← Joshua (23/24) → |
1. | ಕರ್ತನು ಇಸ್ರಾಯೇಲನ್ನು ಸುತ್ತಲಿರುವ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಕೊಟ್ಟ ಬಹಳ ದಿನಗಳ ತರುವಾಯ ಯೆಹೋಶುವನ ದಿನಗಳು ತುಂಬಿ ವೃದ್ಧನಾದನು. |
2. | ಅವನು ಸಮಸ್ತ ಇಸ್ರಾಯೇಲ್ಯರನ್ನೂ ಅವರ ಹಿರಿಯರನ್ನೂ ಮುಖ್ಯ ಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ಕರಿಸಿ ಅವರಿಗೆ--ನಾನು ವೃದ್ಧನಾಗಿ ದಿನಗಳು ತುಂಬಿ ದವನಾಗಿದ್ದೇನೆ. |
3. | ನಿಮ್ಮ ದೇವರಾದ ಕರ್ತನು ನಿಮ ಗೋಸ್ಕರ ಈ ಸಕಲ ಜನಾಂಗಗಳಿಗೆ ಮಾಡಿ ದ್ದೆಲ್ಲವನ್ನೂ ನೋಡಿದ್ದೀರಿ; ನಿಮಗೋಸ್ಕರವಾಗಿ ಯುದ್ಧ ಮಾಡಿದಾತನು ನಿಮ್ಮ ದೇವರಾದ ಕರ್ತನು. |
4. | ಇಗೋ, ನಾನು ಯೊರ್ದನ್ ಮೊದಲುಗೊಂಡು ಪಶ್ಚಿಮಕ್ಕಿರುವ ದೊಡ್ಡ ಸಮುದ್ರದ ವರೆಗೂ ಜನಾಂಗಗಳನ್ನು ಕಡಿದು ಉಳಿದ ಸಕಲ ಜನಾಂಗಗಳ ದೇಶಗಳನ್ನು ನಿಮ್ಮ ಗೋತ್ರಗಳಿಗೆ ಚೀಟು ಹಾಕಿ ನಿಮಗೆ ಹಂಚಿಕೊಟ್ಟೆನು. |
5. | ಇದಲ್ಲದೆ ನಿಮ್ಮ ದೇವ ರಾದ ಕರ್ತನು ಅವರನ್ನು ನಿಮ್ಮ ಮುಂದೆ ತಳ್ಳಿಬಿಟ್ಟು ನಿಮ್ಮ ಕಣ್ಣೆದುರಿನಿಂದ ಅವರನ್ನು ಹೊರಡಿಸಿಬಿಡುವನು. ಕರ್ತನು ನಿಮಗೆ ವಾಗ್ದಾನಮಾಡಿದ ಹಾಗೆಯೇ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. |
6. | ಈಗ ನೀವು ಮೋಶೆಯ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನು ಕೈಕೊಂಡು ಬಹು ಧೈರ್ಯದಿಂದ ಮಾಡುವ ಹಾಗೆ ಅದನ್ನು ಬಿಟ್ಟು ಬಲಗಡೆಗಾದರೂ ಎಡಗಡೆಗಾದರೂ ತಿರುಗದೆ |
7. | ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರದೆ ಅವರ ದೇವರುಗಳ ಹೆಸರುಗಳನ್ನು ಸ್ಮರಿಸದೆ ಅವುಗಳ ಮೇಲೆ ಆಣೆ ಇಡದೆ ನೀವು ಅವುಗಳಿಗೆ ಸೇವೆಮಾಡದೆ ಅಡ್ಡಬೀಳದೆ ಇರುವ ಹಾಗೆ ಬಲ ಗೊಂಡು |
8. | ಈ ದಿನದ ವರೆಗೂ ಮಾಡಿದ ಹಾಗೆಯೇ ನಿಮ್ಮ ದೇವರಾದ ಕರ್ತನನ್ನು ಅಂಟಿಕೊಂಡಿರ್ರಿ. |
9. | ಕರ್ತನು ನಿಮ್ಮ ಮುಂದೆ ಬಲವಾದ ದೊಡ್ಡ ಜನಾಂಗಗಳನ್ನು ಹೊರಡಿಸಿಬಿಟ್ಟನು. ಆದರೆ ನಿಮ್ಮ ಮುಂದೆ ಈ ವರೆಗೂ ಒಬ್ಬರಾದರೂ ನಿಲ್ಲಲಾರದೆ ಹೋದರು. |
10. | ನಿಮ್ಮಲ್ಲಿ ಇರುವ ಒಬ್ಬನು ಸಾವಿರ ಮಂದಿಯನ್ನು ಹಿಂದಟ್ಟುವನು. ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಹಾಗೆ ಆತನೇ ನಿಮಗೋಸ್ಕರ ಯುದ್ಧಮಾಡುತ್ತಾನೆ. |
11. | ಆದದರಿಂದ ನೀವು ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡುವ ಹಾಗೆ ನೀವು ಬಹಳ ಎಚ್ಚರಿಕೆಯಾಗಿರ್ರಿ. |
12. | ನೀವು ಹಿಂತಿರಿಗಿ ಕೊಂಡು ನಿಮ್ಮಲ್ಲಿ ಉಳಿದಿರುವ ಈ ಜನಾಂಗ ಗಳಲ್ಲಿ ಸೇರಿಕೊಂಡು ಅವರಿಗೆ ಮದುವೆಮಾಡಿ ಕೊಟ್ಟರೆ ನೀವು ಅವರ ಬಳಿಗೂ ಅವರು ನಿಮ್ಮ ಬಳಿಗೂ ಪ್ರವೇಶಿಸಿದರೆ |
13. | ನಿಮ್ಮ ದೇವರಾದ ಕರ್ತನು ಇನ್ನು ಮೇಲೆ ಈ ಜನಾಂಗಗಳನ್ನು ನಿಮ್ಮ ಮುಂದೆ ಹೊರಡಿಸಿ ಬಿಡುವದಿಲ್ಲ. ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದೊಳಗಿಂದ ನೀವು ನಾಶವಾಗುವ ವರೆಗೂ ಅವರು ನಿಮಗೆ ಉರುಲಾಗಿಯೂ ಬೋನಾ ಗಿಯೂ ನಿಮ್ಮ ಪಕ್ಕೆಯಲ್ಲಿ ಶೂಲವಾಗಿಯೂ ನಿಮ್ಮ ಕಣ್ಣುಗಳಿಗೆ ಮುಳ್ಳುಗಳಾಗಿಯೂ ಇರುವರೆಂದು ನಿಶ್ಚಯ ವಾಗಿ ತಿಳಿದುಕೊಳ್ಳುವಿರಿ. |
14. | ಇಗೋ, ನಾನು ಇಂದು ಭೂಲೋಕದವರೆಲ್ಲರ ಮಾರ್ಗವಾಗಿ ಹೋಗುತ್ತೇನೆ. ನಿಮ್ಮ ದೇವರಾದ ಕರ್ತನು ನಿಮಗೋಸ್ಕರ ಹೇಳಿದ ಎಲ್ಲಾ ಒಳ್ಳೇ ಮಾತುಗಳಲ್ಲಿ ಒಂದು ಮಾತಾದರೂ ತಪ್ಪಲಿಲ್ಲವೆಂದು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಅರಿತಿದ್ದೀರಿ; ಅವು ಗಳಲ್ಲಿ ಒಂದು ಮಾತಾದರೂ ತಪ್ಪದೆ ಅವೆಲ್ಲಾ ನಿಮಗೆ ಸಂಭವಿಸಿದವು. |
15. | ಈಗ ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಒಳ್ಳೇ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ ಹಾಗೆಯೇ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನು ನೀವು ವಿಾರಿ, ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಕರ್ತನು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವನು. |
16. | ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು. |
← Joshua (23/24) → |