← John (18/21) → |
1. | ಯೇಸು ಈ ಮಾತುಗಳನ್ನು ಆಡಿದ ಮೇಲೆ ತನ್ನ ಶಿಷ್ಯರೊಂದಿಗೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಅಲ್ಲಿ ಒಂದು ತೋಟ ವಿತ್ತು, ಆತನೂ ಆತನ ಶಿಷ್ಯರೂ ಅದರೊಳಗೆ ಪ್ರವೇಶಿ ಸಿದರು. |
2. | ಆತನನ್ನು ಹಿಡುಕೊಟ್ಟ ಯೂದನಿಗೂ ಆ ಸ್ಥಳವು ಗೊತ್ತಿತ್ತು; ಯಾಕಂದರೆ ಅನೇಕ ಸಾರಿ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಕೂಡಿಬರುತ್ತಿದ್ದನು. |
3. | ಆಗ ಯೂದನು ಪ್ರಧಾನಯಾಜಕರಿಂದ ಮತ್ತು ಫರಿಸಾಯ ರಿಂದ ಜನರ ಗುಂಪನ್ನೂ ಅಧಿಕಾರಿಗಳನ್ನೂ ಪಡೆದು ಕೊಂಡು ದೀಪಗಳಿಂದಲೂ ಪಂಜುಗಳಿಂದಲೂ ಆಯುಧಗಳಿಂದಲೂ ಅಲ್ಲಿಗೆ ಬಂದನು. |
4. | ಯೇಸು ತನ್ನ ಮೇಲೆ ಬರುವವುಗಳನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು |
5. | ಅವರು ಪ್ರತ್ಯುತ್ತರ ವಾಗಿ ಆತನಿಗೆ--ನಜರೇತಿನ ಯೇಸು ಅಂದರು. ಅದಕ್ಕೆ ಯೇಸು ಅವರಿಗೆ--ನಾನೇ ಆತನು ಅಂದನು. ಮತ್ತು ಆತನನ್ನು ಹಿಡುಕೊಡುವ ಯೂದನು ಸಹ ಅವರೊಂದಿಗೆ ನಿಂತಿದ್ದನು. |
6. | ಆತನು ಅವರಿಗೆ--ನಾನೇ ಆತನು ಎಂದು ಹೇಳಿದ ಕೂಡಲೇ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು. |
7. | ಆಗ ಆತನು ತಿರಿಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು ಅವರು--ನಜರೇತಿನ ಯೇಸುವನ್ನು ಅಂದರು. |
8. | ಯೇಸು ಪ್ರತ್ಯುತ್ತರವಾಗಿ--ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ; ನೀವು ನನ್ನನ್ನೆ ಹುಡುಕು ವುದಾದರೆ ಇವರನ್ನು ಹೋಗಬಿಡಿರಿ ಅಂದನು. |
9. | ಹೀಗೆ--ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳಕೊಳ್ಳಲಿಲ್ಲವೆಂದು ಆತನು ಹೇಳಿದ ಮಾತು ನೆರವೇರುವಂತೆ ಇದಾಯಿತು. |
10. | ಆಗ ಸೀಮೋನ ಪೇತ್ರನು ತನ್ನಲ್ಲಿದ್ದ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು; ಆ ಆಳಿನ ಹೆಸರು ಮಲ್ಕನು. |
11. | ಆಗ ಯೇಸು ಪೇತ್ರನಿಗೆ--ನಿನ್ನ ಕತ್ತಿಯನ್ನು ಒರೆಗೆಹಾಕು. ನನ್ನ ತಂದೆಯೂ ನನಗೆ ಕೊಟ್ಟ ಪಾತ್ರೆಯನ್ನು ನಾನು ಕುಡಿಯಬಾರದೋ ಎಂದು ಹೇಳಿದನು. |
12. | ತರುವಾಯ ಜನರ ಗುಂಪೂ ನಾಯಕನೂ ಯೆಹೂದ್ಯರ ಅಧಿಕಾರಿಗಳೂ ಯೇಸುವನ್ನು ಹಿಡಿದು ಕಟ್ಟಿ. |
13. | ಆತನನ್ನು ಮೊದಲು ಅನ್ನನ ಬಳಿಗೆ ಕರೆದು ಕೊಂಡು ಹೋದರು; ಅವನು ಆ ವರುಷದ ಮಹಾ ಯಾಜಕನಾಗಿದ್ದ ಕಾಯಫನ ಮಾವನಾಗಿದ್ದನು. |
14. | ಜನರಿಗೋಸ್ಕರ ಒಬ್ಬ ಮನುಷ್ಯನು ಸಾಯುವದು ಹಿತವೆಂದು ಯೆಹೂದ್ಯರಿಗೆ ಆಲೋಚನೆ ಹೇಳಿಕೊಟ್ಟ ಕಾಯಫನು ಇವನೇ. |
15. | ಸೀಮೋನ ಪೇತ್ರನು ಯೇಸುವನ್ನು ಹಿಂಬಾಲಿಸಿದನು; ಹಾಗೆಯೇ ಬೇರೊಬ್ಬ ಶಿಷ್ಯನೂ ಆತನನ್ನು ಹಿಂಬಾಲಿಸಿದನು; ಆ ಶಿಷ್ಯನು ಮಹಾಯಾಜಕನಿಗೆ ಪರಿಚಯವಿದ್ದದರಿಂದ ಯೇಸು ವಿನ ಸಂಗಡ ಮಹಾಯಾಜಕನ ಭವನದೊಳಗೆ ಹೋದನು. |
16. | ಪೇತ್ರನು ಬಾಗಲಿನ ಬಳಿಯಲ್ಲಿ ಹೊರಗೆ ನಿಂತಿದ್ದನು; ಹೀಗಿರಲಾಗಿ ಮಹಾಯಾಜಕನಿಗೆ ಪರಿಚಯವಿದ್ದ ಆ ಮತ್ತೊಬ್ಬ ಶಿಷ್ಯನು ಹೊರಗೆ ಹೋಗಿ ಬಾಗಲು ಕಾಯುವವಳ ಸಂಗಡ ಮಾತನಾಡಿ ಪೇತ್ರನನ್ನು ಒಳಗೆ ಕರೆದುಕೊಂಡು ಬಂದನು. |
17. | ಆಗ ಬಾಗಲು ಕಾಯುವವಳಾದ ಆ ಹುಡುಗಿಯು ಪೇತ್ರ ನಿಗೆ--ನೀನು ಸಹ ಈ ಮನುಷ್ಯನ ಶಿಷ್ಯರಲ್ಲಿ ಒಬ್ಬನಲ್ಲವೋ ಎಂದು ಕೇಳಲು ಅವನು--ನಾನಲ್ಲ ಅಂದನು. |
18. | ಆಗ ಚಳಿಯಾಗಿದ್ದದರಿಂದ ಆಳುಗಳೂ ಅಧಿಕಾರಿಗಳೂ ಇದ್ದಲುಗಳಿಂದ ಬೆಂಕಿಮಾಡಿ ಚಳಿ ಕಾಯಿಸಿಕೊಳ್ಳುತ್ತಿದ್ದರು; ಪೇತ್ರನೂ ಅವರೊಂದಿಗೆ ನಿಂತು ಕಾಯಿಸಿಕೊಳ್ಳುತ್ತಿದ್ದನು. |
19. | ತರುವಾಯ ಮಹಾಯಾಜಕನು ಆತನ ಶಿಷ್ಯರ ವಿಷಯವಾಗಿಯೂ ಆತನ ಬೋಧನೆಯ ವಿಷಯವಾಗಿಯೂ ಯೇಸುವನ್ನು ಕೇಳಿದನು. |
20. | ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ; ಯೆಹೂದ್ಯರು ಯಾವಾಗಲೂ ಕೂಡುವಂಥ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಉಪದೇಶಿಸಿದ್ದೆನು; ಗುಪ್ತವಾಗಿ ಯಾವದನ್ನೂ ನಾನು ಹೇಳಲಿಲ್ಲ. |
21. | ನೀನು ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಅವರಿಗೆ ಏನು ಹೇಳಿದ್ದೇನೆಂದು ಕೇಳಿದವರನ್ನು ವಿಚಾರಿಸು ಇಗೋ, ನಾನು ಹೇಳಿದ್ದು ಅವರಿಗೆ ತಿಳಿ ದದೆ ಅಂದನು. |
22. | ಆತನು ಹೀಗೆ ಮಾತನಾಡಿದಾಗ ಹತ್ತಿರ ನಿಂತಿದ್ದ ಅಧಿಕಾರಿಗಳಲ್ಲಿ ಒಬ್ಬನು ತನ್ನ ಅಂಗೈ ಯಿಂದ ಯೇಸುವನ್ನು ಹೊಡೆದು--ನೀನು ಮಹಾ ಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ ಅಂದನು. |
23. | ಯೇಸು ಅವನಿಗೆ--ನಾನು ಕೆಟ್ಟದ್ದನ್ನು ಮಾಡಿದ್ದರೆ ಕೆಟ್ಟದ್ದರ ವಿಷಯವಾಗಿ ಸಾಕ್ಷಿಕೊಡು; ಒಳ್ಳೇದನ್ನು ಮಾತನಾಡಿದ್ದರೆ ನೀನು ನನ್ನನ್ನು ಯಾಕೆ ಹೊಡೆಯುತ್ತೀ ಅಂದನು. |
24. | ಅನ್ನನು ಆತನನ್ನು ಕಟ್ಟಿಸಿ ಮಹಾ ಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು. |
25. | ತರುವಾಯ ಸೀಮೋನ ಪೇತ್ರನು ಚಳಿಕಾಯಿಸಿ ಕೊಳ್ಳುತ್ತಾ ನಿಂತಿದ್ದನು; ಆದದರಿಂದ ಅವರು ಅವ ನಿಗೆ--ನೀನು ಸಹ ಆತನ ಶಿಷ್ಯರಲ್ಲಿ ಒಬ್ಬನಲ್ಲವೇ ಎಂದು ಅವನನ್ನು ಕೇಳಿದರು. ಅದಕ್ಕೆ ಅವನು ಅದನ್ನು ಅಲ್ಲಗಳೆದು--ನಾನಲ್ಲ ಅಂದನು. |
26. | ಮಹಾಯಾಜ ಕನ ಆಳುಗಳಲ್ಲಿ ಪೇತ್ರನು ಕಿವಿ ಕತ್ತರಿಸಿದವನ ಬಂಧು ವಾಗಿದ್ದ ಒಬ್ಬನು--ನಾನು ನಿನ್ನನ್ನು ತೋಟದಲ್ಲಿ ಆತನ ಸಂಗಡ ನೋಡಲಿಲ್ಲವೋ ಅಂದನು. |
27. | ಪೇತ್ರನು ತಿರಿಗಿ ಅಲ್ಲಗಳೆದನು; ಆಗ ಕೂಡಲೆ ಹುಂಜ ಕೂಗಿತು. |
28. | ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ. |
29. | ಆಗ ಪಿಲಾತನು ಹೊರಗೆ ಅವರ ಬಳಿಗೆ ಹೋಗಿ ನೀವು ಈ ಮನುಷ್ಯನ ಮೇಲೆ ಏನು ದೂರು ತರುತ್ತೀರಿ ಎಂದು ಕೇಳಿದ್ದಕ್ಕೆ |
30. | ಅವರು ಪ್ರತ್ಯುತ್ತರವಾಗಿ ಅವನಿಗೆ--ಇವನು ದುಷ್ಕರ್ಮಿಯಲ್ಲ ದಿದ್ದರೆ ನಾವು ಇವನನ್ನು ನಿನಗೆ ಒಪ್ಪಿಸಿಕೊಡುತ್ತಿರಲಿಲ ಎಂದು ಹೇಳಿದರು. |
31. | ಆಗ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ನಿಮ್ಮ ನ್ಯಾಯಪ್ರಮಾಣದ ಪ್ರಕಾರ ಆತನಿಗೆ ನ್ಯಾಯತೀರಿಸಿರಿ ಅಂದನು. ಅದಕ್ಕೆ ಯೆಹೂದ್ಯರು ಅವನಿಗೆ--ನಾವು ಯಾವ ಮನುಷ್ಯ ನನ್ನೂ ಕೊಲ್ಲಿಸುವದಕ್ಕೆ ನಮಗೆ ನ್ಯಾಯವಲ್ಲ ಎಂದು ಹೇಳಿದರು. |
32. | ಹೀಗೆ ಯೇಸು ತಾನು ಎಂಥಾ ಸಾವು ಸಾಯುವನೆಂದು ಸೂಚಿಸಿ ಹೇಳಿದ ಮಾತು ಈಡೇರಿತು. |
33. | ತರುವಾಯ ಪಿಲಾತನು ತಿರಿಗಿ ನ್ಯಾಯಾಲಯ ದೊಳಗೆ ಪ್ರವೇಶಿಸಿ ಯೇಸುವನ್ನು ಕರೆದು ಆತ ನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. |
34. | ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನ್ನಷ್ಟಕ್ಕೆ ನೀನೇ ಇದನ್ನು ಹೇಳುತ್ತೀಯೋ? ಇಲ್ಲವೆ ಬೇರೆಯವರು ನನ್ನ ವಿಷಯದಲ್ಲಿ ನಿನಗೆ ಹೇಳಿ ದ್ದಾರೋ? ಅಂದನು. |
35. | ಪಿಲಾತನು ಪ್ರತ್ಯುತ್ತರ ವಾಗಿ--ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ ಪ್ರಧಾನಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ; ನೀನು ಏನು ಮಾಡಿದ್ದೀ ಎಂದು ಕೇಳಿ ದನು. |
36. | ಯೇಸು ಪ್ರತ್ಯುತ್ತರವಾಗಿ--ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರಿಗೆ ಒಪ್ಪಿಸಲ್ಪಡದ ಹಾಗೆ ನನ್ನ ಸೇವಕರು ಕಾದಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ ಅಂದನು. |
37. | ಆದದರಿಂದ ಪಿಲಾತನು ಆತನಿಗೆ--ಹಾಗಾದರೆ ನೀನು ಅರಸನೋ ಅನ್ನಲು ಯೇಸು ಪ್ರತ್ಯುತ್ತರವಾಗಿ--ನಾನು ಅರಸ ನಾಗಿದ್ದೇನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿಕೊಡುವದಕ್ಕೋಸ್ಕರ ಹುಟ್ಟಿ ಅದಕ್ಕೋಸ್ಕರವೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸಂಬಂಧಿಸಿದ ಪ್ರತಿಯೊ ಬ್ಬನು ನನ್ನ ಸ್ವರವನು |
38. | ಪಿಲಾ ತನು ಆತನಿಗೆ--ಸತ್ಯ ಅಂದರೇನು? ಅಂದನು. ಅವನು ಇದನ್ನು ಕೇಳಿದ ಮೇಲೆ ತಿರಿಗಿ ಯೆಹೂದ್ಯರ ಬಳಿಗೆ ಹೊರಗೆ ಬಂದು ಅವರಿಗೆ--ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ. |
39. | ಆದರೆ ಪಸ್ಕ ದಲ್ಲಿ ನಾನು ನಿಮಗೆ ಒಬ್ಬನನ್ನು ಬಿಟ್ಟುಕೊಡುವ ಪದ್ಧತಿ ಉಂಟಷ್ಟೆ; ಆದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟುಕೊಡುವದು ನಿಮಗೆ ಇಷ್ಟವೋ ಎಂದು ಕೇಳಿ ದನು. |
40. | ಅದಕ್ಕೆ ಅವರೆಲ್ಲರೂ ತಿರಿಗಿ--ಈ ಮನುಷ್ಯ ನನ್ನಲ್ಲ; ಆದರೆ ಬರಬ್ಬನನ್ನು ಬಿಟ್ಟು ಕೊಡು ಎಂದು ಕೂಗಿಕೊಂಡರು. ಈ ಬರಬ್ಬನು ಕಳ್ಳನಾಗಿದ್ದನು. |
← John (18/21) → |