John (1/21) → |
1. | ಆದಿಯಲ್ಲಿ ವಾಕ್ಯವಿದ್ದನು; ಆ ವಾಕ್ಯವು ದೇವರೊಂದಿಗೆ ಇದ್ದನು; ಆ ವಾಕ್ಯವು ದೇವರಾಗಿದ್ದನು. |
2. | ಆತನೇ ಆದಿಯಲ್ಲಿ ದೇವರೊಂದಿಗೆ ಇದ್ದನು. |
3. | ಎಲ್ಲವು ಆತನಿಂದ ಉಂಟಾಯಿತು; ಉಂಟಾದದ್ದರಲ್ಲಿ ಆತನಿಲ್ಲದೆ ಯಾವದೂ ಉಂಟಾಗ ಲಿಲ್ಲ. |
4. | ಆತನಲ್ಲಿ ಜೀವವಿತ್ತು; ಆ ಜೀವವು ಮನುಷ್ಯ ರಿಗೆ ಬೆಳಕಾಗಿತ್ತು. |
5. | ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ; ಆ ಕತ್ತಲು ಅದನ್ನು ಗ್ರಹಿಸಲಿಲ್ಲ. |
6. | ದೇವರಿಂದ ಕಳುಹಿ ಸಲ್ಪಟ್ಟ ಒಬ್ಬ ಮನುಷ್ಯನಿದ್ದನು; ಅವನ ಹೆಸರು ಯೋಹಾನನು. |
7. | ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು. |
8. | ಅವನು ಆ ಬೆಳಕಲ್ಲ. ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡು ವದಕ್ಕೆ ಕಳುಹಿಸಲ್ಪಟ್ಟನು. |
9. | ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು. |
10. | ಆತನು ಲೋಕದಲ್ಲಿ ಇದ್ದನು; ಲೋಕವು ಆತನಿಂದ ಉಂಟಾಯಿತು; ಲೋಕವು ಆತನನ್ನು ಅರಿಯಲಿಲ್ಲ. |
11. | ಆತನು ತನ್ನ ಸ್ವಂತದವರ ಬಳಿಗೆ ಬಂದನು. ಆತನ ಸ್ವಂತದವರು ಆತನನ್ನು ಅಂಗೀಕರಿಸಲಿಲ್ಲ. |
12. | ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು. |
13. | ಇವರು ರಕ್ತದಿಂದಾಗಲಿ ಇಲ್ಲವೆ ಶರೀರದ ಇಚ್ಛೆಯಿಂದಾಗಲಿ ಇಲ್ಲವೆ ಮನುಷ್ಯನ ಇಚ್ಛೆಯಿಂದಾ ಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು. |
14. | ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು). |
15. | ಯೋಹಾನನು ಆತನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನನ್ನ ಹಿಂದೆ ಬರುವಾತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಹೇಳಿದಾತನು ಈತನೇ ಎಂದು ಕೂಗಿ ಹೇಳಿದನು. |
16. | ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು. |
17. | ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು. |
18. | ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ. |
19. | ನೀನು ಯಾರು ಎಂದು ಅವನನ್ನು ಕೇಳುವದ ಕ್ಕಾಗಿ ಯೆಹೂದ್ಯರು ಯಾಜಕರನ್ನೂ ಲೇವಿಯರನ್ನೂ ಯೆರೂಸಲೇಮಿನಿಂದ ಕಳುಹಿಸಿದಾಗ ಯೋಹಾನನು ಕೊಟ್ಟ ಸಾಕ್ಷಿ ಇದೇ. |
20. | ಅವನು ಒಪ್ಪಿಕೊಂಡನು. ಅಲ್ಲಗಳೆಯಲಿಲ್ಲ; ಅವನು--ನಾನು ಕ್ರಿಸ್ತನಲ್ಲ ಎಂದು ಒಪ್ಪಿಕೊಂಡನು. |
21. | ಅದಕ್ಕವರು--ಹಾಗಾದರೇನು? ನೀನು ಎಲೀಯನೋ ಎಂದು ಕೇಳಿದರು. ಅದಕ್ಕೆ ಅವನು--ನಾನಲ್ಲ ಅಂದನು. ಅವರು ನೀನು ಆ ಪ್ರವಾದಿಯೋ ಎಂದು ಕೇಳಿದ್ದಕ್ಕೆ ಅವನು--ಅಲ್ಲ ಎಂದು ಉತ್ತರಕೊಟ್ಟನು. |
22. | ಆಗ ಅವರು ಅವ ನಿಗೆ--ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಹೇಳುವಂತೆ ನೀನು ನಿನ್ನ ವಿಷಯದಲ್ಲಿ ಏನು ಹೇಳುತ್ತೀ ಎಂದು ಕೇಳಿದರು. |
23. | ಅವನು--ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿ ಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂದು ಪ್ರವಾದಿ ಯಾದ ಯೆಶಾಯನು ಹೇಳಿದ ಶಬ್ದವೇ ನಾನು ಎಂದು ಉತ್ತರಕೊಟ್ಟನು. |
24. | ಕಳುಹಿಸಲ್ಪಟ್ಟವರು ಫರಿಸಾಯರ ಕಡೆಯವರಾಗಿದ್ದರು. |
25. | ಅವರು ಅವನಿಗೆ--ನೀನು ಆ ಕ್ರಿಸ್ತನೂ ಎಲೀಯನೂ ಇಲ್ಲವೆ ಆ ಪ್ರವಾದಿಯೂ ಅಲ್ಲದಿದ್ದರೆ ಬಾಪ್ತಿಸ್ಮ ಮಾಡಿಸುವದು ಯಾಕೆ ಎಂದು ಕೇಳಿದರು. |
26. | ಯೋಹಾನನು ಅವರಿಗೆ ಪ್ರತ್ಯುತ್ತರ ವಾಗಿ--ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುತ್ತೇನೆ; ಆದರೆ ನೀವು ಅರಿಯದಿರುವಂಥ ಒಬ್ಬಾತನು ನಿಮ್ಮ ಮಧ್ಯದಲ್ಲಿ ನಿಂತಿದ್ದಾನೆ; |
27. | ಆತನೇ ನನ್ನ ಹಿಂದೆ ಬರು ವಾತನಾಗಿದ್ದು ನನಗಿಂತ ಮುಂದಿನವನಾದನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು. |
28. | ಇವುಗಳು ಯೊರ್ದನಿನ ಆಚೆ ಕಡೆಯ ಬೇಥಾಬರದಲ್ಲಿ ನಡೆದವು; ಅಲ್ಲಿ ಯೋಹಾನನು ಬಾಪ್ತಿಸ್ಮ ಮಾಡಿಸುತ್ತಿದ್ದನು. |
29. | ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು. |
30. | ನನ್ನ ಹಿಂದೆ ಒಬ್ಬ ಮನುಷ್ಯನು ಬರು ತ್ತಾನೆ; ಆತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಯಾರ ವಿಷಯದಲ್ಲಿ ಹೇಳಿದೆನೋ ಆತನೇ ಈತನು. |
31. | ನಾನು ಆತನನ್ನು ಅರಿತಿರಲಿಲ್ಲ; ಆದರೆ ಆತನು ಇಸ್ರಾಯೇಲ್ಯರಿಗೆ ಪ್ರತ್ಯಕ್ಷನಾಗುವಂತೆ ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುವವನಾಗಿ ಬಂದಿದ್ದೇನೆ ಅಂದನು. |
32. | ಯೋಹಾನನು ಸಾಕ್ಷಿಕೊಟ್ಟು--ಆತ್ಮನು ಪಾರಿವಾಳ ದಂತೆ ಪರಲೋಕದಿಂದ ಇಳಿದು ಆತನ ಮೇಲೆ ನೆಲೆ ಗೊಂಡಿರುವದನ್ನು ನಾನು ನೋಡಿದೆನು. |
33. | ನಾನು ಆತನನ್ನು ಅರಿತಿರಲಿಲ್ಲ; ಆದರೆ ನೀರಿನಿಂದ ಬಾಪ್ತಿಸ್ಮ ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನೇ ನನಗೆ-- ಯಾವಾತನ ಮೇಲೆ ಆತ್ಮನು ಇಳಿದು ನೆಲೆಯಾಗಿರು ವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮ ನಿಂದ ಬಾಪ್ತಿಸ್ಮ ಮಾಡಿಸುವಾತನು ಎಂದು ಹೇಳಿದನು. |
34. | ನಾನು ನೋಡಿ ಈತನೇ ದೇವರಮಗನೆಂದು ಸಾಕ್ಷಿ ಕೊಟ್ಟಿದ್ದೇನೆ ಅಂದನು. |
35. | ಮಾರನೆಯ ದಿನ ತಿರಿಗಿ ಯೋಹಾನನೂ ಅವನ ಶಿಷ್ಯರಲ್ಲಿ ಇಬ್ಬರೂ ನಿಂತುಕೊಂಡಿದ್ದರು. |
36. | ಆಗ ನಡೆ ದಾಡುತ್ತಿದ್ದ ಯೇಸುವನ್ನು ನೋಡಿ ಅವನು (ಯೋಹಾ ನನು)--ಇಗೋ, ದೇವರ ಕುರಿಮರಿ! ಎಂದು ಹೇಳಿದನು. |
37. | ಅವನು ಹೇಳಿದ್ದನ್ನು ಕೇಳಿ ಆ ಇಬ್ಬರು ಶಿಷ್ಯರು ಯೇಸುವಿನ ಹಿಂದೆ ಹೋದರು. |
38. | ಆಗ ಯೇಸು ಹಿಂತಿರುಗಿ ತನ್ನ ಹಿಂದೆ ಬರುತ್ತಿದ್ದವರನ್ನು ನೋಡಿ ಅವರಿಗೆ--ನೀವು ಏನು ಹುಡುಕುತ್ತೀರಿ? ಅನ್ನಲು ಅವರು ಆತನಿಗೆ--ರಬ್ಬಿಯೇ, (ರಬ್ಬಿ ಅಂದರೆ ಗುರು ಎಂದರ್ಥ) ನೀನು ವಾಸಿಸುವದು ಎಲ್ಲಿ ಅಂದರು. |
39. | ಆತನು ಅವರಿಗೆ--ಬಂದು ನೋಡಿರಿ ಅಂದನು. ಅವರು ಹೋಗಿ ಆತನು ವಾಸಿಸುತ್ತಿದ್ದ ಸ್ಥಳವನ್ನು ನೋಡಿ ಆ ದಿವಸ ಆತನ ಸಂಗಡ ಇದ್ದರು. ಆಗ ಹೆಚ್ಚು ಕಡಿಮೆ ಹತ್ತನೆಯ ತಾಸಾಗಿತ್ತು. |
40. | ಯೋಹಾ ನನ ಮಾತನ್ನು ಕೇಳಿ ಆತನನ್ನು ಹಿಂಬಾಲಿಸಿದ ಇಬ್ಬರಲ್ಲಿ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಒಬ್ಬನಾಗಿದ್ದನು. |
41. | ಇವನು ಮೊದಲು ತನ್ನ ಸ್ವಂತ ಸಹೋದರನಾದ ಸೀಮೋನನನ್ನು ಕಂಡು ಅವ ನಿಗೆ--ನಾವು ಮೆಸ್ಸೀಯನನ್ನು ಕಂಡುಕೊಂಡೆವು ಎಂದು ಹೇಳಿದನು (ಮೆಸ್ಸೀಯನು ಅಂದರೆ ಕ್ರಿಸ್ತನು ಎಂದರ್ಥ). |
42. | 42ಆಗ ಅಂದ್ರೆಯನು ಸೀಮೋನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. ಯೇಸು ಅವನನ್ನು ನೋಡಿ--ನೀನು ಯೋನನ ಮಗನಾದ ಸೀಮೋನನು, ನೀನು ಕೇಫನೆಂದು ಕರೆಯಲ್ಪಡುವಿ ಅಂದನು. (ಕೇಫ ಅಂದರೆ ಕಲ್ಲು ಎಂದರ್ಥ). |
43. | ಮರುದಿನ ಯೇಸು ಗಲಿಲಾಯಕ್ಕೆ ಹೊರಟು ಹೋಗಬೇಕೆಂದಿದ್ದಾಗ ಫಿಲಿಪ್ಪನನ್ನು ಕಂಡು ಅವ ನಿಗೆ--ನನ್ನನ್ನು ಹಿಂಬಾಲಿಸು ಅಂದನು. |
44. | ಫಿಲಿಪ್ಪನು ಅಂದ್ರೆಯನ ಮತ್ತು ಪೇತ್ರನ ಪಟ್ಟಣವಾದ ಬೇತ್ಸಾಯಿ ದವನು. |
45. | ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು. |
46. | ಅದಕ್ಕೆ ನತಾನಯೇಲನು ಅವನಿಗೆ--ನಜರೇತಿ ನಿಂದ ಒಳ್ಳೇದೇನಾದರೂ ಬರುವದೋ? ಅಂದಾಗ ಫಿಲಿಪ್ಪನು ಅವನಿಗೆ--ಬಂದು ನೋಡು ಅಂದನು. |
47. | ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು. |
48. | ನತಾನಯೇಲನು ಆತನಿಗೆ--ನೀನು ನನ್ನನ್ನು ಹೇಗೆ ಬಲ್ಲೆ? ಅಂದನು; ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಫಿಲಿಪ್ಪನು ನಿನ್ನನ್ನು ಕರೆಯುವದಕ್ಕಿಂತ ಮುಂಚೆ ನೀನು ಆ ಅಂಜೂರ ಮರದ ಕೆಳಗೆ ಇದ್ದಾಗ ನಾನು ನಿನ್ನನ್ನು ನೋಡಿದೆನು ಅಂದನು. |
49. | ನತಾನ ಯೇಲನು ಪ್ರತ್ಯುತ್ತರವಾಗಿ ಆತನಿಗೆ--ರಬ್ಬಿಯೇ, ನೀನು ದೇವರಕುಮಾರನು; ನೀನು ಇಸ್ರಾಯೇಲಿನ ಅರಸನು ಅಂದನು. |
50. | ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಆ ಅಂಜೂರ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ಹೇಳಿದ್ದರಿಂದ ನೀನು ನಂಬು ತ್ತೀಯೋ? ನೀನು ಇವುಗಳಿಗಿಂತ ಮಹತ್ತಾದವುಗಳನ್ನು ನೋಡುವಿ ಅಂದನು. |
51. | ಆತನು ಅವನಿಗೆ--ನಿನಗೆ ನಿಜನಿಜವಾಗಿ ಹೇಳುತ್ತೇನೆ. ಇಂದಿನಿಂದ ಪರಲೋಕವು ತೆರೆದಿರುವದನ್ನೂ ದೇವದೂತರು ಮನುಷ್ಯಕುಮಾರನ ಮೇಲೆ ಏರುವದನ್ನೂ ಇಳಿಯುವದನ್ನೂ ನೀವು ನೋಡುವಿರಿ ಅಂದನು. |
John (1/21) → |