Joshua (1/24) → |
1. | ಕರ್ತನ ಸೇವಕನಾದ ಮೋಶೆ ಸತ್ತ ತರುವಾಯ ಕರ್ತನು ಮೋಶೆಯ ಸೇವಕನಾದ ನೂನನ ಮಗನಾಗಿರುವ ಯೆಹೋಶುವನಿಗೆ-- |
2. | ನನ್ನ ಸೇವಕನಾದ ಮೋಶೆಯು ಸತ್ತನು; ಈಗ ನೀನು ಈ ಜನರೆಲ್ಲರ ಸಹಿತವಾಗಿ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶಕ್ಕೆ ಹೋಗು. |
3. | ನಾನು ಮೋಶೆಗೆ ಹೇಳಿದ ಹಾಗೆ ನಿಮ್ಮ ಪಾದವು ತುಳಿಯುವ ಎಲ್ಲಾ ಸ್ಥಳವನ್ನು ನಿಮಗೆ ಕೊಟ್ಟೆನು. |
4. | ಅರಣ್ಯವೂ ಈ ಲೆಬನೋನೂ ಮೊದಲುಗೊಂಡು ಯೂಫ್ರೇಟೀಸ್ ಮಹಾನದಿಯ ವರೆಗೆ ಇರುವ ಹಿತ್ತಿಯರ ದೇಶವೆಲ್ಲಾ ಸೂರ್ಯನು ಅಸ್ತಮಿಸುವ ಕಡೆಗೆ ಮಹಾಸಮುದ್ರದ ವರೆಗೂ ನಿಮ್ಮ ಮೇರೆಯಾಗಿರುವದು. |
5. | ಆದರೆ ನೀನು ಜೀವಿಸುವ ದಿವಸಗಳಲ್ಲೆಲ್ಲಾ ಯಾವನೂ ನಿನ್ನ ಮುಂದೆ ನಿಲ್ಲಲಾರನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಕೈಬಿಡುವುದಿಲ್ಲ, ಇಲ್ಲವೆ ನಿನ್ನನ್ನು ತೊರೆಯುವದಿಲ್ಲ. |
6. | ಬಲವಾಗಿರು, ದೃಢವಾಗಿರು; ಈ ಜನರಿಗೆ ನಾನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ನೀನು ಬಾದ್ಯವಾಗಿ ಹಂಚಿಕೊಡುವಿ. |
7. | ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣವೆಲ್ಲಾದರ ಪ್ರಕಾರ ನೀನು ಕೈಕೊಂಡು ನಡೆ ಯುವ ಹಾಗೆ ಬಲವಾಗಿರು, ಬಹು ಧೈರ್ಯದಿಂದಿರು, ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ ಅದನ್ನು (ನ್ಯಾಯಪ್ರಮಾಣವನ್ನು) ಬಿಟ್ಟು ಬಲ ಕ್ಕಾದರೂ ಎಡಕ್ಕಾದರೂ ತಿರುಗಬೇಡ. |
8. | ಈ ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣವು ನಿನ್ನ ಬಾಯಿಂದ ಹೋಗಬಾರದು; ಅದರಲ್ಲಿ ಬರೆದಿರುವ ಪ್ರಕಾರವೇ ಕೈಕೊಂಡು ನಡೆಯುವ ಹಾಗೆ ರಾತ್ರಿಹಗಲು ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವನ್ನು ಸಫಲಮಾಡಿ ಕೊಂಡು ಮಹಾ ಜಯಶಾಲಿಯಾಗುವಿ. |
9. | ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು. |
10. | ಆಗ ಯೆಹೋಶುವನು ಜನರ ಅಧಿಕಾರಿಗಳಿಗೆ ಆಜ್ಞಾಪಿಸಿ-- |
11. | ನೀವು ದಂಡಿನ ಮಧ್ಯದಲ್ಲಿ ಹೋಗಿ ಜನರಿಗೆ ಆಜ್ಞಾಪಿಸಿ ಹೇಳಬೇಕಾದದ್ದೇನಂದರೆ--ನಿಮ ಗೋಸ್ಕರ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ; ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿರುವ ದೇಶವನ್ನು ನೀವು ಸ್ವಾಧೀನಮಾಡಿಕೊಳ್ಳಲು ಇನ್ನು ಮೂರು ದಿವಸಗಳಲ್ಲಿ ಯೊರ್ದನನ್ನು ದಾಟಿ ಹೋಗ ಬೇಕು ಅಂದನು. |
12. | ಇದಲ್ಲದೆ ಯೆಹೋಶುವನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಯ ಅರ್ಧಗೋತ್ರದವರಿಗೂ ಹೇಳಿದ್ದೇನಂದರೆ -- |
13. | ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ವಾಕ್ಯವನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಕರ್ತನು ನಿಮ್ಮನ್ನು ವಿಶ್ರಾಂತಿಪಡಿಸಿ ನಿಮಗೆ ಈ ದೇಶವನ್ನು ಕೊಟ್ಟನು. |
14. | ಹೇಗಂದರೆ ನಿಮ್ಮ ಹೆಂಡತಿಯರೂ ಚಿಕ್ಕವರೂ ಪಶುಗಳೂ ಮೋಶೆ ನಿಮಗೆ ಕೊಟ್ಟ ಯೊರ್ದನಿಗೆ ಈಚೆ ಇರುವ ದೇಶದಲ್ಲೇ ಇರಲಿ; ಆದರೆ ನಿಮ್ಮಲ್ಲಿ ಇರುವ ಪರಾಕ್ರಮಶಾಲಿಗಳೆಲ್ಲಾ ನಿಮ್ಮ ಸಹೋದರರ ಮುಂದೆ ಯುದ್ಧಸನ್ನದ್ಧರಾಗಿ ನಡೆದುಹೋಗಿ |
15. | ಕರ್ತನು ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನು ವಿಶ್ರಾಂತಿ ಪಡಿಸಿ ಅವರು ನಿಮ್ಮ ದೇವರಾದ ಕರ್ತನು ತಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವ ವರೆಗೆ ಅವರಿಗೆ ಸಹಾಯ ಮಾಡಿರಿ; ತರುವಾಯ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಈಚೆಯಲ್ಲಿ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ನಿಮಗೆ ಕೊಟ್ಟ ನಿಮ್ಮ ಸ್ವಾಸ್ತ್ಯವಾದ ದೇಶಕ್ಕೆ ತಿರಿಗಿ ಬಂದು ಅದನ್ನು ಅನುಭವಿಸಿರಿ ಅಂದನು. |
16. | ಆಗ ಅವರು ಯೆಹೋಶು ವನಿಗೆ ಪ್ರತ್ಯುತ್ತರವಾಗಿ--ನೀನು ನಮಗೆ ಆಜ್ಞಾಪಿಸು ವದನ್ನೆಲ್ಲಾ ಮಾಡುವೆವು; ಎಲ್ಲಿಗೆ ಕಳುಹಿಸುತ್ತೀಯೋ ಅಲ್ಲಿಗೆ ಹೋಗುವೆವು. |
17. | ನಾವು ಎಲ್ಲಾದರಲ್ಲಿ ಮೋಶೆಯ ಮಾತು ಕೇಳಿದ ಹಾಗೆ ನಿನ್ನ ಮಾತನ್ನೂ ಕೇಳುವೆವು. ಆದರೆ ನಿನ್ನ ದೇವರಾದ ಕರ್ತನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ. |
18. | ನೀನು ಆಜ್ಞಾಪಿಸುವ ಎಲ್ಲಾದರಲ್ಲಿ ನಿನ್ನ ಮಾತುಗಳನ್ನು ಕೇಳದೆ ನಿನ್ನ ಬಾಯಿಮಾತಿಗೆ ಎದುರು ಬೀಳುವವನು ಸಾಯಲೇಬೇಕು; ಆದರೆ ನೀನು ಮಾತ್ರ ಬಲವಾಗಿರು, ಒಳ್ಳೆ ಧೈರ್ಯದಿಂದಿರು ಅಂದರು. |
Joshua (1/24) → |