← Mark (4/16) → |
1. | ಆತನು ತಿರಿಗಿ ಸಮುದ್ರದ ಬಳಿಯಲ್ಲಿ ಬೋಧಿಸಲಾರಂಭಿಸಿದನು; ಮತ್ತು ಜನರ ದೊಡ್ಡ ಸಮೂಹವು ಆತನ ಬಳಿಗೆ ಕೂಡಿಬಂದದ್ದ ರಿಂದ ಆತನು ಸಮುದ್ರದಲ್ಲಿದ್ದ ಒಂದು ದೋಣಿ ಯನ್ನು ಹತ್ತಿ ಕೂತುಕೊಂಡನು; ಆಗ ಜನ ಸಮೂಹವೆಲ್ಲಾ ಸಮುದ್ರದ ಬಳಿಯಲ್ಲಿ ನೆಲದ ಮೇಲೆ ಇದ್ದರು. |
2. | ಆತನು ಸಾಮ್ಯಗಳಲ್ಲಿ ಅವರಿಗೆ ಅನೇಕ ವಿಷಯಗಳನ್ನು ಕಲಿಸಿ ತನ್ನ ಬೋಧನೆ ಯಲ್ಲಿ ಅವರಿಗೆ ಹೇಳಿದ್ದೇನಂದರೆ-- |
3. | ಕೇಳಿರಿ, ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟುಹೋದನು. |
4. | ಅವನು ಬಿತ್ತಿದಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು. ಆಗ ಆಕಾಶದ ಪಕ್ಷಿಗಳು ಬಂದು ಅವುಗಳನ್ನು ನುಂಗಿಬಿಟ್ಟವು. |
5. | ಇನ್ನು ಕೆಲವು ಹೆಚ್ಚು ಮಣ್ಣಿಲ್ಲದ ಬಂಡೆಯ ನೆಲದ ಮೇಲೆ ಬಿದ್ದವು; ಅದಕ್ಕೆ ಆಳವಾದ ಮಣ್ಣು ಇಲ್ಲದ್ದರಿಂದ ಅವು ಕೂಡಲೆ ಮೊಳೆತವು; |
6. | ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಬೇರಿಲ್ಲದ ಕಾರಣ ಒಣಗಿಹೋದವು; |
7. | ಮತ್ತೆ ಕೆಲವು ಮುಳ್ಳು ಗಳಲ್ಲಿ ಬಿದ್ದವು; ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ. |
8. | ಕೆಲವು ಒಳ್ಳೇ ನೆಲದ ಮೇಲೆ ಬಿದ್ದು ಮೊಳೆತು ಬೆಳೆಯುತಾ ಕೆಲವು ಮೂವತ್ತರಷ್ಟು, ಅರವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು. |
9. | ಆತನು ಅವರಿಗೆ ಹೇಳಿದ್ದೇನಂದರೆ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು. |
10. | ಆತನು ಒಬ್ಬನೇ ಇದ್ದಾಗ ಆತನ ಸುತ್ತಲೂ ಇದ್ದವರು ಹನ್ನೆರಡು ಮಂದಿಯೊಂದಿಗೆ ಆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು. |
11. | ಅದಕ್ಕೆ ಆತನು ಅವರಿಗೆ--ದೇವರ ರಾಜ್ಯದ ಮರ್ಮವನ್ನು ತಿಳಿದುಕೊಳ್ಳಲು ನಿಮಗೆ ಕೊಡಲ್ಪಟ್ಟಿದೆ. ಆದರೆ ಹೊರಗಿನವರಿಗೆ ಇವೆಲ್ಲವುಗಳು ಸಾಮ್ಯಗಳಿಂದ ಹೇಳಲ್ಪಡುತ್ತವೆ. |
12. | ಯಾಕಂದರೆ ಅವರು ದೃಷ್ಟಿಯಿ ದ್ದರೂ ನೋಡಿ ತಿಳುಕೊಳ್ಳದಂತೆ ಕೇಳಿದರೂ ಕೇಳಿ ಗ್ರಹಿಸದಂತೆ ಮತ್ತು ಅವರು ತಿರುಗಿಕೊಂಡು ತಮ್ಮ ಪಾಪಗಳಿಂದ ಕ್ಷಮಿಸಲ್ಪಡದಂತೆ ಆಗುವದು. |
13. | ಮತ್ತು ಆತನು ಅವರಿಗೆ--ಈ ಸಾಮ್ಯವು ನಿಮಗೆ ತಿಳಿಯ ಲಿಲ್ಲವೋ? ಹಾಗಾದರೆ ಎಲ್ಲಾ ಸಾಮ್ಯಗಳನ್ನು ನೀವು ಹೇಗೆ ತಿಳಿದುಕೊಳ್ಳುವಿರಿ? |
14. | ಬಿತ್ತುವವನು ವಾಕ್ಯವನ್ನು ಬಿತ್ತುತ್ತಾನೆ. |
15. | ದಾರಿಯ ಮಗ್ಗುಲಲ್ಲಿ ವಾಕ್ಯವು ಬಿತ್ತಲ್ಪಟ್ಟವರು ಇವರೇ; ಆದರೆ ಇವರು ಕೇಳಿದಾಗ ಸೈತಾನನು ಕೂಡಲೆ ಬಂದು ಅವರ ಹೃದಯಗಳಲ್ಲಿ ಬಿತ್ತಲ್ಪಟ್ಟಿದ್ದ ವಾಕ್ಯವನ್ನು ತೆಗೆದು ಬಿಡುತ್ತಾನೆ. |
16. | ಅದೇ ಪ್ರಕಾರ ಬಂಡೆಯ ನೆಲದ ಮೇಲೆ ಬಿತ್ತಲ್ಪಟ್ಟವರು ವಾಕ್ಯವನ್ನು ಕೇಳಿದಾಗ ಕೂಡಲೆ ಅದನ್ನು ಸಂತೋಷದಿಂದ ಅಂಗೀಕರಿಸಿ |
17. | ತಮ್ಮಲ್ಲಿ ಬೇರು ಇಲ್ಲದ ಕಾರಣ ಸ್ವಲ್ಪ ಕಾಲ ಮಾತ್ರ ಇರುವಂಥವರಾಗಿದ್ದಾರೆ; ತರುವಾಯ ವಾಕ್ಯದ ನಿಮಿತ್ತ ಉಪದ್ರವವಾಗಲೀ ಹಿಂಸೆಯಾಗಲೀ ಬಂದಾಗ ಕೂಡಲೆ ಅವರು ಅಭ್ಯಂತರಪಡುತ್ತಾರೆ. |
18. | ಮುಳ್ಳು ಗಿಡಗಳಲ್ಲಿ ಬಿತ್ತಲ್ಪಟ್ಟವರು ಇವರೇ; ಇಂಥವರು ವಾಕ್ಯವನ್ನು ಕೇಳಿದಾಗ |
19. | ಈ ಲೋಕದ ಚಿಂತೆಗಳೂ ಐಶ್ವರ್ಯದ ಮೋಸವೂ ಇತರ ವಿಷಯಗಳ ಆಶೆಗಳೂ ಒಳಗೆ ಸೇರಿ ವಾಕ್ಯವನ್ನು ಅಡಗಿಸುವದರಿಂದ ಅದು ನಿಷ್ಫಲವಾಗುವದು. |
20. | ಒಳ್ಳೆಯ ಭೂಮಿಯ ಮೇಲೆ ಬಿತ್ತಲ್ಪಟ್ಟವರು ಇವರೇ; ಇಂಥವರು ವಾಕ್ಯವನ್ನು ಕೇಳಿ ಅಂಗೀಕರಿಸಿದ ಮೇಲೆ ಕೆಲವರು ಮೂವತ್ತರಷ್ಟು, ಕೆಲವರು ಅರವತ್ತರಷ್ಟು, ಕೆಲವರು ನೂರರಷ್ಟು ಫಲಕೊಡುತ್ತಾರೆ ಅಂದನು. |
21. | ಆತನು ಅವರಿಗೆ--ದೀಪವನ್ನು ಕೊಳಗದೊಳ ಗಾಗಲೀ ಮಂಚದ ಕೇಳಗಾಗಲೀ ಇಡುವದಕ್ಕೆ ತರುವದುಂಟೋ? ದೀಪಸ್ತಂಭದ ಮೇಲೆ ಇಡುವದಕ್ಕೆ ಅಲ್ಲವೋ? |
22. | ಯಾಕಂದರೆ ಪ್ರಕಟವಾಗದಂತೆ ಅಡಗಿಸಲ್ಪಟ್ಟದ್ದು ಯಾವದೂ ಇಲ್ಲ; ಇಲ್ಲವೆ ರಹಸ್ಯವಾಗಿ ಇಡಲ್ಪಟ್ಟದ್ದು ಯಾವದೂ ಬಹಿರಂಗವಾಗಿ ಇರಲಾರದು. |
23. | ಯಾವನಿಗಾದರೂ ಕೇಳುವದಕ್ಕೆ ಕಿವಿಗಳಿದ್ದರೆ ಅವನು ಕೇಳಲಿ ಅಂದನು. |
24. | ಆತನು ಅವರಿಗೆ--ನೀವು ಕೇಳುವದರಲ್ಲಿ ಎಚ್ಚರವಾಗಿರ್ರಿ; ನೀವು ಯಾವ ಅಳತೆಯಿಂದ ಅಳೆಯುತ್ತೀರೋ ಅದು ನಿಮಗೂ ಅಳೆಯಲ್ಪಡುವದು; ಮತ್ತು ಕೇಳುವವ ರಾದ ನಿಮಗೆ ಹೆಚ್ಚಾಗಿ ಕೊಡಲ್ಪಡುವದು. |
25. | ಯಾಕಂ ದರೆ ಯಾವನಿಗೆ ಇದೆಯೋ ಅವನಿಗೆ ಕೊಡಲ್ಪಡುವದು; ಯಾವನಿಗೆ ಇಲ್ಲವೋ ಅವನಿಗೆ ಇದ್ದದ್ದೂ ಅವನಿಂದ ತೆಗೆಯಲ್ಪಡುವದು ಎಂದು ಹೇಳಿದನು. |
26. | ಆತನು ಹೇಳಿದ್ದೇನಂದರೆ--ಒಬ್ಬ ಮನುಷ್ಯನು ಬೀಜವನ್ನು ಭೂಮಿಯಲ್ಲಿ ಹಾಕಿದಂತೆಯೇ ದೇವರ ರಾಜ್ಯವು ಇದೆ. |
27. | ಅವನು ರಾತ್ರಿ ಮಲಗುತ್ತಾ ಹಗಲು ಏಳುತ್ತಾ ಇರುವಾಗ ಹೇಗೆ ಆ ಬೀಜವು ಮೊಳೆತು ಬೆಳೆಯುವದೆಂದು ಅವನಿಗೆ ಗೊತ್ತಾಗುವದಿಲ್ಲವೋ ಹಾಗೆಯೇ ಇರುವದು. |
28. | ಯಾಕಂದರೆ ಭೂಮಿಯು ಮೊದಲು ಮೊಳಕೆಯನ್ನು ಆಮೇಲೆ ತೆನೆಯನ್ನು ಇದಾದ ಮೇಲೆ ತೆನೆಯಲ್ಲಿ ಪೂರ್ಣಕಾಳನ್ನು ತನ್ನಷ್ಟಕ್ಕೆ ತಾನೇ ಫಲಿಸುತ್ತದೆ. |
29. | ಆದರೆ ಫಲವು ಫಲಿಸಿದಾಗ ಸುಗ್ಗಿಯು ಬಂದದರಿಂದ ಅವನು ಕೂಡಲೆ ಕುಡು ಗೋಲು ಹಾಕಿ ಕೊಯ್ಯುತ್ತಾನೆ. |
30. | ಆತನು--ದೇವರ ರಾಜ್ಯವನ್ನು ನಾವು ಯಾವ ದಕ್ಕೆ ಹೋಲಿಸೋಣ? ಇಲ್ಲವೆ ಯಾವ ಹೋಲಿಕೆಗೆ ಅದನ್ನು ಹೋಲಿಸೋಣ? |
31. | ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತ ಚಿಕ್ಕದಾಗಿರುವ ಸಾಸಿವೆ ಕಾಳು ಭೂಮಿಯಲ್ಲಿ ಬಿತ್ತಲ್ಪಟ್ಟದ್ದಕ್ಕೆ ಅದು ಹೋಲಿಕೆ ಯಾಗಿದೆ. |
32. | ಆದರೆ ಅದು ಬಿತ್ತಲ್ಪಟ್ಟ ಮೇಲೆ ಬೆಳೆದು ಆಕಾಶದ ಪಕ್ಷಿಗಳು ಅದರ ನೆರಳಿನಲ್ಲಿ ವಾಸ ಮಾಡು ವಷ್ಟು ಎಲ್ಲಾ ಸಸ್ಯಗಳಿಗಿಂತ ದೊಡ್ಡದಾಗಿ ದೊಡ್ಡ ಕೊಂಬೆಗಳನ್ನು ಬಿಡುತ್ತದೆ ಎಂದು ಹೇಳಿದನು. |
33. | ಅವರು ಕೇಳಿಸಿಕೊಳ್ಳಲು ಸಾಧ್ಯವಾಗುವಷ್ಟು ಇಂಥ ಅನೇಕ ಸಾಮ್ಯಗಳಿಂದ ಆತನು ಅವರಿಗೆ ವಾಕ್ಯವನ್ನು ಹೇಳಿದನು. |
34. | ಸಾಮ್ಯವಿಲ್ಲದೆ ಅವರೊಂ ದಿಗೆ ಮಾತನಾಡಲಿಲ್ಲ; ಆದರೆ ಅವರು ಏಕಾಂತದ ಲ್ಲಿದ್ದಾಗ ಆತನು ಎಲ್ಲಾ ವಿಷಯಗಳನ್ನು ತನ್ನ ಶಿಷ್ಯರಿಗೆ ವಿವರಿಸಿದನು. |
35. | ಅದೇ ದಿವಸ ಸಾಯಂಕಾಲವಾದಾಗ ಆತನು ಅವರಿಗೆ--ನಾವು ಆಚೇದಡಕ್ಕೆ ಹೋಗೋಣ ಅಂದನು. |
36. | ಅವರು ಆ ಜನಸಮೂಹವನ್ನು ಕಳುಹಿ ಸಿದ ಮೇಲೆ ಆತನು ದೋಣಿಯಲ್ಲಿ ಇದ್ದ ಹಾಗೆಯೇ ಅವರು ಆತನನ್ನು ಕರೆದುಕೊಂಡು ಹೋದರು; ಆತನೊಂದಿಗೆ ಬೇರೆ ಚಿಕ್ಕದೋಣಿಗಳೂ ಇದ್ದವು. |
37. | ಆಗ ಅಲ್ಲಿ ದೊಡ್ಡ ಬಿರುಗಾಳಿಯಿಂದ ತುಫಾನು ಎದ್ದು ತೆರೆಗಳು ದೋಣಿಯೊಳಕ್ಕೆ ಬಡಿದದ್ದರಿಂದ ಅದು ತುಂಬಿಕೊಂಡಿತು. |
38. | ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ನಿದ್ರಿಸುತ್ತಿದ್ದನು. ಆಗ ಅವರು ಆತನನ್ನು ಎಬ್ಬಿಸಿ ಆತನಿಗೆ--ಒಡೆಯನೇ, ನಾವು ನಾಶವಾಗುತ್ತೇವೆಂದು ನಿನಗೆ ಚಿಂತೆಯಿಲ್ಲವೋ ಅಂದರು. |
39. | ಆಗ ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ--ಶಾಂತವಾಗಿ ಮೌನವಾಗಿರು ಎಂದು ಹೇಳಿದನು. ಆಗ ಗಾಳಿಯು ನಿಂತು ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು. |
40. | ಮತ್ತು ಆತನು ಅವರಿಗೆ--ಯಾಕೆ ನೀವು ಇಷ್ಟೊಂದು ಭಯಭರಿತರಾಗಿದ್ದೀರಿ? ನಿಮಗೆ ನಂಬಿಕೆ ಇಲ್ಲದಿರುವದು ಹೇಗೆ ಅಂದನು. |
41. | ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು. |
← Mark (4/16) → |