← John (12/21) → |
1. | ಇದಾದ ಮೇಲೆ ಪಸ್ಕಕ್ಕೆ ಆರು ದಿನಗಳ ಮುಂಚೆ ಸತ್ತವರೊಳಗಿಂದ ಎಬ್ಬಿಸಿದ ಲಾಜರನು ಇದ್ದ ಬೇಥಾನ್ಯಕ್ಕೆ ಯೇಸು ಬಂದನು. |
2. | ಅಲ್ಲಿ ಅವರು ಆತನಿಗಾಗಿ ಔತಣವನ್ನು ಸಿದ್ಧ ಮಾಡಿದರು; ಮಾರ್ಥಳು ಉಪಚಾರ ಮಾಡಿದಳು. ಆತನೊಂದಿಗೆ ಊಟಕ್ಕೆ ಕೂತವರಲ್ಲಿ ಲಾಜರನೂ ಒಬ್ಬನಾಗಿದ್ದನು. |
3. | ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆಯ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು; ಆ ತೈಲದ ಪರಿ ಮಳವು ಮನೆಯಲ್ಲಿ ತುಂಬಿಕೊಂಡಿತ್ತು. |
4. | ಆಗ ಆತನ ಶಿಷ್ಯರಲ್ಲಿ ಒಬ್ಬನು ಅಂದರೆ ಆತನನ್ನು ಹಿಡಿದು ಕೊಡುವದಕ್ಕಿದ್ದ ಸೀಮೋನನ ಮಗನಾದ ಯೂದ ಇಸ್ಕರಿಯೋತನು-- |
5. | ಈ ತೈಲವನ್ನು ಯಾಕೆ ಮುನ್ನೂರು ನಾಣ್ಯಗಳಿಗೆ ಮಾರಿ ಬಡವರಿಗೆ ಕೊಡಲಿಲ್ಲ ಅಂದನು. |
6. | ಅವನು ಬಡವರಿಗೋಸ್ಕರ ಚಿಂತಿಸಿದ್ದಕ್ಕಾಗಿ ಅಲ್ಲ , ಅವನು ಕಳ್ಳನಾಗಿದ್ದು ಹಣದ ಚೀಲವನ್ನು ಇಟ್ಟು ಕೊಂಡು ಅದರಲ್ಲಿ ಹಾಕಿದ್ದನ್ನು ತಕ್ಕೊಳ್ಳುವವನಾಗಿದ್ದ ದರಿಂದಲೇ ಇದನ್ನು ಹೇಳಿದನು. |
7. | ಆಗ ಯೇಸು--ಈಕೆಯನ್ನು ಬಿಟ್ಟುಬಿಡಿರಿ; ನನ್ನನ್ನು ಹೂಣಿಡುವ ದಿವಸಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಾಳೆ. |
8. | ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ ಅಂದನು. |
9. | ಆದಕಾರಣ ಯೇಸು ಅಲ್ಲಿದ್ದಾನೆಂದು ಯೆಹೂದ್ಯ ರಲ್ಲಿ ಬಹಳ ಜನರು ತಿಳಿದು ಆತನನ್ನು ಮಾತ್ರವಲ್ಲದೆ ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನೂ ನೋಡುವದಕ್ಕಾಗಿ ಬಂದರು. |
10. | ಆದರೆ ಪ್ರಧಾನ ಯಾಜಕರು ಲಾಜರನನ್ನು ಸಹ ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು. |
11. | ಯಾಕಂದರೆ ಅವನ ನಿಮಿತ್ತ ಅನೇಕ ಯೆಹೂದ್ಯರು ಹೋಗಿ ಯೇಸುವಿನಲ್ಲಿ ನಂಬಿಕೆಯಿಟ್ಟರು. |
12. | ಮರುದಿನ ಹಬ್ಬಕ್ಕೆ ಬಂದ ಬಹಳ ಜನರು ಯೇಸು ಯೆರೂಸಲೇಮಿಗೆ ಬರುತ್ತಾನೆಂದು ಕೇಳಿದಾಗ |
13. | ಖರ್ಜೂರದ ಗರಿಗಳನ್ನು ತಕ್ಕೊಂಡು ಆತನನ್ನು ಎದುರುಗೊಳ್ಳುವದಕ್ಕೆ ಹೊರಗೆ ಬಂದು--ಹೊಸನ್ನ, ಕರ್ತನ ಹೆಸರಿನಲ್ಲಿ ಬರುವ ಇಸ್ರಾಯೇಲಿನ ಅರಸನು ಆಶೀರ್ವದಿಸಲ್ಪಡಲಿ ಎಂದು ಕೂಗಿದರು. |
14. | ಯೇಸು ಪ್ರಾಯದ ಕತ್ತೆಯನ್ನು ಕಂಡುಕೊಂಡು ಅದರ ಮೇಲೆ ಕೂತುಕೊಂಡನು; |
15. | ಹೀಗೆ--ಚೀಯೋನ್ಕುಮಾ ರಿಯೇ, ಭಯಪಡಬೇಡ; ಇಗೋ, ನಿನ್ನ ಅರಸನು ಪ್ರಾಯದ ಕತ್ತೆಯ ಮೇಲೆ ಕೂತುಕೊಂಡು ಬರುತ್ತಾನೆ ಎಂದು ಬರೆದಿರುವ ಪ್ರಕಾರ ನೆರವೇರಿತು. |
16. | ಇವು ಗಳನ್ನು ಆತನ ಶಿಷ್ಯರು ಮೊದಲು ತಿಳಿದಿರಲಿಲ್ಲ; ಆದರೆ ಯೇಸು ಮಹಿಮೆ ಹೊಂದಿದಾಗ ಇವು ಆತನ ವಿಷಯವಾಗಿ ಬರೆಯಲ್ಪಟ್ಟಿವೆಯೆಂದೂ ಇವುಗಳನ್ನು ಅವರು ಆತನಿಗೆ ಮಾಡಿದರೆಂದೂ ಜ್ಞಾಪಕಮಾಡಿ ಕೊಂಡರು. |
17. | ಇದಲ್ಲದೆ ಆತನು ಲಾಜರನನ್ನು ಸಮಾ ಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರು ಸಾಕ್ಷಿಕೊಟ್ಟರು. |
18. | ಆತನು ಈ ಅದ್ಭುತಕಾರ್ಯವನ್ನು ಮಾಡಿದನೆಂದು ಕೇಳಿದ ಜನರು ಸಹ ಆತನನ್ನು ಎದುರುಗೊಂಡರು. |
19. | ಆದದರಿಂದ ಫರಿಸಾಯರು ತಮ್ಮತಮ್ಮೊಳಗೆ--ನಿಮ್ಮ ಯತ್ನವೇನೂ ಸಾಗಲಿಲ್ಲವೆಂದು ನೀವು ತಿಳಿಯುವದಿಲ್ಲವೋ? ಇಗೋ, ಲೋಕವು ಆತನ ಹಿಂದೆ ಹೋಯಿತು ಎಂದು ಅಂದುಕೊಂಡರು. |
20. | ಹಬ್ಬದಲ್ಲಿ ಆರಾಧಿಸುವದಕ್ಕೆ ಬಂದವರಲ್ಲಿ ಕೆಲ ವರು ಗ್ರೀಕರಿದ್ದರು. |
21. | ಇವರು ಗಲಿಲಾಯ ಬೇತ್ಸಾಯಿದವನಾದ ಫಿಲಿಪ್ಪನ ಬಳಿಗೆ ಬಂದು--ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ ಅಂದರು. |
22. | ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿ ದನು; ಅಂದ್ರೆಯನೂ ಫಿಲಿಪ್ಪನೂ ತಿರಿಗಿ ಯೇಸುವಿಗೆ ಹೇಳಿದರು. |
23. | ಯೇಸು ಪ್ರತ್ಯುತ್ತರವಾಗಿ ಅವರಿಗೆ--ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆ ಬಂದದೆ. |
24. | ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯ ದಿದ್ದರೆ ಅದು ಒಂದೇ ಆಗಿ ಉಳಿಯುವದು; ಅದು ಸತ್ತಮೇಲೆ ಬಹಳ ಫಲಕೊಡುವದು. |
25. | ತನ್ನ ಪ್ರಾಣ ವನ್ನು ಪ್ರೀತಿಸುವವನು ಅದನ್ನು ಕಳಕೊಳ್ಳುವನು; ಈ ಲೋಕದಲ್ಲಿ ತನ್ನ ಪ್ರಾಣವನ್ನು ಹಗೆಮಾಡುವವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು. |
26. | ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು. |
27. | ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಈ ಗಳಿಗೆಗೆ ಬಂದೆನು. |
28. | ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಆಗ--ನಾನು ಮಹಿ ಮೆಪಡಿಸಿದ್ದೇನೆ, ತಿರಿಗಿ ಅದನ್ನು ಮಹಿಮೆಪಡಿಸುವೆನು ಎಂದು ಹೇಳುವ ಧ್ವನಿಯು ಪರಲೋಕದಿಂದ ಬಂತು. |
29. | ಆಗ ಅಲ್ಲಿ ನಿಂತಿದ್ದ ಜನರು ಅದನ್ನು ಕೇಳಿ--ಗುಡುಗಿತು ಅಂದರು. ಬೇರೆಯವರು--ದೂತ ನೊಬ್ಬನು ಈತನ ಸಂಗಡ ಮಾತನಾಡಿದನು ಅಂದರು. |
30. | ಯೇಸು ಪ್ರತ್ಯುತ್ತರವಾಗಿ--ಈ ಧ್ವನಿಯು ನನಗೋ ಸ್ಕರವಲ್ಲ, ನಿಮಗೋಸ್ಕರವೇ ಬಂದಿದೆ. |
31. | ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ; ಇಹಲೋಕದ ಅಧಿಪತಿಯು ಈಗ ಹೊರಗೆ ಹಾಕಲ್ಪಡುವನು. |
32. | ನಾನು ಭೂಮಿಯಿಂದ ಮೇಲಕ್ಕೆ ಎತ್ತಲ್ಪಟ್ಟರೆ ಎಲ್ಲ ರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಅಂದನು. |
33. | ತಾನು ಎಂಥಾ ಮರಣದಿಂದ ಸಾಯಬೇಕಾಗಿತ್ತೆಂದು ಸೂಚಿಸಿ ಇದನ್ನು ಹೇಳಿದನು. |
34. | ಜನರು ಆತ ನಿಗೆ--ಕ್ರಿಸ್ತನು ಸದಾಕಾಲವೂ ಇರುತ್ತಾನೆಂದು ನಾವು ನ್ಯಾಯಪ್ರಮಾಣದಲ್ಲಿ ಕೇಳಿದ್ದೇವೆ; ಹಾಗಾದರೆ ಮನುಷ್ಯಕುಮಾರನು ಎತ್ತಲ್ಪಡಬೇಕೆಂದು ನೀನು ಹೇಳುವದು ಹೇಗೆ? ಈ ಮನುಷ್ಯಕುಮಾರನು ಯಾರು ಎಂದು ಕೇಳಿದರು. |
35. | ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು. |
36. | ನೀವು ಬೆಳಕಿನ ಮಕ್ಕಳಾಗುವಂತೆ ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ ಅಂದನು. ಯೇಸು ಇವುಗಳನ್ನು ಹೇಳಿದ ಮೇಲೆ ಹೊರಟುಹೋಗಿ ಅವರಿಂದ ಅಡಗಿಕೊಂಡನು. |
37. | ಆದರೆ ಆತನು ಅನೇಕ ಅದ್ಭುತಕಾರ್ಯಗಳನ್ನು ಅವರ ಮುಂದೆ ಮಾಡಿದಾಗ್ಯೂ ಅವರು ಆತನನ್ನು ನಂಬಲಿಲ್ಲ. |
38. | ಇದರಿಂದ--ಕರ್ತನೇ, ನಮ್ಮ ವರ್ತ ಮಾನವನ್ನು ಯಾರು ನಂಬಿದ್ದಾರೆ? ಕರ್ತನ ಬಾಹುವು ಯಾರಿಗೆ ಪ್ರಕಟವಾಯಿತು ಎಂದು ಪ್ರವಾದಿಯಾದ ಯೆಶಾಯನು ನುಡಿದದ್ದು ನೆರವೇರುವ ಹಾಗೆ ಇದಾಯಿತು. |
39. | ಅವರು ನಂಬಲಾರದೆ ಇದ್ದದರಿಂದ ಯೆಶಾಯನು ತಿರಿಗಿ ಹೇಳಿದ್ದೇನಂದರೆ-- |
40. | ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು. |
41. | ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಇವುಗಳನ್ನು ಹೇಳಿದನು. |
42. | ಆದಾಗ್ಯೂ ಮುಖ್ಯಾಧಿಕಾರಿಗಳಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕರಿಸಲ್ಪಡಬಾರದೆಂದು ಅವರು ಆತನನ್ನು ಒಪ್ಪಿ ಕೊಳ್ಳಲಿಲ್ಲ. |
43. | ಯಾಕಂದರೆ ಅವರು ದೇವರ ಹೊಗಳಿ ಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು. |
44. | ಆಗ ಯೇಸು--ನನ್ನನ್ನು ನಂಬುವವನು ನನ್ನನ್ನಲ್ಲ. ನನ್ನನ್ನು ಕಳುಹಿಸಿಕೊಟ್ಟಾತನನ್ನೇ ನಂಬಿದ್ದಾನೆ. |
45. | ನನ್ನನ್ನು ನೋಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ನೋಡುತ್ತಾನೆ. |
46. | ನನ್ನಲ್ಲಿ ನಂಬಿಕೆಯಿಟ್ಟ ಯಾವನೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ. |
47. | ಯಾವನಾದರೂ ನನ್ನ ಮಾತುಗಳನ್ನು ಕೇಳಿ ನಂಬದೆಹೋದರೆ ನಾನು ಅವ ನಿಗೆ ತೀರ್ಪು ಮಾಡುವದಿಲ್ಲ; ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ, ಲೋಕವನ್ನು ರಕ್ಷಿಸುವದ ಕ್ಕಾಗಿಯೇ ನಾನು ಬಂದೆನು. |
48. | ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದಿರುವವನಿಗೆ ತೀರ್ಪು ಮಾಡುವಂಥದು ಒಂದು ಇದೆ; ಅದು ನಾನು ಹೇಳಿದ ಮಾತೇ; ಅದು ಕಡೇ ದಿನದಲ್ಲಿ ಅವನಿಗೆ ತೀರ್ಪು ಮಾಡುವದು. |
49. | ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ; ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕೆಂಬದನ್ನು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞಾಪಿಸಿದ್ದಾನೆ. |
50. | ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು. |
← John (12/21) → |