← Joshua (7/24) → |
1. | ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಈ ಕಾರಣದಿಂದ ಇಸ್ರಾಯೇಲ್ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್ ಮಕ್ಕಳ ಮೇಲೆ ಉರಿಯಹತ್ತಿತ್ತು. |
2. | ಆಗ ಯೆಹೋಶುವನು ಅವರಿಗೆ--ನೀವು ದೇಶ ವನ್ನು ಪಾಳತಿ ನೋಡಿ ಬನ್ನಿರಿ ಎಂದು ಹೇಳಿ ಯೆರಿಕೋ ವಿನಿಂದ ಮನುಷ್ಯರನ್ನು ಬೇತೇಲಿಗೆ ಪೂರ್ವಕಡೆಯಾದ ಬೇತಾವೆನಿನ ಬಳಿಯಲ್ಲಿರುವ ಆಯಿಗೆ ಕಳುಹಿಸಿದನು. ಆಗ ಅವರು ಹೋಗಿ ಆಯಿಯನ್ನು ಪಾಳತಿನೋಡಿ |
3. | ಯೆಹೋಶುವನ ಬಳಿಗೆ ತಿರಿಗಿ ಬಂದು ಅವನಿಗೆ--ಜನರೆಲ್ಲರೂ ಏರಿಹೋಗದೆ ಇರಲಿ; ಆಯಿಯನ್ನು ಹೊಡೆಯುವದಕ್ಕೆ ಎರಡು ಅಥವಾ ಮೂರು ಸಾವಿರ ಜನರು ಮಾತ್ರವೇ ಹೋಗಲಿ; ಅಲ್ಲಿಗೆ ಹೋಗುವ ಜನರೆಲ್ಲರನ್ನೂ ದಣಿಸಬೇಡ; ಯಾಕಂದರೆ ಸ್ವಲ್ಪ ಜನರು ಮಾತ್ರ ಇದ್ದಾರೆ ಅಂದರು. |
4. | ಹಾಗೆಯೇ ಜನರಲ್ಲಿ ಹೆಚ್ಚು ಕಡಿಮೆ ಮೂರುಸಾವಿರ ಮಂದಿ ಅಲ್ಲಿಗೆ ಹೋದರು; ಆದರೆ ಅವರು ಆಯಿಯ ಮನುಷ್ಯರ ಮುಂದೆ ಓಡಿಹೋದರು. |
5. | ಆಯಿ ಮನುಷ್ಯರು ಇವರಲ್ಲಿ ಹೆಚ್ಚು ಕಡಿಮೆ ಮೂವತ್ತಾರು ಮಂದಿಯನ್ನು ಹೊಡೆದು ಹಾಕಿದರು. ಬಾಗಲಿನಿಂದ ಪ್ರಾರಂಭಿಸಿ ಷೆಬಾರಿಮಿನ ವರೆಗೂ ಅವರನ್ನು ಹಿಂದಟ್ಟಿ ಇಳಿದು ಹೋಗುವ ವರೆಗೂ ಅವರನ್ನು ಹೊಡೆದರು. ಆದದ ರಿಂದ ಜನರ ಹೃದಯವು ಕರಗಿ ನೀರಿನಂತಾಯಿತು. |
6. | ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡು ತಾನೂ ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಾಯಂಕಾಲದ ವರೆಗೆ ಕರ್ತನ ಮಂಜೂಷದ ಮುಂದೆ ನೆಲದಮೇಲೆ ಬೋರಲು ಬಿದ್ದರು. |
7. | ಇದಲ್ಲದೆ ಯೆಹೋಶುವನು--ಅಯ್ಯೋ, ಓ ಕರ್ತನಾದ ದೇವರೇ, ನಮ್ಮನ್ನು ನಾಶಮಾಡುವ ಹಾಗೆ ಅಮೋರಿ ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕಾಗಿ ನೀನು ಈ ಜನರು ಯೊರ್ದನನ್ನು ದಾಟಮಾಡಿದ್ದೇನು? ನಮಗೆ ಇಷ್ಟೇ ಸಾಕೆಂದು ನಾವು ಯೊರ್ದನಿನ ಆಚೆಯಲ್ಲಿ ಇದ್ದರೆ ಒಳ್ಳೇದಾಗಿತ್ತು. |
8. | ಓ ಕರ್ತನೇ, ಈಗ ನಾನೇನು ಹೇಳಲಿ? ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಬೆನ್ನು ತಿರುಗಿಸಿದ್ದಾರಲ್ಲಾ. |
9. | ಯಾಕಂದರೆ ಕಾನಾನ್ಯರೂ ದೇಶ ವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿ ಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದು ಬಿಡುವರು; ಆಗ ನಿನ್ನ ಮಹತ್ತಾದ ಹೆಸರಿಗೆ ಏನು ಮಾಡುವಿ ಅಂದನು. |
10. | ಆಗ ಕರ್ತನು ಯೆಹೋಶುವನಿಗೆ--ನೀನು ಎದ್ದೇಳು; ನೀನು ಈ ಪ್ರಕಾರ ಬೋರಲು ಬಿದ್ದಿರುವ ದೇನು? |
11. | ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ. |
12. | ಆದದ ರಿಂದ ಇಸ್ರಾಯೇಲ್ ಮಕ್ಕಳು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನುಕೊಟ್ಟರು. ಯಾಕಂದರೆ ಅವರು ಶಾಪಕ್ಕೀಡಾದರು. ನೀವು ಶಾಪ ಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವದಿಲ್ಲ. |
13. | ನೀನು ಎದ್ದು ಜನರನ್ನು ಪರಿಶುದ್ಧ ಮಾಡಿ ಹೇಳ ಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ; ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು; ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವ ಪರಿಯಂತರ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ಇಸ್ರಾಯೇಲ್ ಕರ್ತನಾದ ದೇವರು ಹೇಳುತ್ತಾನೆ. |
14. | ಆದದರಿಂದ ಹೊತ್ತಾರೆಯಲ್ಲಿ ನಿಮ್ಮ ಗೋತ್ರಗಳ ಪ್ರಕಾರವೇ ಸೇರಿ ಬನ್ನಿರಿ. ಆಗ ಕರ್ತನು ಹಿಡಿಯುವ ಗೋತ್ರವು ಕುಟುಂಬದ ಪ್ರಕಾರ ವಾಗಿಯೂ ಕರ್ತನು ಹಿಡಿಯುವ ಕುಟುಂಬವು ಮನೆ ಮನೆಯಾಗಿಯೂ ಕರ್ತನು ಹಿಡಿಯುವ ಮನೆಯಲ್ಲಿ ಒಬ್ಬೊಬ್ಬರಾಗಿಯೂ ಸೇರಲಿ. |
15. | ಆಗ ಶಾಪಕ್ಕೀಡಾದ ದ್ದನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುವವನು ಕರ್ತನ ಒಡಂಬಡಿಕೆಯನ್ನು ವಿಾರಿ ಇಸ್ರಾಯೇಲಿ ನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲ್ಪಡಬೇಕು ಅಂದನು. |
16. | ಹೀಗೆಯೇ ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲನ್ನು ಗೋತ್ರಗೋತ್ರವಾಗಿ ಕರೆದಾಗ ಯೂದ ಗೋತ್ರವು ಹಿಡಿಯಲ್ಪಟ್ಟಿತು. |
17. | ಅವನು ಯೂದನ ಕುಟುಂಬವನ್ನು ಕರೆದಾಗ ಜೆರಹನ ಗೋತ್ರವು ಹಿಡಿಯಲ್ಪಟ್ಟಿತು. ಜೆರಹನ ಗೋತ್ರವನ್ನು ಹೆಸರು ಹೆಸರಾಗಿ ಕರೆದಾಗ ಜಬ್ದೀಯು ಹಿಡಿಯಲ್ಪಟ್ಟನು. |
18. | ಅವನ ಮನೆಯವರನ್ನು ಅವನು ಹೆಸರುಹೆಸರಾಗಿ ಕರೆದಾಗ ಯೂದನ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಹಿಡಿಯಲ್ಪಟ್ಟನು. |
19. | ಆಗ ಯೆಹೋಶುವನು ಆಕಾನನಿಗೆ--ನನ್ನ ಮಗನೇ, ನೀನು ಈಗ ಇಸ್ರಾ ಯೇಲಿನ ದೇವರಾದ ಕರ್ತನನ್ನು ಘನಪಡಿಸಿ ಆತನಿಗೆ ಅರಿಕೆಮಾಡು; ಏನು ಮಾಡಿದಿಯೋ ಅದನ್ನು ನನಗೆ ತಿಳಿಸು; ನನಗೆ ಮರೆಮಾಡಬೇಡ ಅಂದನು. |
20. | ಆಗ ಆಕಾನನು ಯೆಹೋಶುವನಿಗೆ ಪ್ರತ್ಯುತ್ತರವಾಗಿ--ನಿಜವಾಗಿ ನಾನು ಇಸ್ರಾಯೇಲ್ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ಇಂತಿಂಥವುಗಳನ್ನು ಮಾಡಿದ್ದೇನೆ. |
21. | ಏನಂದರೆ, ನಾನು ಕೊಳ್ಳೆಯಲ್ಲಿ ಬಾಬೆಲಿನ ಒಂದು ಒಳ್ಳೇ ನಿಲುವಂಗಿಯನ್ನೂ ಇನ್ನೂರು ಬೆಳ್ಳಿ ಶೇಕೆಲುಗಳನ್ನೂ ಐವತ್ತು ಶೇಕೆಲ್ ತೂಕವಾದ ಒಂದು ಬಂಗಾರದ ಗಟ್ಟಿಯನ್ನೂ ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು; ಇಗೋ, ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ; ಬೆಳ್ಳಿಯೂ ಅದರ ಕೆಳಗೆ ಇದೆ ಅಂದನು. |
22. | ಆಗ ಯೆಹೋಶುವನು ದೂತರನ್ನು ಕಳುಹಿಸಿದನು; ಅವರು ಡೇರೆಗಳಿಗೆ ಓಡಿದರು; ಇಗೋ, ಡೇರೆಯಲ್ಲಿ ಅವು ಬಚ್ಚಿಡಲ್ಪಟ್ಟಿದ್ದವು; ಬೆಳ್ಳಿಯು ಅದರ ಕೆಳಗೆ ಇತ್ತು. |
23. | ಅವರು ಅವುಗಳನ್ನು ಡೇರೆಯ ಮಧ್ಯದಿಂದ ತೆಗೆದುಕೊಂಡು ಯೆಹೋಶುವನ ಬಳಿಗೂ ಸಮಸ್ತ ಇಸ್ರಾಯೇಲ್ ಮಕ್ಕಳ ಬಳಿಗೂ ತಂದು ಕರ್ತನ ಮುಂದೆ ಇಟ್ಟರು. |
24. | ಆಗ ಯೆಹೋಶುವನೂ ಅವ ನೊಂದಿಗೆ ಇಸ್ರಾಯೇಲ್ಯರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಕುಮಾರರನ್ನೂ ಕುಮಾರ್ತೆಯ ರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ತಗ್ಗಿಗೆ ತಂದರು. |
25. | ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟು |
26. | ಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು. |
← Joshua (7/24) → |