← Mark (12/16) → |
1. | ಇದಾದ ಮೇಲೆ ಆತನು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದನು. ಒಬ್ಬಾ ನೊಬ್ಬ ಮನುಷ್ಯನು ಒಂದು ದ್ರಾಕ್ಷೇತೋಟವನ್ನು ಮಾಡಿ ಸುತ್ತಲೂ ಬೇಲಿಹಾಕಿ ದ್ರಾಕ್ಷೆಯ ಅಲೆಗಾಗಿ ಅಗೆದು ಗೋಪುರ ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೊರಟುಹೋದನು. |
2. | ಫಲದ ಕಾಲ ದಲ್ಲಿ ಅವನು ದ್ರಾಕ್ಷೇ ತೋಟದ ಫಲವನ್ನು ಒಕ್ಕಲಿಗ ರಿಂದ ಪಡೆಯುವದಕ್ಕಾಗಿ ಅವರ ಬಳಿಗೆ ಒಬ್ಬ ಸೇವಕ ನನ್ನು ಕಳುಹಿಸಿದನು. |
3. | ಆದರೆ ಅವರು ಅವನನ್ನು ಹಿಡಿದು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು. |
4. | ತಿರಿಗಿ ಅವನು ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಿದಾಗ ಅವರು ಅವನ ಮೇಲೆ ಕಲ್ಲುಗಳನ್ನು ಎಸೆದು ತಲೆಯನ್ನು ಗಾಯಪಡಿಸಿ ಅವಮಾನದಿಂದ ವರ್ತಿಸಿ ಅವನನ್ನು ಕಳುಹಿಸಿಬಿಟ್ಟರು. |
5. | ಅವನು ಮತ್ತೆ ಇನ್ನೊಬ್ಬನನ್ನು ಕಳುಹಿಸಿದಾಗ ಅವನನ್ನೂ ಕೊಂದರು. ಇನ್ನೂ ಆನೇಕರನ್ನು ಕಳುಹಿಸಿದನು. ಅವರಲ್ಲಿ ಕೆಲವ ರನ್ನು ಹೊಡೆದರು; ಕೆಲವರನ್ನು ಕೊಂದು ಹಾಕಿದರು. |
6. | ಕಡೆಯದಾಗಿ ತನಗೆ ಇನ್ನು ಅತಿ ಪ್ರಿಯನಾಗಿದ್ದ ಒಬ್ಬನೇ ಮಗನಿರಲಾಗಿ--ಅವರು ನನ್ನ ಮಗನಿಗಾದರೂ ಗೌರವ ಸಲ್ಲಿಸಾರು ಎಂದು ಅಂದುಕೊಂಡು ಅವನನ್ನು ಸಹ ಅವರ ಬಳಿಗೆ ಕಳುಹಿಸಿದನು. |
7. | ಆದರೆ ಆ ಒಕ್ಕಲಿಗರು--ಇವನೇ ಬಾದ್ಯಸ್ಥನು; ಬನ್ನಿರಿ, ಇವನನ್ನು ನಾವು ಕೊಂದುಹಾಕೋಣ; ಆಗ ಸ್ವಾಸ್ಥ್ಯವು ನಮ್ಮದಾ ಗುವದು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು. |
8. | ಅವರು ಅವನನ್ನು ಹಿಡಿದು ಕೊಂದು ಹಾಕಿ ದ್ರಾಕ್ಷೇತೋಟದ ಹೊರಗೆ ಬಿಸಾಡಿದರು. |
9. | ಹಾಗಾದರೆ ದ್ರಾಕ್ಷೇತೋಟದ ದಣಿಯು ಏನು ಮಾಡಿಯಾನು? ಅವನು ಬಂದು ಆ ಒಕ್ಕಲಿಗರನ್ನು ಸಂಹಾರಮಾಡಿ ದ್ರಾಕ್ಷೇತೋಟವನ್ನು ಬೇರೆಯವರಿಗೆ ಕೊಡುವನು. |
10. | ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. |
11. | ಇದು ಕರ್ತನ ಕೆಲಸವೇ ಆಗಿತ್ತು. ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆಯಲ್ಲಾ ಎಂಬ ಈ ಬರಹವನ್ನು ನೀವು ಓದಲಿಲ್ಲವೋ ಎಂದು ಹೇಳಿದನು. |
12. | ಆಗ ಆತನು ತಮಗೆ ವಿರೋಧವಾಗಿ ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದು ಆತನನ್ನು ಹಿಡಿಯುವದಕ್ಕೆ ಸಂದರ್ಭ ನೋಡಿದರು. ಆದರೆ ಅವರು ಜನರಿಗೆ ಹೆದರಿದರು. ಅವರು ಆತನನ್ನು ಬಿಟ್ಟು ಹೊರಟು ಹೋದರು. |
13. | ಅವರು ಆತನನ್ನು ಆತನ ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ ಹೆರೋದ್ಯ ರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು. |
14. | ಅವರು ಬಂದು ಆತನಿಗೆ--ಬೋಧಕನೇ, ನೀನು ಸತ್ಯವಂತನೂ ಯಾವ ಮನುಷ್ಯನನ್ನು ಲಕ್ಷಿಸದವನೂ ಎಂದು ನಮಗೆ ತಿಳಿದದೆ; ಯಾಕಂದರೆ ನೀನು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀ; ಕೈಸರನಿಗೆ ಕಪ್ಪಕೊಡುವದು ನ್ಯಾಯವೋ, ನ್ಯಾಯವಲ್ಲವೋ? |
15. | ನಾವು ಕೊಡಬೇಕೋ ಇಲ್ಲವೆ ಕೊಡಬಾರದೋ ಎಂದು ಕೇಳಿದರು. ಆದರೆ ಆತನು ಅವರ ಕಪಟವನ್ನು ತಿಳಿದು ಅವರಿಗೆ--ನೀವು ನನ್ನನ್ನು ಯಾಕೆ ಶೋಧಿ ಸುತ್ತೀರಿ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ಎಂದು ಹೇಳಿದನು. |
16. | ಅವರು ಅದನ್ನು ತಂದಾಗ ಆತನು ಅವರಿಗೆ--ಇದರ ರೂಪವು ಮತ್ತು ಮೇಲ್ಬರಹವು ಯಾರದು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ಕೈಸರನದು ಎಂದು ಉತ್ತರ ಕೊಟ್ಟರು. |
17. | ಆಗ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ ಎಂದು ಹೇಳಿದನು. ಇದಕ್ಕೆ ಅವರು ಆತನ ವಿಷಯದಲ್ಲಿ ಆಶ್ಚರ್ಯಪಟ್ಟರು. |
18. | ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಆತನ ಬಳಿಗೆ ಬಂದು ಆತನನ್ನು ಕೇಳಿದ್ದೇನಂದರೆ-- |
19. | ಬೋಧಕನೇ, ಒಬ್ಬ ಮನುಷ್ಯನ ಸಹೋದರನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ತಕ್ಕೊಂಡು ತನ್ನ ಸಹೋದರನಿಗಾಗಿ ಸಂತಾನವನ್ನು ಪಡೆಯಬೇಕು ಎಂದು ಮೋಶೆಯು ನಮಗೆ ಬರೆದಿರು ತ್ತಾನಷ್ಟೆ. |
20. | ಈಗ ಏಳು ಮಂದಿ ಸಹೋದರರಿದ್ದರು; ಮೊದಲನೆಯವನು ಮದುವೆಯಾಗಿ ಸಂತಾನವಿಲ್ಲದೆ ಸತ್ತನು. |
21. | ಮತ್ತು ಎರಡನೆಯವನೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಸತ್ತನು; ಅದರಂತೆಯೇ ಮೂರನೆಯವನೂ ಆದನು. |
22. | ಹೀಗೆ ಏಳು ಮಂದಿಯೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದವ ರಾದರು; ಕೊನೆಯಲ್ಲಿ ಆ ಸ್ತ್ರೀಯೂ ಸತ್ತಳು. |
23. | ಆದದ ರಿಂದ ಪುನರುತ್ಥಾನದಲ್ಲಿ ಅವರು ಎದ್ದಾಗ ಅವರಲ್ಲಿ ಆಕೆಯು ಯಾರ ಹೆಂಡತಿಯಾಗಿರುವಳು? ಆ ಏಳು ಮಂದಿಗೂ ಆಕೆಯು ಹೆಂಡತಿಯಾಗಿದ್ದಳಲ್ಲಾ ಅಂದರು. |
24. | ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾದರೂ ದೇವರಶಕ್ತಿಯನ್ನಾದರೂ ತಿಳಿಯದೆ ಇರುವದರಿಂದ ತಪ್ಪು ಮಾಡುತ್ತೀರಲ್ಲವೋ? |
25. | ಯಾಕಂ ದರೆ ಅವರು ಸತ್ತವರೊಳಗಿಂದ ಎದ್ದ ಮೇಲೆ ಮದುವೆ ಮಾಡಿಕೊಳ್ಳುವದೂ ಇಲ್ಲ, ಮದುವೆ ಮಾಡಿಕೊಡು ವದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೂತರಂತೆ ಇರುತ್ತಾರೆ. |
26. | ಸತ್ತವರು ಎದ್ದು ಬರುವದರ ವಿಷಯವಾಗಿ--ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಹೇಗೆ ಮಾತನಾಡಿದನೆಂದು ಮೋಶೆಯ ಗ್ರಂಥದಲ್ಲಿ ನೀವು ಓದಲಿಲ್ಲವೋ? |
27. | ಯಾಕಂದರೆ ಆತನು ಸತ್ತವರಿಗಲ್ಲ, ಆದರೆ ಜೀವಿತರಿಗೆ ದೇವರಾಗಿದ್ದಾನೆ; ಆದದರಿಂದ ಈ ವಿಷಯದಲ್ಲಿ ನೀವು ಬಹಳವಾಗಿ ತಪ್ಪು ಮಾಡುತ್ತೀರಿ ಎಂದು ಹೇಳಿದನು. |
28. | ಆಗ ಶಾಸ್ತ್ರಿಗಳಲ್ಲಿ ಒಬ್ಬನು ಬಂದು ಅವರು ಕೂಡಿ ಕೊಂಡು ತರ್ಕಿಸುತ್ತಿರುವದನ್ನು ಕೇಳಿ ಆತನು ಅವರಿಗೆ ಸರಿಯಾಗಿ ಉತ್ತರವನ್ನು ಕೊಟ್ಟನೆಂದು ತಿಳಿದು ಆತನಿಗೆ --ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು ಯಾವದು ಎಂದು ಕೇಳಿದನು. |
29. | ಯೇಸು ಪ್ರತ್ಯುತ್ತರವಾಗಿ ಅವನಿಗೆ--ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು -- ಓ ಇಸ್ರಾಯೇಲೇ, ಕೇಳು; ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನಾಗಿದ್ದಾನೆ. |
30. | ನೀನು ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು; ಇದು ಮೊದ ಲನೆಯ ದೈವಾಜ್ಞೆಯಾಗಿದೆ. |
31. | ನೀನು ನಿನ್ನ ನೆರೆಯ ವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದು ಅದರಂ ತೆಯೇ ಇರುವ ಎರಡನೆಯ ಆಜ್ಞೆಯಾಗಿದೆ. ಇವುಗಳಿ ಗಿಂತ ಹೆಚ್ಚಿನ ದೈವಾಜ್ಞೆಯು ಮತ್ತೊಂದಿಲ್ಲ ಎಂದು ಹೇಳಿದನು. |
32. | ಅದಕ್ಕೆ ಆ ಶಾಸ್ತ್ರಿಯು ಆತನಿಗೆ --ಬೋಧಕನೇ, ಒಳ್ಳೇದು. ನೀನು ಸತ್ಯವನ್ನೇ ಹೇಳಿದ್ದೀ; ಯಾಕಂದರೆ ದೇವರು ಒಬ್ಬನೇ; ಆತನ ಹೊರತು ಬೇರೊಬ್ಬನು ಇಲ್ಲವೇ ಇಲ್ಲ. |
33. | ಆತನನ್ನು ಪೂರ್ಣ ಹೃದಯದಿಂದಲೂ ಪೂರ್ಣಗ್ರಹಿಕೆಯಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಿ ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸು ವದು ಸಕಲ ದಹನ ಬಲಿಗಳಿಗಿಂತಲೂ ಯಜ್ಞಗಳಿಗಿಂತ ಲೂ ಹೆಚ್ಚಿನದಾಗಿದೆ ಅಂದನು. |
34. | ಅವನು ಬುದ್ಧಿ ಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು ಅವನಿಗೆ --ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ ಅಂದನು. ಅಂದಿನಿಂದ ಆತನನ್ನು ಪ್ರಶ್ನೆ ಮಾಡುವದಕ್ಕೆ ಯಾವ ಮನುಷ್ಯನಿಗಾದರೂ ಧೈರ್ಯವಿರಲಿಲ್ಲ. |
35. | ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ-- ಕ್ರಿಸ್ತನು ದಾವೀದನಕುಮಾರನು ಎಂದು ಶಾಸ್ತ್ರಿಗಳು ಹೇಳುವದು ಹೇಗೆ? |
36. | ಯಾಕಂದರೆ ದಾವೀದನು ತಾನೇ ಪರಿಶುದ್ಧಾತ್ಮನಿಂದ -- ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಕರ್ತನಿಗೆ ಹೇಳಿದನಲ್ಲಾ ಎಂದು ನುಡಿದಿದ್ದಾನೆ. |
37. | ಆದದರಿಂದ ದಾವೀದನು ತಾನೇ ಆತನನ್ನು ಕರ್ತ ನೆಂದು ಕರೆಯುವಾಗ ಆತನು ಅವನ ಮಗನಾಗುವದು ಹೇಗೆ ಎಂದು ಹೇಳಿದನು. ಸಾಮಾನ್ಯ ಜನರು ಸಂತೋ ಷದಿಂದ ಆತನ ಮಾತುಗಳನ್ನು ಕೇಳಿದರು. |
38. | ತರುವಾಯ ಆತನು ಬೋಧನೆಯಲ್ಲಿ ಅವರಿಗೆ --ಉದ್ದವಾದ ಅಂಗಿಯನ್ನು ತೊಟ್ಟುಕೊಂಡು ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ |
39. | ಸಭಾಮಂದಿರಗಳಲ್ಲಿ ಮುಖ್ಯಪೀಠಗಳನ್ನೂ ಔತಣಗಳಲ್ಲಿ ಅತ್ಯುನ್ನತವಾದ ಸ್ಥಳಗಳನ್ನೂ ಪ್ರೀತಿಸುವವರಾದ ಶಾಸ್ತ್ರಿಗಳ ವಿಷಯವಾಗಿ ಎಚ್ಚರವಾಗಿರ್ರಿ; |
40. | ಇವರು ವಿಧವೆಯರ ಮನೆಗಳನ್ನು ನುಂಗಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು. |
41. | ಯೇಸು ಬೊಕ್ಕಸದ ಎದುರಾಗಿ ಕೂತುಕೊಂಡು ಜನರು ಹೇಗೆ ಬೊಕ್ಕಸದಲ್ಲಿ ಹಣ ಹಾಕುತ್ತಿದ್ದಾ ರೆಂಬದನ್ನು ನೋಡುತ್ತಿದ್ದನು; ಅನೇಕ ಐಶ್ವರ್ಯವಂತರು ಹೆಚ್ಚೆಚ್ಚಾಗಿ ಹಾಕಿದರು. |
42. | ಆಗ ಅಲ್ಲಿ ಒಬ್ಬ ಬಡ ವಿಧವೆಯು ಬಂದು ಒಂದು ಫಾರ್ದಿಂಗದಷ್ಟು ಎರಡು ನಾಣ್ಯಗಳನ್ನು ಹಾಕಿದಳು. |
43. | ಆಗ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ-- ಈ ಬೊಕ್ಕಸದಲ್ಲಿ ಹಾಕಿದವರೆಲ್ಲರಿಗಿಂತ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. |
44. | ಯಾಕಂದರೆ ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು; ಆದರೆ ಈಕೆಯು ತನ್ನ ಕೊರತೆಯಲ್ಲಿ ತನಗಿದ್ದದ್ದನ್ನೆಲ್ಲಾ ಅಂದರೆ ತನ್ನ ಜೀವನವನ್ನೆಲ್ಲಾ ಹಾಕಿದ್ದಾಳೆ ಅಂದನು. |
← Mark (12/16) → |