← John (10/21) → |
1. | ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಬಾಗಲಿನಿಂದ ಕುರೀಹಟ್ಟಿಯೊಳಗೆ ಬಾರದೆ ಮತ್ತೆಲ್ಲಿಂದಾದರೂ ಹತ್ತಿಬರುವವನೇ ಕಳ್ಳನೂ ಸುಲುಕೊಳ್ಳುವವನೂ ಆಗಿದ್ದಾನೆ. |
2. | ಆದರೆ ಬಾಗಲಿ ನಿಂದ ಒಳಗೆ ಬರುವವನು ಆ ಕುರಿಗಳ ಕುರುಬನಾಗಿ ದ್ದಾನೆ. |
3. | ಬಾಗಲು ಕಾಯುವವನು ಅವನಿಗೆ ತೆರೆಯು ತ್ತಾನೆ; ಕುರಿಗಳು ಅವನ ಸ್ವರವನ್ನು ಕೇಳುತ್ತವೆ, ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವು ಗಳನ್ನು ಹೊರಗೆ ನಡಿಸುತ್ತಾನೆ. |
4. | ಅವನು ತನ್ನ ಕುರಿ ಗಳನ್ನು ಹೊರಗೆ ಬಿಟ್ಟ ಮೇಲೆ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳು ಕೊಳ್ಳುವದರಿಂದ ಅವನನ್ನು ಹಿಂಬಾಲಿಸುತ್ತವೆ; |
5. | ಅವು ಅನ್ಯನನ್ನು ಹಿಂಬಾಲಿಸದೆ ಅವನ ಬಳಿಯಿಂದ ಓಡಿ ಹೋಗುವವು; ಅವು ಅನ್ಯರ ಸ್ವರವನ್ನು ತಿಳಿಯುವದಿಲ್ಲ. |
6. | ಯೇಸು ಈ ಸಾಮ್ಯವನ್ನು ಅವರಿಗೆ ಹೇಳಿದನು; ಆದರೆ ಆತನು ಅವರ ಸಂಗಡ ಮಾತನಾಡಿದ ವಿಷಯಗಳು ಏನಾಗಿದ್ದವು ಎಂದು ಅವರು ಗ್ರಹಿಸಲಿಲ್ಲ. |
7. | ಯೇಸು ತಿರಿಗಿ ಅವರಿಗೆ--ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗ ಲಾಗಿದ್ದೇನೆ. |
8. | ನನಗಿಂತ ಮುಂಚೆ ಬಂದವರೆಲ್ಲರು ಕಳ್ಳರೂ ಸುಲುಕೊಳ್ಳುವವರೂ ಆಗಿದ್ದಾರೆ. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ. |
9. | ನಾನೇ ಆಬಾಗಲು; ನನ್ನ ಮೂಲಕವಾಗಿ ಯಾವನಾದರೂ ಪ್ರವೇಶಿಸಿದರೆ ಅವನು ರಕ್ಷಣೆ ಹೊಂದುವನು; ಇದ ಲ್ಲದೆ ಅವನು ಒಳಗೆ ಹೋಗುತ್ತಾನೆ, ಹೊರಗೆ ಬರು ತ್ತಾನೆ ಮತ್ತು ಮೇವನ್ನು ಕಂಡುಕೊಳ್ಳುತ್ತಾನೆ. |
10. | ಕಳ್ಳನು ಕದ್ದುಕೊಳ್ಳುವದಕ್ಕೂ ಕೊಲ್ಲುವದಕ್ಕೂ ಹಾಳುಮಾಡು ವದಕ್ಕೂ ಮಾತ್ರ ಬರುತ್ತಾನೇ ಹೊರತು ಮತ್ತಾವದಕ್ಕೂ ಬರುವದಿಲ್ಲ; ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಸಮೃದ್ಧಿಯು ಇರಬೇಕೆಂತಲೂ ಬಂದೆನು. |
11. | ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ. |
12. | ಆದರೆ ಕೂಲಿಯವನು ಕುರುಬನಲ್ಲವಾದದ ರಿಂದಲೂ ಕುರಿಗಳು ತನ್ನವುಗಳಲ್ಲವಾದದರಿಂದಲೂ ತೋಳ ಬರುವದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ; ಆಗ ತೋಳವು ಕುರಿಗಳನ್ನು ಹಿಡಿದು ಕೊಂಡು ಅವುಗಳನ್ನು ಚದರಿಸುತ್ತದೆ. |
13. | ಕೂಲಿಯವನು ಕೂಲಿಯವನೇ ಆಗಿರುವದರಿಂದ ಕುರಿಗಳಿಗೋಸ್ಕರ ಚಿಂತಿಸದೆ ಓಡಿ ಹೋಗುತ್ತಾನೆ. |
14. | ನಾನೇ ಒಳ್ಳೇ ಕುರುಬನು; ನನ್ನ ಕುರಿಗಳನ್ನು ನಾನು ಬಲ್ಲೆನು. ನನ್ನ ಕುರಿಗಳು ನನ್ನನ್ನು ತಿಳಿದವೆ. |
15. | ತಂದೆಯು ನನ್ನನ್ನು ತಿಳಿದಿರುವಂತೆ ನಾನು ತಂದೆಯನ್ನು ತಿಳಿದಿರುತ್ತೇನೆ; ಕುರಿಗಳಿಗೋಸ್ಕರ ನನ್ನ ಪ್ರಾಣವನ್ನು ಕೊಡುತ್ತೇನೆ. |
16. | ಇದಲ್ಲದೆ ಈ ಹಟ್ಟಿಗೆ ಸೇರದ ಬೇರೆ ಕುರಿಗಳು ನನಗುಂಟು; ಅವುಗಳನ್ನು ಸಹ ನಾನು ತರಬೇಕು ಮತ್ತು ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು ಮತ್ತು ಒಬ್ಬನೇ ಕುರುಬನು ಇರುವನು. |
17. | ಯಾಕಂದರೆ ನಾನು ನನ್ನ ಪ್ರಾಣವನ್ನು ತಿರಿಗಿಪಡಕೊಳ್ಳುವಂತೆ ಅದನ್ನು ಕೊಡುತ್ತೇನೆ; ಆದದ ರಿಂದ ನನ್ನ ತಂದೆಯು ನನ್ನನ್ನು ಪ್ರೀತಿಸುತ್ತಾನೆ. |
18. | ಯಾವ ಮನುಷ್ಯನಾದರೂ ಅದನ್ನು ನನ್ನಿಂದ ತೆಗೆಯುವದಿಲ್ಲ; ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ನಾನು ಅದನ್ನು ಕೊಡುವದಕ್ಕೆ ನನಗೆ ಅಧಿಕಾರವಿದೆ; ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರವಿದೆ. ಈ ಅಪ್ಪಣೆಯನ್ನು ನಾನು ನನ್ನ ತಂದೆ ಯಿಂದ ಹೊಂದಿದ್ದೇನೆ ಅಂದನು. |
19. | ಈ ಮಾತುಗಳ ದೆಸೆಯಿಂದ ಯೆಹೂದ್ಯರ ಮಧ್ಯದಲ್ಲಿ ತಿರಿಗಿ ಭೇದಉಂಟಾಯಿತು. |
20. | ಅವರಲ್ಲಿ ಅನೇಕರು--ಅವನಿಗೆ ದೆವ್ವ ಹಿಡಿದದೆ ಮತ್ತು ಹುಚ್ಚನಾಗಿ ದ್ದಾನೆ; ನೀವು ಯಾಕೆ ಅವನ ಮಾತನ್ನು ಕೇಳುತ್ತೀರಿ ಅಂದರು. |
21. | ಬೇರೆಯವರು--ಇವು ದೆವ್ವ ಹಿಡಿದವನ ಮಾತುಗಳಲ್ಲ, ದೆವ್ವವು ಕುರುಡನ ಕಣ್ಣುಗಳನ್ನು ತೆರೆ ಯುವದಕ್ಕಾದೀತೇ ಅಂದರು. |
22. | ಯೆರೂಸಲೇಮಿನಲ್ಲಿ (ದೇವಾಲಯದ) ಪ್ರತಿ ಷ್ಠೆಯ ಹಬ್ಬವಿತ್ತು; ಆಗ ಚಳಿಗಾಲವಾಗಿತ್ತು. |
23. | ಯೇಸು ದೇವಾಲಯದಲ್ಲಿ ಸೊಲೊಮೋನನ ದ್ವಾರಾಂಗಳ ದೊಳಗೆ ತಿರುಗಾಡುತ್ತಿದ್ದನು; |
24. | ಆಗ ಯೆಹೂದ್ಯರು ಆತನ ಸುತ್ತಲು ಬಂದು ಆತನಿಗೆ--ಇನ್ನು ಎಷ್ಟರ ವರೆಗೆ ನಮ್ಮನ್ನು ಸಂದೇಹಪಡಿಸುತ್ತೀ? ನೀನು ಕ್ರಿಸ್ತ ನಾಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು ಅಂದರು. |
25. | ಯೇಸು ಅವರಿಗೆ--ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬಲಿಲ್ಲ; ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತವೆ. |
26. | ಆದರೆ ನಾನು ನಿಮಗೆ ಹೇಳಿದಂತೆ ನೀವು ನನ್ನ ಕುರಿಗಳಲ್ಲವಾದದರಿಂದ ನಂಬದೆ ಇದ್ದೀರಿ. |
27. | ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ. |
28. | ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು. |
29. | ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು. |
30. | ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು. |
31. | ಆಗ ಯೆಹೂದ್ಯರು ತಿರಿಗಿ ಆತನನ್ನು ಕೊಲ್ಲುವ ದಕ್ಕಾಗಿ ಕಲ್ಲುಗಳನ್ನು ತಕ್ಕೊಂಡರು. |
32. | ಅದಕ್ಕೆ ಯೇಸು ಅವರಿಗೆ--ನನ್ನ ತಂದೆಯಿಂದ ಅನೇಕ ಒಳ್ಳೇ ಕಾರ್ಯ ಗಳನ್ನು ನಾನು ನಿಮಗೆ ತೋರಿಸಿದ್ದೇನೆ; ಅವುಗಳಲ್ಲಿ ಯಾವ ಕಾರ್ಯಗಳಿಗೋಸ್ಕರ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ ಎಂದು ಕೇಳಿದನು. |
33. | ಅದಕ್ಕೆ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ಒಳ್ಳೇ ಕಾರ್ಯಗಳಿಗೋಸ್ಕರವಲ್ಲ, ದೇವದೂಷಣೆಗೋಸ್ಕ ರವೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರಾಗಿ ಮಾಡಿಕೊಳ್ಳುವದಕ್ಕೊಸ್ಕರವೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು. |
34. | ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ದೇವರುಗಳಾ ಗಿದ್ದೀರಿ ಎಂದು ನಾನು ಹೇಳಿದೆನು ಎಂಬದಾಗಿ ನಿಮ್ಮ ನ್ಯಾಯಪ್ರಮಾಣದಲ್ಲಿ ಬರೆದಿರುವದಿಲ್ಲವೋ? |
35. | ಹಾಗಾದರೆ ದೇವರವಾಕ್ಯವನ್ನು ಹೊಂದಿದವರು ದೇವರುಗಳೆಂದು ಆತನು ಕರೆದಿರುವಲ್ಲಿ ಬರಹವು ವ್ಯರ್ಥವಾಗಲಾರದಷ್ಟೆ. |
36. | ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ? |
37. | ನನ್ನ ತಂದೆಯ ಕಾರ್ಯಗಳನ್ನು ನಾನು ಮಾಡದೆ ಹೋದರೆ ನನ್ನನ್ನು ನಂಬಬೇಡಿರಿ. |
38. | ನಾನು ಮಾಡಿ ದರೂ ನೀವು ನನ್ನನ್ನು ನಂಬದಿದ್ದರೆ ತಂದೆಯು ನನ್ನ ಲ್ಲಿಯೂ ನಾನು ಆತನಲ್ಲಿಯೂ ಇರುವದನ್ನು ನೀವು ತಿಳಿದುಕೊಂಡು ನಂಬುವಂತೆ ಈ ಕಾರ್ಯಗಳನ್ನಾ ದರೂ ನಂಬಿರಿ ಅಂದನು. |
39. | ಆದದರಿಂದ ತಿರಿಗಿ ಅವರು ಆತನನ್ನು ಹಿಡಿಯುವದಕ್ಕೆ ಹುಡುಕಿದರು; ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು |
40. | ಯೋಹಾನನು ಮೊದಲು ಬಾಪ್ತಿಸ್ಮ ಮಾಡಿಸುತ್ತಿದ್ದ ಸ್ಥಳವಾದ ಯೊರ್ದನಿನ ಆಚೆಗೆ ತಿರಿಗಿಹೋಗಿ ಅಲ್ಲಿ ವಾಸಿಸಿದನು. |
41. | ಆಗ ಅನೇಕರು ಆತನ ಬಳಿಗೆ ಬಂದು--ಯೋಹಾನನು ಅದ್ಭುತಕಾರ್ಯಗಳನ್ನು ಮಾಡಲಿಲ್ಲ; ಆದರೆ ಈ ಮನುಷ್ಯನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲವೂ ನಿಜವಾಗಿದೆ ಅಂದರು. |
42. | ಅಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. |
← John (10/21) → |