← Luke (15/24) → |
1. | ಇದಾದ ಮೇಲೆ ಎಲ್ಲಾ ಸುಂಕದವರೂ ಪಾಪಿಗಳೂ ಉಪದೇಶವನ್ನು ಕೇಳುವದ ಕ್ಕಾಗಿ ಆತನ ಸವಿಾಪಕ್ಕೆ ಬಂದರು. |
2. | ಫರಿಸಾಯರು ಮತ್ತು ಶಾಸ್ತ್ರಿಗಳು--ಇವನು ಪಾಪಿಗಳನ್ನು ಅಂಗೀಕರಿಸಿ ಅವರೊಂದಿಗೆ ಊಟ ಮಾಡುತ್ತಾನೆ ಎಂದು ಹೇಳುತ್ತಾ ಗುಣುಗುಟ್ಟಿದರು. |
3. | ಆತನು ಅವರಿಗೆ ಈ ಸಾಮ್ಯವನ್ನು ಹೇಳಿ ದನು-- |
4. | ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ? |
5. | ಅವನು ಆ ಕುರಿಯನ್ನು ಕಂಡುಕೊಂಡ ಮೇಲೆ ಸಂತೋಷ ಪಡುತ್ತಾ ಅದನ್ನು ತನ್ನ ಹೆಗಲುಗಳ ಮೇಲೆ ಹೊತ್ತು ಕೊಳ್ಳುವನು. |
6. | ಆಮೇಲೆ ಅವನು ಮನೆಗೆ ಬಂದು ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ;ಯಾಕಂದರೆ ಕಳೆದುಹೋದ ನನ್ನ ಕುರಿಯನ್ನು ನಾನು ಕಂಡು ಕೊಂಡೆನು ಅನ್ನುವನು. |
7. | ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು. |
8. | ಯಾವ ಸ್ತ್ರೀಯು ತನ್ನಲ್ಲಿ ಹತ್ತು ಬೆಳ್ಳಿಯ ನಾಣ್ಯಗಳಿರಲಾಗಿ ಒಂದು ನಾಣ್ಯವನ್ನು ಕಳೆದುಕೊಂಡರೆ ದೀಪಹಚ್ಚಿ ಮನೆಯನ್ನು ಗುಡಿಸಿ ಅವಳು ಅದನ್ನು ಕಂಡುಕೊಳ್ಳುವ ವರೆಗೆ ಜಾಗ್ರತೆಯಿಂದ ಹುಡುಕುವ ದಿಲ್ಲವೇ? |
9. | ಅವಳು ಅದನ್ನು ಕಂಡುಕೊಂಡ ಮೇಲೆ ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ; ಯಾಕಂ ದರೆ ನಾನು ಕಳಕೊಂಡಿದ್ದ ನಾಣ್ಯವನ್ನು ಕಂಡುಕೊಂಡೆನು ಅನ್ನುವಳು. |
10. | ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು. |
11. | ಆತನು--ಒಬ್ಬಾನೊಬ್ಬ ಮನುಷ್ಯನಿಗೆ ಇಬ್ಬರು ಕುಮಾರರಿದ್ದರು. |
12. | ಅವರಲ್ಲಿ ಕಿರಿಯವನು ತನ್ನ ತಂದೆಗೆ--ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು ಅಂದನು; ಆಗ ಅವನು ತನ್ನ ಬದುಕನ್ನು ಅವರಿಗೆ ವಿಭಾಗಿಸಿದನು. |
13. | ಕೆಲವೇ ದಿನಗಳಲ್ಲಿ ಕಿರೀ ಮಗನು ಎಲ್ಲವನ್ನೂ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿ ಅಲ್ಲಿ ದುಂದುಗಾರನಾಗಿ ಜೀವಿಸಿ ತನ್ನ ಆಸ್ತಿಯನ್ನು ಹಾಳುಮಾಡಿಬಿಟ್ಟನು. |
14. | ಅವನು ಎಲ್ಲವನ್ನು ವೆಚ್ಚ ಮಾಡಿದ ಮೇಲೆ ಆ ದೇಶದಲ್ಲಿ ಘೋರವಾದ ಬರ ಉಂಟಾಯಿತು. ಹೀಗೆ ಅವನು ಕೊರತೆ ಪಡಲಾರಂಭಿಸಿದನು. |
15. | ಆಗ ಅವನು ಹೋಗಿ ಆ ದೇಶದ ನಿವಾಸಿಯಾಗಿದ್ದವನೊಂದಿಗೆ ಸೇರಿ ಕೊಂಡನು; ಆ ಮನುಷ್ಯನು ಹಂದಿಗಳನ್ನು ಮೇಯಿಸು ವದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ |
16. | ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ ಯಾವನೂ ಅವನಿಗೆ ಕೊಡಲಿಲ್ಲ. |
17. | ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ. |
18. | ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ; |
19. | ಇನ್ನೆಂದಿಗೂ ನಾನು ನಿನ್ನ ಮಗನೆಂದು ಕರೆಯಲ್ಪಡುವದಕ್ಕೆ ಯೋಗ್ಯನಲ್ಲ; ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಅನ್ನುವೆನು ಎಂದು ಅಂದುಕೊಂಡು |
20. | ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು. |
21. | ಮಗನು ಅವನಿಗೆ--ಅಪ್ಪಾ, ನಾನು ಪರಲೋಕಕ್ಕೆ ವಿರೋಧ ವಾಗಿಯೂ ನಿನ್ನ ದೃಷ್ಟಿಯಲ್ಲಿಯೂ ಪಾಪ ಮಾಡಿದ್ದೇನೆ; ನಿನ್ನ ಮಗನೆನಿಸಿಕೊಳ್ಳುವದಕ್ಕೆ ಇನ್ನೆಂದಿಗೂ ನಾನು ಯೋಗ್ಯನಲ್ಲ ಅಂದನು. |
22. | ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ; |
23. | ಇದಲ್ಲದೆ ಕೊಬ್ಬಿದ ಆ ಕರುವನ್ನು ಇಲ್ಲಿ ತಂದು ವಧಿಸಿರಿ; ನಾವು ಉಂಡು ಸಂತೋಷಪಡೋಣ; |
24. | ಯಾಕಂದರೆ ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋಗಿದ್ದನು, ಈಗ ಸಿಕ್ಕಿದ್ದಾನೆ ಎಂದು ಹೇಳಿದನು; ಹೀಗೆ ಅವರು ಸಂತೋಷ ಪಡಲಾರಂಭಿಸಿದರು. |
25. | ಆಗ ಹಿರೀಮಗನು ಹೊಲದಲ್ಲಿದ್ದನು; ಅವನು ಮನೆಯ ಸವಿಾಪಕ್ಕೆ ಬರುತ್ತಿದ್ದಾಗ ವಾದ್ಯವನ್ನೂ ನಾಟ್ಯವನ್ನೂ ಕೇಳಿಸಿಕೊಂಡನು. |
26. | ಅವನು ಸೇವಕರಲ್ಲಿ ಒಬ್ಬನನ್ನು ಕರೆದು ಇವುಗಳು ಏನೆಂದು ಕೇಳಿದನು. |
27. | ಆ ಸೇವಕನು ಅವನಿಗೆ--ನಿನ್ನ ತಮ್ಮನು ಬಂದಿದ್ದಾನೆ; ನಿನ್ನ ತಂದೆಯು ಅವನನ್ನು ಸುರಕ್ಷಿತವಾಗಿ ಸೌಖ್ಯದಲ್ಲಿ ಸ್ವೀಕರಿಸಿದ್ದರಿಂದ ಆ ಕೊಬ್ಬಿದ ಕರುವನ್ನು ಕೊಯ್ಸಿದ್ದಾನೆ ಅಂದನು. |
28. | ಅದಕ್ಕೆ ಅವನು ಕೋಪಗೊಂಡು ಒಳಗೆ ಹೋಗಲೊಲ್ಲದೆ ಇದ್ದನು. ಆದಕಾರಣ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿ ಕೊಂಡನು. |
29. | ಆದರೆ ಅವನು ಪ್ರತ್ಯುತ್ತರವಾಗಿ ತನ್ನ ತಂದೆಗೆ--ಇಗೋ, ಇಷ್ಟು ವರುಷಗಳ ವರೆಗೆ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ, ನಾನು ನಿನ್ನ ಅಪ್ಪಣೆ ಯನ್ನು ಎಂದಾದರೂ ವಿಾರಲಿಲ್ಲ; ಆದಾಗ್ಯೂ ನಾನು ನನ್ನ ಸ್ನೇಹಿತರೊಂದಿಗೆ ಸಂತೋಷಪಡುವದಕ್ಕಾಗಿ ನೀನ |
30. | ಆದರೆ ನಿನ್ನ ಬದುಕನ್ನು ಸೂಳೆಯ ರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದ ಕೂಡಲೆ ಅವನಿಗೋಸ್ಕರ ಕೊಬ್ಬಿದ ಕರುವನ್ನು ನೀನು ಕೊಯ್ಸಿದ್ದೀ ಅಂದನು. |
31. | ಆಗ ಅವನು--ಮಗನೇ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ನನಗಿರುವ ದೆಲ್ಲವೂ ನಿನ್ನದೇ. |
32. | ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು. |
← Luke (15/24) → |