← Matthew (25/28) → |
1. | ಇದಲ್ಲದೆ ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತಕ್ಕೊಂಡು ಮದಲಿಂಗ ನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋದ ಹತ್ತುಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು. |
2. | ಅವರಲ್ಲಿ ಐದುಮಂದಿ ಬುದ್ಧಿವಂತೆಯರೂ ಐದು ಮಂದಿ ಬುದ್ಧಿಹೀನರೂ ಇದ್ದರು. |
3. | ಬುದ್ಧಿಹೀನರು ತಮ್ಮ ದೀಪಗಳನ್ನು ತಕ್ಕೊಂಡು ತಮ್ಮೊಂದಿಗೆ ಎಣ್ಣೆಯನ್ನು ತಕ್ಕೊಳ್ಳಲಿಲ್ಲ, |
4. | ಬುದ್ದಿವಂತೆಯರು ತಮ್ಮ ದೀಪಗಳೊ ಂದಿಗೆ ಪಾತ್ರೆಯಲ್ಲಿ ಎಣ್ಣೆಯನ್ನೂ ತಕ್ಕೊಂಡರು. |
5. | ಮದಲಿಂಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸಿ ನಿದ್ರಿಸಿದರು. |
6. | ಮಧ್ಯರಾತ್ರಿಯಲ್ಲಿ--ಇಗೋ, ಮದಲಿಂಗನು ಬರುತ್ತಾನೆ; ಅವನನ್ನು ಎದುರುಗೊಳ್ಳುವದಕ್ಕಾಗಿ ಹೊರಡಿರಿ ಎಂಬ ಕೂಗಾ ಯಿತು. |
7. | ಆಗ ಆ ಕನ್ಯೆಯರೆಲ್ಲರೂ ಎದ್ದು ತಮ್ಮ ದೀಪಗಳನ್ನು ಸರಿಪಡಿಸಿಕೊಂಡರು; |
8. | ಬುದ್ಧಿಹೀನರು ಬುದ್ಧಿವಂತೆಯರಿಗೆ-- ನಿಮ್ಮ ಎಣ್ಣೆಯಲ್ಲಿ ನಮಗೆ ಕೊಡಿರಿ; ಯಾಕಂದರೆ ನಮ್ಮ ದೀಪಗಳು ಆರಿಹೋಗಿವೆ ಅಂದರು. |
9. | ಆದರೆ ಬುದ್ಧಿವಂತೆಯರು ಪ್ರತ್ಯುತ್ತರ ವಾಗಿ--ಹಾಗಲ್ಲ, ಅದು ನಮಗೂ ನಿಮಗೂ ಸಾಲದೆ ಹೋದೀತು; ಆದದರಿಂದ ನೀವು ಮಾರು ವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡು ಕೊಳ್ಳಿರಿ ಅಂದರು. |
10. | ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು. |
11. | ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು--ಕರ್ತನೇ, ಕರ್ತನೇ, ನಮಗೆ ಬಾಗಲನ್ನು ತೆರೆ ಅಂದರು. |
12. | ಆದರೆ ಅವನು ಪ್ರತ್ಯುತ್ತರವಾಗಿ--ನಿಮ್ಮನ್ನು ಅರಿ ಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು. |
13. | ಆದದರಿಂದ ಎಚ್ಚರವಾಗಿರ್ರಿ; ಯಾಕಂದರೆ ಮನುಷ್ಯಕುಮಾರನು ಬರುವ ದಿನ ವನ್ನಾಗಲೀ ಗಳಿಗೆಯನ್ನಾಗಲೀ ನೀವು ಅರಿಯದವರಾ ಗಿದ್ದೀರಿ ಅಂದನು. |
14. | ಯಾಕಂದರೆ ಪರಲೋಕರಾಜ್ಯವು ದೂರ ದೇಶಕ್ಕೆ ಪ್ರಯಾಣಮಾಡುವ ಒಬ್ಬ ಮನುಷ್ಯನು ತನ್ನ ಸ್ವಂತ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ. |
15. | ಅವನು ಒಬ್ಬನಿಗೆ ಐದು ತಲಾಂತುಗಳನ್ನು ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ತಕ್ಷಣವೇ ಪ್ರಯಾಣ ಮಾಡಿದನು. |
16. | ತರುವಾಯ ಐದು ತಲಾಂತುಗಳನ್ನು ಹೊಂದಿದ ವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ತಲಾಂತುಗಳನ್ನು ಸಂಪಾದಿಸಿದನು. |
17. | ಅದೇ ಪ್ರಕಾರ ಎರಡು ಹೊಂದಿದವನು ಸಹ ಬೇರೆ ಎರಡನ್ನು ಸಂಪಾದಿಸಿದನು. |
18. | ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗೆದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು. |
19. | ಬಹುಕಾಲವಾದ ಮೇಲೆ ಆ ಸೇವಕರ ಯಜ ಮಾನನು ಬಂದು ಅವರಿಂದ ಲೆಕ್ಕಾ ತೆಗೆದುಕೊಂಡನು. |
20. | ಆಗ ಐದು ತಲಾಂತುಗಳನ್ನು ಹೊಂದಿದ್ದವನು ಬಂದು ಬೇರೆ ಐದು ತಲಾಂತುಗಳನ್ನು ತಂದು--ಒಡೆಯನೇ, ನೀನು ನನಗೆ ಐದು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಬೇರೆ ಐದು ತಲಾಂತುಗಳನ್ನು ನಾನು ಸಂಪಾದಿಸಿದ್ದೇನೆ ಅಂದನು. |
21. | ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು. |
22. | ಎರಡು ತಲಾಂತುಗಳನ್ನು ಹೊಂದಿದ್ದವನು ಸಹ ಬಂದು--ಒಡೆಯನೇ, ನೀನು ನನಗೆ ಎರಡು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಇನ್ನೂ ಎರಡು ತಲಾಂತುಗಳನ್ನು ನಾನು ಸಂಪಾದಿಸಿ ದ್ದೇನೆ ಅಂದನು. |
23. | ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇ ದನ್ನು ಮಾಡಿದ್ದೀ; ಸ್ವಲ್ಪವಾದವುಗಳಲ್ಲಿ ನೀನು ನಂಬಿಗ ಸ್ತನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು. |
24. | ಆಗ ಒಂದು ತಲಾಂತು ಹೊಂದಿದ್ದ ವನು ಬಂದು--ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು; |
25. | ಅದಕ್ಕೆ ನಾನು ಭಯಪಟ್ಟು ಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು. ಇಗೋ, ನಿನ್ನದು ನಿನಗೆ ಸಲ್ಲಿದೆ ಅಂದನು. |
26. | ಅದಕ್ಕೆ ಅವನ ಯಜ ಮಾನನು ಪ್ರತ್ಯುತ್ತರವಾಗಿ--ಮೈಗಳ್ಳನಾದ ಕೆಟ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆ ಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ. |
27. | ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗಾಗಿ ಕೊಡತಕ್ಕದ್ದಾಗಿತ್ತು; ನಾನು ಬಂದಾಗ ನನ್ನ ಸ್ವಂತದ್ದನ್ನು ಬಡ್ಡಿ ಸಹಿತವಾಗಿ ಹೊಂದಿ ಕೊಳ್ಳುತ್ತಿದ್ದೆನು. |
28. | ಆ ತಲಾಂತನ್ನು ತೆಗೆದುಕೊಂಡು ಹತ್ತು ತಲಾಂತುಗಳುಳ್ಳವನಿಗೆ ಕೊಡಿರಿ. |
29. | ಇದ್ದ ಪ್ರತಿ ಯೊಬ್ಬನಿಗೆ ಕೊಡಲ್ಪಡುವದು ಮತ್ತು ಅವನಿಗೆ ಸಮೃದ್ಧಿ ಯಾಗುವದು; ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ತೆಗೆಯಲ್ಪಡುವದು. |
30. | ಮತ್ತು ನಿಷ್ಪ್ರಯೋ ಜಕನಾದ ಈ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಅಂದನು. |
31. | ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು; |
32. | ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು; ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು; |
33. | ಆತನು ಕುರಿಗಳನ್ನು ತನ್ನ ಬಲಗಡೆ ಯಲ್ಲಿಯೂ ಆಡುಗಳನ್ನು ತನ್ನ ಎಡಗಡೆಯಲ್ಲಿಯೂ ನಿಲ್ಲಿಸುವನು. |
34. | ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ; |
35. | ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ; |
36. | ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು. |
37. | ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ |
38. | ನೀನು ಪರದೇಶಿಯಾ ಗಿರುವದನ್ನು ನಾವು ನೋಡಿ ನಿನ್ನನ್ನು ಒಳಕ್ಕೆ ಸೇರಿಸಿ ಕೊಂಡೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು? |
39. | ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನನ್ನು ನೋಡಿ ನಿನ್ನ ಬಳಿಗೆ ಬಂದೆವು ಎಂದು ಹೇಳುವರು. |
40. | ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು. |
41. | ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ. |
42. | ನಾನು ಹಸಿದವನಾಗಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿ ಯುವದಕ್ಕೆ ಕೊಡಲಿಲ್ಲ. |
43. | ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು. |
44. | ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು. |
45. | ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು. |
46. | ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು. |
← Matthew (25/28) → |