← Matthew (4/28) → |
1. | ಆಗ ಯೇಸು ಸೈತಾನನಿಂದ ಶೋಧಿಸಲ್ಪಡು ವದಕ್ಕಾಗಿ ಆತ್ಮನಿಂದ ಅಡವಿಗೆ ನಡಿಸಲ್ಪಟ್ಟನು. |
2. | ಆತನು ನಾಲ್ವತ್ತು ದಿವಸ ಹಗಲಿರುಳು ಉಪವಾಸವಿದ್ದ ತರುವಾಯ ಹಸಿದನು. |
3. | ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು. |
4. | ಆದರೆ ಆತನು ಪ್ರತ್ಯುತ್ತರವಾಗಿ--ಮನುಷ್ಯನು ರೊಟ್ಟಿ ಮಾತ್ರದಿಂದಲೇ ಜೀವಿಸುವದಿಲ್ಲ, ಆದರೆ ದೇವರ ಬಾಯೊಳಗಿಂದ ಹೊರಡುವ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು. |
5. | ತರುವಾಯ ಸೈತಾನನು ಆತನನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡುಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ-- |
6. | ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ |
7. | ಯೇಸು ಅವನಿಗೆ -- ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಬರೆದದೆ ಎಂದು ಹೇಳಿದನು. |
8. | ಮತ್ತೊಮ್ಮೆ ಸೈತಾನನು ಆತನನ್ನು ಅತ್ಯುನ್ನತವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ-- |
9. | ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಾನು ನಿನಗೆ ಕೊಡುವೆನು ಅಂದನು. |
10. | ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು. |
11. | ಆಗ ಸೈತಾನನು ಆತನನ್ನು ಬಿಟ್ಟನು; ಮತ್ತು ಇಗೋ, ದೇವದೂತರು ಬಂದು ಆತನನ್ನು ಉಪಚರಿಸಿದರು. |
12. | ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟಿದ್ದಾನೆಂದು ಯೇಸು ಕೇಳಿ ಗಲಿಲಾಯಕ್ಕೆ ಹೊರಟುಹೋದನು. |
13. | ಮತ್ತು ಆತನು ನಜರೇತನ್ನು ಬಿಟ್ಟು ಜೆಬುಲೋನ್, ನೆಫ್ತಲೀಮ್ ಮೇರೆಗಳ ಸಮುದ್ರತೀರದಲ್ಲಿರುವ ಕಪೆರ್ನೌಮಿಗೆ ಬಂದು ಅಲ್ಲಿ ವಾಸಿಸಿದನು. |
14. | ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು; ಅದೇನಂದರೆ-- |
15. | ಯೊರ್ದನಿನ ಆಚೆ ಸಮುದ್ರದ ಮಾರ್ಗದಲ್ಲಿರುವ ಜೆಬುಲೋನ್ ಪ್ರಾಂತ್ಯದಲ್ಲಿಯೂ ನೆಫ್ತಲೀಮ್ ಪ್ರಾಂತ್ಯ ಮತ್ತು ಅನ್ಯಜನರ ಗಲಿಲಾಯದಲ್ಲಿಯೂ |
16. | ಕತ್ತಲೆಯಲ್ಲಿ ಕೂತಿದ್ದ ಜನರು ದೊಡ್ಡ ಬೆಳಕನ್ನು ಕಂಡರು; ಮತ್ತು ಮರಣದ ನೆರಳಿನಲ್ಲಿ ಕೂತಿದ್ದ ಆ ಪ್ರಾಂತ್ಯದವರಿಗೆ ಬೆಳಕು ಉದಯವಾಯಿತು ಎಂಬದೇ. |
17. | ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು. |
18. | ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು. |
19. | ಆಗ ಆತನು ಅವರಿಗೆ-- ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಾನು ನಿಮ್ಮನ್ನು ಮಾಡುವೆನು ಅಂದನು. |
20. | ಅವರು ತಕ್ಷಣವೇ ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು. |
21. | ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು. |
22. | ಅವರು ತಕ್ಷಣವೇ ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಆತನನ್ನು ಹಿಂಬಾಲಿಸಿದರು. |
23. | ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು. |
24. | ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು. |
25. | ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು. |
← Matthew (4/28) → |