← John (14/21) → |
1. | ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ. |
2. | ನನ್ನ ತಂದೆಯ ಮನೆಯಲ್ಲಿ ಬಹಳ ಭವನ ಗಳಿವೆ; ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು, ನಾನು ನಿಮಗೆ ಸ್ಥಳವನ್ನು ಸಿದ್ಧಮಾಡುವದಕ್ಕೆ ಹೋಗು ತ್ತೇನಲ್ಲಾ. |
3. | ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಮಾಡಿ ತಿರಿಗಿ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಆಗ ನಾನಿರುವಲ್ಲಿ ನೀವು ಸಹ ಇರುವಿರಿ. |
4. | ನಾನು ಎಲ್ಲಿಗೆ ಹೋಗುತ್ತೇನೆಂಬದು ನಿಮಗೆ ತಿಳಿದದೆ; ಮಾರ್ಗವೂ ನಿಮಗೆ ಗೊತ್ತಿದೆ ಅಂದನು. |
5. | ತೋಮನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀಯೋ ನಮಗೆ ತಿಳಿಯದು; ನಮಗೆ ಮಾರ್ಗವು ಹೇಗೆ ಗೊತ್ತಾದೀತು ಅಂದನು. |
6. | ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ. |
7. | ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನು ಸಹ ತಿಳಿದವರಾಗಿ ರುತ್ತಿದ್ದಿರಿ; ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ; ಆತನನ್ನು ನೋಡಿದವರಾಗಿದ್ದೀರಿ ಎಂದು ಹೇಳಿದನು. |
8. | ಫಿಲಿಪ್ಪನು ಆತನಿಗೆ--ಕರ್ತನೇ, ತಂದೆಯನ್ನು ನಮಗೆ ತೋರಿಸು, ನಮಗೆ ಅಷ್ಟೇ ಸಾಕು ಅಂದನು. |
9. | ಯೇಸು ಅವನಿಗೆ--ಫಿಲಿಪ್ಪನೇ, ನಾನು ನಿಮ್ಮ ಸಂಗಡ ಇಷ್ಟು ಕಾಲ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲವೋ? ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ; ಹಾಗಾದರೆ ತಂದೆಯನ್ನು ನಮಗೆ ತೋರಿಸು ಎಂದು ನೀನು ಹೇಳುವದು ಹೇಗೆ? |
10. | ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವದಿಲ್ಲ; ಆದರೆ ನನ್ನಲ್ಲಿ ವಾಸಿಸುತ್ತಿರುವ ತಂದೆಯೇ ಆ ಕಾರ್ಯಗಳನ್ನು ಮಾಡುತ್ತಾನೆ. |
11. | ನಾನು ತಂದೆ ಯಲ್ಲಿದ್ದೇನೆಂತಲೂ ತಂದೆಯು ನನ್ನಲ್ಲಿದ್ದಾನೆಂತಲೂ ನನ್ನನ್ನು ನಂಬಿರಿ. ಇಲ್ಲದಿದ್ದರೆ ಆ ಕ್ರಿಯೆಗಳ ನಿಮಿತ್ತವಾದರೂ ನನ್ನನ್ನು ನಂಬಿರಿ. |
12. | ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನನ್ನು ನಂಬುವವನು ನಾನು ಮಾಡುವ ಕ್ರಿಯೆ ಗಳನ್ನು ಸಹ ಮಾಡುವನು; ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಅವನು ಮಾಡುವನು; ಯಾಕಂದರೆ ನಾನು ನನ್ನ ತಂದೆಯ ಬಳಿಗೆ ಹೋಗುತ್ತೇನೆ. |
13. | ನನ್ನ ಹೆಸರಿನಲ್ಲಿ ನೀವು ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ಮಗನಲ್ಲಿ ತಂದೆಯು ಮಹಿಮೆ ಹೊಂದುವನು. |
14. | ನೀವು ನನ್ನ ಹೆಸರಿನಲ್ಲಿ ಏನಾದರೂ ಕೇಳಿಕೊಂಡರೆ ನಾನು ಅದನ್ನು ಮಾಡುವೆನು. |
15. | ನೀವು ನನ್ನನ್ನು ಪ್ರೀತಿಸುವದಾದರೆ ನನ್ನ ಆಜ್ಞೆ ಗಳನ್ನು ಕೈಕೊಳ್ಳಿರಿ. |
16. | ನಾನು ತಂದೆಯನ್ನು ಬೇಡಿ ಕೊಳ್ಳುವೆನು; ಆಗ ಆತನು ನಿಮಗೆ ಬೇರೊಬ್ಬ ಆದರಿ ಕನನ್ನು ಸದಾಕಾಲವೂ ನಿಮ್ಮ ಸಂಗಡ ಇರುವದಕ್ಕೆ ಕೊಡುವನು. |
17. | ಆತನು ಸತ್ಯದ ಆತ್ಮನೇ; ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದ ರಿಂದ ಆತನನ್ನು ಹೊಂದಲಾರದು. ಆದರೆ ನೀವು ಆತನನ್ನು ಬಲ್ಲಿರಿ. ಯಾಕಂದರೆ ಆತನು ನಿಮ್ಮೊಂದಿಗೆ ವಾಸಿಸುತ್ತಾನೆ ಮತ್ತು ನಿಮ್ಮೊಳಗಿರುವನು. |
18. | ನಾನು ನಿಮ್ಮನ್ನು ಆದರಣೆಯಿಲ್ಲದೆ ಬಿಡುವದಿಲ್ಲ; ನಿಮ್ಮ ಬಳಿಗೆ ನಾನು ಬರುವೆನು. |
19. | ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ; ನಾನು ಜೀವಿಸುವ ದರಿಂದ ನೀವು ಸಹ ಜೀವಿಸುವಿರಿ. |
20. | ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮ ಲ್ಲಿಯೂ ಇರುವೆನೆಂದು ನೀವು ಆ ದಿನದಲ್ಲಿ ತಿಳಿದು ಕೊಳ್ಳುವಿರಿ. |
21. | ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು. |
22. | ಯೂದನು (ಇಸ್ಕರಿಯೋತನಲ್ಲ)--ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಕಾಣಿಸಿ ಕೊಳ್ಳುವದು ಹೇಗೆ ಎಂದು ಆತನನ್ನು ಕೇಳಿದನು. |
23. | ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು. |
24. | ನನ್ನನ್ನು ಪ್ರೀತಿಸದವನು ನನ್ನ ಮಾತು ಗಳನ್ನು ಕೈಕೊಳ್ಳುವದಿಲ್ಲ; ನೀವು ಕೇಳಿದ ಮಾತು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದ ನನ್ನ ತಂದೆಯ ಮಾತೇ. |
25. | ನಾನು ಇನ್ನೂ ನಿಮ್ಮ ಬಳಿಯಲ್ಲಿ ಇರುವಾಗಲೇ ಈ ಸಂಗತಿಗಳನ್ನು ನಿಮಗೆ ಹೇಳಿದ್ದೇನೆ; |
26. | ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು. |
27. | ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ. |
28. | ನಾನು ಹೋಗಿ ತಿರಿಗಿ ನಿಮ್ಮ ಬಳಿಗೆ ಬರುವದು ಹೇಗೆ ಎಂದು ನಾನು ನಿಮಗೆ ಹೇಳಿದ್ದನ್ನು ನೀವು ಕೇಳಿದ್ದೀರಿ; ನೀವು ನನ್ನನ್ನು ಪ್ರೀತಿಸಿದ್ದರೆ ನಾನು ನನ್ನ ತಂದೆಯ ಬಳಿಗೆ ಹೊಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದಿರಿ; ನನ್ನ ತಂದೆಯು ನನಗಿಂತಲೂ ದೊಡ್ಡವನಾಗಿದ್ದಾನೆ. |
29. | ಅದು ನಡೆಯುವಾಗ ನೀವು ನಂಬುವಂತೆ ನಡೆಯು ವದಕ್ಕಿಂತ ಮುಂಚೆಯೇ ಈಗ ನಾನು ನಿಮಗೆ ಹೇಳಿದ್ದೇನೆ. |
30. | ಇನ್ನು ಮೇಲೆ ನಾನು ನಿಮ್ಮೊಂದಿಗೆ ಬಹಳವಾಗಿ ಮಾತನಾಡುವದಿಲ್ಲ; ಯಾಕಂದರೆ ಇಹ ಲೋಕದ ಅಧಿಪತಿಯು ಬರುತ್ತಾನೆ. ಅವನಿಗೆ ಸಂಬಂಧಪಟ್ಟದ್ದು ನನ್ನಲ್ಲಿ ಏನೂ ಇಲ್ಲ. |
31. | ನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ ಅಂದನು. |
← John (14/21) → |