← Mark (11/16) → |
1. | ಅವರು ಯೆರೂಸಲೇಮಿಗೆ ಸವಿಾಪವಾಗಿ ಎಣ್ಣೀಮರಗಳ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಬಂದಾಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ-- |
2. | ನಿಮ್ಮ ಎದುರಾಗಿರುವ ಹಳ್ಳಿಗೆ ಹೋಗಿರಿ; ನೀವು ಅದರೊಳಗೆ ಪ್ರವೇಶಿಸುತ್ತಲೇ ಯಾರು ಎಂದಿಗೂ ಅದರ ಮೇಲೆ ಕೂತುಕೊಳ್ಳದಿರುವ ಒಂದು ಕತ್ತೇಮರಿಯನ್ನು ಅಲ್ಲಿ ಕಾಣುವಿರಿ; ಅದನ್ನು ಬಿಚ್ಚಿ ತಕ್ಕೊಂಡು ಬನ್ನಿರಿ. |
3. | ಯಾವ ನಾದರೂ ನಿಮಗೆ-- ನೀವು ಯಾಕೆ ಇದನ್ನು ಮಾಡು ತ್ತೀರಿ ಎಂದು ಕೇಳಿದರೆ ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ; ಆಗ ಅವನು ಕೂಡಲೆ ಅದನ್ನು ಇಲ್ಲಿಗೆ ಕಳುಹಿಸುವನು ಎಂದು ಹೇಳಿದನು. |
4. | ಆಗ ಅವರು ಹೊರಟು ಹೋಗಿ ಎರಡು ದಾರಿಗಳು ಕೂಡುವ ಸ್ಥಳದಲ್ಲಿ ಹೊರಗೆ ಬಾಗಲಿನ ಬಳಿಯಲ್ಲಿ ಕಟ್ಟಿದ್ದ ಕತ್ತೇಮರಿಯನ್ನು ಬಿಚ್ಚುತ್ತಿರುವಾಗ |
5. | ಅಲ್ಲಿ ನಿಂತವರಲ್ಲಿ ಕೆಲವರು ಅವರಿಗೆ--ಆ ಕತ್ತೇಮರಿಯನ್ನು ಏನು ಮಾಡುತ್ತೀರಿ ಎಂದು ಕೇಳಿದರು. |
6. | ಅದಕ್ಕೆ ಅವರು ಯೇಸು ಅಪ್ಪಣೆ ಕೊಟ್ಟಂತೆಯೇ ಹೇಳಿದರು. ಆಗ ಅವರು ಅವರಿಗೆ ಹೋಗಗೊಡಿಸಿದರು. |
7. | ಅವರು ಕತ್ತೇ ಮರಿಯನ್ನು ಯೇಸುವಿನ ಬಳಿಗೆ ತಂದು ಅದರ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿದಾಗ ಆತನು ಅದರ ಮೇಲೆ ಕೂತುಕೊಂಡನು. |
8. | ಅನೇಕರು ತಮ್ಮ ವಸ್ತ್ರ ಗಳನ್ನು ದಾರಿಯಲ್ಲಿ ಹಾಸಿದರು; ಇತರರು ಮರಗಳಿಂದ ಕೊಂಬೆಗಳನ್ನು ಕಡಿದು ದಾರಿಯಲ್ಲಿ ಹಾಕಿದರು. |
9. | ಆಗ ಮುಂದೆಯೂ ಹಿಂದೆಯೂ ಹೋಗುತ್ತಿದ್ದವರು ಕೂಗು ತ್ತಾ-- ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; |
10. | ಕರ್ತನ ಹೆಸರಿನಲ್ಲಿ ಬರುವ ನಮ್ಮ ತಂದೆ ಯಾದ ದಾವೀದನ ರಾಜ್ಯವು ಆಶೀರ್ವದಿಸಲ್ಪಡಲಿ; ಉನ್ನತದಲ್ಲಿ ಹೊಸನ್ನ ಎಂದು ಹೇಳಿದರು. |
11. | ಯೇಸು ಯೆರೂಸಲೇಮಿಗೆ ಹೋಗಿ ದೇವಾಲ ಯದಲ್ಲಿ ಪ್ರವೇಶಿಸಿದಾಗ ಎಲ್ಲವುಗಳನ್ನು ಸುತ್ತಲೂ ನೋಡಿದನು; ಮತ್ತು ಸಂಜೆಯಾದಾಗ ಆ ಹನ್ನೆರಡು ಮಂದಿಯೊಂದಿಗೆ ಬೇಥಾನ್ಯಕ್ಕೆ ಹೋದನು. |
12. | ಮರುದಿವಸ ಅವರು ಬೇಥಾನ್ಯದಿಂದ ಬರುತ್ತಿ ದ್ದಾಗ ಆತನು ಹಸಿದಿದ್ದನು; |
13. | ಆತನು ಎಲೆಗಳಿದ್ದ ಒಂದು ಅಂಜೂರದ ಮರವನ್ನು ದೂರದಿಂದ ನೋಡಿ ಒಂದು ವೇಳೆ ತನಗೆ ಅದರಲ್ಲಿ ಏನಾದರೂ ಸಿಕ್ಕೀತೆಂದು ಬಂದನು; ಆದರೆ ಆತನು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಯಾಕಂ ದರೆ ಅದು ಅಂಜೂರ ಫಲದ ಕಾಲವಾಗಿರಲಿಲ್ಲ. |
14. | ಯೇಸು ಅದಕ್ಕೆ--ಇನ್ನೆಂದಿಗೂ ಯಾವನೂ ನಿನ್ನಿಂದ ಹಣ್ಣನ್ನು ತಿನ್ನದಿರಲಿ ಅಂದನು. ಅದನ್ನು ಆತನ ಶಿಷ್ಯರು ಕೇಳಿಸಿಕೊಂಡರು. |
15. | ಆಗ ಅವರು ಯೆರೂಸಲೇಮಿಗೆ ಬಂದರು; ಮತ್ತು ಯೇಸು ದೇವಾಲಯದೊಳಕ್ಕೆ ಹೋಗಿ ಅಲ್ಲಿ ಮಾರುತ್ತಿದ್ದವರನ್ನೂ ಕೊಂಡು ಕೊಳ್ಳುತ್ತಿದ್ದವರನ್ನೂ ಹೊರಗೆ ಹಾಕಲಾರಂಭಿಸಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿವಾಳಗಳನ್ನು ಮಾರುತ್ತಿದ್ದವರ ಪೀಠಗಳನ್ನೂ ಕೆಡವಿಹಾಕಿದನು. |
16. | ಯಾವನೂ ದೇವಾಲಯದ ಮಾರ್ಗದಿಂದ ಯಾವ ಪಾತ್ರೆಯ ನ್ನಾದರೂ ತಕ್ಕೊಂಡು ಹೋಗಗೊಡಿಸಲಿಲ್ಲ. |
17. | ಆತನು ಅವರಿಗೆ ಬೋಧಿಸುತ್ತಾ--ನನ್ನ ಮನೆಯು ಎಲ್ಲಾ ಜನಾಂಗಗಳವರಿಂದ ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದೆಂದು ಬರೆದಿಲ್ಲವೇ? ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು. |
18. | ಆಗ ಶಾಸ್ತ್ರಿಗಳೂ ಪ್ರಧಾನಯಾಜಕರೂ ಅದನ್ನು ಕೇಳಿ ಆತನನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸಿದರು. ಆದರೆ ಜನರೆಲ್ಲರೂ ಆತನ ಬೋಧನೆಗೆ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಆತನಿಗೆ ಭಯಪಟ್ಟರು. |
19. | ಸಂಜೆಯಾದಾಗ ಆತನು ಪಟ್ಟಣದ ಹೊರಗೆ ಹೋದನು. |
20. | ಬೆಳಿಗ್ಗೆ ಅವರು ದಾರಿಯಲ್ಲಿ ಹೋಗುತ್ತಿದ್ದಾಗ ಆ ಅಂಜೂರದ ಮರವು ಬೇರು ಸಹಿತವಾಗಿ ಒಣಗಿರು ವದನ್ನು ಕಂಡರು. |
21. | ಆಗ ಪೇತ್ರನು ಜ್ಞಾಪಕ ಮಾಡಿ ಕೊಂಡು ಆತನಿಗೆ--ಗುರುವೇ, ಇಗೋ, ನೀನು ಶಪಿ ಸಿದ ಅಂಜೂರದ ಮರವು ಒಣಗಿಹೋಗಿದೆ ಅಂದನು. |
22. | ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಿದ್ದೇನಂದರೆ --ದೇವರಲ್ಲಿ ನಂಬಿಕೆ ಇಡಿರಿ. |
23. | ಯಾಕಂದರೆ ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾವನಾದರೂ ಈ ಬೆಟ್ಟಕ್ಕೆ--ನೀನು ಕಿತ್ತುಕೊಂಡು ಹೋಗಿ ಸಮುದ್ರ ದಲ್ಲಿ ಬೀಳು ಎಂದು ಹೇಳಿ ತನ್ನ ಹೃದಯದಲ್ಲಿ ಸಂಶಯ ಪಡದೆ ತಾನು ಹೇಳಿದವುಗಳು ಆಗುವವೆಂದು ನಂಬಿ ದರೆ ಅವನು ಹೇಳಿದಂತೆಯೇ ಆಗುವದು. |
24. | ಆದ ಕಾರಣ ನಾನು ನಿಮಗೆ ಹೇಳುವದೇನಂದರೆ--ನೀವು ಪ್ರಾರ್ಥನೆ ಮಾಡುವಾಗ ಯಾವವುಗಳನ್ನು ಆಶಿಸು ತ್ತೀರೋ ಅವು ನಿಮಗೆ ಸಿಕ್ಕುವವೆಂದು ನಂಬಿರಿ; ಮತ್ತು ಅವುಗಳನ್ನು ನೀವು ಹೊಂದುವಿರಿ. |
25. | ನೀವು ನಿಂತು ಕೊಂಡು ಪ್ರಾರ್ಥಿಸುವಾಗ ಯಾವನಿಗಾದರೂ ವಿರೋ ಧವಾದದ್ದು ನಿಮ್ಮಲ್ಲಿದ್ದರೆ ಕ್ಷಮಿಸಿರಿ; ಆಗ ಪರಲೋಕ ದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ಅಪರಾಧಗಳನ್ನು ನಿಮಗೆ ಕ್ಷಮಿಸುವನು. |
26. | ನೀವು ಕ್ಷಮಿಸದಿದ್ದರೆ ಪರ ಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಅಪರಾಧ ಗಳನ್ನು ಕ್ಷಮಿಸುವದಿಲ್ಲ. |
27. | ಅವರು ತಿರಿಗಿ ಯೆರೂಸಲೇಮಿಗೆ ಬಂದರು; ಮತ್ತು ಆತನು ದೇವಾಲಯದಲ್ಲಿ ತಿರುಗಾಡುತ್ತಿರುವಾಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನ ಬಳಿಗೆ ಬಂದು |
28. | ಆತನಿಗೆ--ನೀನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೀ? ಮತ್ತು ಇವುಗಳನ್ನು ಮಾಡುವದಕ್ಕೆ ನಿನಗೆ ಅಧಿಕಾರ ಕೊಟ್ಟ ವರು ಯಾರು ಎಂದು ಕೇಳಿದರು. |
29. | ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ಪ್ರಶ್ನೆಯನ್ನು ನಿಮ್ಮಿಂದ ಕೇಳುತ್ತೇನೆ, ನನಗೆ ಉತ್ತರಕೊಡಿರಿ; ಆಗ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ. |
30. | ಯೋಹಾನನ ಬಾಪ್ತಿಸ್ಮವು ಪರಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ, ನನಗೆ ಉತ್ತರಕೊಡಿರಿ ಅಂದನು. |
31. | ಆಗ ಅವರು --ಪರಲೋಕದಿಂದ ಎಂದು ನಾವು ಹೇಳಿದರೆ--ನೀವು ಯಾಕೆ ಅವನನ್ನು ನಂಬಲಿಲ್ಲ ಎಂದು ಕೇಳಿ ಯಾನು; |
32. | ಆದರೆ ನಾವು--ಮನುಷ್ಯರಿಂದ ಎಂದು ಹೇಳುವದಾದರೆ ನಮಗೆ ಜನರ ಭಯವಿದೆ; ಯಾಕಂದರೆ ಯೋಹಾನನು ನಿಜವಾಗಿಯೂ ಪ್ರವಾದಿಯೆಂದು ಎಲ್ಲರೂ ಎಣಿಸಿಕೊಂಡಿರುವರು ಎಂದು ಅವರು ತಮ್ಮಲ್ಲಿ ತರ್ಕಿಸಿಕೊಂಡರು. |
33. | ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು. |
← Mark (11/16) → |