← Joshua (2/24) → |
1. | ನೂನನ ಮಗನಾದ ಯೆಹೋಶುವನು ಪಾಳತಿ ನೋಡುವವರಾದ ಇಬ್ಬರು ಮನುಷ್ಯರನ್ನು ಶಿಟ್ಟೀಮಿನಿಂದ ಗುಪ್ತ ಮಾರ್ಗವಾಗಿ ಕಳುಹಿಸಿ ಅವರಿಗೆ--ನೀವು ಹೋಗಿ ದೇಶವನ್ನು ಮತ್ತು ಯೆರಿಕೋವನ್ನು ನೋಡಿರಿ ಅಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ಸೂಳೆಯ ಮನೆಯಲ್ಲಿ ಇಳಿದುಕೊಂಡರು. |
2. | ಆದರೆ ಯೆರಿಕೋವಿನ ಅರಸ ನಿಗೆ--ಇಗೋ, ಇಸ್ರಾಯೇಲ್ ಮನುಷ್ಯರು ದೇಶವನ್ನು ಪರಿಶೋಧನೆ ಮಾಡಲು ರಾತ್ರಿಯಲ್ಲಿ ಇಲ್ಲಿಗೆ ಬಂದಿದ್ದಾ ರೆಂದು ತಿಳಿಸಲ್ಪಟ್ಟಿತು. |
3. | ಆಗ ಯೆರಿಕೋವಿನ ಅರಸನು ರಾಹಾಬಳ ಬಳಿಗೆ ಕಳುಹಿಸಿ--ನಿನ್ನ ಬಳಿಗೆ ಬಂದು ನಿನ್ನ ಮನೆಯಲ್ಲಿ ಪ್ರವೇಶಿಸಿದ ಮನುಷ್ಯರನ್ನು ಹೊರಗೆ ಕರಕೊಂಡು ಬಾ. ಅವರು ದೇಶವನ್ನೆಲ್ಲಾ ಶೋಧಿಸಲು ಬಂದಿದ್ದಾರೆ ಅಂದನು. |
4. | ಸ್ತ್ರೀಯು ಆ ಇಬ್ಬರನ್ನು ಅಡಗಿ ಸಿಟ್ಟು--ನನ್ನ ಬಳಿಗೆ ಮನುಷ್ಯರು ಬಂದಿದ್ದರು; ಆದರೆ ನಾನು ಅವರನ್ನು ಯಾವ ಕಡೆಯವರೆಂದು ತಿಳಿಯದೆ ಇದ್ದೆನು. |
5. | ಬಾಗಲನ್ನು ಮುಚ್ಚುವ ವೇಳೆಯಲ್ಲಿ ಆ ಮನುಷ್ಯರು ಕತ್ತಲೆಯಲ್ಲಿ ಹೊರಟುಹೋದರು. ಅವರು ಎಲ್ಲಿ ಹೋದರೋ ನಾನು ಅರಿಯೆ; ಅವರನ್ನು ಬೇಗ ಹಿಂದಟ್ಟಿರಿ; ನಿಮಗೆ ಸಿಕ್ಕುವರು ಅಂದಳು. |
6. | ಆದರೆ ಆಕೆಯು ಅವರನ್ನು ಮೇಲೆ ಏರಿಸಿ ಮಾಳಿಗೆಯ ಮೇಲೆ ಸಾಲಾಗಿ ಇಟ್ಟಿದ್ದ ಸಣಬಿನೊಳಗೆ ಬಚ್ಚಿಟ್ಟಳು. |
7. | ಆ ಮನುಷ್ಯರು ಯೊರ್ದನಿಗೆ ಹೋಗುವ ಹಾದಿಯಲ್ಲಿ ನದಿಯ ರೇವುಗಳ ವರೆಗೂ ಅವರನ್ನು ಹಿಂದಟ್ಟಿದರು. ಅವರನ್ನು ಹಿಂದಟ್ಟುವವರು ಹೊರಟುಹೋದ ಕೂಡಲೆ ಹೆಬ್ಬಾಗಲನ್ನು ಮುಚ್ಚಿದರು. |
8. | ಆದರೆ ಈ ಮನುಷ್ಯರು ಮಲಗುವದಕ್ಕಿಂತ ಮುಂಚೆ ಆಕೆಯು ಮಾಳಿಗೆಯ ಮೇಲಕ್ಕೇರಿ ಅವರ ಬಳಿಗೆ ಬಂದು ಅವರಿಗೆ-- |
9. | ಕರ್ತನು ನಿಮಗೆ ದೇಶವನ್ನು ಕೊಟ್ಟಿದ್ದಾನೆಂದೂ ನಿಮ್ಮ ನಿಮಿತ್ತ ನಮಗೆ ಮಹಾಭೀತಿ ಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿ ಗಳೆಲ್ಲರು ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು. |
10. | ನೀವು ಐಗುಪ್ತದಿಂದ ಹೊರಡುವಾಗ ಕರ್ತನು ನಿಮಗೋಸ್ಕರ ಕೆಂಪು ಸಮುದ್ರದ ನೀರನ್ನು ಬತ್ತಿಹೋಗ ಮಾಡಿದ್ದನ್ನೂ ಯೊರ್ದನಿಗೆ ಆಚೆಯಲ್ಲಿದ್ದ ಅಮೋರಿ ಯರ ಇಬ್ಬರು ಅರಸುಗಳಾದ ಸೀಹೋನನನ್ನು ಓಗನನ್ನು ನೀವು ಸಂಪೂರ್ಣ ನಿರ್ಮೂಲ ಮಾಡಿದ್ದನ್ನೂ ನಾವು ಕೇಳಿದ್ದೇವೆ. |
11. | ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕರಗಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ಯಾಕಂದರೆ ನಿಮ್ಮ ದೇವರಾದ ಕರ್ತನೇ ಮೇಲಿರುವ ಆಕಾಶದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾನೆ. |
12. | ಈಗ ನಾನು ನಿಮಗೆ ದಯ ತೋರಿಸಿದ್ದರಿಂದ ನೀವು ನನಗೆ ಮತ್ತು ನನ್ನ ತಂದೆಯ ಮನೆಗೆ ದಯತೋರಿಸಬೇಕು. ನನಗೆ ಸತ್ಯವಾದ ಗುರುತನ್ನು ಕೊಡಬೇಕು. |
13. | ನನ್ನ ತಂದೆತಾಯಿಯನ್ನೂ ಸಹೋದರ ಸಹೋದರಿಯರನ್ನೂ ಅವರಿಗೆ ಇರುವದೆ ಲ್ಲವನ್ನೂ ಜೀವದಿಂದಿರಿಸಿ ನಮ್ಮ ಪ್ರಾಣಗಳನ್ನು ಸಾವಿ ನಿಂದ ಉಳಿಸುವದಾಗಿ ಕರ್ತನ ಮೇಲೆ ಪ್ರಮಾಣ ಮಾಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ ಅಂದಳು. |
14. | ಆ ಮನುಷ್ಯರು ಆಕೆಗೆ--ನೀನು ಈ ನಮ್ಮ ಕಾರ್ಯವನ್ನು ಬಹಿರಂಗಮಾಡದೆ ಇದ್ದರೆ ನಮ್ಮ ಪ್ರಾಣವು ನಿಮಗೋಸ್ಕರ ಇರುವದು. ಕರ್ತನು ನಮಗೆ ಈ ದೇಶವನ್ನು ಕೊಟ್ಟಾಗ ಸತ್ಯದಿಂದಲೂ ದಯ ದಿಂದಲೂ ನಡೆದುಕೊಳ್ಳುವೆವು ಅಂದರು. |
15. | ಆಗ ಅವರನ್ನು ಹಗ್ಗದಿಂದ ಕಿಟಿಕಿಯ ಮೂಲಕ ಇಳಿಸಿ ಬಿಟ್ಟಳು. ಯಾಕಂದರೆ ಆಕೆಯ ಮನೆಯು ಪಟ್ಟಣದ ಗೋಡೆಯ ಮೇಲೆ ಇತ್ತು. ಗೋಡೆಯ ಮೇಲೆ ಆಕೆಯು ವಾಸವಾಗಿದ್ದಳು. |
16. | ನಿಮ್ಮನ್ನು ಹಿಂದಟ್ಟುವವರು ನಿಮಗೆ ಅಡ್ಡಬಾರದ ಹಾಗೆ ನೀವು ಬೆಟ್ಟಕ್ಕೆ ಹೋಗಿ ಅವರು ತಿರಿಗಿ ಬರುವ ವರೆಗೂ ಅಲ್ಲಿ ಮೂರು ದಿವಸ ಅಡಗಿ ಕೊಂಡಿದ್ದು ತರುವಾಯ ನಿಮ್ಮ ಮಾರ್ಗವಾಗಿ ಹೋಗಿರಿ ಅಂದಳು. |
17. | ಆಗ ಆ ಮನುಷ್ಯರು ಆಕೆಗೆನೀನು ನಮಗೆ ಇಟ್ಟ ನಿನ್ನ ಆಣೆಯ ನಿಮಿತ್ತ ನಾವು ನಿರಪರಾಧಿಗಳಾಗಿರಬೇಕು. |
18. | ಇಗೋ, ನಾವು ದೇಶ ದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಕಿಟಿಕಿಯಿಂದ ಇಳಿಯಬಿಟ್ಟ ಈ ಕೆಂಪು ನೂಲಿನ ದಾರವನ್ನು ಕಟ್ಟಿ ನಿನ್ನ ತಂದೆತಾಯಿಯನ್ನೂ ಸಹೋದರರನ್ನೂ ನಿನ್ನ ತಂದೆಯ ಮನೆಯವರೆಲ್ಲರನ್ನೂ ನಿನ್ನ ಮನೆಯಲ್ಲಿ ಕೂಡಿಸಿಕೊಳ್ಳಬೇಕು. |
19. | ಯಾವನಾದರೂ ನಿನ್ನ ಮನೆಯ ಬಾಗಲಿಂದ ಹೊರಟು ಬೀದಿಗೆ ಬಂದರೆ ಅವನ ರಕ್ತವು ಅವನ ತಲೆಯಮೇಲೆ ಇರುವದು. ನಾವು ನಿರಪರಾಧಿಗಳಾಗಿರುವೆವು. ಆದರೆ ನಿನ್ನ ಸಂಗಡ ಮನೆಯಲ್ಲಿ ಇರುವ ಯಾವನ ಮೇಲಾದರೂ ಕೈ ಹಾಕಲ್ಪಟ್ಟರೆ ಅವನ ರಕ್ತದ ಅಪರಾಧವು ನಮ್ಮ ತಲೆಯ ಮೇಲೆ ಇರುವದು. |
20. | ಇದಲ್ಲದೆ ಈ ನಮ್ಮ ಕಾರ್ಯ ವನ್ನು ತಿಳಿಸಿದರೆ ನೀನು ನಮಗೆ ಇಟ್ಟ ಆಣೆಗೆ ನಾವು ಬಿಡುಗಡೆಯಾಗಿರುವೆವು ಅಂದರು. |
21. | ಅದಕ್ಕೆ ಆಕೆಯು--ನಿಮ್ಮ ಮಾತುಗಳ ಪ್ರಕಾರವೇ ಆಗಲಿ ಎಂದು ಹೇಳಿ ಅವರನ್ನು ಕಳುಹಿಸಿಬಿಟ್ಟಳು; ಅವರು ಹೋದಾಗ ಆ ಕೆಂಪು ನೂಲಿನ ದಾರವನ್ನು ಕಿಟಿಕಿಯಲ್ಲಿ ಕಟ್ಟಿದಳು. |
22. | ಅವರು ಹೋಗಿ ಬೆಟ್ಟಕ್ಕೆ ಸೇರಿ ಹಿಂದಟ್ಟುವವರು ತಿರಿಗಿ ಬರುವ ಪರಿಯಂತರ ಮೂರು ದಿವಸ ಅಲ್ಲೇ ಇದ್ದರು. ಹಿಂದಟ್ಟುವವರು ಮಾರ್ಗದಲ್ಲೆಲ್ಲಾ ಅವ ರನ್ನು ಹುಡುಕಿ ಕಾಣದೆ ಹೋದರು. |
23. | ಆ ಇಬ್ಬರು ಮನುಷ್ಯರು ಹಿಂತಿರುಗಿಕೊಂಡು ಬೆಟ್ಟದಿಂದ ಇಳಿದು ನದಿಯನ್ನು ದಾಟಿ ನೂನನ ಮಗನಾದ ಯೆಹೋಶು ವನ ಬಳಿಗೆ ಬಂದು ತಮಗೆ ಸಂಭವಿಸಿದ್ದನ್ನೆಲ್ಲಾ ಅವನಿಗೆ ವಿವರಿಸಿದರು. |
24. | ಅವರು ಯೆಹೋಶುವನಿಗೆ--ನಿಶ್ಚಯ ವಾಗಿ ಕರ್ತನು ಆ ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು. ದೇಶದ ನಿವಾಸಿಗಳೆಲ್ಲರು ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ ಎಂದು ಹೇಳಿದರು. |
← Joshua (2/24) → |