← Luke (16/24) → |
1. | ತರುವಾಯ ಆತನು ತನ್ನ ಶಿಷ್ಯರಿಗೂ #NAME? |
2. | ಆಗ ಅವನು ಆ ಮನೆವಾರ್ತೆ ಯವನನ್ನು ಕರೆದು ಅವನಿಗೆ--ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವದು? ಮನೆವಾರ್ತೆಯ ನಿನ್ನ ಲೆಕ್ಕವನ್ನು ಒಪ್ಪಿಸು; ಯಾಕಂದರೆ ನೀನು ಇನ್ನು ಮೇಲೆ ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಅಂದನು. |
3. | ಆಗ ಆ ಮನೆವಾರ್ತೆಯವನು ತನ್ನೊಳಗೆ--ನಾನೇನು ಮಾಡಲಿ? ಯಾಕಂದರೆ ನನ್ನ ಯಜಮಾನನು ನನ್ನನ್ನು ಮನೆವಾರ್ತೆಯ ಕೆಲಸದಿಂದ ತೆಗೆದುಬಿಡು ತ್ತಾನೆ; ನಾನು ಅಗೆಯಲಾರೆನು, ಭಿಕ್ಷೆ ಬೇಡುವದಕ್ಕೆ ನಾನು ನಾಚಿಕೊಳ್ಳುತ್ತೇನೆ. |
4. | ಮನೆವಾರ್ತೆಯ ಕೆಲಸ ದಿಂದ ನನ್ನನ್ನು ತೆಗೆದ ಮೇಲೆ ಅವರು ನನ್ನನ್ನು ತಮ್ಮ ಮನೆಗಳಲ್ಲಿ ಸೇರಿಸಿಕೊಳ್ಳುವಂತೆ ನಾನು ಮಾಡಬೇಕಾ ದದ್ದನ್ನು ನಿರ್ಧರಿಸಿದ್ದೇನೆ ಎಂದು ಅಂದುಕೊಂಡನು. |
5. | ಹೀಗೆ ಅವನು ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನು ಕರೆದು ಮೊದಲನೆಯವನಿಗೆ--ನೀನು ನನ್ನ ಯಜಮಾನನಿಗೆ ಸಲ್ಲಿಸಬೇಕಾದದ್ದು ಎಷ್ಟು ಎಂದು ಕೇಳಲು |
6. | ಅವನು--ಒಂದು ನೂರು ಅಳತೆ ಎಣ್ಣೆ ಅಂದನು. ಆಗ ಅವನು--ನಿನ್ನ ಬೆಲೆ ಪಟ್ಟಿಯನ್ನು ತೆಗೆದುಕೋ, ಮತ್ತು ಬೇಗ ಕೂತುಕೊಂಡು ಐವತ್ತು ಎಂದು ಬರೆ ಎಂದು ಅವನಿಗೆ ಹೇಳಿದನು. |
7. | ಇದಲ್ಲದೆ ಅವನು ಮತ್ತೊಬ್ಬನಿಗೆ--ನೀನು ಸಲ್ಲಿಸಬೇಕಾದದ್ದು ಎಷ್ಟು? ಅನ್ನಲು ಅವನು--ಒಂದು ನೂರು ಅಳತೆ ಗೋಧಿ ಅಂದನು. ಆಗ ಅವನು--ನಿನ್ನ ಬೆಲೆ ಪಟ್ಟಿ ಯನ್ನು ತೆಗೆದುಕೊಂಡು ಎಂಭತ್ತು ಎಂದು ಬರೆ ಅಂದನು. |
8. | ಆಗ ಯಜಮಾನನು ಅನ್ಯಾಯಗಾರನಾದ ಆ ಮನೆವಾರ್ತೆಯವನು ಜಾಣತನ ಮಾಡಿದನೆಂದು ಅವನನ್ನು ಹೊಗಳಿದನು; ಯಾಕಂದರೆ ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಜಾಣರಾಗಿದ್ದಾರೆ. |
9. | ನಾನು ನಿಮಗೆ ಹೇಳುವದೇ ನಂದರೆ--ಅನ್ಯಾಯದ ಧನದಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಅದು ನಿಮ್ಮನ್ನು ಬಿಟ್ಟು ಹೋದಾಗ ಅವರು ನಿಮ್ಮನ್ನು ನಿತ್ಯವಾದ ನಿವಾಸಗಳಲ್ಲಿ ಸೇರಿಸಿ ಕೊಳ್ಳುವರು. |
10. | ಯಾವನು ಸ್ವಲ್ಪವಾದದ್ದರಲ್ಲಿ ನಂಬಿಗಸ್ತ ನಾಗಿರುವನೋ ಅವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿದ್ದಾನೆ; ಯಾವನು ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವನೋ ಅವನು ಬಹಳವಾದದ್ದ ರಲ್ಲಿಯೂ ಅನ್ಯಾಯಗಾರನಾಗಿದ್ದಾನೆ. |
11. | ಆದದರಿಂದ ಅನ್ಯಾಯವಾದ ಧನದಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು? |
12. | ಇದಲ್ಲದೆ ಮತ್ತೊಬ್ಬನದರಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಮ್ಮ ಸ್ವಂತದ್ದನ್ನು ನಿಮಗೆ ಯಾರು ಕೊಡುವರು? |
13. | ಯಾವ ಸೇವಕನೂ ಇಬ್ಬರು ಯಜಮಾನರನ್ನು ಸೇವಿಸಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಮತ್ತೊಬ್ಬನನ್ನು ಪ್ರೀತಿ ಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು; ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ ಅಂದನು. |
14. | ಆಗ ಲೋಭಿ ಗಳಾದ ಫರಿಸಾಯರು ಸಹ ಇವೆಲ್ಲವುಗಳನ್ನು ಕೇಳಿ ಆತನಿಗೆ ಪರಿಹಾಸ್ಯ ಮಾಡಿದರು. |
15. | ಆಗ ಆತನು ಅವರಿಗೆ--ಮನುಷ್ಯರ ಮುಂದೆ ನೀತಿವಂತರಾಗಿ ಮಾಡಿ ಕೊಳ್ಳುವವರು ನೀವೇ; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾನೆ; ಯಾಕಂದರೆ ಮನುಷ್ಯರಲ್ಲಿ ಯಾವದು ಶ್ರೇಷ್ಠವೆಂದು ಎಣಿಸಲ್ಪ ಡುತ್ತದೋ ಅದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ. |
16. | ನ್ಯಾಯ ಪ್ರಮಾಣವೂ ಪ್ರವಾದನೆಗಳೂ ಯೋಹಾ ನನವರೆಗೆ ಇದ್ದವು; ದೇವರ ರಾಜ್ಯವು ಅಂದಿನಿಂದ ಸಾರಲ್ಪಡುತ್ತಾ ಇದೆ, ಪ್ರತಿಯೊಬ್ಬನು ಬಲವಂತದಿಂದ ಅದರೊಳಗೆ ನುಗ್ಗುತ್ತಾನೆ. |
17. | ನ್ಯಾಯಪ್ರಮಾಣದ ಒಂದು ಗುಡುಸಾದರೂ ಬಿದ್ದು ಹೋಗುವದಕ್ಕಿಂತ ಆಕಾಶವೂ ಭೂಮಿಯೂ ಅಳಿದು ಹೋಗುವದು ಸುಲಭ. |
18. | ಯಾವನು ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುತ್ತಾನೆ; ಯಾವನು ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರಮಾಡುತ್ತಾನೆ. |
19. | ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು. |
20. | ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು. |
21. | ಐಶ್ವರ್ಯವಂತನ ಮೇಜಿ ನಿಂದ ಬೀಳುವ (ರೊಟ್ಟಿ) ತುಂಡುಗಳನ್ನು ತಿನ್ನುವದಕ್ಕೆ ಅವನು ಆಶೆಪಡುತ್ತಿದ್ದನು; ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು. |
22. | ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು. |
23. | ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು. |
24. | ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು. |
25. | ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ. |
26. | ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು. |
27. | ಆಗ ಅವನು--ಅಪ್ಪಾ, ಹಾಗಾದರೆ ನೀನು ಅವನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ. |
28. | ನನಗೆ ಐದುಮಂದಿ ಸಹೋದರರಿದ್ದಾರೆ; ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದ ಹಾಗೆ ಇವನು ಅವರಿಗೆ ಸಾಕ್ಷಿ ಕೊಡಲಿ ಅಂದನು. |
29. | ಅದಕ್ಕೆ ಅಬ್ರಹಾಮನು ಅವನಿಗೆ--ಅವರಿಗೆ ಮೋಶೆಯೂ ಪ್ರವಾದಿಗಳೂ ಇದ್ದಾರೆ. ಅವರು ಹೇಳಿದ್ದನ್ನು ಅವರು ಕೇಳಲಿ ಅಂದನು. |
30. | ಆಗ ಅವನು--ಹಾಗಲ್ಲ, ತಂದೆ ಯಾದ ಅಬ್ರಹಾಮನೇ, ಸತ್ತವರೊಳಗಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಮಾನಸಾಂತರ ಪಡುವರು ಅಂದನು. |
31. | ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು. |
← Luke (16/24) → |