← Job (29/42) → |
1. | ಯೋಬನು ಮತ್ತೆ ತನ್ನ ಪ್ರಸ್ತಾಪವನ್ನೆತ್ತಿ ಹೇಳಿದ್ದೇನಂದರೆ-- |
2. | ಓ, ಮುಂಚಿನ ತಿಂಗ ಳುಗಳ ಹಾಗೆಯೂ ದೇವರು ನನ್ನನ್ನು ಕಾಪಾಡಿದ ದಿವಸಗಳ ಹಾಗೆಯೂ ನನಗೆ ಆದರೆ ಒಳ್ಳೇದು. |
3. | ಆಗ ಆತನ ದೀಪವು ನನ್ನ ತಲೆಯ ಮೇಲೆ ಹೊಳೆ ಯಿತು; ಆತನ ಬೆಳಕಿನಿಂದ ಕತ್ತಲಲ್ಲಿ ನಡೆದೆನು. |
4. | ನಾನು ನನ್ನ ಯೌವನದ ದಿವಸಗಳಲ್ಲಿದ್ದಾಗ ದೇವರ ಮರ್ಮವು ನನ್ನ ಗುಡಾರದ ಮೇಲೆ ಇತ್ತು. |
5. | ಸರ್ವ ಶಕ್ತನು ಇನ್ನೂ ನನ್ನ ಸಂಗಡ ಇದ್ದನು; ನನ್ನ ಸುತ್ತಲೂ ನನ್ನ ಮಕ್ಕಳು ಇದ್ದರು. |
6. | ನನ್ನ ಹೆಜ್ಜೆಗಳನ್ನು ಬೆಣ್ಣೆ ಯಿಂದ ತೊಳೆಯುತ್ತಾ ಇದ್ದೆನು; ಬಂಡೆಯು ನನ್ನ ಬಳಿಯಲ್ಲಿ ಎಣ್ಣೆಯ ಪ್ರವಾಹಗಳನ್ನು ಹೊಯ್ಯುತ್ತಿತ್ತು. |
7. | ಪಟ್ಟಣವನ್ನು ಹಾದು ಬಾಗಲಿಗೆ ಹೊರಟುಹೋಗಿ ನನ್ನ ಪೀಠವನ್ನು ಬೀದಿಯಲ್ಲಿ ಸಿದ್ಧಪಡಿಸುತ್ತಾ ಇದ್ದೆನು. |
8. | ಯುವಕರು ನನ್ನನ್ನು ನೋಡಿ ಅಡಗಿಕೊಳ್ಳುತ್ತಿದ್ದರು; ವೃದ್ಧರು ಎದ್ದು ನಿಲ್ಲುತ್ತಿದ್ದರು. |
9. | ಪ್ರಧಾನರು ನುಡಿಗಳನ್ನು ಬಿಗಿಹಿಡಿದು ತಮ್ಮ ಬಾಯಿಯ ಮೇಲೆ ಕೈ ಇಟ್ಟು ಕೊಂಡರು. |
10. | ಘನವುಳ್ಳವರು ಮೌನವಾದರು; ಅವರ ನಾಲಿಗೆ ಅವರ ಅಂಗಳಕ್ಕೆ ಅಂಟಿತು. |
11. | ಕೇಳುವ ಕಿವಿ ನನ್ನನ್ನು ಧನ್ಯನೆಂದು ಹರಸಿತು; ನೋಡುವ ಕಣ್ಣು ನನಗೆ ಸಾಕ್ಷಿ ಕೊಡುತ್ತಿತ್ತು. |
12. | ಮೊರೆ ಯಿಡುವ ದೀನನನ್ನೂ ಸಹಾಯವಿಲ್ಲದ ದಿಕ್ಕಿಲ್ಲದ ವರನ್ನೂ ನಾನು ತಪ್ಪಿಸಿದೆನು. |
13. | ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು. |
14. | ನೀತಿಯನ್ನು ಧರಿಸಿಕೊಂಡೆನು; ಅದೇ ನನಗೆ ವಸ್ತ್ರದಹಾಗಿತ್ತು; ನಿಲು ವಂಗಿಯ ಹಾಗೆಯೂ ಕಿರೀಟದ ಹಾಗೆಯೂ ನನ್ನ ನ್ಯಾಯವು ನನಗೆ ಇತ್ತು. |
15. | ನಾನು ಕುರುಡನಿಗೆ ಕಣ್ಣೂ ಕುಂಟನಿಗೆ ಕಾಲೂ ಆಗಿದ್ದೆನು. |
16. | ದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು. |
17. | ದುಷ್ಟರ ದವಡೆಗಳನ್ನು ಮುರಿ ದೆನು; ಅವನ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ತೆಗೆದೆನು. |
18. | ನನ್ನ ಗೂಡಿನಲ್ಲಿ ನಾನು ಸಾಯುವೆನು, ಮರಳಿ ನಂತೆ ನನ್ನ ದಿವಸಗಳನ್ನು ಹೆಚ್ಚಿಸುವೆನು ಅಂದೆನು. |
19. | ನನ್ನ ಬೇರು ನೀರಿನ ಬಳಿಯಲ್ಲಿ ಹಬ್ಬಿತ್ತು--ನನ್ನ ಕೊಂಬೆಯ ಮೇಲೆ ಮಂಜು ಉಳುಕೊಳ್ಳುತ್ತಾ ಇತ್ತು. |
20. | ನನ್ನ ಘನವು ನನ್ನಲ್ಲಿ ಹೊಸದಾಗಿತ್ತು; ನನ್ನ ಬಿಲ್ಲು ನನ್ನ ಕೈಯಲ್ಲಿ ಹೊಸದಾಗಿತ್ತು. |
21. | ನನಗೆ ಕಿವಿಗೊಟ್ಟು ಎದುರುನೋಡಿ, ನನ್ನ ಆಲೋಚನೆಗೆ ಮೌನವಾಗಿ ದ್ದರು. |
22. | ನನ್ನ ಮಾತಿನ ಮೇಲೆ ಅವರು ಬೇರೆ ಮಾತ ನಾಡಲಿಲ್ಲ; ನನ್ನ ನುಡಿ ಅವರ ಮೇಲೆ ಸುರಿಯಿತು. |
23. | ಮಳೆಯಂತೆ ನನ್ನನ್ನು ಎದುರು ನೋಡುತ್ತಿದ್ದರು; ಹಿಂಗಾರು ಮಳೆಗೆ ಎಂಬಂತೆ ಬಾಯಿ ತೆಗೆದರು. |
24. | ನಂಬಿಕೆ ಇಲ್ಲದವರ ಕಡೆಗೆ ನಗೆ ತೋರಿಸಿದೆನು; ನನ್ನ ಮುಖದ ಕಳೆಯನ್ನು ಅವರು ಕುಂದಿಸಲಿಲ್ಲ. |
25. | ಅವರ ಮಾರ್ಗವನ್ನು ಆದುಕೊಂಡು ಪ್ರಧಾನನಾಗಿ ಕೂತು ಗೋಳಾಡುವವರನ್ನು ಸಂತೈಸುವವನಾಗಿಯೇ ಅರಸನಂತೆ ಸೈನ್ಯದಲ್ಲಿ ಆಸೀನನಾಗಿದ್ದೆನು. |
← Job (29/42) → |