← Leviticus (24/27) → |
1. | ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- |
2. | ಬೆಳಕಿ ಗೋಸ್ಕರ ದೀಪಗಳು ಯಾವಾಗಲೂ ಉರಿಯುತ್ತಿ ರುವಂತೆ ಅವರು ಕುಟ್ಟಿದ ಶುದ್ಧವಾದ ಹಿಪ್ಪೇ ಎಣ್ಣೆಯನ್ನು ನಿನ್ನ ಬಳಿಗೆ ತರುವಂತೆ ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕು. |
3. | ಸಭೆಯ ಗುಡಾರದೊಳಗೆ ಸಾಕ್ಷಿಯ ಪರದೆಯ ಹೊರಗಡೆ ಕರ್ತನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಬೆಳಗಿನ ವರೆಗೂ ಇರುವಂತೆ ಆರೋನನು ಅದನ್ನು ಕ್ರಮಪಡಿಸಬೇಕು. ಇದು ನಿಮ್ಮ ಸಂತತಿಯವರೊಳಗೆ ಶಾಶ್ವತವಾದ ನಿಯಮವಾಗಿ ರುವದು. |
4. | ದೀಪಗಳು ಶುದ್ಧವಾದ ದೀಪಸ್ತಂಭದ ಮೇಲೆ ಕರ್ತನ ಸನ್ನಿಧಿಯಲ್ಲಿ ಯಾವಾಗಲೂ ಇರುವಂತೆ ಅವನು ಕ್ರಮಪಡಿಸಬೇಕು. |
5. | ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು; ಹತ್ತರಲ್ಲಿ ಎರಡು ಪಾಲು ಒಂದು ರೊಟ್ಟಿಯಲ್ಲಿ ಇರಬೇಕು. |
6. | ಅವುಗಳನ್ನು ಶುದ್ಧವಾದ ಮೇಜಿನ ಮೇಲೆ ಕರ್ತನ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ ಎರಡು ಸಾಲುಗಳನ್ನಾಗಿ ಇಡಬೇಕು. |
7. | ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾ ಗಿರುವಂತೆಯೂ ಬೆಂಕಿಯ ಮೂಲಕ ಕರ್ತನಿಗೆ ಸಮ ರ್ಪಣೆಯಾಗುವಂತೆಯೂ ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು. |
8. | ಪ್ರತಿಯೊಂದು ಸಬ್ಬತ್ತಿನಲ್ಲಿ ಕರ್ತನ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮ ಪಡಿಸಬೇಕು; ಇದು ಇಸ್ರಾಯೇಲ್ ಮಕ್ಕಳ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು. |
9. | ಅದು ಆರೋನನ ಮತ್ತು ಅವನ ಕುಮಾರರದ್ದಾಗಿರಬೇಕು; ಅವರು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು; ಅದು ನಿತ್ಯವಾದ ನಿಯಮವಾಗಿ ಕರ್ತನಿಗೆ ಬೆಂಕಿಯಿಂದ ಮಾಡಿ ಸಮರ್ಪಿಸುವವುಗಳಲ್ಲಿ ಅವನಿಗೆ ಅತಿ ಪರಿಶುದ್ಧವಾಗಿರುವದು. |
10. | ಇದಲ್ಲದೆ ಇಸ್ರಾಯೇಲಿನವಳಾದ ಒಬ್ಬ ಸ್ತ್ರೀಗೂ ಐಗುಪ್ತನಾದ ಪುರುಷನಿಗೂ ಹುಟ್ಟಿದ ಮಗನು ಇಸ್ರಾಯೇಲ್ ಮಕ್ಕಳ ಮಧ್ಯದೊಳಗಿಂದ ಹೊರಗೆ ಬಂದನು; ಇಸ್ರಾಯೇಲಿನವಳಾದ ಸ್ತ್ರೀಯ ಈ ಮಗನು ಇಸ್ರಾಯೇಲಿನ ಒಬ್ಬ ಮನುಷ್ಯನೊಂದಿಗೆ ಪಾಳೆಯದಲ್ಲಿ ಒಬ್ಬರಿಗೊಬ್ಬರು ಜಗಳವಾಡಿದರು. |
11. | ಇಸ್ರಾಯೇಲ್ ಸ್ತ್ರೀಯ ಮಗನು ಕರ್ತನ ನಾಮವನ್ನು ದೂಷಿಸಿ ಶಪಿಸಿ ದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು; (ಅವನ ತಾಯಿಯ ಹೆಸರು ದಾನನ ಕುಲದವನಾದ ದಿಬ್ರೀಯ ಮಗಳಾದ ಶೆಲೋವಿಾತ್). |
12. | ಅವನ ವಿಷಯವಾಗಿ ಅವರು ಕರ್ತನ ತೀರ್ಪನ್ನು ತಿಳಿದು ಕೊಳ್ಳುವದಕೋಸ್ಕರ ಅವನನ್ನು ಕಾವಲಲ್ಲಿ ಇಟ್ಟರು. |
13. | ಆಗ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- |
14. | ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ; ಅವನಿಂದ ಕೇಳಿದ ವರೆಲ್ಲರು ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ, ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ. |
15. | ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳಬೇಕು--ತನ್ನ ದೇವರನ್ನು ಶಪಿಸುವವನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು. |
16. | ಕರ್ತನ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು ಮತ್ತು ಸಭೆಯವರೆಲ್ಲರು ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ದೇಶದೊಳಗೆ ಹುಟ್ಟಿದ ಪರಕೀಯನು ಕರ್ತನ ಹೆಸರನ್ನು ದೂಷಣೆ ಮಾಡಿದಾಗ ಅವನನ್ನು ಮರಣಕ್ಕೆ ಒಳಪಡಿಸಬೇಕು. |
17. | ಯಾವನಾದರೂ ಮನುಷ್ಯನನ್ನು ಕೊಲ್ಲುವವನು ನಿಶ್ಚಯವಾಗಿ ಮರಣಕ್ಕೆ ಒಳಪಡಬೇಕು. |
18. | ಪಶುವನ್ನು ಕೊಲ್ಲುವವನು ಅದಕ್ಕೆ ಪ್ರತಿಯಾಗಿ ಪಶುವನ್ನು ಕೊಡಬೇಕು. |
19. | ಯಾವನಾದರೂ ತನ್ನ ನೆರೆಯವನಿಗೆ ಊನ ವಾಗುವಂತೆ ಮಾಡಿದರೆ ಅವನು ಮಾಡಿದಂತೆಯೇ ಅವನಿಗೆ ಮಾಡಬೇಕು; |
20. | ಮುರಿತಕ್ಕೆ ಮುರಿತ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಅವನು ಒಬ್ಬನಿಗೆ ಊನಮಾಡಿದ ಹಾಗೆಯೇ ಅವನಿಗೂ ಮಾಡಬೇಕು. |
21. | ಪಶುವನ್ನು ಕೊಲ್ಲುವವನು ಅದಕ್ಕೆ ಬದಲು ಕೊಡಬೇಕು; ಮನುಷ್ಯ ನನ್ನು ಕೊಲ್ಲುವವನನ್ನು ಮರಣಕ್ಕೆ ಒಳಪಡಿಸಬೇಕು. |
22. | ನಿಮಗೆ ಒಂದೇ ವಿಧವಾದ ನ್ಯಾಯಪ್ರಮಾಣವಿರ ಬೇಕು. ಸ್ವದೇಶಸ್ಥನಿಗೆ ಇರುವಂತೆಯೇ ಪರಕೀಯನಿಗೂ ಇರಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ. |
23. | ಶಪಿಸಿದವನನ್ನು ಪಾಳೆಯದ ಹೊರಗೆ ತಂದು ಅವನನ್ನು ಕಲ್ಲೆಸೆಯುವಂತೆ ಮೋಶೆಯು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿದನು. ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ ಮಕ್ಕಳು ಮಾಡಿದರು. |
← Leviticus (24/27) → |