವನು ನನ್ನನ್ನು ಸುಳ್ಳುಗಾರನನ್ನಾಗಿ ಮಾಡಿ ನನ್ನ ನುಡಿಯನ್ನು ವ್ಯರ್ಥ ಮಾಡುವನು? |
← Job (24/42) → |