← Job (36/42) → |
1. | ಎಲೀಹು ಮುಂದುವರಿದು ಹೇಳಿದ್ದೇನಂದರೆ-- |
2. | ನನಗೋಸ್ಕರ ಸ್ವಲ್ಪ ತಾಳಿ ಕೋ; ಆಗ ನಿನಗೆ ಪ್ರಕಟಮಾಡುವೆನು; ಯಾಕಂದರೆ ದೇವರ ಪರವಾಗಿ ಇನ್ನೂ ಮಾತುಗಳುಂಟು. |
3. | ನನ್ನ ತಿಳುವಳಿಕೆಯನ್ನು ದೂರದಿಂದ ತಕ್ಕೊಂಡು ಬರುವೆನು; ನನ್ನ ನಿರ್ಮಾಣಿಕನಿಗೆ ನೀತಿಯನ್ನು ಸಲ್ಲಿಸುವೆನು. |
4. | ನಿಜ ವಾಗಿ ನನ್ನ ಮಾತುಗಳು ಸುಳ್ಳಲ್ಲ; ತಿಳುವಳಿಕೆಯಲ್ಲಿ ಸಂಪೂರ್ಣನಾದವನು ನಿನ್ನ ಬಳಿಯಲ್ಲಿದ್ದಾನೆ. |
5. | ಇಗೋ, ದೇವರು ಬಲಿಷ್ಠನಾಗಿದ್ದು ಯಾರನ್ನೂ ತಿರಸ್ಕಾರ ಮಾಡುವದಿಲ್ಲ. |
6. | ಆತನು ಬಲದಲ್ಲಿಯೂ ಜ್ಞಾನದಲ್ಲಿಯೂ ಪರಾಕ್ರಮಿಯಾಗಿದ್ದಾನೆ. ದುಷ್ಟರ ಜೀವವನ್ನು ಆತನು ಕಾಪಾಡುವದಿಲ್ಲ. ಆದರೆ ಬಡವ ರಿಗೆ ಸರಿಯಾದದ್ದನ್ನು ಕೊಡುತ್ತಾನೆ. |
7. | ನೀತಿವಂತರಿಂದ ತನ್ನ ಕಣ್ಣುಗಳನ್ನು ತೊಲಗಿಸುವದಿಲ್ಲ. ಅವರು ಅರಸುಗಳ ಸಂಗಡ ಸಿಂಹಾಸನದಲ್ಲಿ ಇದ್ದಾರೆ. ಹೌದು, ಆತನು ಅವರನ್ನು, ಎಂದೆಂದಿಗೂ ಸ್ಥಿರಪಡಿಸುತ್ತಾನೆ. ಅವರು ಉನ್ನತಕ್ಕೇರಿಸಲ್ಪಟ್ಟಿದ್ದಾರೆ. |
8. | ಆದರೆ ಸಂಕೋಲೆ ಗಳಿಂದ ಕಟ್ಟಲ್ಪಟ್ಟಿದ್ದಾರೆ. ಬಾಧೆಯ ಬಂಧಗಳಿಂದ ಹಿಡಿಯಲ್ಪಟ್ಟಿದ್ದಾರೆ. |
9. | ಅವರ ಕೃತ್ಯವನ್ನೂ ದ್ರೋಹ ಗಳನ್ನೂ ಅವುಗಳಲ್ಲಿ ಬಲಗೊಂಡರೆಂದು ಅವರಿಗೆ ತೋರಿಸುತ್ತಾನೆ. |
10. | ಆತನು ಅವರ ಕಿವಿಯನ್ನು ಶಿಕ್ಷೆಗಾಗಿ ತೆರೆದು ದುಷ್ಟತನ ಬಿಟ್ಟು ತಿರುಗಿರೆಂದು ಅವರಿಗೆ ಆಜ್ಞಾಪಿಸುತ್ತಾನೆ. |
11. | ಅವರು ವಿಧೇಯರಾಗಿ ಸೇವಿಸಿದರೆ ತಮ್ಮ ದಿವಸಗಳನ್ನು ಅಭಿವೃದ್ಧಿಯಲ್ಲಿಯೂ ವರುಷ ಗಳನ್ನು ಸುಖದಲ್ಲಿಯೂ ಪೂರೈಸುವರು. |
12. | ಅವರು ವಿಧೇಯರಾಗದಿದ್ದರೆ ಕತ್ತಿಯಿಂದ ನಾಶವಾಗುವರು; ತಿಳಿಯದೆ ಸಾಯುವರು. |
13. | ಹೃದಯದಲ್ಲಿ ಕಪಟ ಇರು ವವರು ಕೋಪವನ್ನು ಕೂಡಿಸುತ್ತಾರೆ. ಆತನು ಅವರನ್ನು ಬಂಧಿಸಿದರೆ ಅವರು ಮೊರೆಯಿಡುವದಿಲ್ಲ. |
14. | ಯೌವ ನದಲ್ಲಿ ಅವರು ಸಾಯುತ್ತಾರೆ. ಅವರ ಜೀವವು ಅಪವಿ ತ್ರರ ಮಧ್ಯದಲ್ಲಿ ಇದೆ. |
15. | ಬಡವನನ್ನು ಆತನು ಕಷ್ಟದ ಸ್ಥಿತಿಯಿಂದ ತಪ್ಪಿಸುತ್ತಾನೆ. ಬಾಧೆಯಲ್ಲಿ ಅವರ ಕಿವಿ ಯನ್ನು ತೆರೆಯುತ್ತಾನೆ. |
16. | ನಿನ್ನನ್ನು ಆತನು ಹಾಗೆಯೇ ಇಕ್ಕಟ್ಟಿನೊಳಗಿಂದ ತೆಗೆದು ಇಕ್ಕಟ್ಟಿಲ್ಲದ ವಿಶಾಲವಾದ ಸ್ಥಳಕ್ಕೆ ಬರಮಾಡ ಬಹುದಾಗಿತ್ತು; ನಿನ್ನ ಮೇಜಿನ ಮೇಲೆ ಇಡತಕ್ಕವುಗಳು ಕೊಬ್ಬಿನಿಂದ ತುಂಬಿದವುಗಳಾಗಿರುವವು. |
17. | ಆದರೆ ನೀನು ದುಷ್ಟನ ನ್ಯಾಯವನ್ನು ಪೂರೈಸಿದಿ; ನ್ಯಾಯವೂ ತೀರ್ಪೂ ನಿನ್ನನ್ನು ಹಿಡಿಯುವವು. |
18. | ರೌದ್ರ ಉಂಟು, ಅವನು ನಿನ್ನನ್ನು ಒಂದೇ ಪೆಟ್ಟಿನಿಂದ ಒಯ್ಯದ ಹಾಗೆ ನೋಡು; ದೊಡ್ಡ ವಿಮೋಚನೆಯ ಕ್ರಯ ನಿನ್ನನ್ನು ಬಿಡಿಸದು. |
19. | ಅವನು ನಿನ್ನ ಐಶ್ವರ್ಯವನ್ನು ಲೆಕ್ಕಿಸು ವನೋ? ಬಂಗಾರವನ್ನೂ ಬಲದ ಎಲ್ಲಾ ಶಕ್ತಿಗಳನ್ನೂ ಲೆಕ್ಕಿಸನು. |
20. | ಜನಗಳು ತಮ್ಮ ಸ್ಥಳದಲ್ಲಿ ಒಡೆಯಲ್ಪಡುವ ರಾತ್ರಿಯನ್ನು ಬಯಸಬೇಡ. |
21. | ದುಷ್ಟತನಕ್ಕೆ ತಿರುಗದ ಹಾಗೆ ಎಚ್ಚರವಾಗಿರು. ಕಷ್ಟಕ್ಕಿಂತ ಇದನ್ನೇ ನೀನು ಆದುಕೊಂಡಿ. |
22. | ಇಗೋ, ದೇವರು ತನ್ನ ಶಕ್ತಿಯಲ್ಲಿ ಉನ್ನತನಾಗಿ ದ್ದಾನೆ; ಆತನ ಹಾಗೆ ಬೋಧಿಸುವವನು ಯಾರು? |
23. | ಆತನ ಮಾರ್ಗವನ್ನು ಆತನಿಗೆ ನೇಮಿಸಿದವನಾರು? ನೀನು ಕೆಟ್ಟದ್ದು ಮಾಡಿದಿ ಎಂದು ಹೇಳುವವನಾರು? |
24. | ಮನುಷ್ಯನು ನೋಡುವ ಆತನ ಕೃತ್ಯಗಳನ್ನು ಘನ ಪಡಿಸುವದಕ್ಕೆ ನೆನಸಿಕೋ. |
25. | ಎಲ್ಲಾ ಮನುಷ್ಯರು ಅದನ್ನು ನೋಡಬಹುದು, ಮನುಷ್ಯರು ದೂರದಿಂದ ದೃಷ್ಟಿಸುತ್ತಾರೆ. |
26. | ಇಗೋ, ದೇವರು ದೊಡ್ಡವನಾಗಿದ್ದಾನೆ. ನಾವು ಆತನನ್ನು ಅರಿಯದವರಾಗಿದ್ದೇವೆ. ಆತನ ವರುಷಗಳ ಲೆಕ್ಕಕ್ಕೆ ಶೋಧನೆ ಇಲ್ಲ. |
27. | ಆತನು ನೀರಿನ ಹನಿಗಳನ್ನು ಕೂಡಿಸಿದಾಗ, ಅದರ ಮಂಜಿನ ಪ್ರಕಾರ ಮಳೆಯನ್ನು ಸುರಿಸುತ್ತವೆ. |
28. | ಮೋಡಗಳು ಅದನ್ನು ಸುರಿಸಿ ಮನು ಷ್ಯನ ಮೇಲೆ ಸಮೃದ್ಧಿಯಾಗಿ ಸುರಿಯಮಾಡುತ್ತವೆ. |
29. | ಮೋಡದ ವಿಸ್ತೀರ್ಣತೆಯನ್ನೂ ಆತನ ಗುಡಾರದ ಶಬ್ಧವನ್ನೂ ತಿಳುಕೊಳ್ಳುವವನಾರು? |
30. | ಇಗೋ, ತನ್ನ ಸುತ್ತಲೂ ಬೆಳಕನ್ನು ವಿಸ್ತರಿಸಿ ಸಮುದ್ರದ ಅಗಾಧವನ್ನು ಮುಚ್ಚುತ್ತಾನೆ. |
31. | ಅವುಗಳಿಂದ ಜನಗಳಿಗೆ ಆತನು ನ್ಯಾಯ ತೀರಿಸುತ್ತಾನೆ; ಸಮೃದ್ಧಿಯಾಗಿ ಆತನು ಆಹಾರ ಕೊಡುತ್ತಾನೆ. |
32. | ಮೇಘಗಳಿಂದ ಬೆಳಕನ್ನು ಮುಚ್ಚು ತ್ತಾನೆ; |
33. | ಅದರ ಶಬ್ದವು ಅದರ ವಿಷಯ ತಿಳಿಸುತ್ತದೆ; ಅವುಗಳ ಮಧ್ಯದಲ್ಲಿ ಬರುವ ಮೋಡದಿಂದ ಪ್ರಕಾಶಿಸ ದಂತೆ ಅಪ್ಪಣೆಕೊಡುತ್ತಾನೆ. ಪಶುಗಳು ಸಹ ಮಂಜಿನ ವಿಷಯವಾಗಿ ತಿಳಿಸುತ್ತವೆ. |
← Job (36/42) → |