← Job (35/42) → |
1. | ಇದಲ್ಲದೆ ಎಲೀಹು ಮಾತನಾಡಿ ಹೇಳಿದ್ದೇನಂದರೆ-- |
2. | ನನ್ನ ನೀತಿಯು ದೇವರ ನೀತಿ ಗಿಂತ ದೊಡ್ಡದು ಎಂದು ನೀನು ಹೇಳಿದ್ದು ಸರಿಯಾದ ದ್ದೆಂದು ನೀನು ನೆನಸುತ್ತೀಯೋ? |
3. | ನೀನು--ನನಗೆ ಏನು ಪ್ರಯೋಜನವಾಗುವದು? ನನ್ನ ಪಾಪವು ತೊಳೆ ಯಲ್ಪಟ್ಟರೆ ನನಗೆ ಲಾಭವೇನು ಎನ್ನುವಿ. |
4. | ನಾನು ನಿನಗೂ ನಿನ್ನ ಸಂಗಡ ಇರುವ ಸ್ನೇಹಿತರಿಗೂ ಉತ್ತರ ಕೊಡುತ್ತೇನೆ. |
5. | ಆಕಾಶಗಳನ್ನು ದೃಷ್ಟಿಸಿ ನೋಡು, ಮೇಘಗಳನ್ನು ದೃಷ್ಟಿಸು; ಅವು ನಿನಗಿಂತ ಎತ್ತರವಾಗಿವೆ. |
6. | ನೀನು ಪಾಪಮಾಡಿದರೆ ಆತನಿಗೆ ವಿರೋಧವಾಗಿ ಏನು ಮಾಡುವಿ? ನಿನ್ನ ದ್ರೋಹಗಳು ಹೆಚ್ಚಿದರೆ ಆತನಿಗೆ ಏನು ಮಾಡುವಿ? |
7. | ನೀನು ನೀತಿವಂತನಾಗಿ ದ್ದರೆ ಆತನಿಗೇನು ಕೊಡುವಿ? ಇಲ್ಲವೆ ಆತನು ನಿನ್ನ ಕೈಯಿಂದ ಏನು ತೆಗೆದುಕೊಳ್ಳುವನು? |
8. | ನಿನ್ನ ಹಾಗಿ ರುವ ಮನುಷ್ಯನಿಗೆ ನಿನ್ನ ದುಷ್ಟತ್ವವು ಕೇಡು ಮಾಡ ಬಹುದು. ಮನುಷ್ಯನ ಮಗನಿಗೆ ನಿನ್ನ ನೀತಿಯು ಲಾಭ ಮಾಡಬಹುದು. |
9. | ಬಹು ಬಲಾತ್ಕಾರದ ದೆಸೆಯಿಂದ ಬಲಾತ್ಕಾರ ಮಾಡಲ್ಪಟ್ಟವರು ಕೂಗುವಂತೆ ಅವರು ಮಾಡುತ್ತಾರೆ; ಪರಾಕ್ರಮಿಗಳ ತೋಳಿಗೋಸ್ಕರ ಮೊರೆಯಿಡುತ್ತಾರೆ. |
10. | ಆದರೆ ರಾತ್ರಿಯಲ್ಲಿ ಗೀತೆಗಳನ್ನು ಕೊಡುವ ನನ್ನ ನಿರ್ಮಾಣಿಕನಾದ ದೇವರು ಎಲ್ಲಿ ಎಂದು ಯಾರೂ ಹೇಳುವದಿಲ್ಲ. |
11. | ಆತನು ಭೂಮಿಯ ಮೃಗಗಳಿಗಿಂತ ನಮಗೆ ಹೆಚ್ಚು ಕಲಿಸಿ, ಆಕಾಶದ ಪಕ್ಷಿಗಳಿಗಿಂತ ನಮಗೆ ಅಧಿಕ ಜ್ಞಾನವನ್ನು ಕೊಡುತ್ತಾನೆ. |
12. | ಅಲ್ಲಿ ಅವರು ಕೆಟ್ಟವರ ಗರ್ವದ ನಿಮಿತ್ತ ಮೊರೆಯಿಡಲು ಉತ್ತರ ಕೊಡುವದಿಲ್ಲ. |
13. | ನಿಶ್ಚಯವಾಗಿ ವ್ಯರ್ಥವಾದ ದ್ದನ್ನು ದೇವರು ಕೇಳುವದಿಲ್ಲ. ಇಲ್ಲವೇ ಸರ್ವಶಕ್ತನು ಅದನ್ನು ಲಕ್ಷಿಸುವದಿಲ್ಲ. |
14. | ನೀನು ಅವನನ್ನು ದೃಷ್ಟಿಸುವ ದಿಲ್ಲವೆಂದು ನೀನು ಹೇಳಿದರೂ ನ್ಯಾಯತೀರ್ಪು ಅವನ ಮುಂದೆ ಇರುವದು; ಆದದರಿಂದ ನೀನು ಆತನಲ್ಲಿ ಭರವಸವಿಡು. |
15. | ಆದರೆ ಈಗ ಅದು ಹಾಗಲ್ಲದಿರುವದರಿಂದ ಆತನು ತನ್ನ ಕೋಪದಿಂದ ಏನೂ ವಿಚಾರಿಸದೆ ಇದ್ದಾನೆ; ಆದರೂ ಅವನು ದೊಡ್ಡ ಇಕ್ಕಟ್ಟಿನಲ್ಲಿ ಅದನ್ನು ತಿಳುಕೊಳ್ಳುವದಿಲ್ಲ. |
16. | ಆದದರಿಂದ ಯೋಬನು ವ್ಯರ್ಥವಾಗಿ ಬಾಯಿ ತೆರೆದು ತಿಳುವಳಿಕೆ ಇಲ್ಲದೆ ನುಡಿಗಳನ್ನು ಹೆಚ್ಚಿಸುತ್ತಾನೆ. |
← Job (35/42) → |