← Matthew (14/28) → |
1. | ಆ ಕಾಲದಲ್ಲಿ ಚತುರಾಧಿಪತಿಯಾದ ಹೆರೋದನು ಯೇಸುವಿನ ಕೀರ್ತಿಯನ್ನು ಕೇಳಿ ತನ್ನ ಸೇವಕರಿಗೆ -- |
2. | ಇವನು ಬಾಪ್ತಿಸ್ಮ ಮಾಡಿಸುವ ಯೋಹಾನನೇ; ಈಗ ಇವನು ಸತ್ತವರೊಳಗಿಂದ ಎದ್ದಿದ್ದಾನೆ; ಆದದರಿಂದಲೇ ಮಹತ್ಕಾರ್ಯಗಳು ಇವನಲ್ಲಿ ತೋರಿಬರುತ್ತವೆ ಎಂದು ಹೇಳಿದನು. |
3. | ಯಾಕಂದರೆ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾಗಿದ್ದ ಹೆರೋದ್ಯಳ ನಿಮಿತ್ತವಾಗಿ ಯೋಹಾನನನ್ನು ಹಿಡಿದು ಕಟ್ಟಿ ಸೆರೆಯಲ್ಲಿ ಹಾಕಿದ್ದನು. |
4. | ಯಾಕಂದರೆ ಯೋಹಾನನು--ನೀನು ಅವಳನ್ನು ಇಟ್ಟುಕೊಂಡಿರುವದು ನಿನಗೆ ನ್ಯಾಯವಲ್ಲ ಎಂದು ಅವನಿಗೆ ಹೇಳಿದ್ದನು. |
5. | ಆದದರಿಂದ ಅವನು ಯೋಹಾನನನ್ನು ಕೊಲ್ಲಬೇಕೆಂದಿದ್ದಾಗ ಜನ ಸಮೂಹಕ್ಕೆ ಭಯಪಟ್ಟನು; ಯಾಕಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು. |
6. | ಆದರೆ ಹೆರೋದನ ಹುಟ್ಟಿದ ದಿನವು ಆಚರಿಸಲ್ಪಟ್ಟಾಗ ಹೆರೋದ್ಯಳ ಮಗಳು ಅವರ ಮುಂದೆ ನಾಟ್ಯವಾಡಿ ಹೆರೋದನನ್ನು ಮೆಚ್ಚಿಸಿದಳು. |
7. | ಆದದರಿಂದ ಅವಳು ಏನು ಕೇಳಿಕೊಂಡರೂ ಅವಳಿಗೆ ಕೊಡುವೆನೆಂದು ಅವನು ಆಣೆಯಿಟ್ಟು ವಾಗ್ದಾನಮಾಡಿದನು. |
8. | ಅವಳು ತನ್ನ ತಾಯಿಯಿಂದ ಮೊದಲೇ ಕಲಿಸಲ್ಪಟ್ಟವಳಾಗಿ-- ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಪರಾ ತಿನಲ್ಲಿ ಇಲ್ಲಿಯೇ ನನಗೆ ಕೊಡು ಎಂದು ಹೇಳಿದಳು. |
9. | ಆಗ ಅರಸನು ದುಃಖಪಟ್ಟಾಗ್ಯೂ ತನ್ನ ಆಣೆಯ ನಿಮಿತ್ತದಿಂದಲೂ ತನ್ನೊಂದಿಗೆ ಊಟಕ್ಕೆ ಕೂತಿದ್ದವರ ನಿಮಿತ್ತದಿಂದಲೂ ಅದನ್ನು ಅವಳಿಗೆ ಕೊಡುವಂತೆ ಅಪ್ಪಣೆಕೊಟ್ಟನು. |
10. | ಮತ್ತು ಅವನು (ಆಳುಗಳನ್ನು) ಕಳುಹಿಸಿ ಸೆರೆಯಲ್ಲಿ ಯೋಹಾನನ ತಲೆಯನ್ನು ಹೊಯಿಸಿದನು. |
11. | ಇದಲ್ಲದೆ ಅವನ ತಲೆಯನ್ನು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತಂದಳು. |
12. | ಆಗ ಅವನ ಶಿಷ್ಯರು ಬಂದು ದೇಹವನ್ನೆತ್ತಿಕೊಂಡು ಹೂಣಿಟ್ಟು ಹೋಗಿ ಯೇಸುವಿಗೆ ತಿಳಿಸಿದರು. |
13. | ಯೇಸು ಆ ವಿಷಯವನ್ನು ಕೇಳಿದಾಗ ದೋಣಿ ಯನ್ನು ಹತ್ತಿ ಅಲ್ಲಿಂದ ವಿಂಗಡವಾಗಿ ಅರಣ್ಯ ಸ್ಥಳಕ್ಕೆ ಹೊರಟುಹೋದನು. ಇದನ್ನು ಕೇಳಿ ಜನರು ಪಟ್ಟಣ ಗಳಿಂದ ಕಾಲು ನಡಿಗೆಯಾಗಿ ಆತನನ್ನು ಹಿಂಬಾಲಿ ಸಿದರು. |
14. | ಆಗ ಯೇಸು ಹೊರಟುಹೋಗಿ ಜನರ ಮಹಾಸಮೂಹವನ್ನು ಕಂಡು ಅವರ ಮೇಲೆ ಕನಿಕರ ಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು. |
15. | ಸಾಯಂಕಾಲವಾದಾಗ ಆತನ ಶಿಷ್ಯರು ಆತನ ಬಳಿಗೆ ಬಂದು--ಇದು ಅಡವಿಯ ಸ್ಥಳ, ಸಮಯವು ದಾಟಿತು; ಜನರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರವನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿಬಿಡು ಅಂದರು. |
16. | ಆದರೆ ಯೇಸು ಅವ ರಿಗೆ--ಅವರು ಹೋಗುವದು ಅವಶ್ಯವಿಲ್ಲ; ಅವರು ಊಟಮಾಡುವದಕ್ಕೆ ನೀವೇ ಕೊಡಿರಿ ಎಂದು ಹೇಳಿದನು. |
17. | ಅವರು ಆತನಿಗೆ--ನಮ್ಮ ಹತ್ತಿರ ಐದು ರೊಟ್ಟಿ ಎರಡು ಮಾನುಗಳು ಮಾತ್ರ ಇವೆ ಎಂದು ಹೇಳಿದರು. |
18. | ಆತನು--ಅವುಗಳನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು. |
19. | ಜನ ಸಮೂಹವು ಹುಲ್ಲಿನಮೇಲೆ ಕೂತುಕೊಳ್ಳಬೇಕೆಂದು ಆತನು ಅಪ್ಪಣೆಕೊಟ್ಟು ಆ ಐದು ರೊಟ್ಟಿ ಎರಡು ಮಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಮುರಿದು ಆ ರೊಟ್ಟಿಗಳನ್ನು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು. |
20. | ಅವರೆಲ್ಲರೂ ತಿಂದು ತೃಪ್ತರಾದರು; ಮತ್ತು ಅವರು ಉಳಿದ ತುಂಡುಗಳನ್ನು ಕೂಡಿಸಿ ಹನ್ನೆ ರಡು ಪುಟ್ಟಿಗಳಲ್ಲಿ ತುಂಬಿಸಿದರು. |
21. | ಊಟ ಮಾಡಿ ದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಇದ್ದರು. |
22. | ಕೂಡಲೆ ಯೇಸು ತಾನು ಜನಸಮೂಹಗಳನ್ನು ಕಳುಹಿಸಿ ಬಿಡುವಷ್ಟರೊಳಗಾಗಿ ತನ್ನ ಶಿಷ್ಯರು ದೋಣಿ ಯನ್ನು ಹತ್ತಿ ತನಗಿಂತ ಮುಂಚೆ ಆಚೇ ದಡಕ್ಕೆ ಹೋಗ ಬೇಕೆಂದು ಅವರನ್ನು ಒತ್ತಾಯ ಮಾಡಿದನು. |
23. | ಆತನು ಜನಸಮೂಹಗಳನ್ನು ಕಳುಹಿಸಿದ ಮೇಲೆ ಪ್ರಾರ್ಥನೆ ಮಾಡಲು ಏಕಾಂತವಾಗಿ ಗುಡ್ಡದ ಮೇಲೆ ಹೋದನು; ಸಾಯಂಕಾಲವಾದಾಗ ಆತನೊಬ್ಬನೇ ಅಲ್ಲಿ ಇದ್ದನು. |
24. | ಆಗ ದೋಣಿಯು ಸಮುದ್ರದ ಮಧ್ಯದಲ್ಲಿದ್ದು ತೆರೆಗಳಿಂದ ಬಡಿಯಲ್ಪಡುತ್ತಿತ್ತು; ಯಾಕಂದರೆ ಗಾಳಿಯು ಎದುರಾಗಿತ್ತು. |
25. | ಮತ್ತು ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಹೋದನು. |
26. | ಆತನು ಸಮುದ್ರದ ಮೇಲೆ ನಡೆಯುವದನ್ನು ಶಿಷ್ಯರು ನೋಡಿ ಕಳವಳಪಟ್ಟು--ಇದು ಭೂತ ಎಂದು ಭೀತಿಯಿಂದ ಕೂಗಿ ಕೊಂಡರು. |
27. | ಆದರೆ ಯೇಸು ತಕ್ಷಣವೇ ಮಾತನಾಡಿ ಅವರಿಗೆ--ಧೈರ್ಯವಾಗಿರ್ರಿ; ನಾನೇ, ಭಯಪಡಬೇಡಿರಿಅಂದನು. |
28. | ಆಗ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನೇ ಆಗಿದ್ದರೆ ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರಲು ನನಗೆ ಅಪ್ಪಣೆಕೊಡು ಅಂದನು. |
29. | ಅದಕ್ಕಾತನು--ಬಾ ಅಂದನು. ಆಗ ಪೇತ್ರನು ದೋಣಿಯಿಂದ ಇಳಿದು ಯೇಸುವಿನ ಬಳಿಗೆ ಹೋಗು ವದಕ್ಕಾಗಿ ನೀರಿನ ಮೇಲೆ ನಡೆದನು. |
30. | ಆದರೆ ಬಲ ವಾದ ಗಾಳಿಯನ್ನು ನೋಡಿದಾಗ ಅವನು ಭಯಪಟ್ಟು ಮುಣುಗುತ್ತಾ--ಕರ್ತನೇ, ನನ್ನನ್ನು ರಕ್ಷಿಸು ಎಂದು ಕೂಗಿ ಹೇಳಿದನು. |
31. | ತಕ್ಷಣವೇ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು--ಓ ಅಲ್ಪ ವಿಶ್ವಾಸಿಯೇ, ನೀನು ಯಾಕೆ ಸಂದೇಹಪಟ್ಟೆ ಎಂದು ಅವನಿಗೆ ಹೇಳಿದನು. |
32. | ಅವರು ದೋಣಿಯೊಳಗೆ ಬಂದಾಗ ಗಾಳಿನಿಂತು ಹೋಯಿತು. |
33. | ದೋಣಿಯಲ್ಲಿದ್ದವರು ಆತನ ಬಳಿಗೆ ಬಂದು ಆತನನ್ನು ಆರಾಧಿಸಿ--ನಿಜವಾಗಿಯೂ ನೀನು ದೇವಕುಮಾರನೇ ಎಂದು ಹೇಳಿದರು. |
34. | ಅವರು ದಾಟಿ ಗೆನೆಜರೇತ್ ಸೀಮೆಗೆ ಬಂದರು. |
35. | ಆಗ ಅಲ್ಲಿದ್ದ ಜನರು ಆತನ ಗುರುತು ಹಿಡಿದು ಸುತ್ತ ಮುತ್ತಲಿನ ಸೀಮೆಗೆಲ್ಲಾ ಹೇಳಿಕಳುಹಿಸಿ ರೋಗಿಗಳ ನ್ನೆಲ್ಲಾ ಆತನ ಬಳಿಗೆ ತಂದರು. |
36. | ಅವರು ಆತನ ಉಡು ಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿ ಕೊಂಡರು; ಮತ್ತು ಯಾರಾರು ಮುಟ್ಟಿದರೋ ಅವರು ಸಂಪೂರ್ಣವಾಗಿ ಸ್ವಸ್ಥರಾದರು. |
← Matthew (14/28) → |