← Joshua (15/24) → |
1. | ಇದಲ್ಲದೆ ಯೂದನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ವಿಭಾಗಿಸಿದ ಮೇರೆ ಯಾವದಂದರೆ, ಕಟ್ಟ ಕಡೆಗಿರುವ ದಕ್ಷಿಣ ಕಡೆಗೆ ಎದೋಮಿನ ಮೇರೆಯಾದ ಜಿನ್ ಅರಣ್ಯದ ದಕ್ಷಿಣ ಭಾಗವಾಗಿದೆ. |
2. | ಉಪ್ಪು ಸಮುದ್ರದ ಕಡೆಯಲ್ಲಿ ದಕ್ಷಿಣ ಕಡೆಗಿರುವ ಕೊನೆಯಿಂದ ದಕ್ಷಿಣ ಪಾರ್ಶ್ವದ ಲ್ಲಿರುವ ಮಾಲೆಅಕ್ರಬ್ಬೀಮೆಂಬ ಕೊಲ್ಲಿಗಳಿಗೂ ಅಲ್ಲಿಂದ ಜೀನಿಗೂ |
3. | ಅಲ್ಲಿಂದ ದಕ್ಷಿಣದಲ್ಲಿರುವ ಕಾದೇಶ್ ಬರ್ನೇಯಕ್ಕೂ ಅಲ್ಲಿಂದ ಹೆಬ್ರೋನ್ ಮಾರ್ಗವಾಗಿ ಕರ್ಕವನ್ನು ಸುತ್ತಿ ಅಚ್ಮೊನಿಗೂ |
4. | ಅಲ್ಲಿಂದ ಐಗುಪ್ತದ ನದಿ ಹಿಡಿದು ಸಮುದ್ರದ ಪರಿಯಂತರ ಹೋಗಿ ಸೇರುವದು; ಇದೇ ನಿಮ್ಮ ದಕ್ಷಿಣ ಮೇರೆ. |
5. | ಅದರ ಮೂಡಣ ಮೇರೆ ಯಾವದಂದರೆ: ಯೊರ್ದನಿನ ಕೊನೇಗಿರುವ ಉಪ್ಪು ಸಮುದ್ರವು. ಉತ್ತರ ಕಡೆಗೆ ಯೊರ್ದನಿನ ಹತ್ತಿರದಲ್ಲಿದ್ದ ಸಮುದ್ರದ ಕೊನೆಯ ವರೆಗೆ ಇತ್ತು; |
6. | ಅಲ್ಲಿಂದ ಬೇತ್‌ಹೊಗ್ಲಾಕ್ಕೂ ಅಲ್ಲಿಂದ ಉತ್ತರಕ್ಕಿರುವ ಬೇತ್‌ಅರಾಬನ್ನು ದಾಟಿರೂಬೇನನ ಮಗನಾದ ಬೋಹನನ ಕಲ್ಲಿಗೂ |
7. | ಅಲ್ಲಿಂದ ಆಕೋರ್ ತಗ್ಗನ್ನು ಬಿಟ್ಟು ದೆಬೀರಿಗೂ ಉತ್ತರಕ್ಕೆ ನದಿಯ ದಕ್ಷಿಣ ಪಾರ್ಶ್ವವಾದ ಅದುವಿಾಮಿನ ಹೊಳೆಗೆ ಎದುರಾಗಿರುವ ಗಿಲ್ಗಾಲಿಗೂ ಅಲ್ಲಿಂದ ಏನ್‌ಷೆಮೆಷಿನ ನೀರಿಗೂ ಅಲ್ಲಿಂದ ಏನ್‌ರೋಗೆಲಿಗೂ |
8. | ಅಲ್ಲಿಂದ ಯೆಬೂಸಿ ಯರು ವಾಸವಾಗಿರುವ ಯೆರೂಸಲೇಮಿಗೆ ದಕ್ಷಿಣ ಪಾರ್ಶ್ವವಾಗಿ ಹಿನ್ನೋಮನ ತಗ್ಗನ್ನು ದಾಟಿ ಉತ್ತರಕ್ಕಿರುವ ಯೆಬೂಸಿಯರ ತಗ್ಗಿನ ಕಡೆಯಲ್ಲಿ ಪಶ್ಚಿಮಕ್ಕಾಗಿ ಹಿನ್ನೋಮ್ ತಗ್ಗಿನ ಮುಂದಿರುವ ಬೆಟ್ಟದ ತುದಿ ವರೆಗೂ |
9. | ಆ ಬೆಟ್ಟದ ತುದಿಯಿಂದ ನೆಪ್ತೋಹದ ನೀರಿನ ಬುಗ್ಗೆಗೂ ಅಲ್ಲಿಂದ ಎಫ್ರೋನನ ಬೆಟ್ಟದ ಪಟ್ಟಣ ಗಳಿಗೂ ಅಲ್ಲಿಂದ ಕಿರ್ಯತ್ಯಾರೀಮ್ ಆದ ಬಾಲಾಕ್ಕೂ |
10. | ಬಾಲಾದಿಂದ ಪಶ್ಚಿಮಕ್ಕಿರುವ ಸೇಯಾರ್ ಬೆಟ್ಟ ವನ್ನು ಸುತ್ತಿ ಅಲ್ಲಿಂದ ಉತ್ತರಕ್ಕಿರುವ ಕೆಸಾಲೋನಿನ ಯಾರೀಮ್ ಬೆಟ್ಟದ ಪಾರ್ಶ್ವಕ್ಕೂ ಅಲ್ಲಿಂದ ಬೇತ್‌ಷೆ ಮೆಷಿಗೆ ಇಳಿದು ತಿಮ್ನಾಗೆ |
11. | ಅಲ್ಲಿಂದ ಉತ್ತರಕ್ಕಿರುವ ಎಕ್ರೋನಿನ ಪಾರ್ಶ್ವವನ್ನು ಹಿಡಿದು ಶಿಕ್ಕೆರೋನಿಗೂ ಅಲ್ಲಿಂದ ಬಾಲಾ ಬೆಟ್ಟವನ್ನು ದಾಟಿ ಯೆಬ್ನೇಲಿಗೆ ಹೊರಟು ಸಮುದ್ರಕ್ಕೆ ಕಡೆಯಾಗುವದು. |
12. | ಅದು ಪಶ್ಚಿಮದ ಮೇರೆಯ ದೊಡ್ಡ ಸಮುದ್ರವಾಗಿದೆ. ಇದೇ ಯೂದನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಸುತ್ತಲಿರುವ ಮೇರೆ. |
13. | ಇದಲ್ಲದೆ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನಿಗೆ ಅನಾಕನ ತಂದೆಯ ಕಿರ್ಯಾತ್‌ಅರ್ಬ ಎಂಬ ಹೆಬ್ರೋನನ್ನು ಯೂದನ ಮಕ್ಕಳ ನಡುವೆ ಪಾಲಾಗಿ ಕೊಟ್ಟನು. |
14. | ಆಗ ಕಾಲೇಬನು ಅಲ್ಲಿಂದ ಅನಾಕನ ಮೂವರು ಮಕ್ಕಳಾದ ಶೇಷೈ ಅಹೀಮನ್ ತಲ್ಮೈಯ ರನ್ನು ಹೊರಡಿಸಿಬಿಟ್ಟನು. |
15. | ಕಾಲೇಬನು ಅಲ್ಲಿಂದ ಹೊರಟು--ಯಾವನು ಪೂರ್ವದಲ್ಲಿ ಕಿರ್ಯತ್ ಸೇಫರ್ ಎಂಬ ಹೆಸರು ಉಂಟಾಗಿದ್ದ ದೆಬೀರಿನ ವಾಸಿಗಳ ಬಳಿಗೆ ಹೋಗಿ |
16. | ಅವನು ಕಿರ್ಯತ್ ಸೇಫೆರನ್ನು ಹೊಡೆದು ಹಿಡಿಯುವನೋ ಅವನಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿ ಕೊಡು ವೆನು ಎಂದು ಹೇಳಿದ್ದನು. |
17. | ಆಗ ಕೆನಜನ ಮಗನೂ ಕಾಲೇಬನ ಸಹೋದರನೂ ಆದ ಒತ್ನೀಯೇಲನು ಅದನ್ನು ಹಿಡಿದನು. ಅವನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿ ಕೊಟ್ಟನು. |
18. | ಅವಳು ಬಂದಾಗ ತನ್ನ ತಂದೆಯಿಂದ ಒಂದು ಹೊಲವನ್ನು ಕೇಳುವದಕ್ಕೆ ಅವನನ್ನು ಪ್ರೇರೇಪಿಸಿ ತಾನು ಕತ್ತೆಯ ಮೇಲಿನಿಂದ ಇಳಿದಳು. ಆಗ ಕಾಲೇಬನು ಅವಳನ್ನು ನೋಡಿ--ನಿನಗೆ ಏನು ಬೇಕು ಅಂದನು. |
19. | ಅದಕ್ಕೆ ಅವಳು--ನನಗೆ ಒಂದು ಆಶೀರ್ವಾದ ಕೊಡು; ಯಾಕಂದರೆ ನನಗೆ ಮೊದಲು ದಕ್ಷಿಣ ಭೂಮಿಯನ್ನು ಕೊಟ್ಟಿ; ನೀರು ಬುಗ್ಗೆಗಳನ್ನು ಸಹ ನನಗೆ ಕೊಡು ಅಂದಳು. ಆಗ ಅವನು ಅವಳಿಗೆ ಮೇಲ್ಭಾಗದಲ್ಲಿಯೂ ಕೆಳಭಾಗದಲ್ಲಿಯೂ ನೀರು ಬುಗ್ಗೆಗಳನ್ನು ಕೊಟ್ಟನು. |
20. | ಯೂದನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬ ಗಳ ಪ್ರಕಾರ ಉಂಟಾದ ಸ್ವಾಸ್ತ್ಯವೇನಂದರೆ-- |
21. | ದಕ್ಷಿಣ ಕಡೆಗಿರುವ ಕಟ್ಟ ಕಡೆಯ ಎದೋಮಿನ ಮೇರೆಗೆ ಸರಿಯಾಗಿ ಯೂದನ ಮಕ್ಕಳ ಗೋತ್ರಕ್ಕೆ ಇರುವ ಪಟ್ಟಣಗಳು ಯಾವವಂದರೆ--ಕಬ್ಜೇಲ್, ಏದೆರ್, ಯಾಗೂರ್, |
22. | ಕೀನಾ, ದೀಮೋನಾ, ಅದಾದಾ, |
23. | ಕೇದೆಷ್, ಹಾಚೋರ್, ಇತ್ನಾನ್, |
24. | ಜೀಫ್, ಟೆಲೆಮ್, ಬೆಯಾಲೋತ್, |
25. | ಹಾಚೋರ್, ಹದತ್ತಾ, ಕಿರ್ಯೋತ್, ಹೆಜ್ರೋನ್ ಎಂಬ ಹಾಚೋರ್ |
26. | ಅಮಾಮ್, ಶೆಮ, ಮೋಲಾದ |
27. | ಹಚರ್ಗದ್ದಾ, ಹೆಷ್ಮೋನ್, ಬೇತ್ಪೆಲೆಟ್, |
28. | ಹಚರ್‌ಷೊವಾಲ್, ಬೇರ್ಷೆಬ, ಬಿಜ್ಯೋತ್ಯಾ |
29. | ಬಾಲಾ, ಇಯ್ಯಾಮ್, ಎಚೆಮ್, |
30. | ಎಲ್ಟೋಲದ್, ಕೆಸೀಲ್, ಹೊರ್ಮಾ, |
31. | ಚಿಕ್ಲಗ್ ಮದ್ಮನ್ನಾ, ಸನ್ಸನ್ನಾ, |
32. | ಲೆಬಾವೋತ್, ಶಿಲ್ಹೀಮ್, ಅಯಿನ್, ರಿಮ್ಮೋನ್ ಎಂಬವುಗಳೇ; ಅವುಗಳ ಗ್ರಾಮಗಳು ಪಟ್ಟಣಗಳೆಲ್ಲಾ ಇಪ್ಪತ್ತೊಂಭತ್ತು. |
33. | ತಗ್ಗಿನ ದೇಶ ಎಷ್ಟಾವೋಲ್, ಚೊರ್ಗಾ, ಅಶ್ನಾ, |
34. | ಜನೋಹ, ಏಂಗನ್ನೀಮ್, |
35. | ತಪ್ವೂಹ, ಏನಾಮ್ ಯರ್ಮೂತ್, |
36. | ಅದುಲ್ಲಾಮ್, ಸೋಕೋ, ಅಜೇಕಾ, ಶಾರಯಿಮ್, ಅದೀತಯಿಮ್, ಗೆದೇರಾ, ಗೆದೆರೋತಯಿಮ್ ಎಂಬ ಅವುಗಳ ಗ್ರಾಮಗಳು ಅದರ ಹದಿನಾಲ್ಕು ಪಟ್ಟಣಗಳು; |
37. | ಚೆನಾನ್, ಹದಾಷಾ, ಮಿಗ್ದಲ್ಗಾದ್, |
38. | ದಿಲಾನ್, ಮಿಚ್ವೆ, ಯೊಕ್ತೇಲ್, |
39. | ಲಾಕೀಷ್, ಬೊಚ್ಕತ್, ಎಗ್ಲೋನ್ |
40. | ಕಬ್ಬೋನ್, ಲಹ್ಮಾಸ್, ಕಿತ್ಲೀಷ್, ಗೆದೇರೋತ್, ಬೇತ್‌ದಾಗೋನ್, ನಾಮಾ, |
41. | ಮಕ್ಕೇದಾ ಎಂಬ ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳೂ; |
42. | ಇದಲ್ಲದೆ ಲಿಬ್ನಾ, ಎತೆರ್, ಆಷಾನ್, |
43. | ಇಪ್ತಾಹ, |
44. | ಅಶ್ನಾ, ನೆಚೀಬ್, ಕೆಯಾಲಾ, ಅಕ್ಜೀಬ್, ಮಾರೇಷಾಎಂಬ ಅವುಗಳ ಗ್ರಾಮಗಳು ಒಂಭತ್ತು ಪಟ್ಟಣಗಳು; |
45. | ಎಕ್ರೋನ್ ಅದರ ಪಟ್ಟಣಗಳು, ಗ್ರಾಮಗಳು ಸಹ. |
46. | ಎಕ್ರೋನಿನಿಂದ ಸಮುದ್ರದ ವರೆಗೆ ಅಷ್ಡೋದಿನ ಬಳಿಯಲ್ಲಿರುವ ಸಮಸ್ತ ಗ್ರಾಮಗಳೂ |
47. | ಅಷ್ಡೋದ್ ಅದರ ಪಟ್ಟಣಗಳೂ ಗ್ರಾಮಗಳೂ ಗಾಜಾ, ಅದರ ಪಟ್ಟಣಗಳೂ ಗ್ರಾಮಗಳೂ ಐಗುಪ್ತದ ನದಿ, ದೊಡ್ಡ ಸಮುದ್ರ, ಅದರ ಮೇರೆ, ಇವುಗಳ ವರೆಗೂ |
48. | ಬೆಟ್ಟಗಳಲ್ಲಿರುವ ಶಾವಿಾರ್, ಯತ್ತೀರ್, ಸೋಕೋ, |
49. | ದನ್ನಾ, ದೆಬೀರ್ ಎಂಬ ಕಿರ್ಯತ್‌ಸನ್ನಾ, |
50. | ಅನಾಬ್, ಎಷ್ಟೆಮೋ, ಆನೀಮ್, |
51. | ಗೋಷೆನ್, ಹೋಲೋನ್‌ಗಿಲೋ ಎಂಬ ಹನ್ನೊಂದು ಪಟ್ಟಣ ಗಳು ಅವುಗಳ ಗ್ರಾಮಗಳು. |
52. | ಅರಬ್, ದೂಮಾ, ಎಷಾನ್, |
53. | ಯಾನೂಮ್, ಬೇತ್‌ತಪ್ಪೂಹ, ಅಫೇಕಾ. |
54. | ಹುಮ್ಟಾ, ಹೆಬ್ರೋನೆಂಬ ಕಿರ್ಯತ್‌ಅರ್ಬ, ಚೀಯೋರ್ ಎಂಬ ಒಂಭತ್ತು ಪಟ್ಟಣಗಳೂ ಮತ್ತು ಅವುಗಳ ಗ್ರಾಮಗಳೂ. |
55. | ಮಾವೋನ್, ಕರ್ಮೆಲ್, ಜೀಫ್, ಯುಟ್ಟಾ, |
56. | ಇಜ್ರೇಲ್, ಯೊಗ್ದೆಯಾಮ್, ಜನೋಹ, |
57. | ಕಯಿನ್, ಗಿಬೆಯಾ, ತಿಮ್ನಾ ಎಂಬ ಹತ್ತು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು. |
58. | ಹಲ್ಹೂಲ್, ಬೇತ್‌ಚೂರ್, ಗೆದೋರ್, |
59. | ಮಾರಾತ್, ಬೇತನೋತ್, ಎಲ್ಟೆಕೋನ್ ಎಂಬ ಆರು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು. |
60. | ಕಿರ್ಯತ್ಯಾರೀಮ್ ಎಂಬ ಕಿರ್ಯತ್‌ಬಾಳ್, ರಬ್ಬಾ ಎಂಬ ಎರಡು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು. |
61. | ಅರಣ್ಯದಲ್ಲಿರುವ ಬೇತ್‌ಅರಾಬಾ, ಮಿದ್ದೀನ್, ಸೆಕಾಕಾ, |
62. | ನಿಬ್ಷಾನ್, ಉಪ್ಪಿನಪಟ್ಟಣವು, ಏಂಗೆದೀ ಎಂಬ ಆರು ಪಟ್ಟಣಗಳು; ಮತ್ತು ಅವು ಗಳ ಗ್ರಾಮಗಳು. |
63. | ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ. |
← Joshua (15/24) → |