← Luke (8/24) → |
1. | ಇದಾದ ಮೇಲೆ ಆತನು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಎಲ್ಲಾ ಕಡೆಯಲ್ಲಿ ಹೋಗಿ ದೇವರರಾಜ್ಯದ ಸಂತೋಷಸಮಾಚಾರವನ್ನು ಸಾರಿ ತಿಳಿಸುತ್ತಿದ್ದನು. ಹನ್ನೆರಡು ಮಂದಿ (ಶಿಷ್ಯರು) ಆತನೊಂದಿಗೆ ಇದ್ದರು. |
2. | ಇದಲ್ಲದೆ ದುರಾತ್ಮಗಳಿಂ ದಲೂ ರೋಗಗಳಿಂದಲೂ ಸ್ವಸ್ಥಮಾಡಲ್ಪಟ್ಟ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟು ಹೋಗಿದ್ದ ಮಗ್ದಲಿನ ಎಂದು ಕರೆಯಲ್ಪಟ್ಟ ಮರಿಯಳೂ |
3. | ಹೆರೋದನ ಮನೆವಾರ್ತೆಯವನಾದ ಕೂಜನ ಹೆಂಡತಿ ಯೋಹಾನಳೂ ಸುಸನ್ನಳೂ ಮತ್ತು ಬೇರೆ ಅನೇಕರು ತಮ್ಮ ಸೊತ್ತಿನಿಂದ ಆತನನ್ನು ಉಪಚರಿ ಸಿದವರು ಆತನೊಂದಿಗೆ ಇದ್ದರು. |
4. | ಆಗ ಪ್ರತಿಯೊಂದು ಪಟ್ಟಣದಿಂದ ಬಹು ಜನರು ಆತನ ಬಳಿಗೆ ಒಟ್ಟಾಗಿ ಸೇರಿ ಬರಲು ಆತನು ಒಂದು ಸಾಮ್ಯದಿಂದ-- |
5. | ಬಿತ್ತುವವನು ಬೀಜವನ್ನು ಬಿತ್ತುವದಕ್ಕಾಗಿ ಹೊರಟು ಹೋದನು. ಅವನು ಬಿತ್ತಿದಾಗ ಕೆಲವು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು; ಆಕಾಶದ ಪಕ್ಷಿಗಳು ಅವುಗಳನ್ನು ನುಂಗಿಬಿಟ್ಟವು. |
6. | ಇದಲ್ಲದೆ ಕೆಲವು ಬಂಡೆಯ ಮೇಲೆ ಬಿದ್ದವು; ಮೊಳೆತ ಕೂಡಲೆ ತ್ಯಾವ ಇಲ್ಲದಿರುವ ಕಾರಣ ಒಣಗಿಹೋದವು. |
7. | ಕೆಲವು ಮುಳ್ಳುಗಳ ಮಧ್ಯದಲ್ಲಿ ಬಿದ್ದವು; ಆಗ ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು. |
8. | ಕೆಲವು ಒಳ್ಳೇ ನೆಲದ ಮೇಲೆ ಬಿದ್ದವು; ಆಗ ಅವು ಬೆಳೆದು ನೂರರಷ್ಟು ಫಲಕೊಟ್ಟವು. ಇವುಗಳನ್ನು ಆತನು ಹೇಳಿ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಎಂದು ಕೂಗಿ ಹೇಳಿದನು. |
9. | ಆತನ ಶಿಷ್ಯರು ಆತ ನನ್ನು--ಈ ಸಾಮ್ಯವು ಏನಾಗಿರಬಹುದು ಎಂದು ಕೇಳಿದರು. |
10. | ಅದಕ್ಕೆ ಆತನು--ದೇವರರಾಜ್ಯದ ಮರ್ಮಗಳನ್ನು ತಿಳುಕೊಳ್ಳುವದಕ್ಕೆ ನಿಮಗೆ ಕೊಡ ಲ್ಪಟ್ಟಿದೆ. ಆದರೆ ಉಳಿದವರಿಗೆ ಅವರು ನೋಡಿದರೂ ಕಾಣದಂತೆ ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯ ಗಳಲ್ಲಿ ಕೊಡಲ್ಪಟ್ಟಿದೆ. |
11. | ಆ ಸಾಮ್ಯವು ಇದೇ; ಬೀಜವು ದೇವರ ವಾಕ್ಯವೇ. |
12. | ವಾಕ್ಯವನ್ನು ಕೇಳಿದವರು ನಂಬಿ ರಕ್ಷಣೆಹೊಂದಿಕೊಳ್ಳದಂತೆ ಸೈತಾನನು ಬಂದು ಅವರ ಹೃದಯದೊಳಗಿಂದ ಆ ವಾಕ್ಯವನ್ನು ತೆಗೆದು ಬಿಡುವನು. ಇವರೇ ಆ ದಾರಿಯ ಮಗ್ಗುಲಾಗಿ ರುವವರು. |
13. | ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು. |
14. | ಮುಳ್ಳುಗಳ ಮಧ್ಯದಲ್ಲಿ ಬಿದ್ದ ಬೀಜದವರು ಯಾರಂದರೆ ಅವರು ಕೇಳಿದ ಮೇಲೆ ಮುಂದರಿದು ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಭೋಗಗಳಿಂದಲೂ ಅಡಗಿಸ ಲ್ಪಟ್ಟು ಪರಿಪೂರ್ಣವಾಗಿ ಫಲಿಸದವರು. |
15. | ಆದರೆ ಒಳ್ಳೇ ಭೂಮಿಯವರು ಯಾರಂದರೆ ಯಥಾರ್ಥವಾದ ಒಳ್ಳೇ ಹೃದಯದಿಂದ ವಾಕ್ಯವನ್ನು ಕೇಳಿ ಅದನು ಕೈಕೊಂಡು ತಾಳ್ಮೆಯಿಂದ ಫಲಿಸುವವರೇ. |
16. | ದೀಪವನ್ನು ಹಚ್ಚಿ ಯಾರೂ ಅದನ್ನು ಪಾತ್ರೆ ಯಿಂದ ಮುಚ್ಚುವದಿಲ್ಲ; ಇಲ್ಲವೆ ಮಂಚದ ಕೆಳಗೆ ಇಡುವದಿಲ್ಲ; ಆದರೆ ಒಳಗೆ ಪ್ರವೇಶಿಸುವವರು ಬೆಳಕನ್ನು ನೋಡುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ. |
17. | ಪ್ರಕಟವಾಗದೆ ಮರೆಯಾಗಿ ರುವಂತದ್ದು ಒಂದೂ ಇರುವದಿಲ್ಲ ತಿಳಿಯಲ್ಪಡದೆಯೂ ಬೈಲಿಗೆ ಬಾರದೆಯೂ ಇರುವ ರಹಸ್ಯವು ಯಾವದೂ ಇಲ್ಲ. |
18. | ಆದದರಿಂದ ನೀವು ಕೇಳುವವುಗಳ ವಿಷಯದಲ್ಲಿ ಎಚ್ಚರಿಕೆ ತಂದುಕೊಳ್ಳಿರಿ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನಿಗೆ ತನಗೆ ಉಂಟೆಂದು ನೆನಸುವದನ್ನೂ ಅವನಿಂದ ತೆಗೆಯಲ್ಪ ಡುವದು ಎಂದು ಹೇಳಿದನು. |
19. | ತರುವಾಯ ಆತನ ತಾಯಿಯೂ ಆತನ ಸಹೋದರರೂ ಆತನಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಆತನ ಬಳಿಗೆ ಹೋಗಲಾರದೆ ಇದ್ದರು. |
20. | ಆಗ ಒಬ್ಬನು ಆತನಿಗೆ--ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ನೋಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ ಅಂದನು. |
21. | ಆದರೆ ಆತನು ಪ್ರತ್ಯುತ್ತರವಾಗಿ ಅವರಿಗೆ--ದೇವರ ವಾಕ್ಯವನ್ನು ಕೇಳಿ ಅದರಂತೆ ಮಾಡುವ ಇವರೇ ನನ್ನ ತಾಯಿಯೂ ನನ್ನ ಸಹೋದರರೂ ಆಗಿದ್ದಾರೆ ಎಂದು ಹೇಳಿದನು. |
22. | ಇದಾದ ಮೇಲೆ ಒಂದಾನೊಂದು ದಿವಸ ಆತನು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ ಅವರಿಗೆ--ನಾವು ಕೆರೆಯ ಆಚೇದಡಕ್ಕೆ ಹೋಗೋಣ ಎಂದು ಹೇಳಿದಾಗ ಅವರು ಹೊರಟರು. |
23. | ಆದರೆ ಅವರು ಪ್ರಯಾಣಮಾಡುತ್ತಿದ್ದಾಗ ಆತನು ನಿದ್ರಿ ಸಿದನು; ಆಗ ಬಿರುಗಾಳಿಯು ಕೆರೆಯ ಮೇಲೆ ಬೀಸಲು ದೋಣಿಯೊಳಗೆ ನೀರು ತುಂಬಿದ್ದರಿಂದ ಅವರು ಪ್ರಾಣಾಪಾಯಕ್ಕೊಳಗಾದರು. |
24. | ಆಗ ಅವರು ಆತನ ಬಳಿಗೆ ಬಂದು ಆತನನ್ನು ಎಬ್ಬಿಸಿ--ಬೋಧ ಕನೇ, ಬೋಧಕನೇ, ನಾವು ನಾಶವಾಗುತ್ತೇವೆ ಅಂದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರನ್ನೂ ಗದರಿಸಿದನು; ಆಗ ಅವು ನಿಂತು ಹೋಗಿ ಅಲ್ಲಿ ಶಾಂತತೆ ಉಂಟಾಯಿತು. |
25. | ಆಗ ಆತನು ಅವರಿಗೆ--ನಿಮ್ಮ ನಂಬಿಕೆ ಎಲ್ಲಿ ಅಂದನು. ಆಗ ಅವರು ಹೆದರಿದವರಾಗಿ ಆಶ್ಚರ್ಯದಿಂದ ಒಬ್ಬರಿಗೊಬ್ಬರು-- ಈತನು ಎಂಥಾ ಮನುಷ್ಯನು? ಯಾಕಂದರೆ ಈತನು ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವುಗಳು ಆತನಿಗೆ ವಿಧೇಯವಾಗು ತ್ತವಲ್ಲಾ ಎಂದು ಮಾತನಾಡಿಕೊಂಡರು. |
26. | ಅವರು ಗಲಿಲಾಯಕ್ಕೆ ಎದುರಾಗಿದ್ದ ಗದರೇನರ ಸೀಮೆಗೆ ತಲುಪಿದರು. |
27. | ಆತನು ದಡಕ್ಕೆ ಸೇರಿದಾಗ ಬಹು ಕಾಲದಿಂದ ದೆವ್ವಗಳು ಹಿಡಿದು ಬಟ್ಟೆ ಧರಿಸಿಕೊಳ್ಳದೆಯೂ ಯಾವ ಮನೆಯಲ್ಲಿ ವಾಸಿ ಸದೆಯೂ ಸಮಾಧಿಗಳಲ್ಲಿ ಇದ್ದ ಒಬ್ಬ ಮನುಷ್ಯನು ಪಟ್ಟಣದೊಳಗಿಂದ ಹೊರಗೆ ಬಂದು ಅಲ್ಲಿ ಆತನನ್ನು ಸಂಧಿಸಿದನು. |
28. | ಅವನು ಯೇಸುವನ್ನು ನೋಡಿದಾಗ ಆತನ ಮುಂದೆ ಬಿದ್ದು--ಯೇಸುವೇ, ಮಹೋನ್ನತ ನಾದ ದೇವರಕುಮಾರನೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಸಂಕಟಪಡಿಸಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು. |
29. | (ಯಾಕಂದರೆ ಆ ಅಶುದ್ಧಾತ್ಮವು ಅವನಿಂದ ಹೊರಗೆ ಬರಬೇಕೆಂದು ಆತನು ಅಪ್ಪಣೆ ಕೊಟ್ಟಿದ್ದನು. ಅದು ಬಹಳ ಸಾರಿ ಅವನನ್ನು ಹಿಡಿಯುತ್ತಿ ದ್ದದರಿಂದ ಅವನು ಸರಪಣಿಗಳಿಂದಲೂ ಬೇಡಿಗಳಿಂ ದಲೂ ಕಟ್ಟಲ್ಪಡುತ್ತಿದ್ದರೂ ಅವನು ಆ ಬಂಧನಗಳನ್ನು ಮುರಿದುಬಿಡುತ್ತಿದ್ದನು ಮತ್ತು ದೆವ್ವವು ಅವನನ್ನು ಅ |
30. | ಯೇಸು ಅವನಿಗೆ--ನಿನ್ನ ಹೆಸರು ಏನು ಎಂದು ಕೇಳಿದನು. ಅದಕ್ಕವನು--ಲೀಜೆನ್ (ದಂಡು) ಅಂದನು. ಯಾಕಂ ದರೆ ಬಹಳ ದೆವ್ವಗಳು ಅವನಲ್ಲಿ ಸೇರಿಕೊಂಡಿದ್ದವು. |
31. | ಅವು ತಮ್ಮನ್ನು ಹೊರಗೆ ಅಗಾಧಕ್ಕೆ ಹೋಗುವಂತೆ ಅಪ್ಪಣೆ ಕೊಡಬಾರದೆಂದು ಆತನನ್ನು ಬೇಡಿಕೊಂಡವು. |
32. | ಆಗ ಅಲ್ಲಿ ಬೆಟ್ಟದ ಮೇಲೆ ಬಹಳ ಹಂದಿಗಳ ಹಿಂಡು ಮೇಯುತ್ತಿದ್ದದರಿಂದ ಅವುಗಳೊಳಗೆ ತಾವು ಸೇರಿಕೊಳ್ಳಲು ಅಪ್ಪಣೆ ಕೊಡಬೇಕೆಂದು ಆತನನ್ನು ಬೇಡಿಕೊಂಡವು. ಆತನು ಅವುಗಳಿಗೆ ಅಪ್ಪಣೆಕೊಟ್ಟನು. |
33. | ಆಗ ಆ ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಆ ಗುಂಪು ಉಗ್ರತೆಯಿಂದ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಗಟ್ಟಿ ಸತ್ತವು. |
34. | ಅವುಗಳನ್ನು ಮೇಯಿಸು ತ್ತಿದ್ದವರು ಸಂಭವಿಸಿದ್ದನ್ನು ನೋಡಿ ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ಅದನ್ನು ತಿಳಿಯ ಪಡಿಸಿದರು. |
35. | ಆಗ ಜನರು ನಡೆದ ಸಂಗತಿ ಏನೆಂದು ನೋಡುವದಕ್ಕಾಗಿ ಹೊರಟು ಹೋಗಿ ಯೇಸುವಿನ ಬಳಿಗೆ ಬಂದು ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿ ಯುಳ್ಳವನಾಗಿ ಯೇಸುವಿನ ಪಾದಗಳ ಬಳಿಯಲ್ಲಿ ಕೂತಿರುವದನ್ನು ಕಂಡು ಭಯಪಟ್ಟರು. |
36. | ಅದನ್ನು ನೋಡಿದವರು ಸಹ ಯಾವ ರೀತಿಯಲ್ಲಿ ದೆವ್ವಗಳಿಂದ ಹಿಡಿದಿದ್ದವನು ಸ್ವಸ್ಥಮಾಡಲ್ಪಟ್ಟನೆಂದು ಅವರಿಗೆ ತಿಳಿಯ ಪಡಿಸಿದರು. |
37. | ಆಗ ಗದರೇನನ ಸೀಮೆಯ ಸುತ್ತು ಮುತ್ತಲಿನ ಜನಸಮೂಹವೆಲ್ಲವು ಬಹಳ ಭಯ ಹಿಡಿದವರಾದದರಿಂದ ಆತನು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಆತನನ್ನು ಬೇಡಿ ಕೊಂಡರು; ಆತನು ದೋಣಿಯನ್ನು ಹತ್ತಿಹಿಂದಿರುಗಿ ದನು. |
38. | ಆಗ ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ತಾನು ಆತನ ಜೊತೆಯಲ್ಲಿ ಇರುವೆನೆಂದು ಆತನನ್ನು ಬೇಡಿಕೊಂಡನು. ಆದರೆ ಯೇಸು ಅವನನ್ನು ಕಳುಹಿಸಿಬಿಟ್ಟು ಅವನಿಗೆ-- |
39. | ನೀನು ನಿನ್ನ ಸ್ವಂತ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಎಂಥಾ ಮಹತ್ವವಾದವುಗಳನ್ನು ಮಾಡಿದ್ದಾನೆಂಬದನ್ನು ತೋರಿಸು ಅಂದನು. ಅವನು ತನ್ನ ಮಾರ್ಗವಾಗಿ ಹೊರಟು ಯೇಸು ತನಗೆ ಎಂಥಾ ದೊಡ್ಡ ಕಾರ್ಯಗಳನ್ನು ಮಾಡಿದ್ದಾನೆಂದು ಪಟ್ಟಣದಲ್ಲೆಲಾ ಪ್ರಚಾರಮಾಡಿದನು. |
40. | ಇದಾದ ಮೇಲೆ ಯೇಸು ಹಿಂತಿರುಗಿದಾಗ ಜನರು ಆತನನ್ನು ಸಂತೋಷದಿಂದ ಅಂಗೀಕರಿಸಿದರು; ಯಾಕಂದರೆ ಅವರೆಲ್ಲರು ಆತನಿಗಾಗಿ ಕಾಯುತ್ತಿದ್ದರು. |
41. | ಆಗ ಇಗೋ, ಸಭಾಮಂದಿರದ ಅಧಿಕಾರಿಯಾಗಿದ್ದ ಯಾಯಾರನೆಂಬ ಹೆಸರಿನ ಮನುಷ್ಯನು ಬಂದು ಯೇಸುವಿನ ಪಾದಗಳ ಮುಂದೆ ಬಿದ್ದು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು. |
42. | ಯಾಕಂದರೆ ಅವನಿ ಗಿದ್ದ ಹೆಚ್ಚು ಕಡಿಮೆ ಹನ್ನೆರಡು ವರುಷದವಳಾದ ಒಬ್ಬಳೇ ಮಗಳು ಸಾಯುವಹಾಗಿದ್ದಳು. ಆದರೆ ಆತನು ಹೋಗುತ್ತಿದ್ದಾಗ ಜನರು ಆತನನ್ನು ನೂಕಾ ಡುತ್ತಿದ್ದರು. |
43. | ಆಗ ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದು ತನ್ನ ಜೀವನಕ್ಕೆ ಇದ್ದದ್ದನ್ನು ವೈದ್ಯರಿಗೆ ವೆಚ್ಚಮಾಡಿದ್ದಾಗ್ಯೂ ಯಾರಿಂದಲೂ ವಾಸಿಯಾಗದೆ ಇದ್ದ ಒಬ್ಬ ಸ್ತ್ರೀಯು |
44. | ಆತನ ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು; ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋಯಿತು. |
45. | ಆಗ ಯೇಸು--ನನ್ನನ್ನು ಮುಟ್ಟಿದವರು ಯಾರು ಅಂದನು. ಎಲ್ಲರೂ ಅಲ್ಲಗಳೆದಾಗ ಪೇತ್ರನು ಮತ್ತು ಅವನ ಕೂಡ ಇದ್ದವರು ಆತನಿಗೆ--ಬೋಧಕನೇ, ಸಮೂಹವು ನಿನ್ನನ್ನು ನೂಕುತ್ತಾ ನಿನ್ನ ಮೇಲೆ ಬೀಳುತ್ತಿರಲಾಗಿ ನೀನು--ನನ್ನನ್ನು ಯಾರು ಮುಟ್ಟಿದರು ಎಂದು ಕೇಳುತ್ತೀಯಲ್ಲಾ ಅಂದರು. |
46. | ಆದರೆ ಯೇಸು--ಯಾರೋ ಒಬ್ಬರು ನನ್ನನ್ನು ಮುಟ್ಟಿದ್ದಾರೆ; ಯಾಕಂದರೆ ನನ್ನಿಂದ ಶಕ್ತಿಯು ಹೊರಟಿತೆಂದು ನನಗೆ ತಿಳಿಯಿತು ಅಂದನು. |
47. | ಆ ಸ್ತ್ರೀಯು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಆತನ ಮುಂದೆ ಬಿದ್ದು ಯಾವ ಕಾರಣದಿಂದ ಆಕೆಯು ಆತನನ್ನು ಮುಟ್ಟಿದ ಳೆಂದೂ ಹೇಗೆ ತಾನು ಕೂಡಲೆ ಸ್ವಸ್ಥಳಾದಳೆಂದೂ ಎಲ್ಲಾ ಜನರ ಮುಂದೆ ಆತನಿಗೆ ತಿಳಿಯಪಡಿಸಿದಳು. |
48. | ಆಗ ಆತನು ಆಕೆಗೆ--ಮಗಳೇ, ಸಮಾಧಾನ ದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ; ಸ್ವಸ್ಥಳಾಗಿ ಹೋಗು ಅಂದನು. |
49. | ಆತನು ಇನ್ನೂ ಮಾತನಾಡುತ್ತಿದ್ದಾಗ ಸಭಾಮಂದಿ ರದ ಅಧಿಕಾರಿಯ ಮನೆಯಿಂದ ಒಬ್ಬನು ಬಂದು ಅವನಿಗೆ--ನಿನ್ನ ಮಗಳು ಸತ್ತಿದ್ದಾಳೆ, ಬೋಧಕನಿಗೆ ತೊಂದರೆ ಕೊಡಬೇಡ ಅಂದನು. |
50. | ಆದರೆ ಯೇಸು ಅದನ್ನು ಕೇಳಿ ಪ್ರತ್ಯುತ್ತರವಾಗಿ ಅವನಿಗೆ--ಭಯಪಡ ಬೇಡ, ನಂಬಿಕೆ ಮಾತ್ರ ಇರಲಿ; ಅವಳು ಸ್ವಸ್ಥಳಾಗುವಳು ಎಂದು ಹೇಳಿದನು. |
51. | ಆತನು ಮನೆಯೊಳಕ್ಕೆ ಬಂದಾಗ ಪೇತ್ರ ಯಾಕೋಬ ಯೋಹಾನ ಮತ್ತು ಹುಡುಗಿಯ ತಂದೆತಾಯಿಗಳ ಹೊರತು ಯಾರನ್ನೂ ಒಳಗೆ ಹೋಗಗೊಡಿಸಲಿಲ್ಲ. |
52. | ಎಲ್ಲರೂ ಅಳುತ್ತಾ ಹುಡುಗಿಗಾಗಿ ಗೋಳಾಡುತ್ತಿದ್ದರು. ಆದರೆ ಆತನು-- ಅಳಬೇಡಿರಿ, ಆಕೆಯು ಸತ್ತಿಲ್ಲ; ಆದರೆ ನಿದ್ರೆ ಮಾಡು ತ್ತಾಳೆ ಅಂದನು. |
53. | ಆಕೆಯು ಸತ್ತಿದ್ದಾಳೆಂದು ತಿಳಿದಿದ್ದ ರಿಂದ ಅವರು ಆತನನ್ನು ಹಾಸ್ಯಮಾಡಿ ನಕ್ಕರು |
54. | ಆದರೆ ಆತನು ಅವರೆಲ್ಲರನ್ನು ಹೊರಗೆ ಕಳುಹಿಸಿ ಆಕೆಯ ಕೈಹಿಡಿದು-- ಹುಡುಗಿಯೇ, ಎದ್ದೇಳು ಎಂದು ಕರೆದನು. |
55. | ಆಗ ಆಕೆಯು ಬದುಕಿ ಕೂಡಲೆ ಎದ್ದಳು; ಆಕೆಗೆ ಊಟಕ್ಕೆ ಕೊಡುವಂತೆ ಆತನು ಅಪ್ಪಣೆ ಕೊಟ್ಟನು. |
56. | ಆಗ ಆಕೆಯ ತಂದೆತಾಯಿಗಳು ಬೆರಗಾದರು; ಆದರೆ ನಡೆದದ್ದನ್ನು ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು. |
← Luke (8/24) → |