← Mark (2/16) → |
1. | ಕೆಲವು ದಿವಸಗಳಾದ ಮೇಲೆ ಆತನು ತಿರಿಗಿ ಕಪೆರ್ನೌಮಿಗೆ ಬಂದನು; ಆಗ ಆತನು ಮನೆಯಲ್ಲಿದ್ದ ಸುದ್ದಿಯು ಹರಡಿತು. |
2. | ಕೂಡಲೆ ಅನೇಕರು ಕೂಡಿಬಂದದ್ದರಿಂದ ಅವರನ್ನು ಸೇರಿಸಿಕೊಳ್ಳುವದಕ್ಕೆ ಬಾಗಲಿನ ಬಳಿಯಲ್ಲಾದರೂ ಸ್ಥಳವಿರಲಿಲ್ಲ; ಆತನು ಅವರಿಗೆ ವಾಕ್ಯವನ್ನು ಸಾರು ತ್ತಿದ್ದನು; |
3. | ಆಗ ಒಬ್ಬ ಪಾರ್ಶ್ವವಾಯು ರೋಗಿಯನ್ನು ನಾಲ್ವರು ಹೊತ್ತುಕೊಂಡು ಆತನ ಬಳಿಗೆ ಬಂದರು. |
4. | ಜನಸಂದಣಿಯ ನಿಮಿತ್ತ ಅವರು ಆತನ ಹತ್ತಿರಕ್ಕೆ ಬರಲಾರದೆ ಆತನಿದ್ದ ಮನೆಯ ಮೇಲ್ಚಾವಣಿಯನ್ನು ಬಿಚ್ಚಿ ಅದನ್ನು ಮುರಿದು ಪಾರ್ಶ್ವವಾಯು ರೋಗಿಯು ಮಲಗಿದ್ದ ಹಾಸಿಗೆಯನ್ನು ಕೆಳಗೆ ಇಳಿಸಿದರು. |
5. | ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಎಂದು ಹೇಳಿದನು. |
6. | ಆದರೆ ಅಲ್ಲಿ ಕೂತುಕೊಂಡಿದ್ದ ಶಾಸ್ತ್ರಿಗಳಲ್ಲಿ ಕೆಲವರು-- |
7. | ಈ ಮನುಷ್ಯನು ಯಾಕೆ ಹೀಗೆ ದೇವದೂಷಣೆಗಳನ್ನು ಮಾಡುತ್ತಾನೆ? ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು ಎಂದು ತಮ್ಮ ಹೃದಯ ಗಳಲ್ಲಿ ಅಂದುಕೊಂಡರು. |
8. | ಹೀಗೆ ಅವರು ತಮ್ಮೊಳಗೆ ಅಂದುಕೊಂಡದ್ದನ್ನು ಯೇಸು ಕೂಡಲೆ ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ--ನೀವು ನಿಮ್ಮ ಹೃದಯ ಗಳಲ್ಲಿ ಯಾಕೆ ಇವುಗಳನ್ನು ಆಲೋಚಿಸುತ್ತೀರಿ ಎಂದು ಹೇಳಿ |
9. | ಪಾರ್ಶ್ವವಾಯು ರೋಗಿಗೆ--ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅನ್ನುವದೋ? ಯಾವದು ಸುಲಭ? |
10. | ಆದರೆ ಪಾಪಗಳನ್ನು ಕ್ಷಮಿಸಿಬಿಡುವದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬದು ನಿಮಗೆ ತಿಳಿಯಬೇಕು ಎಂದು ಹೇಳಿ (ಪಾರ್ಶ್ವವಾಯು ರೋಗಿಗೆ)-- |
11. | ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು. |
12. | ಕೂಡಲೆ ಅವನು ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದಕ್ಕೆ ಎಲ್ಲರೂ ಬೆರಗಾಗಿ--ನಾವು ಇಂಥದನ್ನು ಎಂದಿಗೂ ನೋಡಲಿಲ್ಲ ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು. |
13. | ಆತನು ತಿರಿಗಿ ಸಮುದ್ರದ ಕಡೆಗೆ ಹೊರಟು ಹೋದನು; ಆಗ ಜನಸಮೂಹವೆಲ್ಲಾ ಆತನ ಬಳಿಗೆ ಬಂದಾಗ ಆತನು ಅವರಿಗೆ ಬೋಧಿಸಿದನು. |
14. | ಆತನು ಹಾದುಹೋಗುತ್ತಿದ್ದಾಗ ಸುಂಕದ ಕಟ್ಟೆಯಲ್ಲಿ ಕೂತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡು ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆಗ ಅವನು ಎದ್ದು ಆತನನ್ನು ಹಿಂಬಾಲಿಸಿದನು. |
15. | ಇದಾದ ಮೇಲೆ ಯೇಸು ಅವನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಅನೇಕ ಸುಂಕದವರೂ ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಕೂತುಕೊಂಡರು; ಯಾಕಂದರೆ ಅಲ್ಲಿದ್ದ ಅನೇಕರು ಆತನನ್ನು ಹಿಂಬಾಲಿಸುತ್ತಿದ್ದರು. |
16. | ಆತನು ಸುಂಕದವರ ಮತ್ತು ಪಾಪಿಗಳ ಜೊತೆಯಲ್ಲಿ ಊಟ ಮಾಡುತ್ತಿರು ವದನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ--ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ತಿನ್ನುವದು ಮತ್ತು ಕುಡಿಯುವದು ಹೇಗೆ ಅಂದರು. |
17. | ಯೇಸು ಅದನ್ನು ಕೇಳಿ--ಕ್ಷೇಮದಿಂದಿರುವವರಿಗೆ ಅಲ್ಲ, ಕ್ಷೇಮವಿಲ್ಲದವರಿಗೆ ವೈದ್ಯನುಬೇಕು; ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕಾಗಿ ಕರೆಯುವದಕ್ಕೆ ಬಂದೆನು ಎಂದು ಅವರಿಗೆ ಹೇಳಿದನು. |
18. | ಪದ್ಧತಿಯ ಪ್ರಕಾರ ಉಪವಾಸ ಮಾಡುತ್ತಿದ್ದ ಯೋಹಾನನ ಮತ್ತು ಫರಿಸಾಯರ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಯೋಹಾನನ ಮತ್ತು ಫರಿಸಾಯರ ಶಿಷ್ಯರು ಉಪವಾಸಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸ ಮಾಡುವದಿಲ್ಲ ಎಂದು ಕೇಳಿದರು. |
19. | ಅದಕ್ಕೆ ಯೇಸು ಅವರಿಗೆ--ಮದಲಿಂಗನು ಅವರ ಸಂಗಡ ಇರುವಾಗ ಮದಲಗಿ ತ್ತಿಯ ಮನೇಮಕ್ಕಳು ಉಪವಾಸ ಮಾಡುವರೋ? ಮದಲಿಂಗನು ಅವರ ಸಂಗಡ ಇರುವ ತನಕ ಅವರು ಉಪವಾಸ ಮಾಡುವದಿಲ್ಲ. |
20. | ಆದರೆ ಮದಲಿಂಗನು ಅವರ ಬಳಿಯಿಂದ ತೆಗೆಯಲ್ಪಡುವ ದಿವಸಗಳು ಬರುತ್ತವೆ; ಆಗ ಅವರು ಆ ದಿವಸಗಳಲ್ಲಿ ಉಪವಾಸ ಮಾಡುವರು. |
21. | ಇದಲ್ಲದೆ ಹೊಸಬಟ್ಟೆಯ ತುಂಡನ್ನು ಹಳೆಯ ಉಡುಪಿಗೆ ಯಾರೂ ಹಚ್ಚುವದಿಲ್ಲ;ಹಚ್ಚಿದರೆ ಹೊಸ ತುಂಡು ಹಳೆಯ ಉಡುಪನ್ನು ಹಿಂಜುವದರಿಂದ ಹರಕು ಹೆಚ್ಚಾಗುವದು. |
22. | ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕುವದಿಲ್ಲ; ಹಾಕಿದರೆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಹಾಕುವದರಿಂದ ದ್ರಾಕ್ಷಾರಸವು ಚೆಲ್ಲಿಹೋಗುವದು ಮತ್ತು ಬುದ್ದಲಿಗಳು ಕೆಟ್ಟುಹೋಗು ವವು. ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿಯೇ ಹಾಕಿಡತಕ್ಕದ |
23. | ಇದಾದ ಮೇಲೆ ಆತನು ಸಬ್ಬತ್ ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿದ್ದಾಗ ಆತನ ಶಿಷ್ಯರು ಕಾಳಿನ ತೆನೆಗಳನ್ನು ಕೀಳಲಾರಂಭಿಸಿದರು. |
24. | ಅದಕ್ಕೆ ಫರಿಸಾಯರು ಆತನಿಗೆ--ಇಗೋ, ಅವರು ಸಬ್ಬತ್ ದಿನದಲ್ಲಿ ಮಾಡಬಾರದ್ದನ್ನು ಯಾಕೆ ಮಾಡು ತ್ತಾರೆ ಎಂದು ಕೇಳಿದರು. |
25. | ಆತನು ಅವರಿಗೆ--ದಾವೀದನು ಕೊರತೆಯುಳ್ಳವನಾಗಿ ಹಸಿದಾಗ ಅವನೂ ಅವನ ಸಂಗಡ ಇದ್ದವರೂ ಏನು ಮಾಡಿ ದರು? |
26. | ಮಹಾಯಾಜಕನಾದ ಅಬಿಯಾತರನ ದಿವಸಗಳಲ್ಲಿ ಅವನು ದೇವರ ಮನೆಯೊಳಕ್ಕೆ ಹೋಗಿ ಯಾಜಕರ ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖದ ರೊಟ್ಟಿಯನ್ನು ಹೇಗೆ ತಿಂದು ತನ್ನ ಜೊತೆಯಲ್ಲಿ ಇದ್ದವರಿಗೂ ಕೊಟ್ಟನೆಂಬದನ್ನು ನೀವು ಎಂದಾದರೂ ಓದಲಿಲ್ಲವೋ ಎಂದು ಹೇಳಿ ದನು. |
27. | ಆತನು ಅವರಿಗೆ--ಸಬ್ಬತ್ತು ಮನುಷ್ಯರಿ ಗೋಸ್ಕರ ಮಾಡಲ್ಪಟ್ಟಿತು; ಆದರೆ ಮನುಷ್ಯನು ಸಬ್ಬತ್ತಿಗೋಸ್ಕರ ಅಲ್ಲ; |
28. | ಆದದರಿಂದ ಮನುಷ್ಯಕುಮಾ ರನು ಸಬ್ಬತ್ತಿಗೆ ಸಹ ಒಡೆಯನಾಗಿದ್ದಾನೆ ಅಂದನು. |
← Mark (2/16) → |