← Luke (19/24) → |
1. | ಯೇಸು ಯೆರಿಕೋವನ್ನು ಪ್ರವೇಶಿಸಿ ಹಾದು ಹೋದನು. |
2. | ಆಗ ಇಗೋ, ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯ ನಿದ್ದನು. ಇವನು ಸುಂಕದವರಲ್ಲಿ ಮುಖ್ಯಸ್ಥನೂ ಐಶ್ವರ್ಯವಂತನೂ ಆಗಿದ್ದನು. |
3. | ಯೇಸು ಯಾರೆಂದು ಅವನು ನೋಡುವದಕ್ಕೆ ಅಪೇಕ್ಷಿಸಿದರೂ ತಾನು ಗಿಡ್ಡನಾಗಿದ್ದದರಿಂದ ಜನದಟ್ಟನೆಯ ನಿಮಿತ್ತವಾಗಿ ಆತನನ್ನು ನೋಡಲಾರದೆ ಇದ್ದನು. |
4. | ಆಗ ಆತನನ್ನು ನೋಡುವ ಹಾಗೆ ಅವನು ಮುಂದಾಗಿ ಓಡಿಹೋಗಿ ಒಂದು ಆಲದ ಮರವನ್ನು ಹತ್ತಿದನು; ಯಾಕಂದರೆ ಆತನು ಆ ಮಾರ್ಗವಾಗಿಯೇ ಹೋಗುವವನಾಗಿ ದ್ದನು. |
5. | ಯೇಸು ಆ ಸ್ಥಳಕ್ಕೆ ಬಂದು ಮೇಲಕ್ಕೆ ನೋಡಿ ಅವನನ್ನು ಕಂಡು ಅವನಿಗೆ--ಜಕ್ಕಾಯನೇ, ತ್ವರೆಯಾಗಿ ಇಳಿದು ಬಾ; ಯಾಕಂದರೆ ಈ ದಿನ ನಾನು ನಿನ್ನ ಮನೆಯಲ್ಲಿ ಇರತಕ್ಕದ್ದಾಗಿದೆ ಅಂದನು. |
6. | ಆಗ ಅವನು ತ್ವರೆಯಾಗಿ ಇಳಿದು ಬಂದು ಅತನನ್ನು ಸಂತೋಷದಿಂದ ಸೇರಿಸಿಕೊಂಡನು. |
7. | ಇದನ್ನು ಅವರು ನೋಡಿ ದಾಗ--ಇವನು ಪಾಪಿಯಾದವನೊಂದಿಗೆ ಅತಿಥಿ ಯಾಗಿರಲು ಹೋಗಿದ್ದಾನೆ ಎಂದು ಹೇಳಿ ಅವರೆಲ್ಲರೂ ಗುಣುಗುಟ್ಟಿದರು. |
8. | ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು. |
9. | ಆಗ ಯೇಸು ಅವನಿಗೆ--ಈ ದಿನ ಈ ಮನೆಗೆ ರಕ್ಷಣೆ ಆಯಿತು. ಯಾಕಂದರೆ ಇವನು ಸಹ ಅಬ್ರಹಾಮನ ಮಗ ನಲ್ಲವೇ. |
10. | ಯಾಕಂದರೆ ಮನುಷ್ಯಕುಮಾರನು ತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು. |
11. | ಅವರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸವಿಾಪವಾಗಿದ್ದದ ರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗು ವದೆಂದು ಅವರು ಭಾವಿಸಿದ್ದದರಿಂದಲೂ ಆತನು ಇನ್ನೂ ಒಂದು ಸಾಮ್ಯವನ್ನು ಹೇಳಿದನು. |
12. | ಅದೇ ನಂದರೆ--ಕೀರ್ತಿವಂತನಾದ ಒಬ್ಬಾನೊಬ್ಬ ಮನುಷ್ಯನು ತನಗೋಸ್ಕರ ರಾಜ್ಯವನ್ನು ಪಡೆದುಕೊಂಡು ತಿರಿಗಿ ಬರುವದಕ್ಕಾಗಿ ದೂರ ದೇಶಕ್ಕೆ ಹೊರಟುಹೋದನು. |
13. | ಅವನು ತನ್ನ ಹತ್ತು ಆಳುಗಳನ್ನು ಕರೆದು ಅವರಿಗೆ ಹತ್ತು ಮೊಹರಿಗಳನ್ನು ಒಪ್ಪಿಸಿ--ನಾನು ಬರುವವರೆಗೆ ವ್ಯಾಪಾರ ಮಾಡಿಕೊಂಡಿರ್ರಿ ಎಂದು ಹೇಳಿದನು. |
14. | ಆದರೆ ಅವರ ಪಟ್ಟಣದವರು ಅವನನ್ನು ದ್ವೇಷಿಸಿ--ಇವನು ನಮ್ಮ ಮೇಲೆ ಆಡಳಿತ ಮಾಡುವದು ನಮಗೆ ಮನಸ್ಸಿಲ್ಲ ಎಂದು ಹೇಳಿ ಅವನ ಹಿಂದೆ ಸಂದೇಶವನ್ನು ಕಳುಹಿಸಿದರು. |
15. | ಇದಾದ ಮೇಲೆ ಅವನು ರಾಜ್ಯವನ್ನು ಪಡೆದು ಹಿಂದಿರುಗಿದಾಗ ವ್ಯಾಪಾ ರದಿಂದ ಪ್ರತಿಯೊಬ್ಬ ಮನುಷ್ಯನು ಎಷ್ಟು ಲಾಭವನ್ನು ಪಡೆದನೆಂದು ತಿಳುಕೊಳ್ಳುವಂತೆ ತಾನು ಹಣಕೊಟ್ಟ ಆ ಆಳುಗಳನ್ನು ತನ್ನ ಬಳಿಗೆ ಕರೆಯಬೇಕೆಂದು ಆಜ್ಞಾಪಿ ಸಿದನು. |
16. | ಆಗ ಮೊದಲನೆಯವನು ಬಂದು--ಒಡೆಯನೇ, ನಿನ್ನ ಮೊಹರಿನಿಂದ ಹತ್ತು ಮೊಹರಿಗಳನ್ನು ಸಂಪಾದಿಸಿದ್ದೇನೆ ಅಂದನು. |
17. | ಅದಕ್ಕೆ ಅವನು ಅವ ನಿಗೆ--ಒಳ್ಳೇದು. ನೀನು ಉತ್ತಮ ಆಳು; ಯಾಕಂದರೆ ನೀನು ಅತಿ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು ಅಂದನು. |
18. | ಎರಡನೆಯವನು ಬಂದು--ಒಡೆಯನೇ, ನಿನ್ನ ಮೊಹರಿಯಿಂದ ಐದು ಮೊಹರಿಗಳನ್ನು ಸಂಪಾ ದಿಸಿದ್ದೇನೆ ಅಂದನು. |
19. | ಅದಕ್ಕೆ ಅವನು ಅದೇ ಪ್ರಕಾರ--ನೀನು ಸಹ ಐದು ಪಟ್ಟಣಗಳ ಮೇಲಿರು ಎಂದು ಅವನಿಗೆ ಹೇಳಿದನು. |
20. | ಆಗ ಮತ್ತೊಬ್ಬನು ಬಂದು--ಒಡೆಯನೇ, ಇಗೋ, ನಾನು ಕರವಸ್ತ್ರದಲ್ಲಿ ಕಟ್ಟಿ ಇಟ್ಟಿದ್ದ ನಿನ್ನ ಮೊಹರಿ ಇದೇ. |
21. | ಯಾಕಂದರೆ ನೀನು ಕಠಿಣವಾದ ಮನುಷ್ಯನು ಎಂದು ನಾನು ನಿನಗೆ ಭಯಪಟ್ಟೆನು; ನೀನು ಇಡದೆ ಇರುವದನ್ನು ತಕ್ಕೊಳ್ಳು ವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆಗಿದ್ದೀ ಅಂದನು. |
22. | ಆಗ ಅವನು--ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿ ಸುವೆನು. ನಾನು ಇಡದೆ ಇರುವಲ್ಲಿ ತಕ್ಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ. |
23. | ಹಾಗಿದ್ದರೆ ನನ್ನ ಹಣವನ್ನು ಧನ ವ್ಯವಹಾರದ ಸಂಸ್ಥೆಯಲ್ಲಿ ಯಾಕೆ ಹಾಕಲಿಲ್ಲ? ನಾನು ಬಂದಾಗ ಅದನ್ನು ಬಡ್ಡಿಯ ಸಹಿತ ತೆಗೆದುಕೊಳ್ಳುತ್ತಿದ್ದೆನು ಎಂದು ಅವನಿಗೆ ಹೇಳಿದನು. |
24. | ಅವನು ಹತ್ತಿರ ನಿಂತಿದ್ದವರಿಗೆ--ಇವನ ಕಡೆಯಿಂದ ಆ ಮೊಹರಿಯನ್ನು ತಕ್ಕೊಂಡು ಹತ್ತು ಮೊಹರಿಗಳಿ ದ್ದವನಿಗೆ ಕೊಡಿರಿ ಅಂದನು. |
25. | (ಆಗ ಅವರು ಅವ ನಿಗೆ--ಒಡೆಯನೇ, ಅವನಿಗೆ ಹತ್ತು ಮೊಹರಿಗಳಿವೆ ಯಲ್ಲಾ ಅಂದರು.) |
26. | ಆದರೆ ನಾನು ನಿಮಗೆ ಹೇಳು ವದೇನಂದರೆ--ಇದ್ದ ಪ್ರತಿಯೊಬ್ಬನಿಗೆ ಕೊಡಲ್ಪಡು ವದು ಮತ್ತು ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ಅವನಿಂದ ತೆಗೆಯಲ್ಪಡುವದು. |
27. | ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು. |
28. | ಆತನು ಹೀಗೆ ಹೇಳಿದ ತರುವಾಯ ಮುಂದಾಗಿ ಯೆರೂಸಲೇಮಿಗೆ ಏರಿಹೋದನು. |
29. | ಇದಾದ ಮೇಲೆ ಆತನು ಎಣ್ಣೇಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸವಿಾಪಿಸಿದಾಗ ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ-- |
30. | ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ನೀವು ಅದ ರೊಳಗೆ ಪ್ರವೇಶಿಸುತ್ತಿರುವಾಗ ಅಲ್ಲಿ ಕಟ್ಟಿರುವ ಮತ್ತು ಯಾವ ಮನುಷ್ಯನೂ ಅದರ ಮೇಲೆ ಹತ್ತದಿರುವ ಒಂದು ಕತ್ತೇ ಮರಿಯನ್ನು ಕಾಣುವಿರಿ; ಅದನ್ನು ಬಿಚ್ಚಿ ಇಲ್ಲಿಗೆ ತಕ್ಕೊಂಡು ಬನ್ನಿರಿ; |
31. | ಯಾವನಾದರೂ ನಿಮಗೆ--ಯಾಕೆ ಅದನ್ನು ಬಿಚ್ಚುತ್ತೀರಿ ಎಂದು ಕೇಳಿದರೆ ನೀವು ಅವನಿಗೆ--ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ ಅಂದನು. |
32. | ಕಳುಹಿಸಲ್ಪಟ್ಟವರು ತಮ್ಮ ಮಾರ್ಗವಾಗಿ ಹೊರಟು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು. |
33. | ಅವರು ಆ ಕತ್ತೇ ಮರಿ ಯನ್ನು ಬಿಚ್ಚುತ್ತಿರುವಾಗ ಆದರ ಯಜಮಾನರು ಅವರಿಗೆ--ನೀವು ಕತ್ತೇಮರಿಯನ್ನು ಯಾಕೆ ಬಿಚ್ಚುತ್ತೀರಿ ಎಂದು ಕೇಳಿದ್ದಕ್ಕೆ |
34. | ಅವರು--ಅದು ಕರ್ತನಿಗೆ ಬೇಕಾಗಿದೆ ಅಂದರು. |
35. | ಅವರು ಅದನ್ನು ಯೇಸು ವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಕತ್ತೇಮರಿಯ ಮೇಲೆ ಹಾಕಿ ಅದರ ಮೇಲೆ ಯೇಸುವನ್ನು ಕೂಡ್ರಿಸಿ ದರು. |
36. | ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು. |
37. | ಇದಲ್ಲದೆ ಆತನು ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಸವಿಾಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ನೋಡಿದ್ದ ಎಲ್ಲಾ ಮಹತ್ಕಾರ್ಯಗಳಿಗಾಗಿ ಸಂತೋಷ ಪಡುತ್ತಾ ಮಹಾಧ್ವನಿಯಿಂದ ದೇವರನ್ನು ಕೊಂಡಾಡ ಲಾರಂಭಿಸಿ-- |
38. | ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು. |
39. | ಜನಸಮೂಹದೊಳಗಿಂದ ಕೆಲವು ಫರಿಸಾಯರು ಆತನಿಗೆ--ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು ಅಂದರು. |
40. | ಆಗ ಆತನು ಪ್ರತ್ಯುತ್ತರವಾಗಿ ಅವ ರಿಗೆ--ಇವರು ಸುಮ್ಮನಿರುವದಾದರೆ ಈ ಕಲ್ಲುಗಳು ಕೂಡಲೆ ಕೂಗುವವು ಎಂದು ನಾನು ನಿಮಗೆ ಹೇಳು ತ್ತೇನೆ ಅಂದನು. |
41. | ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು-- |
42. | ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ. |
43. | ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು. |
44. | ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು. |
45. | ಆತನು ದೇವಾಲಯದೊಳಕ್ಕೆ ಹೋಗಿ ಅದರಲ್ಲಿ ಮಾರುವವರನ್ನೂ ಕೊಂಡುಕೊಳ್ಳುವವರನ್ನೂ ಹೊರಗೆ ಹಾಕುವದಕ್ಕೆ ಪ್ರಾರಂಭಿಸಿ |
46. | ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಬರೆಯಲ್ಪಟ್ಟಿದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಅಂದನು. |
47. | ಇದಲ್ಲದೆ ಆತನು ಪ್ರತಿದಿನವೂ ದೇವಾಲಯ ದಲ್ಲಿ ಬೋಧಿಸುತ್ತಿದ್ದನು. ಆದರೆ ಪ್ರಧಾನಯಾಜಕರೂ ಶಾಸ್ತ್ರಿಗಳೂ ಜನರ ಪ್ರಮುಖರೂ ಆತನನ್ನು ಕೊಲ್ಲು ವದಕ್ಕೆ ಹವಣಿಸುತ್ತಿದ್ದರು. |
48. | ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು. |
← Luke (19/24) → |