← Job (27/42) → |
1. | ಯೋಬನು ಇನ್ನೂ ತನ್ನ ಸಾಮತಿ ಎತ್ತಿ ಹೇಳಿದ್ದೇನಂದರೆ-- |
2. | ನನ್ನ ನ್ಯಾಯವನ್ನು ತೊಲಗಿಸಿದ ದೇವರ ಜೀವದೊಂದಿಗೆ ನನ್ನ ಜೀವವನ್ನು ಕಹಿಮಾಡಿದ ಸರ್ವಶಕ್ತನ ಜೀವದೊಂದಿಗೆ |
3. | ನನ್ನ ಶ್ವಾಸವು ನನ್ನಲ್ಲಿಯೂ ದೇವರ ಆತ್ಮವು ನನ್ನ ಮೂಗಿ ನಲ್ಲಿಯೂ ಇರುವ ಸರ್ವಕಾಲದ ವರೆಗೂ |
4. | ನನ್ನ ತುಟಿಗಳು ದುಷ್ಟತ್ವವನ್ನು ಮಾತನಾಡವು; ನನ್ನ ನಾಲಿಗೆ ಮೋಸ ನುಡಿಯದು. |
5. | ನಿಮ್ಮನ್ನು ನೀತಿವಂತರೆನ್ನುವದು ನನಗೆ ದೂರವಿರಲಿ; ನಾನು ಸತ್ತು ಹೋಗುವ ವರೆಗೂ ನನ್ನ ಯಥಾರ್ಥತ್ವವನ್ನು ನನ್ನಿಂದ ತೊಲ ಗಿಸುವದಿಲ್ಲ. |
6. | ನನ್ನ ನೀತಿಯನ್ನು ದೃಢವಾಗಿ ಹಿಡು ಕೊಂಡಿದ್ದೇನೆ. ಅದನ್ನು ನಾನು ಹೋಗಗೊಡಿಸು ವದಿಲ್ಲ; ನಾನು ಇರುವ ವರೆಗೂ ನನ್ನ ಹೃದಯವು ನನ್ನನ್ನು ನಿಂದಿಸುವದಿಲ್ಲ. |
7. | ನನ್ನ ಶತ್ರು ದುಷ್ಟನ ಹಾಗಿರಲಿ; ನನಗೆ ವಿರೋಧ ವಾಗಿ ಏಳುವವನು ಅನ್ಯಾಯವಂತನ ಹಾಗಿರಲಿ. |
8. | ದೇವರು ಕಪಟಿಯ ಪ್ರಾಣವನ್ನು ತಕ್ಕೊಂಡರೆ ಅವನು ಲಾಭ ಮಾಡುವದರಲ್ಲಿ ನಿರೀಕ್ಷೆ ಏನು? |
9. | ಅವನ ಮೇಲೆ ಇಕ್ಕಟ್ಟು ಬಂದರೆ ಅವನ ಮೊರೆಯನ್ನು ದೇವರು ಕೇಳುವನೋ? |
10. | ಇಲ್ಲವೆ ಸರ್ವಶಕ್ತನಲ್ಲಿ ಆನಂದವಾಗಿರುವನೋ? ಸರ್ವಕಾಲದಲ್ಲಿ ದೇವರನ್ನು ಕರೆಯುವನೋ? |
11. | ದೇವರ ಸಹಾಯದಿಂದ ನಿಮಗೆ ಬೋಧಿಸು ವೆನು; ಸರ್ವಶಕ್ತನಲ್ಲಿ ಇರುವವುಗಳನ್ನು ಮರೆ ಮಾಡೆನು. |
12. | ಇಗೋ, ನೀವೆಲ್ಲರೂ ದೃಷ್ಟಿಸಿದ್ದೀರಿ; ಯಾಕೆ ಈ ಪ್ರಕಾರ ಕೇವಲ ವ್ಯರ್ಥವಾಗಿ ಹೋಗಿ ದ್ದೀರಿ? |
13. | ಇದು ದುಷ್ಟ ಮನುಷ್ಯನಿಗೆ ದೇವರಿಂದ ಬಂದ ಪಾಲಾಗಿದೆ; ಬಲಾತ್ಕಾರಿಗಳು ಸರ್ವ ಶಕ್ತನಿಂದ ಹೊಂದುವ ಬಾಧ್ಯತೆ ಇದೇ. |
14. | ಅವನ ಮಕ್ಕಳು ಹೆಚ್ಚಿದರೆ ಖಡ್ಗಕ್ಕೆ ಗುರಿಯಾಗುವರು; ಅವನ ಸಂತ ತಿಯವರು ರೊಟ್ಟಿಯಿಂದ ತೃಪ್ತಿಹೊಂದರು. |
15. | ಅವ ನಿಗೆ ಉಳಿದವರು ಮರಣದಲ್ಲಿ ಹೂಣಲ್ಪಡುವರು; ಅವನ ವಿಧವೆಗಳು ಅಳದೆ ಇರುವರು. |
16. | ಅವನು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟು ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿ ಕೊಂಡಾಗ್ಯೂ |
17. | ಸಿದ್ಧ ಮಾಡಿಕೊಳ್ಳುತ್ತಾನಷ್ಟೇ; ನೀತಿವಂತನು ಉಟ್ಟುಕೊಳ್ಳು ತ್ತಾನೆ; ಬೆಳ್ಳಿಯನ್ನು ನಿರಪರಾಧಿಯು ಪಾಲಿಡುತ್ತಾನೆ. |
18. | ಹುಳದ ಹಾಗೆ ಮನೆಯನ್ನೂ ಕಾವಲುಗಾರನು ಮಾಡಿದ್ದರ ಹಾಗೆ ತನ್ನ ಗುಡಿಸಲನ್ನೂ ಕಟ್ಟಿದ್ದಾನೆ. |
19. | ಐಶ್ವರ್ಯವಂತನು ಮಲಗುತ್ತಾನೆ; ಕೂಡಿಸಲ್ಪಡು ವದಿಲ್ಲ; ಕಣ್ಣು ತೆರೆದರೆ ಅವನು ಇಲ್ಲ. |
20. | ದಿಗಿಲು ಗಳು ನೀರಿನಂತೆ ಅವನನ್ನು ಹಿಡಿಯುತ್ತವೆ. ರಾತ್ರಿ ಯಲ್ಲಿ ಬಿರುಗಾಳಿ ಅವನನ್ನು ಸುಲುಕೊಳ್ಳುತ್ತದೆ. |
21. | ಮೂಡಣಗಾಳಿ ಅವನನ್ನು ಎತ್ತಿಕೊಂಡು ಹೋಗು ತ್ತದೆ; ಅವನು ಹೋಗಿಬಿಡುತ್ತಾನೆ; ಬಿರುಗಾಳಿ ಅವನನ್ನು ಅವನ ಸ್ಥಳದಿಂದ ಹಾರಿಸಿ ಬಿಡುತ್ತದೆ. |
22. | ಆತನು ಕರುಣೆ ಇಲ್ಲದೆ ಅವನ ಮೇಲೆ ಹಾಕು ತ್ತಾನೆ. ಆತನ ಕೈಯಲ್ಲಿಂದ ಅವನು ಓಡಿಯೇ ಓಡುತ್ತಾನೆ. |
23. | ಜನರು ಅವನ ಕಡೆಗೆ ಚಪ್ಪಾಳೆ ತಟ್ಟುತ್ತಾರೆ. ಅವನ ಸ್ಥಳದೊಳಗಿಂದ ಅವನನ್ನು ಛೇ ಎಂದು ಹೊರಡಿಸುತ್ತಾರೆ. |
← Job (27/42) → |