← Micah (5/7) → |
1. | ಈಗ ಓ ಸೈನ್ಯಗಳ ಕುಮಾರ್ತೆಯೇ, ಗುಂಪುಗಳಾಗಿ ಕೂಡಿಕೊಳ್ಳಿರಿ; ಅವನು ನಮಗೆ ಮುತ್ತಿಗೆ ಹಾಕಿದ್ದಾನೆ. ಇಸ್ರಾಯೇಲಿನ ನ್ಯಾಯಾಧಿಪತಿಯನ್ನು ಕೋಲಿನಿಂದ ಕೆನ್ನೆಯ ಮೇಲೆ ಹೊಡೆಯುತ್ತಾರೆ. |
2. | ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ. |
3. | ಆದದರಿಂದ ಹೆರುವವಳು ಹೆರುವ ಕಾಲದ ವರೆಗೂ ಅವನು ಅವರನ್ನು ಒಪ್ಪಿಸಿಬಿಡುವನು; ಆಗ ಅವನ ಸಹೋದರರಲ್ಲಿ ಉಳಿದವರು ಇಸ್ರಾಯೇಲಿನ ಮಕ್ಕಳ ಬಳಿಗೆ ಹಿಂದಿರುಗುವರು. |
4. | ಆತನು ಕರ್ತನ ಬಲದಲ್ಲಿಯೂ ತನ್ನ ದೇವರಾದ ಕರ್ತನ ಹೆಸರಿನಲ್ಲಿ ಘನತೆಯಲ್ಲಿಯೂ ನಿಂತುಕೊಂಡು ಮೇಯಿಸುವನು; ಮತ್ತು ಅವರು ನೆಲೆಯಾಗಿರುವರು, ಈಗ ಆತನು ಭೂಮಿಯ ಅಂತ್ಯಗಳ ಮಟ್ಟಿಗೂ ದೊಡ್ಡವನಾಗಿ ರುವನು. |
5. | ಇದಲ್ಲದೆ ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದಾಗ ಈತನೇ ಸಮಾಧಾನವಾಗಿರುವನು; ನಮ್ಮ ಅರಮನೆಗಳಲ್ಲಿ ಅವನು ತುಳಿಯುವಾಗ ನಾವು ಆತನಿಗೆ ವಿರೋಧವಾಗಿ ಏಳು ಕುರುಬರನ್ನೂ ಎಂಟು ಮುಖ್ಯ ಮನುಷ್ಯರನ್ನೂ ಎಬ್ಬಿಸುವೆವು. |
6. | ಅವರು ಅಶ್ಶೂರಿನ ದೇಶವನ್ನು ಕತ್ತಿಯಿಂದಲೂ ನಿಮ್ರೋದನ ದೇಶವನ್ನು ಅದರ ಪ್ರವೇಶಗಳಲ್ಲಿಯೂ ಹಾಳುಮಾಡುವರು; ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದು ನಮ್ಮ ಪ್ರಾಂತ್ಯಗಳಲ್ಲಿ ತುಳಿಯುವಾಗ ಆತನು ನಮ್ಮನ್ನು ತಪ್ಪಿಸುವನು. |
7. | ಇದಲ್ಲದೆ ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ ಕರ್ತನಿಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವದು; ಅದು ಮನುಷ್ಯರಿಗೊಸ್ಕರ ತಡೆಮಾಡುವ ದಿಲ್ಲ; ಮನುಷ್ಯನ ಮಕ್ಕಳಿಗೋಸ್ಕರ ಕಾದುಕೊಳ್ಳುವದಿಲ್ಲ. |
8. | ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ, ಜನಾಂಗಗಳೊಳಗೆ ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವದು; ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸ ಲಾರರು. |
9. | ನಿನ್ನ ಕೈ ನಿನ್ನ ವೈರಿಗಳೆಲ್ಲರ ಮೇಲೆ ಉನ್ನತ ವಾಗಿರುವದು; ನಿನ್ನ ಶತ್ರುಗಳೆಲ್ಲರು ಕಡಿದು ಬಿಡಲ್ಪಡುವರು. |
10. | ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಆಗುವದೇನಂದರೆ--ನಾನು ನಿನ್ನ ಮಧ್ಯದೊಳಗಿಂದ ನಿನ್ನ ಕುದುರೆಗಳನ್ನು ಕಡಿದುಬಿಟ್ಟು ನಿನ್ನ ರಥಗಳನ್ನು ನಾಶಮಾಡುವೆನು. |
11. | ನಿನ್ನ ದೇಶದ ಪಟ್ಟಣಗಳನ್ನು ಕಡಿದುಬಿಟ್ಟು ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು. |
12. | ನಿನ್ನ ಕೈಯೊಳಗಿಂದ ಮಂತ್ರತಂತ್ರವನ್ನು ಕಡಿದು ಬಿಡುವೆನು; ಕಣಿ ಹೇಳುವವರು ನಿನಗೆ ಇನ್ನು ಇರು ವದಿಲ್ಲ. |
13. | ನಿನ್ನ ಕೆತ್ತಿದ ವಿಗ್ರಹಗಳನ್ನೂ ನಿಂತಿರುವ ನಿನ್ನ ಪ್ರತಿಮೆಗಳನ್ನೂ ನಿನ್ನ ಮಧ್ಯದೊಳಗಿಂದ ಕಡಿದು ಬಿಡುವೆನು; ನೀನು ಇನ್ನು ಸ್ವಂತ ಕೈಕೆಲಸಗಳನ್ನು ಆರಾಧಿಸುವದಿಲ್ಲ. |
14. | ನಿನ್ನ ತೋಪುಗಳನ್ನು ನಿನ್ನ ಮಧ್ಯ ದೊಳಗಿಂದ ಕಿತ್ತುಹಾಕಿ ನಿನ್ನ ಪಟ್ಟಣಗಳನ್ನು ನಾಶ ಮಾಡುವೆನು. |
15. | ಇದಲ್ಲದೆ ಕಿವಿಗೊಡದೆ ಇದ್ದ ಜನಾಂಗಗಳಿಗೆ ಕೋಪದಿಂದಲೂ ಉಗ್ರದಿಂದಲೂ ಮುಯ್ಯಿ ತೀರಿಸುವೆನು. |
← Micah (5/7) → |