← Lamentations (3/5) → |
1. | ಆತನ ಕೋಪದ ಕೋಲಿನಿಂದ ಕಷ್ಟವನ್ನು ನೋಡಿದ ಮನುಷ್ಯನು ನಾನೇ. |
2. | ಆತನು ನನ್ನನ್ನು ಕರೆತಂದು ನಡಿಸಿದ್ದು ಕತ್ತಲೆಗೇ ಹೊರತು ಬೆಳಕಿಗಲ್ಲ. |
3. | ನಿಶ್ಚಯವಾಗಿ ಆತನು ನನಗೆ ವಿರೋಧ ವಾಗಿ ತಿರುಗಿದ್ದಾನೆ ದಿನವೆಲ್ಲಾ ತನ್ನ ಕೈಯನ್ನು ನನಗೆ ವಿರೋಧವಾಗಿ ತಿರುಗಿಸಿದ್ದಾನೆ. |
4. | ಆತನು ನನ್ನ ಮಾಂಸ ಚರ್ಮವನ್ನೂ ಎಲುಬುಗಳನ್ನೂ ಮುರಿದಿದ್ದಾನೆ. |
5. | ಆತನು ನನಗೆ ವಿರೋಧವಾಗಿ ಕಟ್ಟಿದ್ದಾನೆ, ವಿಷದಿಂದಲೂ ಸಂಕಟದಿಂದಲೂ ಸುತ್ತಿಕೊಂಡಿದ್ದಾನೆ. |
6. | ಆತನು ನನ್ನನ್ನು ಬಹು ಕಾಲದ ಹಿಂದೆ ಸತ್ತವರ ಹಾಗೆ ಕತ್ತಲೆಯ ಸ್ಥಳಗಳಲ್ಲಿ ಇರಿಸಿದ್ದಾನೆ. |
7. | ನಾನು ಹೊರಗೆ ಬಾರದ ಹಾಗೆ ಆತನು ನನ್ನ ಸುತ್ತಲೂ ಬೇಲಿ ಹಾಕಿದ್ದಾನೆ; ಆತನು ನನ್ನ ಸಂಕೋಲೆಯ ಭಾರವನ್ನು ಹೆಚ್ಚಿಸಿದ್ದಾನೆ. |
8. | ನಾನು ಮೊರೆಯಿಟ್ಟು ಕೂಗಿದರೂ ಆತನು ನನ್ನ ಪ್ರಾರ್ಥನೆ ಯನ್ನು ಲಾಲಿಸುವದಿಲ್ಲ. |
9. | ಕೆತ್ತಿದ ಕಲ್ಲಿನಿಂದ ನನ್ನ ಮಾರ್ಗಗಳನ್ನು ಮುಚ್ಚಿ ಆತನು ನನ್ನ ದಾರಿಗಳನ್ನು ಡೊಂಕು ಮಾಡಿದ್ದಾನೆ. |
10. | ಆತನು ನನಗೆ ಹೊಂಚುಹಾಕುವ ಕರಡಿಯ ಹಾಗೆಯೂ ಗುಪ್ತಸ್ಥಳಗಳಲ್ಲಿರುವ ಸಿಂಹದ ಹಾಗೆಯೂ ಇದ್ದಾನೆ. |
11. | ಆತನು ನನ್ನ ಮಾರ್ಗಗಳನ್ನು ತಪ್ಪಿಸಿ ನನ್ನನ್ನು ತುಂಡುಗಳನ್ನಾಗಿ ಕತ್ತರಿಸಿ ಹಾಳುಮಾಡಿದ್ದಾನೆ. |
12. | ಆತನು ತನ್ನ ಬಿಲ್ಲನ್ನು ಬಗ್ಗಿಸಿದ್ದಾನೆ ಮತ್ತು ನನ್ನನ್ನು ಬಾಣಕ್ಕೆ ಗುರಿಮಾಡಿದ್ದಾನೆ. |
13. | ಆತನು ತನ್ನ ಬತ್ತಳಿಕೆಯಲ್ಲಿನ ಬಾಣಗಳು ನನ್ನ ಅಂತರಂಗಗಳಲ್ಲಿ ತೂರಿಹೋಗುವ ಹಾಗೆ ಮಾಡಿ ದ್ದಾನೆ. |
14. | ನಾನು ನನ್ನ ಎಲ್ಲಾ ಜನರಿಗೆ ಹಾಸ್ಯವೂ ದಿನವೆಲ್ಲವೂ ಅವರ ಹಾಡಾಗಿಯೂ ಇದ್ದೇನೆ. |
15. | ಆತನು ನನ್ನನ್ನು ಕಹಿಯಿಂದ ತುಂಬಿಸಿ ಮಾಚಿ ಪತ್ರೆಯಿಂದ ನನ್ನನ್ನು ಅಮಲೇರಿಸಿದ್ದಾನೆ. |
16. | ಆತನು ನುರುಜು ಕಲ್ಲುಗಳಿಂದ ನನ್ನ ಹಲ್ಲುಗಳನ್ನು ಮುರಿದು ನನ್ನನ್ನು ಬೂದಿಯಿಂದ ಮುಚ್ಚಿದ್ದಾನೆ. |
17. | ನನ್ನ ಪ್ರಾಣವನ್ನು ಸಮಾಧಾನದಿಂದ ದೂರಮಾಡಿದ್ದಾನೆ; ನಾನು ಏಳಿಗೆಯನ್ನು ಮರೆತುಬಿಟ್ಟೆನು. |
18. | ನನ್ನ ಬಲವೂ ನಿರೀಕ್ಷೆಯೂ ಕರ್ತನಿಂದ ನಾಶವಾದವೆಂದು ಹೇಳಿ |
19. | ನನ್ನ ಸಂಕಟವನ್ನು ಹಿಂಸೆಯನ್ನು ಮಾಚಿಪತ್ರೆಯನ್ನು ವಿಷವನ್ನು ಇವುಗಳನ್ನು ಜ್ಞಾಪಕಮಾಡಿಕೊಂಡೆನು. |
20. | ನನ್ನ ಪ್ರಾಣವು ಇನ್ನೂ ಅವುಗಳನ್ನು ಜ್ಞಾಪಿಸಿ ಕೊಳ್ಳುತ್ತಾ ನನ್ನೊಳಗೆ ಕುಂದಿಹೋಗಿದೆ. |
21. | ಇದನ್ನು ನಾನು ನನ್ನ ಮನಸ್ಸಿಗೆ ತರುತ್ತೇನೆ, ಆದದರಿಂದ ನನಗೆ ನಿರೀಕ್ಷೆ ಇದೆ. |
22. | ಕರ್ತನ ಕನಿಕರಗಳಿಂದಲೇ ನಾವು ನಾಶವಾಗ ಲಿಲ್ಲ, ಆತನ ಅಂತಃಕರುಣೆಯು ಮುಗಿಯುವದಿಲ್ಲ. |
23. | ಅವು ಪ್ರತಿ ಮುಂಜಾನೆಯೂ ಹೊಸದಾಗಿರುವವು; ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು. |
24. | ಕರ್ತನೇ ನನ್ನ ಪಾಲೆಂದು ನನ್ನ ಪ್ರಾಣವು ಹೇಳುತ್ತದೆ, ಆದದರಿಂದ ನಾನು ಆತನಲ್ಲಿ ನಿರೀಕ್ಷೆ ಇಡುತ್ತೇನೆ. |
25. | ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ. |
26. | ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು. |
27. | ತನ್ನ ಯೌವನದಲ್ಲಿ ನೊಗವನ್ನು ಹೊರುವದು ಅವನಿಗೆ ಒಳ್ಳೆಯದು. |
28. | ಅವನು ಒಂಟಿಯಾಗಿ ಕೂತುಕೊಂಡು ಮೌನ ವಾಗಿರುವನು, ಯಾಕಂದರೆ ಆತನೇ ಅದನ್ನು ಅವನ ಮೇಲೆ ಹೊರಿಸಿದ್ದಾನೆ. |
29. | ಒಂದು ವೇಳೆ ಅಲ್ಲಿ ನಿರೀಕ್ಷೆ ಇರುವದಾದರೆ ಅವನು ತನ್ನ ಬಾಯಿ ಯನ್ನು ದೂಳಿನಲ್ಲಿ ಇಡುತ್ತಾನೆ. |
30. | ಆತನು ತನ್ನನ್ನು ಹೊಡೆಯುವವನಿಗೆ ಕೆನ್ನೆ ಕೊಡುತ್ತಾನೆ ಆತನು ನಿಂದೆಯಿಂದಲೇ ತುಂಬಿದ್ದಾನೆ. |
31. | ಕರ್ತನು ಎಂದೆಂದಿಗೂ ತಳ್ಳಿಬಿಡುವದಿಲ್ಲ; |
32. | ಆತನು ದುಃಖಪಡಿಸಿದರೂ ತನ್ನ ಕೃಪಾತಿಶಯದಿಂದ ಕನಿಕರಿಸುವನು. |
33. | ಆತನು ಇಷ್ಟಪೂರ್ವಕವಾಗಿ ಮನುಷ್ಯರ ಮಕ್ಕಳನ್ನು ಬಾಧಿಸುವದು ಇಲ್ಲ ದುಃಖಿಸು ವದೂ ಇಲ್ಲ. |
34. | ಭೂಲೋಕದ ಸೆರೆಯವರನ್ನೆಲ್ಲಾ ಕಾಲುಗಳ ಕೆಳಗೆ ತುಳಿಯುವದನ್ನೂ |
35. | ಮಹೋನ್ನತನ ಸನ್ನಿಧಿಯಲ್ಲಿ ಮನುಷ್ಯನ ನ್ಯಾಯವನ್ನು ತಿರುಗಿಸು ವದನ್ನೂ |
36. | ಮನುಷ್ಯನನ್ನು ಅವನ ವ್ಯಾಜ್ಯದಲ್ಲಿ ಕೆಡಿಸುವದನ್ನೂ ಕರ್ತನು ಮೆಚ್ಚುವದಿಲ್ಲ. |
37. | ಕರ್ತನು ಆಜ್ಞಾಪಿಸದಿರು ವಾಗ ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು? |
38. | ಮಹೋನ್ನತನ ಬಾಯಿಂದ ಕೆಟ್ಟದ್ದೂ ಒಳ್ಳೆಯದೂ ಹೊರಡುವದಿಲ್ಲವೇ? |
39. | ಬದುಕುವ ಮನುಷ್ಯನು ತನ್ನ ಪಾಪಗಳ ಶಿಕ್ಷೆಗಾಗಿ ಗುಣು ಗುಟ್ಟುವದೇಕೆ? |
40. | ನಾವು ನಮ್ಮ ಮಾರ್ಗಗಳನ್ನು ಶೋಧಿಸಿ ಪರೀಕ್ಷಿಸಿ ಕೊಂಡು ಮತ್ತೆ ಕರ್ತನ ಬಳಿಗೆ ತಿರುಗಿಕೊಳ್ಳೋಣ. |
41. | ನಮ್ಮ ಹೃದಯವನ್ನು ಕೈಗಳೊಂದಿಗೆ ಪರಲೋಕದ ದೇವರ ಕಡೆಗೆ ಎತ್ತಿಕೊಳ್ಳೋಣ. |
42. | ನಾವು ದ್ರೋಹಮಾಡಿ ಎದುರು ಬಿದ್ದಿದ್ದೇವೆ; ನೀನು ಮನ್ನಿಸಲಿಲ್ಲ. |
43. | ಕೋಪದಲ್ಲಿ ನಮ್ಮನ್ನು ಮುಚ್ಚಿ, ಹಿಂಸಿಸಿದ್ದೀ; ಕನಿಕರಿಸದೆ ಕೊಂದುಹಾಕಿರುವಿ. |
44. | ನಮ್ಮ ಪ್ರಾರ್ಥ ನೆಯು ನಿನಗೆ ಮುಟ್ಟದಂತೆ ನಿನ್ನನ್ನು ಮೇಘದಿಂದ ಮುಚ್ಚಿ ಕೊಂಡಿದ್ದೀ. |
45. | ನೀನು ನಮ್ಮನ್ನು ಜನರ ಮಧ್ಯದಲ್ಲಿ ಕಲ್ಮಷವನ್ನಾಗಿಯೂ ಕಸವನ್ನಾಗಿಯೂ ಮಾಡಿದ್ದೀ. |
46. | ನಮ್ಮ ಎಲ್ಲಾ ಶತ್ರುಗಳು ನಮಗೆ ವಿರುದ್ಧವಾಗಿ ಅವರ ಬಾಯಿಗಳನ್ನು ತೆರೆದಿದ್ದಾರೆ. |
47. | ಭಯವೂ ಬೋನೂ ನಾಶನವೂ ಸಂಹಾರವೂ ನಮ್ಮ ಮೇಲೆ ಬಂದಿವೆ. |
48. | ನನ್ನ ಜನರ ಕುಮಾರಿಯ ನಾಶನದ ನಿಮಿತ್ತವಾಗಿ ನನ್ನ ಕಣ್ಣಿನಿಂದ ನೀರು ನದಿಯಾಗಿ ಹರಿದುಹೋಗುತ್ತದೆ. |
49. | ಕರ್ತನು ಕಟಾಕ್ಷಿಸಿ ಪರಲೋಕದಿಂದ ನೋಡುವ ತನಕ ನೇತ್ರವು ಎಡೆಬಿಡದೆ ಕಣ್ಣೀರು ಸುರಿಸುತ್ತದೆ; |
50. | ವಿಶ್ರಮಿಸಿಕೊಳ್ಳುವದೂ ಇಲ್ಲ. |
51. | ನನ್ನ ನಗರದ ಕುಮಾರ್ತೆಯರೆಲ್ಲರ ನಿಮಿತ್ತವಾಗಿ ನನ್ನ ಕಣ್ಣು ನನ್ನ ಹೃದಯವನ್ನು ಪೀಡಿಸಿದೆ. |
52. | ನನ್ನ ಶತ್ರುಗಳು ಕಾರಣವಿಲ್ಲದೆ ಪಕ್ಷಿಯಂತೆ ನನ್ನನ್ನು ಕಠೋರವಾಗಿ ಹಿಂದಟ್ಟಿ ಬೇಟೆಯಾಡಿದರು. |
53. | ಅವರು ಕಾರಾಗೃಹದಲ್ಲಿ ನನ್ನ ಜೀವವನ್ನು ತೆಗೆದುಹಾಕಿ ನನ್ನ ಮೇಲೆ ಕಲ್ಲನ್ನು ಹಾಕಿದ್ದಾರೆ. |
54. | ಪ್ರವಾಹವು ನನ ತಲೆಯ ಮೇಲೆ ಹರಿಯಿತು; ಆಗ--ನಾನು ಸತ್ತೆನು ಅಂದುಕೊಂಡೆನು. |
55. | ಓ ಕರ್ತನೇ, ನಾನು ಆಳವಾದ ಕಾರಾಗೃಹದಿಂದ ನಿನ್ನ ಹೆಸರನ್ನು ಎತ್ತಿ ಬೇಡಿಕೊಂಡೆನು. |
56. | ನೀನು ನನ್ನ ಸ್ವರವನ್ನು ಕೇಳಿದ್ದೀ; ನನ್ನ ಶ್ವಾಸಕ್ಕೂ ನನ್ನ ಕೂಗಿಗೂ ನಿನ್ನ ಕಿವಿಯನ್ನು ಮರೆಮಾಡಲಿಲ್ಲ. |
57. | ನಾನು ನಿನ್ನನ್ನು ಕರೆದ ದಿನದಲ್ಲಿ ನೀನು ಸವಿಾಪಕ್ಕೆ ಬಂದು--ಭಯಪಡ ಬೇಡ ಎಂದು ಹೇಳಿದಿ. |
58. | ಓ ಕರ್ತನೇ, ನೀನು ನನ್ನ ಪ್ರಾಣದ ವ್ಯಾಜ್ಯಗಳನ್ನು ನಡಿಸಿ ನನ್ನ ಜೀವವನ್ನು ವಿಮೋಚಿಸಿದ್ದೀ. |
59. | ಓ ಕರ್ತನೇ, ನೀನು ನನ್ನ ಅನ್ಯಾಯವನ್ನು ನೋಡಿದ್ದೀ, ನನಗೆ ನ್ಯಾಯವನ್ನು ತೀರಿಸು. |
60. | ಅವರ ಎಲ್ಲಾ ಪ್ರತೀಕಾರವನ್ನೂ ನನಗೆ ವಿರುದ್ಧವಾದ ಅವರ ಎಲ್ಲಾ ಕಲ್ಪನೆಗಳನ್ನೂ ನೀನು ನೋಡಿರುವಿ. |
61. | ಓ ಕರ್ತನೇ, ಅವರ ನಿಂದೆಯನ್ನೂ ನನಗೆ ವಿರುದ್ಧವಾದ ಅವರ ಎಲ್ಲಾ ಕಲ್ಪನೆಗಳನ್ನೂ ನನಗೆ ವಿರುದ್ಧವಾಗಿ ಹೇಳುವವರ ತುಟಿಗಳನ್ನೂ |
62. | ದಿನವಿಡೀ ನನಗೆ ವಿರುದ್ಧವಾದ ಅವರ ದುರಾಲೋಚನೆಯನ್ನೂ ಕೇಳಿರುವಿ. |
63. | ಅವರು ಕೂಡ್ರುವದನ್ನೂ ಏಳುವದನ್ನೂ ನೋಡು; ನಾನೇ ಅವರಿಗೆ ಸಂಗೀತವಾಗಿದ್ದೇನೆ. |
64. | ಓ ಕರ್ತನೇ, ಅವರ ಕೈಕೆಲಸಗಳ ಪ್ರಕಾರ ಅವರಿಗೆ ಪ್ರತಿಫಲವನ್ನು ಕೊಡು. |
65. | ಅವರಿಗೆ ದುಃಖಕರವಾದ ಹೃದಯವನ್ನೂ ನಿನ್ನ ಶಾಪವನ್ನೂ ಕೊಡು. |
66. | ಕರ್ತನೇ ಆಕಾಶದ ಕೆಳಗಿರುವವರನ್ನು ನಿನ್ನ ಕೋಪದಿಂದ ಹಿಂಸಿಸಿ ಹಾಳುಮಾಡು. |
← Lamentations (3/5) → |