← Mark (8/16) → |
1. | ಆ ದಿವಸಗಳಲ್ಲಿ (ಯೇಸುವನ್ನು ಹಿಂಬಾಲಿಸುತ್ತಿದ್ದ) ದೊಡ್ಡ ಜನಸಮೂಹಕ್ಕೆ ಊಟಕ್ಕೇನೂ ಇರಲಿಲ್ಲ. ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ-- |
2. | ಜನ ಸಮೂಹವನ್ನು ನಾನು ಕನಿಕರಿಸುತ್ತೇನೆ; ಯಾಕಂದರೆ ಮೂರು ದಿನ ಗಳಿಂದ ಇವರು ನನ್ನೊಂದಿಗಿದ್ದಾರೆ ಮತ್ತು ಅವರಿಗೆ ಊಟಕ್ಕೇನೂ ಇಲ್ಲ. |
3. | ನಾನು ಅವರನ್ನು ಉಪವಾಸ ವಾಗಿ ಅವರ ಮನೆಗಳಿಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಹೋಗುವರು; ಯಾಕಂದರೆ ಅವರಲ್ಲಿ ಕೆಲ ವರು ದೂರದಿಂದ ಬಂದಿದ್ದಾರೆ ಅಂದನು. |
4. | ಅದಕ್ಕೆ ಆತನ ಶಿಷ್ಯರು ಪ್ರತ್ಯುತ್ತರವಾಗಿ ಆತನಿಗೆ-- ಒಬ್ಬನು ಈ ಅಡವಿಯಲ್ಲಿ ರೊಟ್ಟಿಯಿಂದ ಈ ಜನರನ್ನು ಎಲ್ಲಿಂದ ತೃಪ್ತಿಪಡಿಸಾನು ಅಂದರು. |
5. | ಆತನು ಅವರಿಗೆ--ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದ್ದಕ್ಕೆ ಅವರು --ಏಳು ರೊಟ್ಟಿಗಳು ಇವೆ ಅಂದರು. |
6. | ಆಗ ಜನರು ನೆಲದ ಮೇಲೆ ಕೂತುಕೊಳ್ಳುವಂತೆ ಆತನು ಅಪ್ಪಣೆ ಕೊಟ್ಟು ಆ ಏಳು ರೊಟ್ಟಿಗಳನ್ನು ತಕ್ಕೊಂಡು ಸ್ತೋತ್ರ ಮಾಡಿ ಮುರಿದು ಜನರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಅವರು ಜನರಿಗೆ ಹಂಚಿದರು. |
7. | ಇದಲ್ಲದೆ ಅವರಲ್ಲಿ ಕೆಲವು ಸಣ್ಣ ವಿಾನುಗಳಿದ್ದವು; ಆತನು ಅವುಗಳನ್ನೂ ಆಶೀರ್ವದಿಸಿ ಅವರಿಗೆ ಹಂಚು ವಂತೆ ಆಜ್ಞಾಪಿಸಿದನು. |
8. | ಅವರೆಲ್ಲರೂ ತಿಂದು ತೃಪ್ತರಾ ದರು; ಮುರಿದ ಮಿಕ್ಕತುಂಡುಗಳನ್ನು ಅವರು ಏಳು ಪುಟ್ಟಿ ತುಂಬಿದರು. |
9. | ಊಟಮಾಡಿದವರು ಸುಮಾರು ನಾಲ್ಕು ಸಾವಿರ ಮಂದಿ; ಆತನು ಅವರನ್ನು ಕಳುಹಿಸಿ ಬಿಟ್ಟನು. |
10. | ಕೂಡಲೆ ಆತನು ತನ್ನ ಶಿಷ್ಯರೊಂದಿಗೆ ಒಂದು ದೋಣಿಯನ್ನು ಹತ್ತಿದಲ್ಮನೂಥ ಭಾಗಗಳಿಗೆ ಬಂದನು. |
11. | ಆಗ ಫರಿಸಾಯರು ಬಂದು ಆತನನ್ನು ಶೋಧಿಸು ವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕ ಕಾರ್ಯವನ್ನು ಮಾಡಬೇಕೆಂದು ಕೇಳಿ ಆತನೊಂದಿಗೆ ತರ್ಕಿಸುವದಕ್ಕೆ ಆರಂಭಿಸಿದರು. |
12. | ಆತನು ತನ್ನ ಆತ್ಮದಲ್ಲಿ ದೀರ್ಘವಾಗಿ ನಿಟ್ಟುಸಿರುಬಿಟ್ಟು--ಈ ಸಂತ ತಿಯು ಸೂಚಕಕಾರ್ಯವನ್ನು ಹುಡುಕುವದು ಯಾಕೆ? ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡು ವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು. |
13. | ಆತನು ಅವರನ್ನು ಬಿಟ್ಟು ತಿರಿಗಿ ದೋಣಿಯನ್ನು ಹತ್ತಿ ಆಚೇದಡಕ್ಕೆ ಹೊರಟು ಹೋದನು. |
14. | ಆಗ ಶಿಷ್ಯರು ರೊಟ್ಟಿಯನ್ನು ತಕ್ಕೊಳ್ಳುವದಕ್ಕೆ ಮರೆತಿದ್ದರು; ಇದಲ್ಲದೆ ದೋಣಿಯಲ್ಲಿ ಅವರಿಗೆ ಒಂದು ರೊಟ್ಟಿಗಿಂತ ಹೆಚ್ಚೇನೂ ಇರಲಿಲ್ಲ. |
15. | ಆತನು ಅವರಿಗೆ--ಫರಿಸಾಯರ ಹುಳಿಯ ವಿಷಯ ದಲ್ಲಿಯೂ ಹೆರೋದನ ಹುಳಿಯ ವಿಷಯದಲ್ಲಿಯೂ ನೀವು ಎಚ್ಚರಿಕೆಯಿಂದ ಇರ್ರಿ ಎಂದು ಖಂಡಿತವಾಗಿ ಹೇಳಿದನು. |
16. | ಆಗ ಅವರು ತಮ್ಮೊಳಗೆ--ನಮಗೆ ರೊಟ್ಟಿ ಇಲ್ಲದಿರುವದರಿಂದಲೇ ಹೀಗೆ ಹೇಳುತ್ತಾನೆಂದು ಅವರು ತರ್ಕಿಸಿಕೊಂಡರು. |
17. | ಯೇಸು ಅದನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನಂದರೆನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಯಾಕೆ ತರ್ಕಿಸಿಕೊಳ್ಳುತ್ತೀರಿ? ನೀವು ಇನ್ನೂ ಗ್ರಹಿಸದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣಮಾಡಿಕೊಂಡಿದ್ದಿರೋ? |
18. | ಕಣ್ಣುಗಳಿದ್ದೂ ನೀವು ನೋಡುವದಿಲ್ಲವೋ? ಕಿವಿಗಳಿದ್ದೂ ನೀವು ಕೆಳುವ ದಿಲ್ಲವೋ? ಮತ್ತು ನೀವು ಜ್ಞಾಪಕಮಾಡಿಕೊಳ್ಳುವದಿ ಲ್ಲವೋ? |
19. | ನಾನು ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ರೊಟ್ಟಿಯ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು ಆತನಿಗೆ--ಹನ್ನೆರಡು ಅಂದರು. |
20. | ಮತ್ತು ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು--ಏಳು ಅಂದರು. |
21. | ಯೇಸು ಅವರಿಗೆ--ಹಾಗಾದರೆ ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು. |
22. | ತರುವಾಯ ಆತನು ಬೇತ್ಸಾಯಿದಕ್ಕೆ ಬಂದಾಗ ಅವರು ಒಬ್ಬ ಕುರುಡನನ್ನು ಆತನ ಬಳಿಗೆ ತಂದು ಅವನನ್ನು ಮುಟ್ಟಬೇಕೆಂದು ಆತನನ್ನು ಬೇಡಿಕೊಂಡರು. |
23. | ಆತನು ಆ ಕುರುಡನ ಕೈಹಿಡಿದು ಊರಿನ ಹೊರಗೆ ಕರಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳಿ ತನ್ನ ಕೈಗಳನ್ನು ಅವನ ಮೇಲೆ ಇಟ್ಟು ಏನಾದರೂ ಕಾಣುತ್ತದೋ ಎಂದು ಅವನನ್ನು ಕೇಳಿದನು. |
24. | ಅವನು ಮೇಲಕ್ಕೆ ನೋಡಿ--ಮನುಷ್ಯರು ಮರಗಳ ಹಾಗೆ ನಡೆದಾಡುವದನ್ನು ನೋಡುತ್ತೇನೆ ಅಂದನು. |
25. | ತರುವಾಯ ಆತನು ತಿರಿಗಿ ಅವನ ಕಣ್ಣುಗಳ ಮೇಲೆ ತನ್ನ ಕೈಗಳನ್ನಿಟ್ಟು ಅವನು ಮೇಲಕ್ಕೆ ನೋಡುವಂತೆ ಮಾಡಿದನು; ಆಗ ಅವನು ಗುಣಹೊಂದಿದವನಾಗಿ ಪ್ರತಿ ಮನುಷ್ಯನನ್ನು ಸ್ಪಷ್ಟವಾಗಿ ನೋಡಿದನು. |
26. | ತರುವಾಯ ಆತನು ಅವನಿಗೆ--ನೀನು ಊರೊಳಕ್ಕೆ ಹೋಗಬೇಡ ಇಲ್ಲವೆ ಊರಲ್ಲಿ ಯಾರಿಗೂ ಹೇಳಬೇಡ ಎಂದು ಹೇಳಿ ಅವನನ್ನು ಅವನ ಮನೆಗೆ ಕಳುಹಿಸಿ ಬಿಟ್ಟನು. |
27. | ತರುವಾಯ ಯೇಸುವೂ ಆತನ ಶಿಷ್ಯರೂ ಕೈಸ ರೈಯ ಫಿಲಿಪ್ಪಿ ಊರುಗಳಿಗೆ ಹೋದರು. ಆತನು ದಾರಿ ಯಲ್ಲಿ ತನ್ನ ಶಿಷ್ಯರಿಗೆ--ನಾನು ಯಾರೆಂದು ಜನರು ಅನ್ನುತ್ತಾರೆ ಎಂದು ಕೇಳಿದನು. |
28. | ಅವರು ಪ್ರತ್ಯುತ್ತರ ವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು; ಮತ್ತೆ ಕೆಲವರು--ಎಲೀಯನು; ಇನ್ನು ಕೆಲವರು--ಪ್ರವಾದಿ ಗಳಲ್ಲಿ ಒಬ್ಬನು ಅನ್ನುತ್ತಾರೆ ಎಂದು ಹೇಳಿದರು. |
29. | ಅದಕ್ಕೆ ಆತನು ಅವರಿಗೆ -- ಆದರೆ ನಾನು ಯಾರೆಂದು ನೀವು ಅನ್ನುತ್ತೀರಿ ಎಂದು ಕೇಳಲು ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ನೀನು ಕ್ರಿಸ್ತನೇ ಅಂದನು. |
30. | ತನ್ನ ವಿಷಯ ವಾಗಿ ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು. |
31. | ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು. |
32. | ಆತನು ಆ ಮಾತನ್ನು ಸ್ಪಷ್ಟವಾಗಿ ಹೇಳಿದ್ದರಿಂದ ಪೇತ್ರನು ಆತನ ಕೈ ಹಿಡಿದು ಆತನನ್ನು ಗದರಿಸಲಾರಂಭಿಸಿದನು. |
33. | ಆದರೆ ಆತನು ತಿರುಗಿಕೊಂಡು ತನ್ನ ಶಿಷ್ಯರ ಕಡೆಗೆ ನೋಡಿ ಪೇತ್ರನನ್ನು ಗದರಿಸಿ--ಸೈತಾನನೇ ನನ್ನ ಹಿಂದೆ ಹೋಗು; ಯಾಕಂದರೆ ನೀನು ಯೋಚಿಸುವಂಥದ್ದು ದೇವರವುಗಳಲ್ಲ, ಆದರೆ ಮನುಷ್ಯರವುಗಳೇ ಎಂದು ಹೇಳಿದನು. |
34. | ಆತನು ಜನರನ್ನು ತನ್ನ ಶಿಷ್ಯರ ಕೂಡ ತನ್ನ ಬಳಿಗೆ ಕರೆದು ಅವರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿ ಸಲಿ. |
35. | ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳ ಬೇಕೆಂದಿರುವ ಯಾವನಾದರೂ ಅದನ್ನು ಕಳಕೊಳ್ಳು ವನು; ಆದರೆ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಯಾವನು ತನ್ನ ಪ್ರಾಣವನ್ನು ಕಳ ಕೊಳ್ಳುವನೋ ಅವನು ಅದನ್ನು ಉಳಿಸಿಕೊಳ್ಳುವನು. |
36. | ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿ ಕೊಂಡರೂ ತನ್ನ ಸ್ವಂತ ಆತ್ಮವನ್ನು ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು? |
37. | ಇಲ್ಲವೆ ಒಬ್ಬನು ತನ್ನ ಆತ್ಮಕ್ಕೆ ಬದಲಾಗಿ ಏನು ಕೊಡುವನು? |
38. | ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು. |
← Mark (8/16) → |