Jude (1/1) |
1. | ಯೇಸು ಕ್ರಿಸ್ತನ ದಾಸನೂ ಯಾಕೋಬನ ಸಹೋ ದರನೂ ಆಗಿರುವ ಯೂದನು ತಂದೆಯಾದ ದೇವ ರಿಂದ ಪರಿಶುದ್ಧರಾದವರಿಗೂ ಯೇಸು ಕ್ರಿಸ್ತನಲ್ಲಿ ಕಾಪಾಡಲ್ಪಟ್ಟವರಿಗೂ ಕರೆಯಲ್ಪಟ್ಟವರಿಗೂ-- |
2. | ನಿಮಗೆ ಕರುಣೆಯೂ ಶಾಂತಿಯೂ ಪ್ರೀತಿಯೂ ಹೆಚ್ಚಾಗಲಿ. |
3. | ಪ್ರಿಯರೇ, ಹುದುವಾಗಿರುವ ರಕ್ಷಣೆಯ ವಿಷಯ ದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣ ಜಾಗ್ರತೆಯಿಂದ ಪ್ರಯತ್ನಮಾಡುತ್ತಿದ್ದಾಗ ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು. |
4. | ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ |
5. | ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು. |
6. | ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ. |
7. | ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ. |
8. | ಹಾಗೆಯೇ ಈ ದುಸ್ವಪ್ನದವರು ಶರೀರವನ್ನು ಮಲಿನ ಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆ ಮಾಡು ವವರೂ ಗೌರವವುಳ್ಳವರನ್ನು ದೂಷಿಸುವವರೂ ಆಗಿದ್ದಾರೆ. |
9. | ಆದರೂ ಪ್ರಧಾನ ದೇವದೂತನಾದ ಮಿಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ ಅವನು ಸೈತಾನನನ್ನು ದೂಷಿಸುವದಕ್ಕೆ ಧೈರ್ಯ ಗೊಳ್ಳದೆ--ಕರ್ತನು ನಿನ್ನನ್ನು ಗದರಿಸಲಿ ಅಂದನು. |
10. | ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ ಮತ್ತು ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ. |
11. | ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ! |
12. | ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ |
13. | ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು. |
14. | ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ--ಇಗೋ, ಕರ್ತನು ತನ್ನ ಹತ್ತು ಸಾವಿರ ಪರಿಶುದ್ಧರನ್ನು ಕೂಡಿಕೊಂಡು |
15. | ಎಲ್ಲರಿಗೆ ನ್ಯಾಯ ತೀರಿಸುವದಕ್ಕೂ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಆಡಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರಿಗೆ ಮನದಟ್ಟು ಮಾಡುವದಕ್ಕೂ ಬಂದನು ಎಂಬ ದಾಗಿ ಪ್ರವಾದಿಸಿದನು. |
16. | ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ. |
17. | ಪ್ರಿಯರೇ, ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ. |
18. | ಭಕ್ತಿಗೆ ವಿರುದ್ಧವಾದ ತಮ್ಮ ಆಶೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಇರುವರೆಂದು ಅವರು ನಿಮಗೆ ಹೇಳಿದರು. |
19. | ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ ಪ್ರಾಕೃತಮನುಷ್ಯರೂ ಆತ್ಮವಿಲ್ಲದವರೂ ಆಗಿದ್ದಾರೆ. |
20. | ಪ್ರಿಯರೇ, ನೀವಾ ದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯ ಮೇಲೆ ನಿಮ್ಮನ್ನು ನೀವೇ ಕಟ್ಟಿಕೊಂಡು ಪರಿಶುದ್ಧಾತ್ಮನಲ್ಲಿ ಪ್ರಾರ್ಥಿಸಿರಿ. |
21. | ನಿತ್ಯಜೀವಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕರುಣೆಗೋಸ್ಕರ ಎದುರು ನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ. |
22. | ತಾರತಮ್ಯ ನೋಡಿ ಕೆಲವರಿಗೆ ಕನಿಕರವನ್ನು ತೋರಿ ಸಿರಿ. |
23. | ಬೇರೆಯವರನ್ನು ಬೆಂಕಿಯಿಂದ ಎಳಕೊಂಡು ಭಯದಿಂದ ರಕ್ಷಿಸಿರಿ. ಶರೀರದಿಂದ ಮೈಲಿಗೆಯಾದ ಅಂಗಿಯನ್ನು ಹಗೆಮಾಡಿರಿ. |
24. | ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವ |
25. | ಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್. |
Jude (1/1) |