← John (13/21) → |
1. | ಆಗ ಪಸ್ಕ ಹಬ್ಬದ ಮುಂಚೆ ಯೇಸು ತಾನು ಈ ಲೋಕದೊಳಗಿಂದ ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆಯು ಬಂತೆಂದು ತಿಳಿದು ಈ ಲೋಕದಲ್ಲಿದ್ದ ತನ್ನ ಸ್ವಂತದವರನ್ನು ಪ್ರೀತಿಸಿ ಅವರನ್ನು ಅಂತ್ಯದವರೆಗೆ ಪ್ರೀತಿಸಿದನು. |
2. | ಊಟವಾದ ಮೇಲೆ ಆತನನ್ನು ಹಿಡುಕೊಡಬೇಕೆಂಬದನ್ನು ಸೀಮೋ ನನ ಮಗನಾದ ಯೂದ ಇಸ್ಕರಿಯೋತನ ಹೃದಯದಲ್ಲಿ ಸೈತಾನನು ಆಲೋಚನೆ ಹುಟ್ಟಿಸಿದನು. |
3. | ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟು ಬಂದಿದ್ದು ತಿರಿಗಿ ದೇವರ ಬಳಿಗೆ ಹೋಗುತ್ತೇನೆಂತಲೂ ಯೇಸು ತಿಳಿದು ಕೊಂಡು |
4. | ಊಟದಿಂದೆದ್ದು ತನ್ನ ಉಡುಪುಗಳನ್ನು ತೆಗೆದಿಟ್ಟು ಕೈ ಪಾವಡವನ್ನು ತಕ್ಕೊಂಡು ನಡುವನ್ನು ಕಟ್ಟಿಕೊಂಡನು. |
5. | ತರುವಾಯ ಆತನು ಬೋಗುಣಿ ಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಕಾಲುಗಳನ್ನು ತೊಳೆಯುವದಕ್ಕೂ ತಾನು ನಡುವಿಗೆ ಕಟ್ಟಿಕೊಂಡ ಕೈ ಪಾವಡದಿಂದ ಅವುಗಳನ್ನು ಒರಸುವದಕ್ಕೂ ಪ್ರಾರಂಭಿಸಿದನು. |
6. | ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ--ಕರ್ತನೇ, ನೀನು ನನ್ನ ಕಾಲುಗಳನ್ನು ತೊಳೆಯುತ್ತೀಯೋ ಎಂದು ಕೇಳಿ ದನು. |
7. | ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಮಾಡುವದು ಏನೆಂದು ಈಗ ನಿನಗೆ ತಿಳಿಯುವದಿಲ್ಲ; ಆದರೆ ಇನ್ನು ಮೇಲೆ ನಿನಗೆ ತಿಳಿಯುವದು ಅಂದನು. |
8. | ಪೇತ್ರನು ಆತನಿಗೆ--ನೀನು ನನ್ನ ಕಾಲುಗಳನ್ನು ಎಂದಿಗೂ ತೊಳೆಯಬಾರದು ಅಂದನು; ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನ್ನನ್ನು ತೊಳೆಯ ದಿದ್ದರೆ ನನ್ನೊಂದಿಗೆ ನಿನಗೆ ಪಾಲಿಲ್ಲ ಎಂದು ಹೇಳಿದನು. |
9. | ಅದಕ್ಕೆ ಸೀಮೋನ ಪೇತ್ರನು ಆತ ನಿಗೆ--ಕರ್ತನೇ, ನನ್ನ ಪಾದಗಳನ್ನು ಮಾತ್ರವಲ್ಲದೆ ನನ್ನ ಕೈಗಳನ್ನು ಮತ್ತು ತಲೆಯನ್ನು ಸಹ ತೊಳೆ ಅಂದನು. |
10. | ಯೇಸು ಅವನಿಗೆ--ಸ್ನಾನಮಾಡಿಕೊಂಡವನು ತನ ಪಾದಗಳನ್ನು ಹೊರತು ಮತ್ತೇನೂ ತೊಳೆಯುವದು ಅವಶ್ಯವಿಲ್ಲ; ಯಾಕಂದರೆ ಅವನು ಸಂಪೂರ್ಣವಾಗಿ ಶುದ್ಧನಾಗಿದ್ದಾನೆ. ನೀವು ಶುದ್ಧರಾಗಿದ್ದೀರಿ, ಆದರೆ ಎಲ್ಲರೂ ಅಲ್ಲ ಅಂದನು. |
11. | ತನ್ನನ್ನು ಹಿಡಿದುಕೊಡುವ ವನು ಯಾರೆಂದು ಆತನು ತಿಳಿದಿದ್ದರಿಂದ--ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ ಎಂದು ಹೇಳಿದನು. |
12. | ಆತನು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಉಡುಪುಗಳನ್ನು ಹಾಕಿಕೊಂಡು ತಿರಿಗಿ ಕೂತು ಕೊಂಡ ಮೇಲೆ ಅವರಿಗೆ--ನಾನು ನಿಮಗೆ ಮಾಡಿದ್ದು ಏನೆಂದು ತಿಳಿಯಿತೋ? |
13. | ನೀವು ನನ್ನನ್ನು ಬೋಧ ಕನು ಮತ್ತು ಕರ್ತನು ಎಂದು ಕರೆಯುತ್ತೀರಿ; ನೀವು ಹೇಳುವದು ಸರಿ; ಯಾಕಂದರೆ ನಾನು ಅಂಥವನೇ ಹೌದು. |
14. | ಹಾಗಾದರೆ ನಿಮ್ಮ ಕರ್ತನೂ ಬೋಧಕನೂ ಆಗಿರುವ ನಾನು ನಿಮ್ಮ ಕಾಲುಗಳನ್ನು ತೊಳೆದರೆ ನೀವು ಸಹ ಒಬ್ಬರ ಕಾಲುಗಳನ್ನೊಬ್ಬರು ತೊಳೆಯತಕ್ಕದ್ದು. |
15. | ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ. |
16. | ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ತನ್ನ ಒಡೆಯನಿಗಿಂತ ಸೇವಕನು ದೊಡ್ಡವನಲ್ಲ; ಇಲ್ಲವೆ ಕಳುಹಿಸಲ್ಪಟ್ಟವನು ಅವನನ್ನು ಕಳುಹಿಸಿದವನಿಗಿಂತ ದೊಡ್ಡವನಲ್ಲ. |
17. | ನೀವು ಇವು ಗಳನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು. |
18. | ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ. |
19. | ಅದು ಆಗುವಾಗ ನಾನೇ ಆತನೆಂದು ನೀವು ನಂಬುವಂತೆ ಅದು ಸಂಭವಿಸುವದಕ್ಕಿಂತ ಮುಂಚೆ ಈಗಲೇ ನಿಮಗೆ ಹೇಳುತ್ತೇನೆ. |
20. | ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ--ನಾನು ಕಳುಹಿಸಿದವನನ್ನು ಅಂಗೀಕರಿಸು ವವನು ನನ್ನನ್ನು ಅಂಗೀಕರಿಸುತ್ತಾನೆ; ನನ್ನನ್ನು ಅಂಗೀಕರಿ ಸುವವನು ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿ ಸುತ್ತಾನೆ. |
21. | ಯೇಸು ಹೀಗೆ ಹೇಳಿದ ಮೇಲೆ ಆತ್ಮದಲ್ಲಿ ಕಳವಳ ಗೊಂಡು ಸಾಕ್ಷೀಕರಿಸಿ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುವನು ಎಂದು ಹೇಳಿದನು. |
22. | ಆಗ ಶಿಷ್ಯರು ಅನುಮಾನದಿಂದ ಈತನು ಯಾರನ್ನು ಕುರಿತು ಹೇಳಿದನೆಂದು ಒಬ್ಬರನೊಬ್ಬರು ನೋಡಿದರು. |
23. | ಶಿಷ್ಯ ರಲ್ಲಿ ಯೇಸು ಪ್ರೀತಿಸಿದ ಒಬ್ಬನು ಆತನ ಎದೆಯ ಮೇಲೆ ಒರಗಿಕೊಂಡಿದ್ದನು. |
24. | ಆದದರಿಂದ ಸೀಮೋನ ಪೇತ್ರನು ಅವನಿಗೆ ಸನ್ನೆ ಮಾಡಿ ಆತನು ಯಾರ ವಿಷಯವಾಗಿ ಮಾತನಾಡಿದನೆಂದು ಕೇಳಿದನು. |
25. | ತರುವಾಯ ಅವನು ಯೇಸುವಿನ ಎದೆಯಮೇಲೆ ಒರಗಿಕೊಂಡು--ಕರ್ತನೇ, ಅವನು ಯಾರು ಎಂದು ಆತನನ್ನು ಕೇಳಿದನು. |
26. | ಅದಕ್ಕೆ ಯೇಸು--ನಾನು ರೊಟ್ಟಿಯ ತುಂಡನ್ನು ಅದ್ದಿ ಯಾವನಿಗೆ ಕೊಡುತ್ತೇನೋ ಅವನೇ ಎಂದು ಉತ್ತರ ಕೊಟ್ಟನು. ಆ ರೊಟ್ಟಿಯ ತುಂಡನ್ನು ಅದ್ದಿ ಆತನು ಸೀಮೋನನ ಮಗನಾದ ಯೂದ ಇಸ್ಕರಿಯೋತನಿಗೆ ಕೊಟ್ಟನು. |
27. | ರೊಟ್ಟಿಯ ತುಂಡನ್ನು ತಕ್ಕೊಂಡ ಮೇಲೆ ಸೈತಾನನು ಅವನೊಳಗೆ ಹೊಕ್ಕನು. ಆಗ ಯೇಸು ಅವನಿಗೆ--ನೀನು ಮಾಡುವ ದನ್ನು ಬೇಗನೆ ಮಾಡು ಎಂದು ಹೇಳಿದನು. |
28. | ಆತನು ಯೂದನಿಗೆ ಇದನ್ನು ಹೇಳಿದ ಉದ್ದೇಶವೇನೆಂದು ಊಟಕ್ಕೆ ಕೂತವರಲ್ಲಿ ಯಾರಿಗೂ ಗೊತ್ತಾಗಲಿಲ್ಲ. |
29. | ಯೂದನು ಹಣದ ಚೀಲವನ್ನು ಇಟ್ಟುಕೊಂಡ ದ್ದರಿಂದ ಯೇಸು ಅವನಿಗೆ--ಹಬ್ಬಕ್ಕೆ ನಮಗೆ ಬೇಕಾದವು ಗಳನ್ನು ಕೊಂಡುಕೋ ಎಂತಲೋ ಇಲ್ಲವೆ ಬಡವರಿಗೆ ಏನಾದರೂ ಕೊಡು ಎಂತಲೋ ಅವನಿಗೆ ಆತನು ಹೇಳಿದನೆಂದು ಅವರಲ್ಲಿ ಕೆಲವರು ನೆನಸಿದರು. |
30. | ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ ಹೊರಗೆ ಹೋದನು; ಆಗ ರಾತ್ರಿಯಾಗಿತ್ತು. |
31. | ಅವನು ಹೊರಗೆ ಹೋದಮೇಲೆ ಯೇಸು-- ಈಗ ಮನುಷ್ಯಕುಮಾರನು ಮಹಿಮೆಪಟ್ಟಿದ್ದಾನೆ. ದೇವರು ಆತನಲ್ಲಿ ಮಹಿಮೆಪಟ್ಟಿದ್ದಾನೆ. |
32. | ದೇವರು ಆತನಲ್ಲಿ ಮಹಿಮೆಪಟ್ಟಿರಲಾಗಿ ದೇವರು ಸಹ ಆತನನ್ನು ತನ್ನಲ್ಲಿಯೇ ಮಹಿಮೆಪಡಿಸುವನು; ಕೂಡಲೆ ಆತನನ್ನು ಮಹಿಮೆಪಡಿಸುವನು. |
33. | ಚಿಕ್ಕಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಸಂಗಡ ಇರುತ್ತೇನೆ, ನೀವು ನನ್ನನ್ನು ಹುಡುಕುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರೆಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ. |
34. | ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು. |
35. | ಒಬ್ಬರ ಮೇಲೊಬ್ಬರಿಗೆ ಪ್ರೀತಿಯಿದ್ದರೆ ಇದರಿಂದ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳು ವರು ಎಂದು ಹೇಳಿದನು. |
36. | ಸೀಮೋನ ಪೇತ್ರನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ? ಅನ್ನಲು ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಹೋಗುವಲ್ಲಿಗೆ ನೀನು ಈಗ ಬರಲಾರಿ; ತರುವಾಯ ನೀನು ನನ್ನನ್ನು ಹಿಂಬಾಲಿಸುವಿ ಅಂದನು. |
37. | ಪೇತ್ರನು ಆತನಿಗೆ-- ಕರ್ತನೇ, ನಾನು ಯಾಕೆ ಈಗ ನಿನ್ನ ಹಿಂದೆ ಬರ ಲಾರೆನು? ನಿನಗೋಸ್ಕರ ನನ್ನ ಪ್ರಾಣವನ್ನು ಕೊಡು ವೆನು ಅಂದನು. |
38. | ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು. |
← John (13/21) → |