← Matthew (3/28) → |
1. | ಆ ದಿನಗಳಲ್ಲಿ ಬಾಪ್ತಿಸ್ಮ ಮಾಡಿಸುವ ಯೋಹಾನನು ಬಂದು ಯೂದಾಯದ ಅಡವಿಯಲ್ಲಿ ಸಾರುತ್ತಾ-- |
2. | ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು. |
3. | ಯಾಕಂದರೆ--ಕರ್ತನ ಮಾರ್ಗವನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದಾಗಿ ಪ್ರವಾದಿಯಾದ ಯೆಶಾಯ ನಿಂದ ಹೇಳಲ್ಪಟ್ಟವನು ಇವನೇ. |
4. | ಈ ಯೋಹಾನನಿಗೆ ಒಂಟೇ ಕೂದಲಿನ ಉಡುಪೂ ಸೊಂಟಕ್ಕೆ ಚರ್ಮದ ನಡುಕಟ್ಟೂ ಇದ್ದವು; ಮತ್ತು ಮಿಡತೆಗಳೂ ಕಾಡು ಜೇನೂ ಇವನಿಗೆ ಆಹಾರವಾಗಿದ್ದವು. |
5. | ಆಗ ಯೆರೂಸಲೇಮಿನವರೂ ಎಲ್ಲಾ ಯೂದಾಯ ದವರೂ ಯೊರ್ದನ್ ಹೊಳೆಯ ಸುತ್ತಲಿರುವ ಎಲ್ಲಾ ಪ್ರದೇಶದವರೂ ಅವನ ಬಳಿಗೆ ಹೊರಟುಹೋದರು. |
6. | ಅವರು ತಮ್ಮ ಪಾಪಗಳನ್ನು ಅರಿಕೆಮಾಡಿ ಯೊರ್ದನಿನಲ್ಲಿ ಅವನಿಂದ ಬಾಪ್ತಿಸ್ಮ ಮಾಡಿಕೊಂಡರು. |
7. | ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು? |
8. | ಹಾಗಾದರೆ ಮಾನಸಾಂತರಕ್ಕೆ ತಕ್ಕ ಫಲ ಗಳನ್ನು ಫಲಿಸಿರಿ; |
9. | ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ. |
10. | ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು. |
11. | ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು. |
12. | ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು. |
13. | ಆಗ ಯೇಸು ಯೋಹಾನನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದ ನಿಗೆ ಬಂದನು. |
14. | ಆದರೆ ಯೋಹಾನನು ಆತನನ್ನು ತಡೆದು--ನಾನು ನಿನ್ನಿಂದ ಬಾಪ್ತಿಸ್ಮ ಮಾಡಿಸಿ ಕೊಳ್ಳುವದು ಅಗತ್ಯವಿರಲಾಗಿ ನೀನು ನನ್ನ ಬಳಿಗೆ ಬರುವದೇನು ಎಂದು ಹೇಳಿದನು. |
15. | ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಸದ್ಯಕ್ಕೆ ಒಪ್ಪಿಕೋ; ಯಾಕಂದರೆ ಎಲ್ಲಾ ನೀತಿಯನ್ನು ಹೀಗೆ ನೆರವೇರಿ ಸುವದು ನಮಗೆ ಯೋಗ್ಯವಾಗಿದೆ ಎಂದು ಹೇಳಿದನು. ಆಗ ಅವನು ಒಪ್ಪಿಕೊಂಡನು. |
16. | ಯೇಸು ಬಾಪ್ತಿಸ್ಮ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೆ ಇಗೋ, ಆತನಿಗೆ ಆಕಾಶಗಳು ತೆರೆಯಲ್ಪಟ್ಟು ದೇವರ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದುಬರುವದನ್ನು ಆತನು ಕಂಡನು. |
17. | ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು. |
← Matthew (3/28) → |