Luke (1/24) → |
1. | ನಮ್ಮಲ್ಲಿ ಬಹು ನಿಶ್ಚಯವಾಗಿ ನಂಬಿ ಕೊಂಡಿರುವ ವಿಷಯಗಳ ಪ್ರಕಟನೆಯನ್ನು ಕ್ರಮವಾಗಿ ಬರೆಯುವದಕ್ಕೆ ಅನೇಕರು ಕೈಕೊಂಡು |
2. | ಮೊದಲಿನಿಂದಲೂ ಕಣ್ಣಾರೆ ಕಂಡ ಸಾಕ್ಷಿಗಳು ಮತ್ತು ವಾಕ್ಯಪರಿಚಾರಕರು ಅವುಗಳನ್ನು ನಮಗೆ ಒಪ್ಪಿಸಿಕೊ ಟ್ಟದ್ದರಿಂದ |
3. | ಅತ್ಯುತ್ತಮನಾದ ಥೆಯೊಫಿಲನೇ, ಮೊದಲಿ ನಿಂದಲೂ ಎಲ್ಲವುಗಳನ್ನು ಪೂರ್ಣವಾಗಿ ತಿಳಿದುಕೊಂಡಿ ರುವ ನಾನು ಸಹ ಅವುಗಳನ್ನು ಕ್ರಮವಾಗಿ ನಿನಗೆ ಬರೆಯುವದು ಒಳ್ಳೇದೆಂದು ನನಗೆ ತೋಚಿತು; |
4. | ಹೀಗೆ ನಿನಗೆ ಬೋಧಿಸಲ್ಪಟ್ಟವುಗಳು ಸ್ಥಿರವಾದವುಗಳೆಂದು ಇದರಿಂದ ನೀನು ತಿಳಿಯಬಹುದು. |
5. | ಯೂದಾಯದ ಅರಸನಾದ ಹೆರೋದನ ದಿನ ಗಳಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರಿಯನೆಂದು ಹೆಸರಿದ್ದ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ಕುಮಾರ್ತೆಯರಿಗೆ ಸಂಬಂಧಪಟ್ಟವಳು. ಆಕೆಯ ಹೆಸರು ಎಲಿಸಬೇತ್. |
6. | ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು. |
7. | ಎಲಿಸಬೇತಳು ಬಂಜೆಯಾದದರಿಂದ ಅವರಿಗೆ ಮಕ್ಕ ಳಿರಲಿಲ್ಲ; ಅವರಿಬ್ಬರೂ ಬಹಳ ಪ್ರಾಯಹೋದವರಾ ಗಿದ್ದರು. |
8. | ಹೀಗಿರಲಾಗಿ ಅವನು ತನ್ನ ವರ್ಗದ ಸರತಿಯ ಮೇರೆಗೆ ದೇವರ ಮುಂದೆ ಯಾಜಕನ ಉದ್ಯೋಗವನ್ನು ಮಾಡುತ್ತಿದ್ದಾಗ |
9. | ಯಾಜಕೋದ್ಯೋಗದ ಪದ್ಧತಿಯ ಪ್ರಕಾರ ಅವನು ಕರ್ತನ ಆಲಯದಲ್ಲಿ ಪ್ರವೇಶಿಸಿ ಧೂಪವನ್ನು ಸುಡುವದು ಅವನ ಪಾಲಿಗೆ ಬಂತು. |
10. | ಧೂಪಾರ್ಪಣೆಯ ಸಮಯದಲ್ಲಿ ಜನ ಸಮೂಹ ವೆಲ್ಲಾ ಹೊರಗೆ ಪ್ರಾರ್ಥಿಸುತ್ತಿದ್ದರು. |
11. | ಆಗ ಧೂಪ ವೇದಿಯ ಬಲಗಡೆಯಲ್ಲಿ ನಿಂತುಕೊಂಡಿದ್ದ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು. |
12. | ಜಕರೀ ಯನು ಅವನನ್ನು ನೋಡಿ ಕಳವಳದಿಂದ ಭಯಹಿಡಿ ದವನಾದನು. |
13. | ಆದರೆ ಆ ದೂತನು ಅವನಿಗೆ--ಜಕರೀಯನೇ, ಭಯಪಡಬೇಡ; ಯಾಕಂದರೆ ನಿನ್ನ ಪ್ರಾರ್ಥನೆಯು ಕೇಳಲ್ಪಟ್ಟಿದೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನನ್ನು ಯೋಹಾನನೆಂದು ಕರೆಯಬೇಕು. |
14. | ನಿನಗೆ ಆನಂದವೂ ಉಲ್ಲಾಸವೂ ಆಗುವದು; ಅನೇಕರು ಅವನ ಜನನದಲ್ಲಿ ಆನಂದಿಸುವರು. |
15. | ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು. |
16. | ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು. |
17. | ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು. |
18. | ಆಗ ಜಕರೀಯನು ಆ ದೂತನಿಗೆ--ಇದನ್ನು ನಾನು ಯಾವದರಿಂದ ತಿಳು ಕೊಳ್ಳಲಿ? ಯಾಕಂದರೆ ನಾನು ಮುದುಕನು; ನನ್ನ ಹೆಂಡತಿಯೂ ಪ್ರಾಯಗತಿಸಿದವಳು ಅಂದನು. |
19. | ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ--ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು, ಈಗ ನಿನ್ನ ಸಂಗಡ ಮಾತನಾಡುವದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವದಕ್ಕೂ ಕಳುಹಿಸ ಲ್ಪಟ್ಟಿದ್ದೇನೆ. |
20. | ಇಗೋ, ತಕ್ಕ ಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದದರಿಂದ ಈ ಸಂಗತಿಗಳು ಈಡೇರುವ ದಿನದ ವರೆಗೆ ನೀನು ಮೂಕನಾಗಿದ್ದು ಮಾತನಾಡಲಾರದೆ ಇರುವಿ ಅಂದನು. |
21. | ಆಗ ಜಕರೀಯನಿಗಾಗಿ ಕಾದುಕೊಂಡಿದ್ದ ಜನರು ಅವನು ದೇವಾಲಯದಲ್ಲಿ ಬಹಳ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು. |
22. | ಅವನು ಹೊರಗೆ ಬಂದಾಗ ಅವರೊಂದಿಗೆ ಮಾತನಾಡಲಾರದೆ ಇದ್ದನು; ಅದಕ್ಕ ವರು ಅವನು ದೇವಾಲಯದಲ್ಲಿ ಒಂದು ದರ್ಶನವನ್ನು ಕಂಡನೆಂದು ಗ್ರಹಿಸಿದರು; ಯಾಕಂದರೆ ಅವನು ಅವರಿಗೆ ಸನ್ನೆ ಮಾಡುತ್ತಾ ಮಾತಿಲ್ಲದವನಾಗಿದ್ದನು. |
23. | ಇದಾದ ಮೇಲೆ ತನ್ನ ಸೇವೆಯ ದಿನಗಳು ಮುಗಿದ ಕೂಡಲೆ ಅವನು ತನ್ನ ಸ್ವಂತ ಮನೆಗೆ ಹೊರಟು ಹೋದನು. |
24. | ಆ ದಿವಸಗಳಾದ ಮೇಲೆ ಅವನ ಹೆಂಡತಿಯಾದ ಎಲಿಸಬೇತಳು ಗರ್ಭಿಣಿಯಾಗಿ ಐದು ತಿಂಗಳು ತನ್ನನ್ನು ಮರೆಮಾಡಿಕೊಂಡು-- |
25. | ಜನರಲ್ಲಿ ನನಗಿದ್ದ ಅವ ಮಾನವನ್ನು ತೆಗೆದುಹಾಕುವದಕ್ಕಾಗಿ ಕರ್ತನು ನನ್ನ ಮೇಲೆ ದೃಷ್ಟಿಯಿಟ್ಟ ದಿನಗಳಲ್ಲಿ ನನಗೆ ಹೀಗೆ ಮಾಡಿದನು ಎಂದು ಹೇಳಿದಳು. |
26. | ಆರನೆಯ ತಿಂಗಳಿನಲ್ಲಿ ಗಲಿಲಾಯ ಪಟ್ಟಣದ ನಜರೇತೆಂಬ ಊರಿಗೆ ದೇವರಿಂದ ಗಬ್ರಿಯೇಲನೆಂಬ ದೂತನು |
27. | ದಾವೀದನ ಮನೆತನದವನಾದ ಯೋಸೇ ಫನಿಗೆ ನಿಶ್ಚಯಮಾಡಲ್ಪಟ್ಟ ಮರಿಯಳೆಂಬ ಒಬ್ಬ ಕನ್ಯೆಯ ಬಳಿಗೆ ಕಳುಹಿಸಲ್ಪಟ್ಟನು. |
28. | ಆ ದೂತನು ಆಕೆಗೆ--ಅಪಾರ ದಯೆ ಹೊಂದಿದವಳೇ, ನಿನಗೆ ವಂದನೆ; ಕರ್ತನು ನಿನ್ನೊಂದಿಗಿದ್ದಾನೆ; ಸ್ತ್ರೀಯರಲ್ಲಿ ನೀನು ಧನ್ಯಳೇ ಎಂದು ಹೇಳಿದನು. |
29. | ಆಕೆಯು ಅವನನ್ನು ನೋಡಿ ಅವನ ಮಾತಿಗೆ ಕಳವಳಗೊಂಡು ಇದು ಎಂಥಾತರವಾದ ವಂದನೆ ಎಂದು ತನ್ನ ಮನದಲ್ಲಿ ಯೋಚಿಸುತ್ತಿರುವಾಗ |
30. | ಆ ದೂತನು ಆಕೆಗೆ-- ಮರಿಯಳೇ, ಹೆದರಬೇಡ; ಯಾಕಂದರೆ ನೀನು ದೇವರ ದಯೆಯನ್ನು ಹೊಂದಿದ್ದೀ; |
31. | ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು. |
32. | ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು. |
33. | ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು. |
34. | ಆಗ ಮರಿಯಳು ಆ ದೂತ ನಿಗೆ--ಇದು ಹೇಗಾದೀತು? ನಾನು ಪುರುಷನನ್ನು ಅರಿತವಳಲ್ಲವಲ್ಲಾ ಅಂದಳು. |
35. | ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ ಆಕೆಗೆ--ಪವಿತ್ರಾತ್ಮನು ನಿನ್ನ ಮೇಲೆ ಬರುವನು, ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸಿ ಕೊಳ್ಳುವದು; ಆದದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರವಾದ ಶಿಶುವು ದೇವರ ಮಗನೆಂದು ಕರೆಯ ಲ್ಪಡುವನು. |
36. | ಇಗೋ, ಬಂಜೆಯೆಂದು ಕರೆಯಲ್ಪಟ್ಟ ನಿನ್ನ ಬಂಧುವಾದ ಎಲಿಸಬೇತಳು ಸಹ ತನ್ನ ಮುಪ್ಪಿನ ಪ್ರಾಯದಲ್ಲಿ ಮಗನನ್ನು ಗರ್ಭಧರಿಸಿದ್ದಾಳೆ. ಆಕೆಗೆ ಇದು ಆರನೆಯ ತಿಂಗಳು. |
37. | ಯಾಕಂದರೆ ದೇವರಿಗೆ ಅಸಾಧ್ಯವಾದದ್ದು ಯಾವದೂ ಇಲ್ಲ ಎಂದು ಹೇಳಿ ದನು. |
38. | ಆಗ ಮರಿಯಳು--ನೋಡು, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗೆ ಆಗಲಿ ಅಂದಳು; ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು. |
39. | ಆ ದಿವಸಗಳಲ್ಲಿ ಮರಿಯಳು ಎದ್ದು ಬೆಟ್ಟದ ಸೀಮೆಯ ಯೆಹೂದದ ಪಟ್ಟಣಕ್ಕೆ ಅವಸರದಿಂದ ಹೋಗಿ |
40. | ಜಕರೀಯನ ಮನೆಯನ್ನು ಪ್ರವೇಶಿಸಿ ಎಲಿಸಬೇತಳನ್ನು ವಂದಿಸಿದಳು. |
41. | ಎಲಿಸಬೇತಳು ಮರಿಯಳ ವಂದನೆಯನ್ನು ಕೇಳಿದಾಗ ಅವಳ ಗರ್ಭ ದಲ್ಲಿದ್ದ ಕೂಸು ಹಾರಾಡಿತು; ಎಲಿಸಬೇತಳು ಪರಿಶುದ್ಧಾ ತ್ಮಭರಿತಳಾಗಿ |
42. | ಗಟ್ಟಿಯಾದ ಧ್ವನಿಯಿಂದ ಮಾತ ನಾಡಿ--ಸ್ತ್ರೀಯರಲ್ಲಿ ನೀನು ಧನ್ಯಳೇ; ನಿನ್ನ ಗರ್ಭಫಲವು ಆಶೀರ್ವದಿಸಲ್ಪಟ್ಟದ್ದೇ. |
43. | ನನ್ನ ಕರ್ತನ ತಾಯಿಯು ನನ್ನ ಬಳಿಗೆ ಬರುವದು ನನಗೆಲ್ಲಿಂದಾಯಿತು? |
44. | ಇಗೋ, ನಿನ್ನ ವಂದನೆಯ ಧ್ವನಿಯು ನನ್ನ ಕಿವಿ ಗಳಲ್ಲಿ ಬಿದ್ದ ಕೂಡಲೆ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಹಾರಾಡಿತು. |
45. | ಕರ್ತನಿಂದ ತನಗೆ ಹೇಳಲ್ಪಟ್ಟವುಗಳು ನೆರವೇರುವವೆಂದು ನಂಬಿದವಳು ಧನ್ಯಳು ಎಂದು ಹೇಳಿದಳು. |
46. | ಆಗ ಮರಿಯಳು--ನನ್ನ ಪ್ರಾಣವು ಕರ್ತನನ್ನು ಘನಪಡಿಸುತ್ತದೆ; |
47. | ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ; |
48. | ಆತನು ತನ್ನ ದಾಸಿಯ ದೀನಸ್ಥಿತಿಯನ್ನು ಲಕ್ಷಿಸಿದ್ದಾನೆ. ಇಗೋ, ಇಂದಿನಿಂದ ತಲತಲಾಂತರಗಳವರು ನನ್ನನ್ನು ಧನ್ಯಳೆಂದು ಕರೆಯುವರು. |
49. | ಪರಾಕ್ರಮಿಯಾದಾತನು ನನಗೆ ಮಹತ್ತಾದವುಗಳನ್ನು ಮಾಡಿದ್ದಾನೆ; ಆತನ ಹೆಸರು ಪರಿಶುದ್ಧವಾದದ್ದು. |
50. | ಆತನಿಗೆ ಭಯಪಡು ವವರ ಮೇಲೆ ಆತನ ಕರುಣೆಯು ತಲತಲಾಂತರ ಗಳಿಗೂ ಇರುವದು. |
51. | ಆತನು ತನ್ನ ಬಾಹುಬಲವನ್ನು ತೋರಿಸಿ ಗರ್ವಿಷ್ಠರನ್ನು ಅವರ ಹೃದಯದ ಕಲ್ಪನೆಗಳ ನಿಮಿತ್ತವಾಗಿ ಅವರನ್ನು ಚದರಿಸಿಬಿಟ್ಟಿದ್ದಾನೆ; |
52. | ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ. |
53. | ಹಸಿದವರನ್ನು ಒಳ್ಳೆಯವು ಗಳಿಂದ ತೃಪ್ತಿಪಡಿಸಿ ಐಶ್ವರ್ಯವಂತರನ್ನು ಬರಿದಾಗಿ ಕಳುಹಿಸಿಬಿಟ್ಟಿದ್ದಾನೆ. |
54. | ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ. |
55. | ಇದಲ್ಲದೆ ನಮ್ಮ ಪಿತೃಗಳಿಗೂ ಅಬ್ರ ಹಾಮನಿಗೂ ಅವನ ಸಂತತಿಗೂ ಸದಾಕಾಲಕ್ಕೆ ಆತನು ಹೇಳಿದಂತೆ ಮಾಡಿದ್ದಾನೆ ಅಂದಳು. |
56. | ಮರಿ ಯಳು ಸುಮಾರು ಮೂರು ತಿಂಗಳು ಅವಳ ಜೊತೆ ಯಲ್ಲಿದ್ದು ತನ್ನ ಸ್ವಂತ ಮನೆಗೆ ಹಿಂದಿರುಗಿಹೋದಳು. |
57. | ಇದಲ್ಲದೆ ಎಲಿಸಬೇತಳಿಗೆ ಹೆರಿಗೆಯ ಸಮಯವು ಪೂರ್ಣವಾದಾಗ ಆಕೆಯು ಒಬ್ಬ ಮಗನನ್ನು ಹೆತ್ತಳು. |
58. | ಆಗ ಕರ್ತನು ತನ್ನ ಮಹಾಕರುಣೆಯನ್ನು ಆಕೆಯ ಮೇಲೆ ತೋರಿಸಿದ್ದನ್ನು ಆಕೆಯ ನೆರೆಹೊರೆಯವರೂ ಬಂಧುಗಳೂ ಕೇಳಿ ಆಕೆಯ ಕೂಡ ಸಂತೋಷಪಟ್ಟರು. |
59. | ತರುವಾಯ ಅವರು ಎಂಟನೇ ದಿನದಲ್ಲಿ ಆ ಮಗುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಬಂದು ಅವನ ತಂದೆಯ ಹೆಸರಿನಂತೆ ಅವನನ್ನು ಜಕರೀಯನೆಂದು ಕರೆದರು. |
60. | ಅದಕ್ಕೆ ಅವನ ತಾಯಿಯು ಪ್ರತ್ಯುತ್ತರ ವಾಗಿ--ಹಾಗಲ್ಲ. ಅವನು ಯೋಹಾನನೆಂದು ಕರೆಯ ಲ್ಪಡಬೇಕು ಅಂದಳು. |
61. | ಅದಕ್ಕವರು ಆಕೆಗೆ--ನಿನ್ನ ಬಂಧುಗಳಲ್ಲಿ ಈ ಹೆಸರಿನಿಂದ ಕರೆಯಲ್ಪಟ್ಟವರು ಒಬ್ಬರೂ ಇಲ್ಲ ಅಂದರು. |
62. | ಅವನು ಯಾವ ಹೆಸರಿ ನಿಂದ ಕರೆಯಲ್ಪಡಬೇಕೆಂದು ಅವನ ತಂದೆಗೆ ಅವರು ಸನ್ನೆ ಮಾಡಿದರು. |
63. | ಆಗ ಅವನು ಒಂದು ಬರೆಯುವ ಹಲಗೆಯನ್ನು ಕೇಳಿ ಅವನ ಹೆಸರು ಯೋಹಾನನು ಎಂದು ಬರೆದನು. ಆಗ ಅವರೆಲ್ಲರೂ ಆಶ್ಚರ್ಯಪಟ್ಟರು. |
64. | ಕೂಡಲೆ ಅವನ ಬಾಯಿ ತೆರೆಯಲ್ಪಟ್ಟು ಅವನ ನಾಲಿಗೆಯು ಸಡಿಲವಾಯಿತು ಮತ್ತು ಅವನು ಮಾತ ನಾಡಿ ದೇವರನ್ನು ಕೊಂಡಾಡಿದನು. |
65. | ಆಗ ಅವರ ಸುತ್ತಲೂ ಮತ್ತು ಎಲ್ಲಾ ಯೂದಾಯದ ಬೆಟ್ಟದ ಸೀಮೆಯಲ್ಲಿಯೂ ಈ ಸಂಗತಿಗಳೆಲ್ಲಾ ಹರಡಿದವು. |
66. | ಕೇಳಿದವರೆಲ್ಲರೂ ಅವುಗಳನ್ನು ತಮ್ಮ ಹೃದಯದಲ್ಲಿ ಇಟ್ಟುಕೊಂಡು--ಈ ಕೂಸೂ ಎಂಥದ್ದಾಗುವನೊ ಎಂದು ಅಂದುಕೊಂಡರು. ಕರ್ತನ ಹಸ್ತವು ಅವನ ಸಂಗಡ ಇತ್ತು. |
67. | ಅವನ ತಂದೆಯಾದ ಜಕರೀಯನು ಪವಿತ್ರಾತ್ಮ ಭರಿತನಾಗಿ ಪ್ರವಾದಿಸುತ್ತಾ-- |
68. | ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ. |
69. | ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ. |
70. | ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ |
71. | ನಾವು ನಮ್ಮ ಶತ್ರುಗಳಿಂದಲೂ ನಮ್ಮನ್ನು ಹಗೆ ಮಾಡುವವರ ಕೈಯಿಂದಲೂ ರಕ್ಷಿಸಲ್ಪಡುವಂತೆ |
72. | ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು |
73. | ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆ |
74. | ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ |
75. | ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ಆತನ ಮುಂದೆ ಪರಿಶುದ್ಧತೆಯಿಂದಲೂ ನೀತಿಯಿಂದಲೂ ಆತನನ್ನು ಸೇವಿಸುವವರಾಗುವದಕ್ಕೆ ಆತನು ಅನುಗ್ರಹಿ ಸುವನು. |
76. | ಇದಲ್ಲದೆ ಮಗುವೇ, ನೀನಾದರೋ ಮಹೋನ್ನತನ ಪ್ರವಾದಿ ಎಂದು ಕರೆಯಲ್ಪಡುವಿ; ಯಾಕಂದರೆ ಕರ್ತನ ಮಾರ್ಗಗಳನ್ನು ಸಿದ್ಧಮಾಡು ವದಕ್ಕೆ ಆತನ ಮುಂದೆ ಹೋಗುವಿ. |
77. | ಹೇಗೆಂದರೆ ಆತನು ತನ್ನ ಜನರಿಗೆ ಪಾಪಗಳ ಪರಿಹಾರದಿಂದ ರಕ್ಷಣೆಯ ತಿಳುವಳಿಕೆಯನ್ನು ಕೊಡುವನು. |
78. | ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ |
79. | ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು. |
80. | ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು. |
Luke (1/24) → |