← Mark (3/16) → |
1. | ಆತನು ತಿರಿಗಿ ಸಭಾಮಂದಿರದಲ್ಲಿ ಪ್ರವೇಶಿಸಿದಾಗ ಅಲ್ಲಿ ಕೈ ಬತ್ತಿದವನಾದ ಒಬ್ಬ ಮನುಷ್ಯನಿದ್ದನು. |
2. | ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಸಬ್ಬತ್ ದಿನದಲ್ಲಿ ಆತನು ಅವನನ್ನು ಸ್ವಸ್ಥ ಮಾಡುವನೇನೋ ಎಂದು ಕಾಯು ತ್ತಿದ್ದರು. |
3. | ಆತನು ಕೈಬತ್ತಿದ ಮನುಷ್ಯನಿಗೆ--ಎದ್ದು ನಿಂತುಕೋ ಎಂದು ಹೇಳಿದನು. |
4. | ಆತನು ಅವರಿಗೆ --ಸಬ್ಬತ್ ದಿವಸಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ ಇಲ್ಲವೆ ಕೆಟ್ಟದ್ದನ್ನು ಮಾಡುವದು ನ್ಯಾಯವೋ? ಪ್ರಾಣವನ್ನು ಉಳಿಸುವದೋ ಇಲ್ಲವೆ ಕೊಲ್ಲುವದೋ ಎಂದು ಕೇಳಿದನು; ಆದರೆ ಅವರು ಸುಮ್ಮನಿದ್ದರು. |
5. | ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು. |
6. | ಫರಿಸಾ ಯರು ಹೊರಟುಹೋಗಿ ಕೂಡಲೆ ತಾವು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧ ವಾಗಿ ಹೆರೋದ್ಯರೊಂದಿಗೆ ಆಲೋಚನೆ ಮಾಡಿಕೊಂಡರು. |
7. | ಆದರೆ ಯೇಸು ತನ್ನ ಶಿಷ್ಯರೊಂದಿಗೆ ಸಮುದ್ರದ ಕಡೆಗೆ ಹಿಂದಿರುಗಿದನು; ಆಗ ಗಲಿಲಾಯದಿಂದಲೂ ಯೂದಾಯದಿಂದಲೂ |
8. | ಯೆರೂಸಲೇಮಿನಿಂದಲೂ ಇದೂಮಾಯದಿಂದಲೂ ಯೊರ್ದನಿನ ಆಚೆಯಿಂ ದಲೂ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು. ಆತನು ಮಾಡಿದ ಮಹತ್ಕಾರ್ಯ ಗಳನ್ನು ಕೇಳಿ ತೂರ್ ಸೀದೋನ್ ಸುತ್ತಲಿನ ಜನರು ದೊಡ್ಡ ಸಮೂಹವಾಗಿ ಆತನ ಬಳಿಗೆ ಬಂದರು. |
9. | ಸಮೂಹವು ತನ್ನನ್ನು ನೂಕದಂತೆ ತನಗೋಸ್ಕರ ಒಂದು ಚಿಕ್ಕ ದೋಣಿಯು ಸಿದ್ಧವಿರ ಬೇಕೆಂದು ಆತನು ತನ್ನ ಶಿಷ್ಯರಿಗೆ ಹೇಳಿದನು. |
10. | ಯಾಕಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರು ಆತನನ್ನು ಮುಟ್ಟಬೇ ಕೆಂದು ಆತನ ಮೇಲೆ ಬೀಳುತ್ತಿದ್ದರು. |
11. | ಅಶುದ್ಧಾತ್ಮಗಳು ಆತನನ್ನು ಕಂಡಾಗ ಆತನ ಮುಂದೆ ಬಿದ್ದು--ನೀನು ದೇವಕುಮಾರನು ಎಂದು ಕೂಗಿ ಹೇಳಿದವು. |
12. | ಆದರೆ ಆತನು ತನ್ನನ್ನು ಯಾರಿಗೂ ತಿಳಿಯಪಡಿಸಬಾರದೆಂದು ಅವರಿಗೆ ನೇರವಾಗಿ ಆಜ್ಞಾಪಿಸಿದನು. |
13. | ತರುವಾಯ ಆತನು ಬೆಟ್ಟದ ಮೇಲೆ ಹೋಗಿ ತನಗೆ ಬೇಕಾದವರನ್ನು ಕರೆಯಲು ಅವರು ಆತನ ಬಳಿಗೆ ಬಂದರು. |
14. | ಆತನು ಹನ್ನೆರಡು ಮಂದಿಯನ್ನು ತನ್ನೊಂದಿಗೆ ಇರುವದಕ್ಕೂ (ಸುವಾರ್ತೆ) ಸಾರುವದ ಕ್ಕಾಗಿ ತಾನು ಅವರನ್ನು ಕಳುಹಿಸುವದಕ್ಕೂ |
15. | ವ್ಯಾಧಿ ಗಳನ್ನು ಸ್ವಸ್ಥಮಾಡುವದಕ್ಕೂ ದೆವ್ವಗಳನ್ನು ಬಿಡಿಸು ವದಕ್ಕೂ ನೇಮಿಸಿ ಅವರಿಗೆ ಅಧಿಕಾರ ಕೊಟ್ಟನು. |
16. | ಆತನು ಸೀಮೋನನಿಗೆ ಪೇತ್ರನೆಂದು ಹೆಸರಿಟ್ಟನು. |
17. | ಮತ್ತು ಜೆಬೆದಾಯನ ಮಗನಾದ ಯಾಕೋಬ ನಿಗೂ ಯಾಕೋಬನ ಸಹೋದರನಾದ ಯೋಹಾನ ನಿಗೂ ಬೊವನೆರ್ಗೆಸ್ ಎಂದು ಹೆಸರಿಟ್ಟನು ಅಂದರೆ ಗುಡುಗಿನ ಪುತ್ರರು ಎಂದರ್ಥ. |
18. | ಮತ್ತು ಅಂದ್ರೆಯ, ಫಿಲಿಪ್ಪ, ಬಾರ್ತೂಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಕಾನಾನ್ಯನಾದ ಸೀಮೋನ, |
19. | ಆತನನ್ನು ಹಿಡು ಕೊಡಲಿಕ್ಕಿದ್ದ ಯೂದ ಇಸ್ಕರಿ ಯೋತ್ ಎಂಬವರೇ. ಮತ್ತು ಅವರು ಒಂದು ಮನೆಯೊಳಕ್ಕೆ ಹೋದರು. |
20. | ಜನಸಮೂಹವು ಅಲ್ಲಿ ತಿರಿಗಿ ಕೂಡಿಬಂದದ್ದ ರಿಂದ ಅವರು ರೊಟ್ಟಿ ತಿನ್ನುವದಕ್ಕೂ ಆಗದೆ ಹೋಯಿತು. |
21. | ಆತನ ಸ್ನೇಹಿತರು ಇದನ್ನು ಕೇಳಿ ದಾಗ ಆತನನ್ನು ಹಿಡಿಯುವದಕ್ಕಾಗಿ ಹೊರಟರು. ಯಾಕಂದರೆ ಅವರು--ಈತನಿಗೆ ಹುಚ್ಚು ಹಿಡಿದದೆ ಎಂದು ಅಂದರು. |
22. | ಇದಲ್ಲದೆ ಯೆರೂಸಲೇಮಿ ನಿಂದ ಬಂದ ಶಾಸ್ತ್ರಿಗಳು--ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ ಮತ್ತು ಇವನು ದೆವ್ವಗಳ ಅಧಿಪತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು. |
23. | ಆತನು ಅವರನ್ನು ತನ್ನ ಹತ್ತಿರಕ್ಕೆ ಕರೆದು ಸಾಮ್ಯಗಳಲ್ಲಿ ಅವರಿಗೆ--ಸೈತಾನನು ಸೈತಾನನನ್ನು ಹೊರಗೆ ಹಾಕು ವದು ಹೇಗೆ? |
24. | ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ನಿಲ್ಲಲಾರದು. |
25. | ಇದ ಲ್ಲದೆ ಒಂದು ಮನೆಯು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ಮನೆಯು ನಿಲ್ಲಲಾರದು. |
26. | ಸೈತಾನನು ತನಗೆ ತಾನೇ ವಿರೋಧವಾಗಿ ಎದ್ದು ವಿಭಾಗಿಸಲ್ಪಟ್ಟರೆ ಅವನು ನಿಲ್ಲಲಾರದೆ ಅಂತ್ಯಗೊಳ್ಳುವನು. |
27. | ಇದಲ್ಲದೆ ಒಬ್ಬ ಮನುಷ್ಯನು ಮೊದಲು ಬಲಿಷ್ಠನನ್ನು ಕಟ್ಟದ ಹೊರತು ಅವನ ಮನೆಯೊಳಕ್ಕೆ ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳಲಾರನು; ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವನು ಅಂದನು. |
28. | ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಎಲ್ಲಾ ಪಾಪಗಳೂ ದೇವದೂಷಣೆಗಳೂ ಮನುಷ್ಯ ಪುತ್ರರಿಗೆ ಕ್ಷಮಿಸಲ್ಪ ಡುವವು; |
29. | ಆದರೆ ಯಾವನು ಪವಿತ್ರಾತ್ಮನಿಗೆ ವಿರೋಧವಾಗಿ ದೂಷಣೆ ಮಾಡುವನೋ ಅವನಿಗೆ ಎಂದಿಗೂ ಕ್ಷಮಾಪಣೆ ಇಲ್ಲ; ಆದರೆ ಅವನು ನಿತ್ಯವಾದ ದಂಡನೆಯ ಅಪಾಯಕ್ಕೆ ಒಳಗಾಗುವನು ಅಂದನು. |
30. | ಯಾಕಂದರೆ ಅವರು--ಇವನಿಗೆ ಅಶುದ್ಧಾತ್ಮವಿದೆ ಎಂದು ಹೇಳಿದರು. |
31. | ತರುವಾಯ ಆತನ ಸಹೋದರರೂ ತಾಯಿಯೂ ಅಲ್ಲಿಗೆ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೇಕಳುಹಿಸಿದರು. |
32. | ಜನಸಮೂಹವು ಆತನ ಸುತ್ತಲೂ ಕೂತುಕೊಂಡು ಆತನಿಗೆ--ಇಗೋ, ಹೊರಗೆ ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ಹುಡುಕುತ್ತಿದ್ದಾರೆ ಎಂದು ಹೇಳಿದರು. |
33. | ಆತನು ಪ್ರತ್ಯುತ್ತರವಾಗಿ ಅವರಿಗೆ--ನನ್ನ ತಾಯಿ ಇಲ್ಲವೆ ನನ್ನ ಸಹೋದರರು ಯಾರು ಎಂದು ಹೇಳಿ |
34. | ತನ್ನ ಸುತ್ತಲೂ ಕೂತಿದ್ದವರನ್ನು ನೋಡಿ--ಇಗೋ, ನನ್ನ ತಾಯಿ ಮತ್ತು ನನ್ನ ಸಹೋದರರು! |
35. | ಯಾಕಂದರೆ ಯಾವನು ದೇವರ ಚಿತ್ತದಂತೆ ಮಾಡುವನೋ ಅವನೇ ನನ್ನ ಸಹೋದರನೂ ನನ್ನ ಸಹೋದರಿಯೂ ನನ್ನ ತಾಯಿಯೂ ಆಗಿದ್ದಾರೆ ಅಂದನು. |
← Mark (3/16) → |