← Matthew (9/28) → |
1. | ಆಗ ಆತನು ದೋಣಿಯನ್ನು ಹತ್ತಿ ಅಲ್ಲಿಂದ ಹೊರಟು ತನ್ನ ಸ್ವಂತ ಪಟ್ಟಣಕ್ಕೆ ಬಂದನು. |
2. | ಇಗೋ, ಹಾಸಿಗೆಯ ಮೇಲೆ ಮಲಗಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಆತನ ಬಳಿಗೆ ತಂದರು; ಮತ್ತು ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅಂದನು. |
3. | ಆಗ ಇಗೋ, ಶಾಸ್ತ್ರಿಗಳಲ್ಲಿ ಕೆಲವರು-- ಈ ಮನುಷ್ಯನು ದೇವದೂಷಣೆ ಮಾಡುತ್ತಾನೆ ಎಂದು ತಮ್ಮತಮ್ಮಲ್ಲಿ ಅಂದುಕೊಂಡರು. |
4. | ಯೇಸು ಅವರ ಆಲೋಚನೆಗಳನ್ನು ತಿಳಿದು--ನೀವು ಯಾಕೆ ನಿಮ್ಮ ಹೃದಯಗಳಲ್ಲಿ ಕೆಟ್ಟದ್ದನ್ನು ಯೋಚಿಸುತ್ತೀರಿ? |
5. | ಯಾವದು ಸುಲಭ--ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಡೆ ಅನ್ನುವದೋ? |
6. | ಆದರೆ ಮನುಷ್ಯಕುಮಾರನಿಗೆ ಪಾಪ ಗಳನ್ನು ಕ್ಷಮಿಸಿಬಿಡುವದಕ್ಕೆ ಭೂಮಿಯ ಮೇಲೆ ಅಧಿಕಾರ ಉಂಟೆಂದು ನೀವು ತಿಳಿಯಬೇಕು ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ--ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ಹೇಳಿದನು. |
7. | ಆಗ ಅವನು ಎದ್ದು ತನ್ನ ಮನೆಗೆ ಹೊರಟುಹೋದನು. |
8. | ಆದರೆ ಜನರ ಸಮೂಹಗಳು ಅದನ್ನು ನೋಡಿ ಆಶ್ಚರ್ಯಪಟ್ಟು ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಮಹಿಮೆಪಡಿಸಿದರು. |
9. | ತರುವಾಯ ಯೇಸು ಅಲ್ಲಿಂದ ಹಾದು ಹೋಗು ತ್ತಿದ್ದಾಗ ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವದನ್ನು ನೋಡಿ ಅವ ನಿಗೆ--ನನ್ನನ್ನು ಹಿಂಬಾಲಿಸು ಅನ್ನಲು ಅವನು ಎದ್ದು ಆತನನ್ನು ಹಿಂಬಾಲಿಸಿದನು. |
10. | ಇದಾದ ಮೇಲೆ ಯೇಸು ಅವನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಇಗೋ, ಬಹುಮಂದಿ ಸುಂಕ ದವರೂ ಪಾಪಿಗಳೂ ಬಂದು ಆತನೊಂದಿಗೂ ಆತನ ಶಿಷ್ಯರೊಂದಿಗೂ ಕೂತುಕೊಂಡರು. |
11. | ಫರಿಸಾ ಯರು ಅದನ್ನು ನೋಡಿ ಆತನ ಶಿಷ್ಯರಿಗೆ--ನಿಮ್ಮ ಬೋಧಕನು ಸುಂಕದವರ ಮತ್ತು ಪಾಪಿಗಳ ಸಂಗಡ ಯಾಕೆ ಊಟ ಮಾಡುತ್ತಾನೆ ಎಂದು ಕೇಳಿದರು. |
12. | ಆದರೆ ಯೇಸು ಅದನ್ನು ಕೇಳಿ ಅವರಿಗೆ--ಕ್ಷೇಮದಿಂದಿರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವ ರಿಗೆ ವೈದ್ಯನು ಬೇಕು. |
13. | ನೀವು ಹೋಗಿ--ನಾನು ಯಜ್ಞವನ್ನಲ್ಲ; ಕರುಣೆಯನ್ನೇ ಅಪೇಕ್ಷಿಸುತ್ತೇನೆ ಎಂಬದರ ಅರ್ಥವನ್ನು ಕಲಿಯಿರಿ; ಯಾಕಂದರೆ ನಾನು ನೀತಿ ವಂತರನ್ನಲ್ಲ, ಪಾಪಿಗಳನ್ನು ಮಾನಸಾಂತರಪಡು ವದಕ್ಕಾಗಿ ಕರೆಯಲು ಬಂದೆನು ಎಂದು ಹೇಳಿದನು. |
14. | ತರುವಾಯ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು--ನಾವು ಮತ್ತು ಫರಿಸಾಯರು ಬಹಳ ಸಾರಿ ಉಪವಾಸಮಾಡುತ್ತೇವೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸಮಾಡುವದಿಲ್ಲ ಎಂದು ಕೇಳಿದರು. |
15. | ಅದಕ್ಕೆ ಯೇಸು ಅವರಿಗೆ--ಮದಲಿಂಗನು ತಮ್ಮ ಜೊತೆಯಲ್ಲಿರುವ ತನಕ ಮದಲಗಿತ್ತಿಯ ಮನೇ ಮಕ್ಕಳು ದುಃಖಪಡುವರೇ? ಆದರೆ ಮದಲಿಂಗನು ಅವರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಅವರು ಉಪವಾಸ ಮಾಡುವರು. |
16. | ಯಾವನೂ ಹಳೇ ಬಟ್ಟೆಗೆ ಹೊಸ ಬಟ್ಟೆಯ ತುಂಡನ್ನು ಹಚ್ಚುವದಿಲ್ಲ; ಹಚ್ಚಿದರೆ ಅದು ಆ ವಸ್ತ್ರವನ್ನು ಹಿಂಜುವದರಿಂದ ಹರಕು ಹೆಚ್ಚಾಗು ವದು. |
17. | ಇಲ್ಲವೆ ಹೊಸ ದ್ರಾಕ್ಷಾರಸವನ್ನು ಹಳೇ ಬುದ್ದಲಿಗಳಲ್ಲಿ ಜನರು ಹಾಕುವದಿಲ್ಲ; ಹಾಕಿದರೆ ಅವು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗಿ ಬುದ್ದಲಿಗಳು ನಾಶವಾಗುವವು; ಆದರೆ ಅವರು ಹೊಸ ದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕುವರು; ಆಗ ಅವೆರಡೂ ಭದ್ರವಾಗಿರುವವು ಅಂದನು. |
18. | ಆತನು ಈ ವಿಷಯಗಳನ್ನು ಅವರೊಂದಿಗೆ ಮಾತನಾಡುತ್ತಿದ್ದಾಗ ಇಗೋ, ಒಬ್ಬ ಅಧಿಕಾರಿಯು ಬಂದು ಆತನನ್ನು ಆರಾಧಿಸಿ--ನನ್ನ ಮಗಳು ಇದೀಗಲೇ ಸತ್ತು ಹೋಗಿರುವಳು; ಆದರೆ ನೀನು ಬಂದು ಆಕೆಯ ಮೇಲೆ ನಿನ್ನ ಕೈಯನ್ನಿಡು; ಆಗ ಅವಳು ಬದುಕುವಳು ಎಂದು ಹೇಳಿದನು. |
19. | ಆಗ ಯೇಸು ಎದ್ದು ತನ್ನ ಶಿಷ್ಯರೊಂದಿಗೆ ಅವನ ಹಿಂದೆ ಹೋದನು. |
20. | ಆಗ ಇಗೋ, ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದ ಒಬ್ಬ ಸ್ತ್ರೀಯು ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು. |
21. | ಯಾಕಂದರೆ--ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಗುಣವಾಗುವೆನು ಎಂದು ಆಕೆಯು ತನ್ನೊಳಗೆ ಅಂದುಕೊಂಡಿದ್ದಳು. |
22. | ಆದರೆ ಯೇಸು ಹಿಂತಿರುಗಿ ಆಕೆಯನ್ನು ನೋಡಿ--ಮಗಳೇ, ಸಮಾಧಾನದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ ಅಂದನು. ಅದೇ ಗಳಿಗೆಯಲ್ಲಿ ಆ ಸ್ತ್ರೀಯು ಸ್ವಸ್ಥಳಾದಳು. |
23. | ತರುವಾಯ ಯೇಸು ಆ ಅಧಿಕಾರಿಯ ಮನೆ ಯೊಳಗೆ ಬಂದು ಕೊಳಲೂದುವವರನ್ನೂ ಗೊಂದಲ ಮಾಡುವ ಜನರನ್ನೂ ನೋಡಿ |
24. | ಅವರಿಗೆ--ಸ್ಥಳ ಬಿಡಿರಿ; ಯಾಕಂದರೆ ಹುಡುಗಿಯು ಸತ್ತಿಲ್ಲ, ನಿದ್ರೆ ಮಾಡುತ್ತಾಳೆ ಅಂದನು. ಅದಕ್ಕವರು ಆತನನ್ನು ಹಾಸ್ಯ ಮಾಡಿ ನಕ್ಕರು. |
25. | ಆದರೆ ಜನರು ಹೊರಗೆ ಹಾಕಲ್ಪಟ್ಟ ಮೇಲೆ ಆತನು ಒಳಗೆ ಹೋಗಿ ಆಕೆಯ ಕೈಯನ್ನು ಹಿಡಿದಾಗ ಆಕೆಯು ಎದ್ದಳು. |
26. | ಇದರ ಕೀರ್ತಿಯು ಆ ದೇಶದಲ್ಲೆಲ್ಲಾ ಹರಡಿತು. |
27. | ಯೇಸು ಅಲ್ಲಿಂದ ಹೊರಟಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸುತ್ತಾ--ದಾವೀದ ಕುಮಾರನೇ, ನಮ್ಮ ಮೇಲೆ ಕರುಣೆ ಇಡು ಎಂದು ಕೂಗಿ ಹೇಳುತ್ತಿದ್ದರು. |
28. | ಆತನು ಮನೆಯೊಳಕ್ಕೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು; ಆಗ ಯೇಸು ಅವರಿಗೆ--ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ ಎಂದು ಕೇಳಿದಾಗ ಅವರು ಆತನಿಗೆ--ಕರ್ತನೇ, ಹೌದು ಎಂದು ಅಂದರು. |
29. | ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ--ನಿಮ್ಮ ನಂಬಿಕೆಯಂತೆ ನಿಮಗಾಗಲಿ ಎಂದು ಹೇಳಿದನು. |
30. | ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು; ಮತ್ತು ಯೇಸು ಅವರಿಗೆ--ಇದು ಯಾರಿಗೂ ಗೊತ್ತಾಗಬಾರದು ನೋಡಿರಿ ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟು ಹೇಳಿದನು. |
31. | ಆದರೆ ಅವರು ಹೊರಟುಹೋಗಿ ಆ ಸೀಮೆಯಲ್ಲೆಲ್ಲಾ ಆತನ ಕೀರ್ತಿಯನ್ನು ಹಬ್ಬಿಸಿದರು. |
32. | ಅವರು ಹೊರಟು ಹೋಗುತ್ತಿದ್ದಾಗ ಇಗೋ, ದೆವ್ವ ಹಿಡಿದಿದ್ದ ಮೂಕನಾದ ಒಬ್ಬ ಮನುಷ್ಯನನ್ನು ಅವರು ಆತನ ಬಳಿಗೆ ತಂದರು. |
33. | ಮತ್ತು ದೆವ್ವವು ಹೊರಗೆ ಹಾಕಲ್ಪಟ್ಟ ಮೇಲೆ ಮೂಕನು ಮಾತಾಡಿದನು; ಆಗ ಜನಸಮೂಹಗಳವರು ಬೆರ ಗಾಗಿ--ಇಂಥದ್ದು ಎಂದೂ ಇಸ್ರಾಯೇಲಿನಲ್ಲಿ ಕಂಡಿಲ್ಲ ಎಂದು ಹೇಳಿದರು. |
34. | ಆದರೆ ಪರಿಸಾಯರು-- ದೆವ್ವಗಳ ಅಧಿಪತಿಯಿಂದ ಇವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು. |
35. | ತರುವಾಯ ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಸಂಚರಿ ಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಿಸುತಾ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಪ್ರತಿಯೊಂದು ಅಸ್ವಸ್ಥತೆಯನ್ನೂ ರೋಗವನ್ನೂ ವಾಸಿಮಾಡಿದರು. |
36. | ಆದರೆ ಆತನು ಜನರ ಸಮೂಹಗಳನ್ನು ಕಂಡು ಅವರ ಮೇಲೆ ಕನಿಕರಪಟ್ಟನು; ಯಾಕಂದರೆ ಅವರು ಕುರುಬನಿಲ್ಲದ ಕುರಿಗಳಂತೆ ಚದರಿಸಲ್ಪಟ್ಟು ಬಳಲಿದವರಾಗಿದ್ದರು. |
37. | ಆಗ ಆತನು ತನ್ನ ಶಿಷ್ಯ ರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ. |
38. | ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು. |
← Matthew (9/28) → |