← Mark (7/16) → |
1. | ತರುವಾಯ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಯೆರೂಸಲೇಮಿನಿಂದ ಆತನ ಬಳಿಗೆ ಕೂಡಿಬಂದರು. |
2. | ಆಗ ಆತನ ಶಿಷ್ಯರಲ್ಲಿ ಕೆಲವರು ಅಶುದ್ಧವಾದ ಅಂದರೆ ತೊಳೆಯದಿರುವ ಕೈಗಳಿಂದ ರೊಟ್ಟಿ ತಿನ್ನುವದನ್ನು ಅವರು ನೋಡಿ ತಪ್ಪು ಕಂಡು ಹಿಡಿದರು. |
3. | ಯಾಕಂದರೆ ಫರಿಸಾಯರು ಮತ್ತು ಯೆಹೂದ್ಯರೆಲ್ಲರು ಹಿರಿಯರ ಸಂಪ್ರದಾಯವನ್ನು ಅನುಸರಿಸುವವರಾಗಿ ತಮ್ಮ ಕೈಗಳನ್ನು ಅನೇಕ ಸಾರಿ ತೊಳೆದುಕೊಳ್ಳದ ಹೊರತು ಊಟಮಾಡುವದಿಲ್ಲ. |
4. | ಅವರು ಪೇಟೆಯಿಂದ ಬಂದಾಗ ಸ್ನಾನ ಮಾಡದೆ ಊಟಮಾಡುವದಿಲ್ಲ; ಮತ್ತು ಅವರು ಬಟ್ಟಲುಗಳನ್ನು ಪಾತ್ರೆಗಳನ್ನು ಹಿತ್ತಾಳೆಯ ಪಾತ್ರೆಗಳನ್ನು ಮೇಜುಗಳನ್ನು ತೊಳೆಯುವಂಥ ಅನೇಕ ಆಚಾರಗಳನ್ನು ಮಾಡಿಕೊಂಡಿ ದ್ದರು. |
5. | ತರುವಾಯ ಫರಿಸಾಯರೂ ಶಾಸ್ತ್ರಿಗಳೂ ಆತನಿಗೆ--ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯದ ಪ್ರಕಾರ ಕೈತೊಳಕೊಳ್ಳದೆ ಯಾಕೆ ರೊಟ್ಟಿ ತಿನ್ನುತ್ತಾರೆ ಎಂದು ಕೇಳಿದರು. |
6. | ಆತನು ಪ್ರತ್ಯುತ್ತರವಾಗಿ ಅವರಿಗೆ --ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸು ತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರ ವಾಗಿದೆ; |
7. | ಮನುಷ್ಯರ ಕಟ್ಟಳೆಗಳನ್ನು ಬೋಧನೆ ಗಳನ್ನಾಗಿ ಮಾಡಿ ಕಲಿಸುವದರಿಂದ ಅವರು ನನ್ನನ್ನು ಆರಾಧಿಸುವದು ವ್ಯರ್ಥವಾಗಿದೆ ಎಂದು ಬರೆಯಲ್ಪಟ್ಟ ಪ್ರಕಾರ ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ವಿಹಿತವಾಗಿ ಪ್ರವಾದಿಸಿದ್ದಾನೆ. |
8. | ನೀವು ದೈವಾಜ್ಞೆ ಯನ್ನು ಬದಿಗೆ ಇಡುವದಕ್ಕಾಗಿ ಪಾತ್ರೆಗಳನ್ನು ಮತ್ತು ಬಟ್ಟಲುಗಳನ್ನು ತೊಳೆಯುವ ಮನುಷ್ಯರ ಅನೇಕ ಸಂಪ್ರದಾಯಗಳನ್ನು ಹಿಡಿದು ಅನುಸರಿಸುತ್ತೀರಿ ಅಂದನು. |
9. | ಆತನು ಅವರಿಗೆ--ನೀವು ನಿಮ್ಮ ಸಂಪ್ರ ದಾಯವನ್ನು ಕೈಕೊಳ್ಳುವಂತೆ ದೈವಾಜ್ಞೆಯನ್ನು ಸಂಪೂರ್ಣವಾಗಿ ಅಸಡ್ಡೆ ಮಾಡುತ್ತೀರಿ. |
10. | ಯಾಕಂದರೆ ಮೋಶೆಯು--ನಿನ್ನ ತಂದೆಯನ್ನು ನಿನ್ನ ತಾಯಿಯನ್ನು ಸನ್ಮಾನಿಸಬೇಕೆಂತಲೂ ಮತ್ತು--ತಂದೆಯನ್ನಾಗಲೀ ತಾಯಿಯನ್ನಾಗಲೀ ಶಪಿಸುವವನು ಸಾಯಲೇ ಬೇಕೆಂತಲೂ ಹೇಳಿದ್ದಾನೆ. |
11. | ಆದರೆ ನೀವು--ಒಬ್ಬ ಮನುಷ್ಯನು ತನ್ನ ತಂದೆಗಾಗಲೀ ಅಥವಾ ತಾಯಿ ಗಾಗಲೀ--ನೀನು ನನ್ನಿಂದ ಹೊಂದಲಿಕ್ಕಿರುವ ಪ್ರಯೋಜನವು ಕೊರ್ಬಾನ್ (ಅಂದರೆ ಒಂದು ದಾನ) ಆಗಿದೆ ಎಂದು ಹೇಳಿದರೆ ಅವನು ಸ್ವತಂತ್ರ ನಾಗುವನು ಎಂದು ಅನ್ನುತ್ತೀರಿ; |
12. | ಅವನು ತನ್ನ ತಂದೆಗಾದರೂ ತಾಯಿಗಾದರೂ ಏನನ್ನೂ ನೀವು ಮಾಡಗೊಡಿಸದೆ |
13. | ನೀವು ಕಲಿಸಿರುವ ನಿಮ್ಮ ಸಂಪ್ರದಾಯದ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ, ಇಂಥ ಅನೇಕವಾದವುಗಳನ್ನು ನೀವು ಮಾಡುತ್ತೀರಿ ಅಂದನು. |
14. | ಆಮೇಲೆ ಆತನು ಜನರನ್ನೆಲ್ಲಾ ತನ್ನ ಬಳಿಗೆ ಕರೆದು ಅವರಿಗೆ--ನಿಮ್ಮಲ್ಲಿ ಪ್ರತಿಯೊಬ್ಬನು ನಾನು ಹೇಳುವದನ್ನು ಕೇಳಿ ಗ್ರಹಿಸಿರಿ; |
15. | ಹೊರಗಿನಿಂದ ಮನುಷ್ಯನೊಳಗೆ ಸೇರಿ ಅವನನ್ನು ಹೊಲೆಮಾಡು ವಂಥದ್ದು ಯಾವದೂ ಇಲ್ಲ. ಆದರೆ ಅವನೊಳಗಿಂದ ಹೊರಗೆ ಬರುವಂಥವುಗಳೇ ಮನುಷ್ಯನನ್ನು ಹೊಲೆ ಮಾಡುವವುಗಳಾಗಿವೆ. |
16. | ಯಾವನಿಗಾದರೂ ಕೇಳು ವದಕ್ಕೆ ಕಿವಿಗಳಿದ್ದರೆ ಅವನು ಕೇಳಲಿ ಅಂದನು. |
17. | ಆತನು ಜನರನ್ನು ಬಿಟ್ಟು ಮನೆಯೊಳಗೆ ಬಂದ ಮೇಲೆ ಆತನ ಶಿಷ್ಯರು ಆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು. |
18. | ಆಗ ಆತನು ಅವರಿಗೆ-- ನೀವು ಸಹ ಗ್ರಹಿಕೆ ಇಲ್ಲದವರಾಗಿದ್ದೀರಾ? ಹೊರಗಿ ನಿಂದ ಮನುಷ್ಯನೊಳಗೆ ಸೇರುವಂಥದ್ದು ಯಾವದೂ ಅವನನ್ನು ಹೊಲೆಮಾಡಲಾರದು ಎಂದು ನೀವು ತಿಳಿದುಕೊಳ್ಳುವದಿಲ್ಲವೋ? |
19. | ಯಾಕಂದರೆ ಅದು ಅವನ ಹೃದಯದೊಳಗೆ ಸೇರದೆ ಹೊಟ್ಟೆಯೊಳಗೆ ಸೇರಿ ಎಲ್ಲಾ ಆಹಾರ ಪದಾರ್ಥಗಳನ್ನು ಶುದ್ಧಮಾಡುತ್ತಾ ಬಹಿರ್ಭೂಮಿಗೆ ಹೋಗುತ್ತದೆ ಅಂದನು. |
20. | ಮತ್ತು ಆತನು--ಮನುಷ್ಯನೊಳಗಿಂದ ಹೊರಡುವಂಥದ್ದೇ ಮನುಷ್ಯನನ್ನು ಹೊಲೆಮಾಡುತ್ತದೆ. |
21. | ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು |
22. | ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ |
23. | ಈ ಎಲ್ಲಾ ಕೆಟ್ಟವುಗಳು ಒಳಗಿನಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ ಅಂದನು. |
24. | ಅಲ್ಲಿಂದ ಆತನು ಎದ್ದು ತೂರ್ ಸೀದೋನ್ ಮೇರೆಗಳಿಗೆ ಹೋಗಿ ಒಂದು ಮನೆಯೊಳಗೆ ಬಂದನು. ಮತ್ತು ಅದು ಯಾರಿಗೂ ಗೊತ್ತಾಗಬಾರದೆಂದು ಆತನು ಇಷ್ಟಪಟ್ಟನು; ಆದರೆ ಆತನು ಮರೆಯಾಗಿರಲಾರದೆ ಹೋದನು. |
25. | ಯಾಕಂದರೆ ಒಬ್ಬ ಸ್ತ್ರೀಯು ಆತನ ವಿಷಯವಾಗಿ ಕೇಳಿ ಅಲ್ಲಿಗೆ ಬಂದು ಆತನ ಪಾದಗಳಿಗೆ ಬಿದ್ದಳು. ಯಾಕಂದರೆ ಆಕೆಯ ಮಗಳಿಗೆ ಅಶುದ್ಧಾತ್ಮ ಹಿಡಿದಿತ್ತು. |
26. | ಆ ಸ್ತ್ರೀಯು ಸುರೋಪೊಯಿನಿಕ ಜನಾಂ ಗದವಳಾದ ಒಬ್ಬ ಗ್ರೀಕಳು. ಆಕೆಯು ತನ್ನ ಮಗಳನ್ನು ಹಿಡಿದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿ ಕೊಂಡಳು. |
27. | ಆದರೆ ಯೇಸು ಆಕೆಗೆ--ಮಕ್ಕಳಿಗೆ ಮೊದಲು ತೃಪ್ತಿಯಾಗಲಿ; ಯಾಕಂದರೆ ಮಕ್ಕಳ ರೊಟ್ಟಿ ಯನ್ನು ತೆಗೆದುಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿದನು. |
28. | ಆಕೆಯು ಪ್ರತ್ಯುತ್ತರ ವಾಗಿ ಆತನಿಗೆ--ಹೌದು, ಕರ್ತನೇ; ಆದರೂ ಮೇಜಿನ ಕೆಳಗೆ ಮಕ್ಕಳ ರೊಟ್ಟಿಯ ತುಂಡುಗಳನ್ನು ನಾಯಿಗಳು ತಿನ್ನುತ್ತವೆ ಅಂದಳು. |
29. | ಆತನು ಅವಳಿಗೆ --ಈ ಮಾತಿನ ದೆಸೆಯಿಂದ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು ಅಂದನು. |
30. | ಆಕೆಯು ತನ್ನ ಮನೆಗೆ ಬಂದಾಗ ದೆವ್ವವು ಹೊರಟು ಹೋದದ್ದನ್ನೂ ತನ್ನ ಮಗಳು ಹಾಸಿಗೆಯ ಮೇಲೆ ಮಲಗಿದ್ದನ್ನೂ ಕಂಡಳು. |
31. | ತಿರಿಗಿ ಆತನು ತೂರ್ ಸೀದೋನ್ ತೀರಗಳಿಂದ ಹೊರಟು ದೆಕಪೊಲಿಯ ತೀರಗಳ ಮಧ್ಯದಿಂದ ಗಲಿ ಲಾಯ ಸಮುದ್ರಕ್ಕೆ ಬಂದನು. |
32. | ಆಗ ಅವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ತಂದು ಆತನು ತನ್ನ ಕೈಯನ್ನು ಅವನ ಮೇಲೆ ಇಡಬೇಕೆಂದು ಆತನನ್ನು ಬೇಡಿಕೊಂಡರು. |
33. | ಆತನು ಅವನನ್ನು ಜನಸಮೂಹದಿಂದ ಆಚೆಗೆ ಕರಕೊಂಡು ಹೋಗಿ ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿಟ್ಟು ಉಗುಳಿ ಅವನ ನಾಲಿಗೆಯನ್ನು ಮುಟ್ಟಿದನು; |
34. | ಮತ್ತು ಆತನು ಪರಲೋಕದ ಕಡೆಗೆ ನೋಡುತ್ತಾ ನಿಟ್ಟುಸಿರುಬಿಟ್ಟು ಅವನಿಗೆ--ಎಪ್ಫಥಾ ಅಂದನು. ಅಂದರೆ ತೆರೆಯಲ್ಪಡಲಿ ಎಂದರ್ಥ. |
35. | ಕೂಡಲೆ ಅವನ ಕಿವಿಗಳು ತೆರೆಯಲ್ಪಟ್ಟವು; ಅವನ ನಾಲಿಗೆಯ ನರವು ಸಡಿಲ ವಾಯಿತು; ಮತ್ತು ಅವನು ಸ್ಪಷ್ಟವಾಗಿ ಮಾತನಾಡಿ ದನು. |
36. | ಯಾವ ಮನುಷ್ಯನಿಗೂ ಇದನ್ನು ಹೇಳಬಾರ ದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು; ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಅದನ್ನು ಮತ್ತಷ್ಟು ಹೆಚ್ಚಾಗಿ ಪ್ರಚಾರ ಮಾಡಿದರು. |
37. | ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು. |
← Mark (7/16) → |