← Leviticus (11/27) → |
1. | ಕರ್ತನು ಮೋಶೆ ಆರೋನರೊಂದಿಗೆ ಮಾತನಾಡಿ ಅವರಿಗೆ ಹೇಳಿದ್ದೇನಂದರೆ |
2. | ಇಸ್ರಾಯೇಲನ ಮಕ್ಕಳೊಂದಿಗೆ ಮಾತನಾಡಿ ಹೀಗೆ ಹೇಳಬೇಕು--ಭೂಮಿಯ ಮೇಲೆ ಇರುವ ಎಲ್ಲಾ ಪಶುಗಳಲ್ಲಿ ನೀವು ತಿನ್ನಬೇಕಾದವುಗಳು ಇವೇ: |
3. | ಪಶುಗಳಲ್ಲಿ ಕಾಲ್ಗೊರಸು ಸೀಳಿದ್ದಾಗಿದ್ದು ಮೇವನ್ನು ಮೆಲುಕಾಡಿಸುವದನ್ನು ನೀವು ತಿನ್ನಬೇಕು. |
4. | ಮೇವನ್ನು ಮೆಲುಕಾಡಿಸದ ಇಲ್ಲವೆ ಗೊರಸು ಸೀಳದಿರುವ ಯಾವದನ್ನೂ ನೀವು ತಿನ್ನಬಾರದು. ಒಂಟೆಯು ಮೇವನ್ನು ಮೆಲುಕಾಡಿಸುವದಾದರೂ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧವಾಗಿದೆ. |
5. | ಬೆಟ್ಟದ ಮೊಲವು ಮೇವನ್ನು ಮೆಲುಕು ಹಾಕುವದಾದರೂ ಅದರ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧ ವಾಗಿರುವದು. |
6. | ಮೊಲವು ಮೆಲುಕು ಹಾಕುವ ದಾದರೂ ಅದರ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧವಾಗಿರುವದು. |
7. | ಹಂದಿಯ ಗೊರಸು ಸೀಳಲ್ಪಟ್ಟಿದ್ದರೂ ಅದು ಮೇವನ್ನು ಮೆಲುಕು ಹಾಕು ವದಿಲ್ಲ; ಅದು ನಿಮಗೆ ಅಶುದ್ಧವಾಗಿರುವದು. |
8. | ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಶವಗಳನ್ನು ನೀವು ಮುಟ್ಟಬಾರದು; ಅವು ನಿಮಗೆ ಅಶುದ್ಧವಾಗಿವೆ. |
9. | ನೀರೊಳಗಿರುವ ಇವುಗಳನ್ನು ನೀವು ತಿನ್ನಬಹುದು: ಸಮುದ್ರದಲ್ಲಿಯೂ ನದಿಯಲ್ಲಿರುವ ನೀರಿನಲ್ಲಿಯೂ ಈಜು ರೆಕ್ಕೆಗಳ್ಳಿದ್ದು ಪೊರೆಯಿರುವವುಗಳನ್ನು ತಿನ್ನಬೇಕು. |
10. | ಸಮುದ್ರಗಳಲ್ಲಿಯೂ ನದಿಗಳಲ್ಲಿಯೂ ನೀರೊಳಗೆ ಚಲಿಸುವವುಗಳಾಗಿದ್ದು ಮತ್ತು ಜೀವಿಸುವ ಎಲ್ಲವುಗಳಲ್ಲಿ ಈಜು ರೆಕ್ಕೆಯೂ ಪೊರೆಯಿಲ್ಲದವುಗಳೂ ನಿಮಗೆ ಅಶುದ್ಧವಾಗಿರುವವು. |
11. | ಅವು ನಿಮಗೆ ಅಶುದ್ಧ ವಾಗಿಯೇ ಇರುವವು; ನೀವು ಅವುಗಳ ಮಾಂಸವನ್ನು ತಿನ್ನಬಾರದು, ಅವುಗಳ ಶವಗಳು ನಿಮಗೆ ಅಶುದ್ಧ ವಾಗಿರಬೇಕು. |
12. | ನೀರಲ್ಲಿ ಯಾವದಕ್ಕೆ ಈಜು ರೆಕ್ಕೆಯೂ ಪೊರೆಗಳೂ ಇಲ್ಲವೊ ಅವು ನಿಮಗೆ ಅಶುದ್ಧ ವಾಗಿರುವವು. |
13. | ಪಕ್ಷಿಗಳೊಳಗೆ ನಿಮಗೆ ಅಶುದ್ಧವಾಗಿರುವವುಗಳು ಇವೇ; ಇವುಗಳನ್ನು ನೀವು ತಿನ್ನಬಾರದು, ಇವು ನಿಮಗೆ ಅಶುದ್ಧ: ಹದ್ದು, ಕಡಲ ಹದ್ದು, ವಿಾನು ತಿನ್ನುವ ದೊಡ್ಡ ಜಾತಿಯ ಪಕ್ಷಿ, |
14. | ರಣಹದ್ದು, ಅದರ ಜಾತಿಯ ಹದ್ದು; |
15. | ಅದರ ಜಾತಿಗನುಸಾರವಾದ ಪ್ರತಿಯೊಂದು ಕಾಗೆ, |
16. | ಗೂಬೆ, ಗಿಡುಗ, ಕೋಗಿಲೆ, ಅದರ ಪ್ರತಿಯೊಂದು ಜಾತಿಯ ಗಿಡುಗ, |
17. | ಸಣ್ಣ ಗೂಬೆ, ಹೊಟ್ಟೆ ಬಾಕ ಪಕ್ಷಿ ಮತ್ತು ಹೆಗ್ಗೂಬೆ; |
18. | ಇದಲ್ಲದೆ ಹಂಸ, ನೀರು ಕೋಳಿ, ರಣಹದ್ದು, |
19. | ಕೊಕ್ಕರೆ, ಬಕ, ಬಾವಲಿ, ಕಣ್ಣ ಕಪಡಿ. |
20. | ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳೆಲ್ಲವೂ ನಿಮಗೆ ಹೇಯವಾಗಿರಬೇಕು. |
21. | ಆದರೆ ಕಾಲುಳ್ಳ ಯಾವ ಕ್ರಿಮಿಕೀಟಗಳಿಗೆ ನೆಲದ ಮೇಲೆ ಹಾರುವದಕ್ಕೋಸ್ಕರ ಮುದುರಿಕೊಂಡಿರುವ ತೊಡೆಗಳು ಇರುತ್ತವೆಯೋ ಅವುಗಳನ್ನು ನೀವು ತಿನ್ನ ಬಹುದು. |
22. | ಅವುಗಳ ಜಾತಿಗನುಸಾರವಾಗಿ ಮಿಡತೆಗಳನ್ನೂ ಬೋಳುಮಿಡತೆಗಳನ್ನೂ ಜಿಟ್ಟೆಮಿಡತೆಗಳನ್ನೂ ಸಣ್ಣ ಮಿಡಿತೆಗಳನ್ನೂ ತಿನ್ನಬಹುದು. |
23. | ಆದರೆ ನಾಲ್ಕು ಪಾದಗಳುಳ್ಳ ಎಲ್ಲಾ ಹಾರಾಡುವ, ಹರಿದಾಡುವ ಬೇರೆಯವುಗಳೆಲ್ಲಾ ನಿಮಗೆ ಅಶುದ್ಧವಾಗಿರುವವು. |
24. | ಇವುಗಳು ನಿಮಗೆ ಅಶುದ್ಧವಾಗಿರುವವು. ಅವುಗಳ ಶವಗಳನ್ನು ಮುಟ್ಟುವವನು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. |
25. | ಯಾವನಾದರೂ ಅವುಗಳ ಶವವನ್ನು ಹೊತ್ತರೆ ತನ್ನ ಬಟ್ಟೆಗಳನ್ನು ಒಗೆಸಿಕೊಂಡು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. |
26. | ಗೊರಸು ಸೀಳದೆಯೂ ನಖವು ಇಗ್ಗೊರಸಾಗಿರ ದೆಯೂ ಮೆಲಕು ಹಾಕದೆಯೂ ಇರುವ ಪ್ರತಿಯೊಂದು ಮೃಗದ ಶವವು ನಿಮಗೆ ಅಶುದ್ಧವಾಗಿರುವದು. ಅದನ್ನು ಮುಟ್ಟಿದ ಪ್ರತಿಯೊಬ್ಬನೂ ಅಶುದ್ಧನಾಗಿರುವನು. |
27. | ನಾಲ್ಕು ಕಾಲುಗಳ ಮೇಲೆ ಹೋಗುವ ಎಲ್ಲಾ ಬಗೆಯ ಮೃಗಗಳಲ್ಲಿ ಅಂಗಾಲಿನ ಮೇಲೆ ಹೋಗುವ ದೆಲ್ಲವೂ ನಿಮಗೆ ಅಶುದ್ಧವಾಗಿರುವವು, ಯಾವನಾ ದರೂ ಅವುಗಳ ಶವವನ್ನು ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು. |
28. | ಅವುಗಳ ಶವವನ್ನು ಹೊರುವವನು ತನ್ನ ಬಟ್ಟೆಗಳನ್ನು ಒಗೆದು ಕೊಳ್ಳಬೇಕು. ಅವನು ಸಾಯಂಕಾಲದ ವರೆಗೂ ಅಶುದ್ಧ ನಾಗಿರುವನು; ಅವು ನಿಮಗೆ ಅಶುದ್ಧವಾದವುಗಳು. |
29. | ಭೂಮಿಯ ಮೇಲೆ ಹರಿದಾಡುವವುಗಳಲ್ಲಿ ಮುಂಗುಲಿ, ಇಲಿ, ಅದರ ಜಾತಿಗನುಸಾರವಾದ ಆಮೆ, |
30. | ಅರೆ ಪಳಗಿಸಿದ ಪ್ರಾಣಿ, ಊಸುರುವಳ್ಳಿ, ಹಲ್ಲಿ, ಬಸವನಹುಳ ಮತ್ತು ಚಿಟ್ಟಿಲಿ ಇವು ಸಹ ನಿಮಗೆ ಅಶುದ್ಧವಾಗಿರುವವು. |
31. | ಹರಿದಾಡುವವುಗಳೆಲ್ಲವು ಗಳಲ್ಲಿ ಇವು ನಿಮಗೆ ಅಶುದ್ಧವಾಗಿರುವವು: ಅವು ಸತ್ತಿರುವಾಗ ಅವುಗಳನ್ನು ಯಾವನಾದರೂ ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು. |
32. | ಅವು ಸತ್ತುಹೋಗಿ ಯಾವದರ ಮೇಲೆ ಬೀಳುವವೊ ಅವೆಲ್ಲಾ ಅಶುದ್ಧವಾಗಿರುವವು; ಅದು ಮರದ ಪಾತ್ರೆ ಯಾಗಲಿ ಉಡುಪಾಗಲಿ ಚರ್ಮವಾಗಲಿ ಚೀಲ ವಾಗಲಿ ಕೆಲಸಮಾಡುವ ಯಾವ ಸಾಮಾನಾಗಲಿ ಅದು ಏನೇ ಆಗಿರಲಿ ಸಾಯಂಕಾಲದ ವರೆಗೆ ನೀರಲ್ಲಿ ಇಡಲ್ಪಟ್ಟು ಅಶುದ್ಧವಾಗಿರುವದು; ತರುವಾಯ ಅದು ಶುದ್ಧವಾಗುವದು. |
33. | ಪ್ರತಿಯೊಂದು ಮಣ್ಣಿನ ಪಾತ್ರೆ ಯೊಳಗೆ ಅವುಗಳಲ್ಲಿ ಯಾವದಾದರೂ ಬಿದ್ದರೆ, ಅದರಲ್ಲಿ ಏನಿದ್ದರೂ ಅಶುದ್ಧವಾಗುವದು ನೀವು ಅದನ್ನು ಒಡೆದುಹಾಕಬೇಕು. |
34. | ತಿನ್ನುವ ಆಹಾರದ ಮೇಲೆ ಅಂಥ ನೀರು ಬಿದ್ದಿದ್ದರೆ ಅದು ಅಶುದ್ಧವಾಗಿರುವದು; ಅಂಥ ಪ್ರತಿ ಪಾತ್ರೆಯಲ್ಲಿ ಕುಡಿಯುವ ಎಲ್ಲಾ ಪಾನವೂ ಅಶುದ್ಧವಾಗಿರುವದು. |
35. | ಅವುಗಳ ಹೆಣವು ಯಾವದರ ಮೇಲಾದರೂ ಬಿದ್ದರೆ ಅದು ಅಶುದ್ಧವಾಗಿರುವದು; ಅದು ಒಲೆಯಾಗಿರಲಿ, ಮಣ್ಣಿನ ಒಲೆಯಾಗಿರಲಿ ಒಡೆದು ಹಾಕಲ್ಪಡಬೇಕು, ಅವು ಅಶುದ್ಧವಾಗಿವೆ; ಅವು ನಿಮಗೆ ಅಶುದ್ಧವಾಗಿರುವವು. |
36. | ಆದಾಗ್ಯೂ ನೀರು ಹೆಚ್ಚಾಗಿರುವ ಬುಗ್ಗೆಯಾಗಲಿ ಹಳ್ಳವಾಗಲಿ ಶುದ್ಧವಾಗಿರುವದು; ಆದರೆ ಅವುಗಳ ಶವಗಳನ್ನು ಮುಟ್ಟಿದ್ದು ಅಶುದ್ಧವಾಗಿರುವದು. |
37. | ಅವುಗಳ ಶವದಲ್ಲಿ ಯಾವ ಭಾಗವಾದರೂ ಬಿತ್ತುವ ಬೀಜದಲ್ಲಿ ಬಿದ್ದರೆ ಅದು ಶುದ್ಧವಾಗಿರುವದು. |
38. | ಮೂತ್ರಜನಕಾಂಗದ ಮೇಲೆ ಯಾವದಾದರೂ ನೀರು ಬಿದ್ದು ಅವುಗಳ ಶವದ ಯಾವ ಭಾಗವಾದರೂ ಅದರಲ್ಲಿ ಬಿದ್ದರೆ ಅದು ನಿಮಗೆ ಅಶುದ್ಧವಾಗಿರುವದು. |
39. | ನೀವು ತಿನ್ನುವ ಯಾವದಾದರೂ ಪಶುವು ಸತ್ತಿದ್ದರೆ ಅದರ ಶವವನ್ನು ಮುಟ್ಟಿದವನು ಸಂಜೆಯ ವರೆಗೆ ಅಶುದ್ಧನಾಗಿರುವನು. |
40. | ಅದರ ಶವವನ್ನು ತಿನ್ನುವವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಸಂಜೆಯ ವರೆಗೆ ಅಶುದ್ಧನಾಗಿರುವನು: ಅದರ ಶವವನ್ನು ಹೊರುವವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಅವನು ಸಂಜೆಯ ವರೆಗೆ ಅಶುದ್ಧನಾಗಿರುವನು. |
41. | ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಅಶುದ್ಧವಾಗಿದೆ; ಅದನ್ನು ತಿನ್ನಬಾರದು. |
42. | ಹೊಟ್ಟೆಯಿಂದ ಹರಿದಾಡುವ ಯಾವದನ್ನೂ ನಾಲ್ಕು ಕಾಲಿನ ಮೇಲೆ ನಡೆದಾಡುವ ಯಾವದನ್ನೂ ಇಲ್ಲವೆ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳಲ್ಲಿ ಬಹಳ ಕಾಲುಗಳಿದ್ದ ಯಾವದನ್ನಾದರೂ ನೀವು ತಿನ್ನ ಬಾರದು; ಅವು ಅಶುದ್ಧವಾಗಿವೆ. |
43. | ಯಾವದೇ ಹರಿದಾಡುವ ಪ್ರಾಣಿಯೊಡನೆಯೂ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳಬಾರದು ಇಲ್ಲವೆ ನೀವು ಅವುಗಳೊಂದಿಗೆ ನಿಮ್ಮನ್ನು ಅಶುದ್ಧಪಡಿಸಿಕೊಂಡು ಮಲಿನರಾಗಬಾರದು. |
44. | ಯಾಕಂದರೆ ನಾನೇ ನಿಮ್ಮ ದೇವರಾದ ಕರ್ತನು. ಆದದರಿಂದ ನಿಮ್ಮನ್ನು ನೀವು ಶುದ್ಧೀಕರಿಸಿಕೊಂಡು ಪರಿಶುದ್ಧರಾಗಿರ್ರಿ; ನಾನು ಪರಿಶುದ್ಧನು. ಇದಲ್ಲದೆ ಭೂಮಿಯ ಮೇಲೆ ಹರಿದಾ ಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಮಲಿನ ಮಾಡಿಕೊಳ್ಳಬಾರದು. |
45. | ನಿಮ್ಮ ದೇವರಾಗಿ ರುವದಕ್ಕೆ ಐಗುಪ್ತದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಕರ್ತನು ನಾನೇ. ನಾನು ಪರಿಶುದ್ಧನಾಗಿ ರುವದರಿಂದ ನೀವೂ ಪರಿಶುದ್ಧರಾಗಿರಬೇಕು. |
46. | ಭೂಮೃಗಗಳ, ಪಕ್ಷಿಗಳ, ಪ್ರತಿಯೊಂದು ಜಲ ಜೀವಿ, ಭೂಮಿಯ ಮೇಲೆ ಹರಿದಾಡುವ ಪ್ರತಿ ಯೊಂದು ಕ್ರಿಮಿಯ ನಿಯಮವು ಇದೇ. |
47. | ಅಶುದ್ಧ ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನುವಂತ ಪಶು ತಿನ್ನಬಾರದ ಪಶುಗಳ ವ್ಯತ್ಯಾಸವನ್ನೂ ಹೀಗೆ ನೀವು ಮಾಡುವಿರಿ. |
← Leviticus (11/27) → |