← John (2/21) → |
1. | ಮೂರನೆಯ ದಿನದಲ್ಲಿ ಗಲಿಲಾಯದ ಕಾನಾದಲ್ಲಿ ಒಂದು ಮದುವೆ ಆಯಿತು. ಅಲ್ಲಿ ಯೇಸುವಿನ ತಾಯಿಯು ಇದ್ದಳು. |
2. | ಇದಲ್ಲದೆ ಯೇಸುವನ್ನೂ ಆತನ ಶಿಷ್ಯರನ್ನೂ ಮದುವೆಗೆ ಕರೆದಿ ದ್ದರು. |
3. | ಆಗ ಅವರಿಗೆ ದ್ರಾಕ್ಷಾರಸವು ಸಾಲದೆ ಹೋದ ದ್ದರಿಂದ ಯೇಸುವಿನ ತಾಯಿಯು ಆತನಿಗೆ--ಅವರಿಗೆ ದ್ರಾಕ್ಷಾರಸವು ಇಲ್ಲ ಅಂದಳು. |
4. | ಯೇಸು ಆಕೆಗೆ-- ಸ್ತ್ರೀಯೇ, ನನ್ನ ಗೊಡವೆ ನಿನಗೆ ಯಾಕೆ? ನನ್ನ ಗಳಿಗೆ ಯು ಇನ್ನೂ ಬಂದಿಲ್ಲ ಅಂದನು. |
5. | ಆತನ ತಾಯಿಯು ಸೇವಕರಿಗೆ--ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ ಅಂದಳು. |
6. | ಯೆಹೂದ್ಯರ ಶುದ್ಧೀ ಕರಣದ ಪ್ರಕಾರ ಅಲ್ಲಿ ಪ್ರತಿಯೊಂದು ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವಷ್ಟು ಆರು ಕಲ್ಲಿನ ಬಾನೆಗಳು ಇದ್ದವು. |
7. | ಯೇಸು ಅವರಿಗೆ--ಆ ಬಾನೆ ಗಳಲ್ಲಿ ನೀರು ತುಂಬಿರಿ ಅಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದ್ದರು. |
8. | ಆತನು ಅವರಿಗೆ--ಈಗ ಇದನ್ನು ತೋಡಿಕೊಂಡು ಹೋಗಿ ಔತಣದ ಪಾರುಪತ್ಯಗಾರನಿಗೆ ಕೊಡಿರಿ ಎಂದು ಹೇಳಲು ಅವರು ತಕ್ಕೊಂಡು ಹೋಗಿ ಕೊಟ್ಟರು. |
9. | ಔತಣದ ಪಾರುಪತ್ಯ ಗಾರನು ದ್ರಾಕ್ಷಾರಸವಾದ ನೀರನ್ನು ರುಚಿ ನೋಡಿದಾಗ ಅದು ಎಲ್ಲಿಂದ ಬಂತೆಂದು ತಿಳಿಯದವನಾಗಿ (ನೀರನ್ನು ತೋಡಿಕೊಂಡ ಸೇವಕರಿಗೆ ತಿಳಿದಿತ್ತು) ಮದಲಿಂಗನನ್ನು ಕರೆದು |
10. | ಅವನಿಗೆ--ಪ್ರತಿ ಮನುಷ್ಯನು ಮೊದಲು ಒಳ್ಳೇ ದ್ರಾಕ್ಷಾರಸವನ್ನು ಕೊಟ್ಟು ಜನರು ಚೆನ್ನಾಗಿ ಕುಡಿದ ಮೇಲೆ ಕನಿಷ್ಠವಾದದ್ದನ್ನು ಕೊಡುತ್ತಾನೆ; ಆದರೆ ನೀನು ಇದು ವರೆಗೆ ಒಳ್ಳೇ ದ್ರಾಕ್ಷಾರಸವನ್ನು ಇಟ್ಟು ಕೊಂಡಿದ್ದೀ ಅಂದನು. |
11. | ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು. |
12. | ಇದಾದ ಮೇಲೆ ಆತನೂ ಆತನ ತಾಯಿಯೂ ಆತನ ಸಹೋದರರೂ ಆತನ ಶಿಷ್ಯರೂ ಕಪೆರ್ನೌಮಿಗೆ ಹೋಗಿ ಅಲ್ಲಿ ಕೆಲವು ದಿವಸ ಇದ್ದರು. |
13. | ಯೆಹೂದ್ಯರ ಪಸ್ಕವು ಹತ್ತಿರವಾದಾಗ ಯೇಸು ಯೆರೂಸಲೇಮಿಗೆ ಹೋಗಿ |
14. | ದೇವಾಲಯದಲ್ಲಿ ಎತ್ತು ಕುರಿ ಪಾರಿವಾಳ ಇವುಗಳನ್ನು ಮಾರುವವ ರನ್ನೂ ಹಣ ಬದಲಾಯಿಸುವವರು ಕೂತಿರುವದನೂ ಕಂಡನು; |
15. | ಆಗ ಆತನು ಸಣ್ಣ ಹಗ್ಗಗಳಿಂದ ಕೊರಡೆ ಮಾಡಿ ಕುರಿ ಎತ್ತು ಸಹಿತ ಎಲ್ಲರನ್ನೂ ದೇವಾಲಯದ ಹೊರಕ್ಕೆ ಅಟ್ಟಿ ಚಿನಿವಾರರ ಹಣವನ್ನು ಚೆಲ್ಲಿ ಮೇಜು ಗಳನ್ನು ಕೆಡವಿದನು. |
16. | ಆತನು ಪಾರಿವಾಳ ಮಾರುವ ವರಿಗೆ--ಇವುಗಳನ್ನು ಇಲ್ಲಿಂದ ತಕ್ಕೊಂಡು ಹೋಗಿರಿ; ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯ ನ್ನಾಗಿ ಮಾಡಬೇಡಿರಿ ಅಂದನು. |
17. | ಆಗ ಆತನ ಶಿಷ್ಯರು--ನಿನ್ನ ಆಲಯದ ಆಸಕ್ತಿಯು ನನ್ನನ್ನು ದಹಿಸಿ ಬಿಟ್ಟಿದೆ ಎಂದು ಬರೆದಿರುವದನ್ನು ಜ್ಞಾಪಕಮಾಡಿ ಕೊಂಡರು. |
18. | ಆಗ ಯೆಹೂದ್ಯರು ಆತನಿಗೆ--ನೀನು ಇವುಗಳನ್ನು ಮಾಡುವದಕ್ಕೆ ಯಾವ ಸೂಚಕಕಾರ್ಯ ವನ್ನು ನಮಗೆ ತೋರಿಸುತ್ತೀ ಎಂದು ಕೇಳಿದರು. |
19. | ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು. |
20. | ಅದಕ್ಕೆ ಯೆಹೂದ್ಯರು-- ಈ ದೇವಾಲಯವನ್ನು ಕಟ್ಟುವದಕ್ಕೆ ನಾಲ್ವತ್ತಾರು ವರುಷಗಳು ಹಿಡಿದವು; ನೀನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವಿಯೋ ಅಂದರು. |
21. | ಆದರೆ ಆತನು ತನ್ನ ದೇಹವೆಂಬ ಆಲಯವನ್ನು ಕುರಿತು ಹೇಳಿದನು. |
22. | ಆದದರಿಂದ ಆತನು ಸತ್ತವರೊಳಗಿಂದ ಎದ್ದಮೇಲೆ ಆತನ ಶಿಷ್ಯರು ತಮಗೆ ಹೇಳಿದ ಈ ಮಾತನ್ನು ನೆನಪು ಮಾಡಿಕೊಂಡು ಬರಹವನ್ನೂ ಯೇಸು ತಮಗೆ ಹೇಳಿದ್ದನ್ನೂ ನಂಬಿದರು. |
23. | ಆತನು ಪಸ್ಕಹಬ್ಬದ ದಿನದಲ್ಲಿ ಯೆರೂಸಲೇಮಿ ನಲ್ಲಿದ್ದಾಗ ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಅನೇಕರು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು. |
24. | ಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು. |
25. | ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ. |
← John (2/21) → |