← Leviticus (18/27) → |
1. | ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- |
2. | ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಹೀಗೆ ಹೇಳಬೇಕು--ನಿಮ್ಮ ದೇವರಾಗಿರುವ ಕರ್ತನು ನಾನೇ. |
3. | ನೀವು ವಾಸವಾಗಿದ್ದ ಐಗುಪ್ತದೇಶದ ಕೃತ್ಯಗಳಂತೆ ಮಾಡಬಾರದು; ನಾನು ನಿಮ್ಮನ್ನು ತರುವದಕ್ಕಿರುವ ಕಾನಾನ್‌ದೇಶದ ಕೃತ್ಯಗಳಂತೆ ನೀವು ಮಾಡಬಾರದು ಇಲ್ಲವೆ ನೀವು ಅವರ ನಿಯಮಗಳಿಗನುಸಾರವೂ ನಡೆ ಯಬಾರದು. |
4. | ನೀವು ನನ್ನ ನಿರ್ಣಯಗಳನ್ನು ಕೈಕೊಂಡು ಅವುಗಳಲ್ಲಿ ನಡೆಯುವ ಹಾಗೆ ನನ್ನ ಕಟ್ಟಳೆಗಳಂತೆ ನಡೆಯಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ. |
5. | ಆದದರಿಂದ ನೀವು ನನ್ನ ನಿಯಮಗಳನ್ನೂ ನಿರ್ಣಯಗಳನ್ನೂ ಕೈಕೊಳ್ಳಿರಿ. ಒಬ್ಬನು ಅವುಗಳನ್ನು ಮಾಡಿದರೆ ಅವನು ಅವುಗಳಲ್ಲಿ ಜೀವಿಸುವನು; ನಾನೇ ಕರ್ತನು. |
6. | ನಿಮ್ಮಲ್ಲಿ ಯಾವನಾದರೂ ತನ್ನ ಹತ್ತಿರ ಸಂಬಂಧಿಯ ಬೆತ್ತಲೆತನವನ್ನು ಬಯಲು ಮಾಡುವದಕ್ಕೆ ಅವಳ ಸವಿಾಪಕ್ಕೆ ಹೋಗಬಾರದು; ನಾನೇ ಕರ್ತನು. |
7. | ನಿನ್ನ ತಂದೆತಾಯಿಯ ಬೆತ್ತಲೆತನವನ್ನಾಗಲಿ ನೀನು ಕಾಣಿಸು ವಂತೆ ಮಾಡಬಾರದು; ಆಕೆಯು ನಿನ್ನ ತಾಯಿಯಾಗಿ ದ್ದಾಳೆ; ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು. |
8. | ನಿನ್ನ ತಂದೆಯ ಹೆಂಡತಿಯ ಬೆತ್ತಲೆ ತನವನ್ನು ನೀನು ಕಾಣುವಂತೆ ಮಾಡಬಾರದು; ಅದು ನಿನ್ನ ತಂದೆಯ ಬೆತ್ತಲೆತನ. |
9. | ನಿನ್ನ ಸಹೋದರಿಯ ಇಲ್ಲವೆ ನಿನ್ನ ತಂದೆಯ ಮಗಳ, ಅಂದರೆ ಅವಳು ಮನೆಯಲ್ಲಿ ಹುಟ್ಟಿದವಳಾಗಿರಲಿ ಹೊರಗೆ ಹುಟ್ಟಿದ ವಳಾಗಿರಲಿ ಅವರ ಬೆತ್ತಲೆತನವನ್ನು ಕಾಣುವಂತೆ ನೀನು ಮಾಡಬಾರದು. |
10. | ನಿನ್ನ ಮಗನ ಮಗಳ ಇಲ್ಲವೆ ನಿನ್ನ ಮಗಳ ಮಗಳ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು. |
11. | ಅವನ ಬೆತ್ತಲೆತನವು ನಿನ್ನ ಸ್ವಂತ ಬೆತ್ತಲೆತನವಾಗಿದೆ. ನಿನ್ನ ತಂದೆಗೆ ಹುಟ್ಟಿ ದಂಥ ನಿನ್ನ ತಂದೆಯ ಮಗಳು ನಿನಗೆ ಸಹೋದರಿ ಯಾಗಿರುವದರಿಂದ ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು. |
12. | ನಿನ್ನ ತಂದೆಯ ಸಹೋದರಿಯ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು; ಅವಳು ನಿನ್ನ ತಂದೆಗೆ ಹತ್ತಿರ ಸಂಬಂಧಿ ಯಾಗಿದ್ದಾಳೆ. |
13. | ನಿನ್ನ ತಾಯಿಯ ಸಹೋದರಿಯ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು; ಅವಳು ನಿನ್ನ ತಾಯಿಗೆ ಹತ್ತಿರದ ಸಂಬಂಧಿಯಾಗಿ ದ್ದಾಳೆ. |
14. | ನೀನು ನಿನ್ನ ತಂದೆಯ ಸಹೋದರನ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು. ನೀನು ಅವನ ಹೆಂಡತಿಯ ಬಳಿಗೆ ಹೋಗಬಾರದು; ಅವಳು ನಿನಗೆ ದೊಡ್ಡ ತಾಯಿ (ಚಿಕ್ಕತಾಯಿ). |
15. | ನಿನ್ನ ಸೊಸೆಯ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು; ಅವಳು ನಿನ್ನ ಮಗನ ಹೆಂಡತಿ; ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು. |
16. | ನೀನು ನಿನ್ನ ಸಹೋ ದರನ ಹೆಂಡತಿಯ ಬೆತ್ತಲೆತನವನ್ನು ಕಾಣುವಂತೆ ಮಾಡ ಬಾರದು; ಅದು ನಿನ್ನ ಸಹೋದರನ ಬೆತ್ತಲೆತನ. |
17. | ನೀನು ಒಬ್ಬ ಸ್ತ್ರೀಯ ಮತ್ತು ಅವಳ ಮಗಳ ಬೆತ್ತಲೆ ತನವನ್ನು ಕಾಣುವಂತೆ ಮಾಡಬಾರದು ಇಲ್ಲವೆ ಅವಳ ಮಗನ ಮಗಳ ಅಥವಾ ಮಗಳ ಮಗಳ ಬೆತ್ತಲೆತನ ವನ್ನು ಕಾಣುವಂತೆ ಮಾಡಬಾರದು. ಅವರು ಅವಳ ಹತ್ತಿರದ ಸಂಬಂಧಿಯಾಗಿದ್ದಾರೆ. ಅದು ದುಷ್ಟತನ ವಾಗಿದೆ. |
18. | ಇಲ್ಲವೆ ಅವಳಿಗೆ ವೈರಿಯಾಗುವ ಹಾಗೆ ಅವಳ ಸಹೋದರಿಯನ್ನು ಹೆಂಡತಿಯಾಗಿ ತೆಗೆದು ಕೊಳ್ಳಬೇಡ. ಒಬ್ಬಳು ಜೀವದಿಂದ ಇರುವಾಗ ಮತ್ತೊ ಬ್ಬಳ ಬೆತ್ತಲೆತನವನ್ನು ಕಾಣುವಂತೆ ಮಾಡಬೇಡ. |
19. | ಇದು ಮಾತ್ರವಲ್ಲದೆ ಒಬ್ಬಳು ತನ್ನ ಅಶುದ್ಧತ್ವದ ನಿಮಿತ್ತವಾಗಿ ಪ್ರತ್ಯೇಕಿಸಲ್ಪಟ್ಟಾಗ ನೀನು ಆ ಸ್ತ್ರೀಯ ಬೆತ್ತಲೆತನವನ್ನು ನೋಡುವಂತೆ ಅವಳ ಹತ್ತಿರ ಹೋಗ ಬೇಡ. |
20. | ಇದಲ್ಲದೆ ಅವಳಿಂದ ನಿನ್ನನ್ನು ಹೊಲೆಮಾಡಿ ಕೊಳ್ಳದಂತೆ ನಿನ್ನ ನೆರೆಯವನ ಹೆಂಡತಿಯೊಂದಿಗೆ ನೀನು ಸಂಗಮಿಸಬೇಡ. |
21. | ನಿನ್ನ ದೇವರ ಹೆಸರನ್ನು ಅಶುದ್ಧಪಡಿಸುವಂತೆ ನಿನ್ನ ಸಂತಾನವನ್ನು ಮೋಲೆಕನಿಗೆ ಬೆಂಕಿಯ ಮೂಲಕ ಅರ್ಪಿಸಬಾರದು; ನಾನೇ ಕರ್ತನು. |
22. | ಸ್ತ್ರೀಯೊಂದಿಗೆ ಮಲಗಿಕೊಳ್ಳುವಂತೆ ಪುರು ಷನೊಂದಿಗೆ ಮಲಗಬಾರದು; ಅದು ಅಸಹ್ಯವಾದದ್ದು. |
23. | ಇದಲ್ಲದೆ ಪಶುವಿನೊಂದಿಗೆ ನೀನು ಮಲಗಿ ನಿನ್ನನ್ನು ಹೊಲೆಮಾಡಿಕೊಳ್ಳಬಾರದು; ಯಾವ ಸ್ತ್ರೀಯೂ ಅದರಿಂದ ಸಂಗಮಿಸಿಕೊಳ್ಳುವದಕ್ಕೆ ಪಶುವಿನ ಮುಂದೆ ನಿಲ್ಲಬಾರದು; ಅದು ಗಲಿಬಿಲಿಯಾದದ್ದು. |
24. | ನೀವು ಈ ಯಾವ ವಿಷಯಗಳಲ್ಲಿಯೂ ನಿಮ್ಮನ್ನು ಹೊಲೆ ಮಾಡಿಕೊಳ್ಳಬಾರದು. ನಿಮ್ಮ ಮುಂದೆ ನಾನು ಹೊರಡಿಸಿಬಿಟ್ಟ ಜನಾಂಗಗಳು ಇವೆಲ್ಲವುಗಳಲ್ಲಿ ಹೊಲೆಯಾಗಿವೆ. |
25. | ದೇಶವೂ ಹೊಲೆಯಾಗಿದೆ. ಆದದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು, ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವದು. |
26. | ಆದದರಿಂದ ನೀವು ನನ್ನ ನಿಯಮಗಳನ್ನು ನಿರ್ಣಯಗಳನ್ನು ಕೈಕೊಳ್ಳಬೇಕು. ನಿಮ್ಮ ದೇಶದವರಲ್ಲಿ ಯಾವನೇ ಆಗಲಿ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿದ್ದ ಪರಕೀಯನಾಗಲಿ ಈ ಅಸಹ್ಯವಾದವುಗಳಲ್ಲಿ ಒಂದನ್ನಾದರೂ ಮಾಡ ಬಾರದು. |
27. | (ನಿಮ್ಮೆದುರಿನಲ್ಲಿದ್ದ ಆ ದೇಶದವರು ಈ ಎಲ್ಲ ಅಸಹ್ಯವಾದವುಗಳನ್ನು ಮಾಡಿದರು, ಮತ್ತು ದೇಶವೂ ಹೊಲೆಯಾಯಿತು;) |
28. | ನೀವೂ ಅದನ್ನು ಅಶುದ್ಧಮಾಡಿದರೆ ಅದು ನಿಮ್ಮ ಮುಂದಿದ್ದ ಜನಾಂಗಗಳವರನ್ನು ಕಾರಿದಂತೆ ನಿಮ್ಮನ್ನೂ ಕಾರುವದು. |
29. | ಯಾವನಾದರೂ ಈ ಅಸಹ್ಯವಾದವುಗಳಲ್ಲಿ ಯಾವ ದನ್ನಾದರೂ ಮಾಡಿದರೆ ಅವುಗಳನ್ನು ಮಾಡುವ ಮನುಷ್ಯರನ್ನು ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು. |
30. | ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ. |
← Leviticus (18/27) → |