← Job (4/42) → |
1. | ತೇಮಾನ್ಯನಾದ ಎಲೀಫಜನು ಉತ್ತರ ಕೊಟ್ಟು-- |
2. | ನಿನಗೆ ಮಾತನ್ನು ಹೇಳತೊಡ ಗಿದರೆ ನಿನಗೆ ದುಃಖವೋ? ಆದಾಗ್ಯೂ ಮಾತನಾಡು ವದನ್ನು ಯಾವನು ಬಿಗಿ ಹಿಡಿಯಬಲ್ಲನು? |
3. | ಇಗೋ, ಅನೇಕರನ್ನು ಶಿಕ್ಷಿಸಿದಿ; ಬಲಹೀನವಾದ ಕೈಗಳನ್ನು ಬಲ ಪಡಿಸಿದಿ. |
4. | ಎಡವಿ ಬೀಳುವವನನ್ನು ನಿನ್ನ ನುಡಿಗಳು ನಿಲ್ಲಿಸಿದವು. ಬಲಹೀನವಾದ ಮೊಣಕಾಲುಗಳನ್ನು ಬಲ ಪಡಿಸಿದಿ. |
5. | ಈಗ ಅದು ನಿನ್ನ ಮೇಲೆ ಬಂದದ್ದರಿಂದ ನೀನು ದಣಿಯುತ್ತೀ; ನಿನ್ನನ್ನೂ ಅದು ಮುಟ್ಟಿದ್ದರಿಂದ ಕಳವಳಪಡುತ್ತೀ; |
6. | ನಿನ್ನ ಭಯವೂ ಭರವಸೆಯೂ ನಿನ್ನ ನಿರೀಕ್ಷೆಯೂ ನಿನ್ನ ಮಾರ್ಗಗಳ ಯಥಾರ್ಥ ತೆಯೂ ಇವೇ ಅಲ್ಲವೋ? |
7. | ನೆನಪುಮಾಡಿಕೋ, ನಿರಪರಾಧಿಯಾಗಿ ನಾಶವಾದವನು ಯಾವನು? ನೀತಿ ವಂತರು ಕಡಿಯಲ್ಪಟ್ಟದ್ದು ಎಲ್ಲಿ? |
8. | ನಾನು ಕಂಡ ಹಾಗೆ ದುಷ್ಟತನವನ್ನು ಉಳುವವರೂ ದುಷ್ಟತನವನ್ನು ಬಿತ್ತುವ ವರೂ ಅದನ್ನೇ ಕೊಯ್ಯುತ್ತಾರೆ. |
9. | ದೇವರ ಸಿಡಿತದಿಂದ ಅವರು ನಾಶವಾಗುತ್ತಾರೆ. ಆತನ ಮೂಗಿನ ಉಸಿರಿ ನಿಂದ ಅವರು ಕ್ಷಯಿಸಿಹೋಗುತ್ತಾರೆ, |
10. | ಸಿಂಹದ ಘರ್ಜನೆಯೂ ಕ್ರೂರಸಿಂಹದ ಶಬ್ದವೂ ಸಿಂಹದ ಮರಿ ಗಳ ಹಲ್ಲುಗಳೂ ಮುರಿಯಲ್ಪಟ್ಟಿವೆ. |
11. | ಪ್ರಾಯದ ಸಿಂಹವು ಕೊಳ್ಳೆ ಇಲ್ಲದರಿಂದ ನಾಶವಾಗುತ್ತದೆ. ಸಿಂಹದ ಮರಿಗಳು ಚದುರಿಸಲ್ಪಡುತ್ತವೆ. |
12. | ಒಂದು ಮಾತು ನನಗೆ ಗುಪ್ತವಾಗಿ ಬಂದಿತು. ಅದರಿಂದ ಸ್ವಲ್ಪ ಮಾತ್ರ ನನ್ನ ಕಿವಿಗೆ ಬಿದ್ದಿತು. |
13. | ರಾತ್ರಿಯ ದರ್ಶನಗಳ ಆಲೋಚನೆಗಳಲ್ಲಿ ಗಾಢ ನಿದ್ರೆಯು ಜನರ ಮೇಲೆ ಬೀಳುವಾಗ |
14. | ಭಯವೂ ನಡುಗೂ ನನ್ನನ್ನು ಹಿಡಿದವು; ನನ್ನ ಎಲ್ಲಾ ಎಲುಬು ಗಳನ್ನು ನಡುಗಿಸಿತು. |
15. | ಒಂದು ಆತ್ಮವು ನನ್ನ ಮುಂದೆ ಹಾದುಹೋಯಿತು. ನನ್ನ ಕೂದಲು ನೆಟ್ಟಗಾಯಿತು. |
16. | ಅದು ಸುಮ್ಮನೆ ನಿಂತಿತು. ಅದರ ರೂಪವನ್ನು ನಾನು ತಿಳುಕೊಳ್ಳಲಿಲ್ಲ. ನನ್ನ ಕಣ್ಣುಗಳ ಮುಂದೆ ವಿಗ್ರಹವಿತ್ತು; ಅಲ್ಲಿ ನಿಶ್ಯಬ್ಧವಿತ್ತು. ಆಗ ಒಂದು ವಾಣಿ ಯಾಯಿತು-- |
17. | ದೇವರಿಗಿಂತ ಮನುಷ್ಯನು ಹೆಚ್ಚು ನೀತಿವಂತನೋ? ಪುರುಷನು ತನ್ನನ್ನು ಉಂಟು ಮಾಡಿ ದಾತನಿಗಿಂತಲೂ ಹೆಚ್ಚು ನಿರ್ಮಲನೋ? |
18. | ಇಗೋ, ತನ್ನ ಸೇವಕರಲ್ಲಿ ಆತನು ನಂಬಿಕೆ ಇಡುವದಿಲ್ಲ; ತನ್ನ ದೂತರಲ್ಲಿ ತಪ್ಪನ್ನೆಣಿಸುತ್ತಾನೆ. |
19. | ಧೂಳಿನಲ್ಲಿ ಅಸ್ತಿವಾರ ಇರುವ ಮಣ್ಣಿನ ಮನೆಗಳ ನಿವಾಸಿಗಳು ಎಷ್ಟು ಕಡಿಮೆ? ನುಸಿಯ ಮುಂದೆ ಅವರು ಜಜ್ಜಲ್ಪಡುತ್ತಾರೆ. |
20. | ಬೆಳಗಿ ನಿಂದ ಸಂಜೆಯ ವರೆಗೆ ಅವರು ನಾಶವಾಗುತ್ತಾರೆ. ಅವರು ಲಕ್ಷ್ಯವಿಲ್ಲದೆ ನಿತ್ಯ ನಾಶವಾಗುತ್ತಾರೆ. |
21. | ಅವ ರಲ್ಲಿರುವ ಅವರ ಶ್ರೇಷ್ಠತೆ ಹೊರಟು ಹೋಗುವ ದಿಲ್ಲವೋ? ಅವರು ಜ್ಞಾನವಿಲ್ಲದೆ ಸಾಯುತ್ತಾರೆ. |
← Job (4/42) → |