← Leviticus (22/27) → |
1. | ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ -- |
2. | ಆರೋನನೊಂದಿಗೂ ಅವನ ಕುಮಾರರೊಂದಿಗೂ ಮಾತನಾಡು; ಅವರು ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡದಂತೆ ಇಸ್ರಾಯೇಲ್ ಮಕ್ಕಳು ನನಗೆ ಸಲ್ಲಿಸುವ ಪರಿಶುದ್ಧವಾದವುಗಳಿಂದ ಅವರು ಪ್ರತ್ಯೇಕ ವಾಗಿರಬೇಕು; ನಾನೇ ಕರ್ತನು. |
3. | ಅವರಿಗೆ ನೀನು ಹೀಗೆ ಹೇಳು--ನಿಮ್ಮ ಎಲ್ಲಾ ಸಂತತಿಯ ವಂಶಾವಳಿ ಗಳಲ್ಲಿ ಅಶುದ್ಧತ್ವವಿರುವ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಸಲ್ಲಿಸುವ ಪರಿಶುದ್ಧವಾದವುಗಳ ಬಳಿಗೆ ಯಾವನು ಬರುವನೋ ಅವನು ನನ್ನ ಸನ್ನಿಧಿ ಯಿಂದ ತೆಗೆದುಹಾಕಲ್ಪಡಬೇಕು; ನಾನೇ ಕರ್ತನು. |
4. | ಆರೋನನ ಸಂತತಿಯವರಲ್ಲಿ ಒಬ್ಬನು ಕುಷ್ಠರೋಗಿ ಇಲ್ಲವೆ ಸ್ರಾವವುಳ್ಳವನಿದ್ದರೆ ಅವನು ಶುದ್ಧನಾಗುವ ವರೆಗೆ ಪರಿಶುದ್ಧವಾದವುಗಳನ್ನು ತಿನ್ನಬಾರದು. ಹೆಣದಿಂದ ಅಶುದ್ಧವಾದದ್ದನ್ನು ಮುಟ್ಟಿದವನು ಇಲ್ಲವೆ ತನ್ನೊಳಗಿಂದ ವೀರ್ಯ ಹೊರಟವನು |
5. | ಅಶುದ್ಧನಾಗಿ ಮಾಡಲ್ಪಡುವಂತೆ ಹರಿದಾಡುವ ಯಾವದನ್ನಾಗಲಿ ಇಲ್ಲವೆ ಯಾವದೇ ಅಶುದ್ಧತ್ವದಿಂದ ಅಶುದ್ಧ ಮಾಡುವ ಮನುಷ್ಯನನ್ನಾಗಲಿ ಮುಟ್ಟಿದವನು-- |
6. | ಅಂಥದ್ದನ್ನು ಮುಟ್ಟಿದ ಮನುಷ್ಯನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವನು ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಳ್ಳದ ಹೊರತು ಪರಿಶುದ್ಧ ವಾದವುಗಳನ್ನು ತಿನ್ನಬಾರದು. |
7. | ಸೂರ್ಯನು ಮುಳು ಗಿದಾಗ ಅವನು ಶುದ್ಧನಾಗಿರುವನು, ತರುವಾಯ ಅವನು ಪರಿಶುದ್ಧವಾದವುಗಳನ್ನು ತಿನ್ನಲಿ, ಅದು ಅವನಿಗೆ ಆಹಾರ. |
8. | ತನ್ನನ್ನು ಹೊಲೆಮಾಡಿಕೊಳ್ಳದಂತೆ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನಾಗಲಿ ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟದ್ದನ್ನಾಗಲಿ ತಿನ್ನಬಾರದು; ನಾನೇ ಕರ್ತನು. |
9. | ಆದದರಿಂದ ಅವರು ಅದನ್ನು ಅಪವಿತ್ರಪಡಿಸಿದರೆ ಅದರ ನಿಮಿತ್ತವಾಗಿ ಪಾಪವನ್ನು ಹೊತ್ತು ಸಾಯದಂತೆ ನನ್ನ ವಿಧಿಗಳನ್ನು ಕೈಕೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಕರ್ತನು ನಾನೇ. |
10. | ಪರಿಶುದ್ಧವಾದದ್ದನ್ನು ಪರಕೀಯನು ತಿನ್ನಬಾರದು. ಯಾಜಕನ ಪ್ರವಾಸಿಯಾಗಲಿ ಇಲ್ಲವೆ ಕೂಲಿ ಆಳಾಗಲಿ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು. |
11. | ಆದರೆ ಯಾಜಕನು ಯಾವನನ್ನಾದರೂ ತನ್ನ ಹಣದಿಂದ ಕೊಂಡುಕೊಂಡರೆ ಅವನು ಅದರಲ್ಲಿ ತಿನ್ನಬೇಕು, ಅವನ ಮನೆಯಲ್ಲಿ ಹುಟ್ಟಿದವನು ತಿನ್ನಲಿ; ಅವರು ಅವನ ಆಹಾರವನ್ನು ತಿನ್ನಲಿ. |
12. | ಯಾಜಕನ ಮಗಳು ಒಬ್ಬ ಪರಕೀಯನನ್ನು ಮದುವೆಯಾದರೆ ಅವಳು ಸಮ ರ್ಪಣೆಯಾದ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು. |
13. | ಯಾಜಕನ ಮಗಳು ವಿಧವೆಯಾಗಿದ್ದರೆ ಇಲ್ಲವೆ ಬಿಡಲ್ಪಟ್ಟವಳಾಗಿದ್ದರೆ ಮತ್ತು ಮಕ್ಕಳಿಲ್ಲದವಳಾಗಿ ತನ್ನ ಯೌವನದಲ್ಲಿದ್ದಂತೆಯೇ ತನ್ನ ತಂದೆಯ ಮನೆಗೆ ಹಿಂದಿರುಗಿದವಳಾಗಿದ್ದರೆ ಅವಳು ತನ್ನ ತಂದೆಯ ಆಹಾರದಲ್ಲಿ ತಿನ್ನಲಿ; ಆದರೆ ಪರಕೀಯನು ಅದರಲ್ಲಿ ತಿನ್ನಬಾರದು. |
14. | ಇದಲ್ಲದೆ ಒಬ್ಬನು ತಪ್ಪಾಗಿ ಪರಿಶುದ್ಧ ವಾದದ್ದನ್ನು ತಿಂದರೆ ಅವನು ಅದರ ಐದನೇ ಪಾಲನ್ನು ಕೂಡಿಸಿ ಪರಿಶುದ್ಧವಾದದ್ದನ್ನು ಯಾಜಕನಿಗೆ ಕೊಡ ಬೇಕು. |
15. | ಇಸ್ರಾಯೇಲ್ ಮಕ್ಕಳು ಕರ್ತನಿಗೆ ಅರ್ಪಿ ಸುವ ಪರಿಶುದ್ಧವಾದವುಗಳನ್ನು ಅವರು ಅಪವಿತ್ರ ಮಾಡಬಾರದು. |
16. | ಇಲ್ಲವೆ ಅವರು ಪರಿಶುದ್ಧವಾದವು ಗಳನ್ನು ತಿನ್ನುವದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ. |
17. | ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- |
18. | ಆರೋನನೊಂದಿಗೂ ಅವನ ಕುಮಾರರೊಂದಿಗೂ ಇಸ್ರಾಯೇಲ್ ಎಲ್ಲಾ ಮಕ್ಕ ಳೊಂದಿಗೂ ಮಾತನಾಡಿ ಅವರಿಗೆ ಹೇಳಬೇಕಾದ ದ್ದೇನಂದರೆ--ಇಸ್ರಾಯೇಲ್ ಮನೆತನದವರಲ್ಲಾಗಲಿ ಇಸ್ರಾಯೇಲ್ಯರ ಪರಕೀಯರಲ್ಲಾಗಲಿ ಯಾವನಾದರೂ ತನ್ನ ಎಲ್ಲಾ ಪ್ರಮಾಣಗಳ ನಿಮಿತ್ತವಾಗಿ ಕಾಣಿಕೆಯನ್ನು ದಹನಬಲಿಯಾಗಿ ಕರ್ತನಿಗೆ ಅರ್ಪಿಸುವ ಉಚಿತವಾದ ಅರ್ಪಣೆಗಳಲ್ಲಿ |
19. | ನೀವು ನಿಮ್ಮ ಸ್ವಇಚ್ಛೆಯಿಂದ ಪಶುಗಳೊಳಗೆ ಕುರಿಗಳೊಳಗೆ ಇಲ್ಲವೆ ಮೇಕೆಗಳೊಳಗೆ ದೋಷವಿಲ್ಲದ ಗಂಡಾಗಿರುವದನ್ನು ಅರ್ಪಿಸಬೇಕು; |
20. | ಆದರೆ ದೋಷವಿರುವ ಯಾವದನ್ನೂ ಸಮರ್ಪಿಸ ಬಾರದು; ಅದು ನಿಮಗೋಸ್ಕರ ಅಂಗೀಕಾರವಾಗು ವದಿಲ್ಲ. |
21. | ತನ್ನ ಪ್ರಮಾಣವನ್ನು ಪೂರೈಸುವ ಹಾಗೆ ಯಾವನಾದರೂ ಸಮಾಧಾನದ ಬಲಿಗಳ ಯಜ್ಞ ಸಮರ್ಪಣೆಯನ್ನಾಗಲಿ ಪಶುಗಳನ್ನಾಗಲಿ ಕುರಿಗಳ ನ್ನಾಗಲಿ ಉಚಿತವಾದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸುವದಾದರೆ ಅದು ಅಂಗೀಕಾರಕ್ಕೆ ಪರಿಪೂರ್ಣ ವುಳ್ಳದ್ದಾಗಿರಬೇಕು; ಅದರೊಳಗೆ ಯಾವ ದೋಷವು ಇರಬಾರದು. |
22. | ಕುರುಡಾದದ್ದು, ಮುರಿದದ್ದು, ಅಂಗ ಹೀನವಾದದ್ದು, ಬೊಕ್ಕೆಯುಳ್ಳದ್ದು, ತುರಿಯುಳ್ಳದ್ದು, ಇಲ್ಲವೆ ಹುರುಕುಳ್ಳದ್ದು ಇವುಗಳನ್ನು ನೀವು ಕರ್ತನಿಗೆ ಸಮರ್ಪಿಸಲೂಬಾರದು ಮತ್ತು ಅವುಗಳಿಂದ ಯಜ್ಞ ವೇದಿಯ ಮೇಲೆ ದಹನಬಲಿಯಾಗಿ ಕರ್ತನಿಗೆ ಸಮರ್ಪಿಸಲೂಬಾರದು. |
23. | ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವ ದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆ ಯಿರುವದಾಗಿದ್ದರೆ ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು; ಆದರೆ ಪ್ರಮಾಣಕ್ಕಾಗಿ ಅದು ಅಂಗೀಕಾರವಾಗುವದಿಲ್ಲ. |
24. | ಜಜ್ಜಿ ಗಾಯವಾದ, ನುಜ್ಜುಗುಜ್ಜಾದ, ಮುರಿದ ಇಲ್ಲವೆ ಕೊಯ್ದಿರುವ ಯಾವದನ್ನೂ ಕರ್ತನಿಗೆ ಸಮರ್ಪಿಸಬಾರದು. ಅಲ್ಲದೆ ನಿಮ್ಮ ದೇಶದೊಳಗಿರುವ ಅಂಥ ಯಾವ ಸಮರ್ಪಣೆ ಯನ್ನಾ ದರೂ ನೀವು ಸಮರ್ಪಿಸಬಾರದು. |
25. | ಇದಲ್ಲದೆ ಪರಕೀಯನ ಕೈಯೊಳಗಿಂದಲೂ ಅಂಥವುಗಳಲ್ಲಿ ಯಾವದನ್ನಾದರೂ ನಿಮ್ಮ ದೇವರಿಗೆ ರೊಟ್ಟಿಯಾಗಿ ಅರ್ಪಿಸಬಾರದು. ಅವರ ನೀತಿಭ್ರಷ್ಠತೆಯೂ ದೋಷ ಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರ ವಾಗಿ ಅಂಗೀಕಾರವಾಗುವದಿಲ್ಲ. |
26. | ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ-- |
27. | ಹೋರಿಯನ್ನಾಗಲಿ ಕುರಿಯನ್ನಾಗಲಿ ಇಲ್ಲವೆ ಆಡನ್ನಾಗಲಿ ತಂದಾಗ ಏಳು ದಿವಸಗಳ ವರೆಗೆ ಅದು ತನ್ನ ತಾಯಿಯ ಬಳಿಯಲ್ಲಿ ಇರಲಿ. ಎಂಟನೆಯ ದಿನದಿಂದ ಅದು ಕರ್ತನಿಗೆ ದಹನಬಲಿಯಾಗಿ ಅಂಗೀ ಕಾರವಾಗಿರುವದು. |
28. | ಹಸುವನ್ನಾಗಲಿ ಕುರಿಯನ್ನಾಗಲಿ ಅದರ ಮರಿಯೊಂದಿಗೆ ಎರಡನ್ನೂ ಒಂದೇ ದಿನದಲ್ಲಿ ವಧಿಸಬಾರದು. |
29. | ನೀವು ಕೃತಜ್ಞತೆಯ ಯಜ್ಞಾರ್ಪಣೆಯನ್ನು ಸಮರ್ಪಿಸುವಾಗ ನಿಮ್ಮ ಸ್ವಇಷ್ಟದಿಂದ ಅರ್ಪಿಸಿರಿ. |
30. | ಅದೇ ದಿನದಲ್ಲಿ ಅದನ್ನು ತಿನ್ನಬೇಕು. ಅದರಲ್ಲಿ ಯಾವದನ್ನೂ ಮಾರನೆಯ ದಿನದ ವರೆಗೆ ಉಳಿಸ ಬಾರದು; ನಾನೇ ಕರ್ತನು. |
31. | ಆದದರಿಂದ ನೀವು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು. |
32. | ಆದರೆ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ನಾನು ಪರಿಶುದ್ಧ ಮಾಡಲ್ಪಡುವ ಹಾಗೆ ನನ್ನ ಪರಿಶುದ್ಧವಾದ ಹೆಸರನ್ನು ಅಪವಿತ್ರಮಾಡಬಾರದು; |
33. | ನಿಮಗೆ ದೇವರಾಗಿರು ವದಕ್ಕೆ ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಗೆ ತಂದವನೂ ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನೂ ನಾನೇ; ನಾನೇ ಕರ್ತನು. |
← Leviticus (22/27) → |