← Nahum (2/3) → |
1. | ಚೂರುಚೂರಾಗಿ ಒಡೆದು ಬಿಡುವವನು ನಿನ್ನ ಎದುರಿಗೆ ಬಂದಿದ್ದಾನೆ; ಆಯುಧ ಗಳನ್ನು ಭದ್ರಪಡಿಸು; ದಾರಿಯನ್ನು ಕಾಯಿ; ನಡುವನ್ನು ಬಲಪಡಿಸಿಕೋ, ನಿನ್ನ ಶಕ್ತಿಯನ್ನು ಬಲವಾಗಿ ಗಟ್ಟಿ ಮಾಡಿಕೋ. |
2. | ಕರ್ತನು ಯಾಕೋಬನ ಹೆಚ್ಚಳವನ್ನು ಇಸ್ರಾಯೇಲಿನ ಹೆಚ್ಚಳದ ಹಾಗೆಯೇ ತಿರುಗಿಸಿಬಿಟ್ಟಿ ದ್ದಾನೆ; ಬರಿದು ಮಾಡುವವರು ಅವರನ್ನು ಬರಿದು ಮಾಡಿ ಅವರ ದ್ರಾಕ್ಷೇ ಬಳ್ಳಿಗಳನ್ನು ಕೆಡಿಸಿದ್ದಾರೆ. |
3. | ಆತನ ಬಲಾಢ್ಯದ ಡಾಲು ಕೆಂಪಾಗಿದೆ; ಶೂರರು ರಕ್ತವರ್ಣದವರಾಗಿದ್ದಾರೆ; ಆತನು ಸಿದ್ಧಮಾಡುವ ದಿನ ದಲ್ಲಿ ರಥಗಳು ಹೊಳೆಯುವ ದೀವಟಿಗೆಗಳ ಹಾಗೆ ಇರುವವು; ಸೈಪ್ರಸ್ ಮರಗಳು ಭಯಂಕರವಾಗಿ ಅಲ್ಲಾ ಡಿಸಲ್ಪಡುವವು. |
4. | ರಥಗಳು ಬೀದಿಗಳಲ್ಲಿ ರಭಸವಾಗಿ ಓಡಾಡುವವು. ಹೆದ್ದಾರಿಗಳಲ್ಲಿ ಒಂದಕ್ಕೊಂದು ತಗಲು ವವು; ದೀವಟಿಗೆಗಳ ಹಾಗೆ ತೋರುವವು, ಮಿಂಚುಗಳ ಹಾಗೆ ಓಡುವವು. |
5. | ಆತನು ತನಗೆ ಯೋಗ್ಯವಾದವ ರನ್ನು ಗಮನಿಸುವನು. ಅವರು ತಮ್ಮ ನಡೆಯಲ್ಲಿ ಎಡವುವರು; ಅದರ ಗೋಡೆಯ ಬಳಿಗೆ ತ್ವರೆಯಾಗಿ ಬರುವರು; ರಕ್ಷಣೆಯು ಸಿದ್ಧಮಾಡಲ್ಪಡುವದು. |
6. | ನದಿಗಳ ಬಾಗಲುಗಳು ತೆರೆಯಲ್ಪಡುವವು; ಅರಮನೆ ಕರಗಿಹೋಗುವದು. |
7. | ಸ್ಥಿರವಾಗಿದ್ದವಳು ಸೆರೆಗೆ ಒಯ್ಯಲ್ಪಡುವಳು, ಮೇಲಕ್ಕೆ ತರಲ್ಪಡುವಳು; ಅವಳ ದಾಸಿಯರು ಪಾರಿವಾಳಗಳ ಶಬ್ದದಂತೆ ಮೂಲ್ಗುತ್ತ ಎದೆಬಡುಕೊಳ್ಳುವರು. |
8. | ನಿನೆವೆ ಹುಟ್ಟಿದಂದಿನಿಂದ ನೀರಿನ ಕೆರೆಯ ಹಾಗಿತ್ತು; ಆದರೂ ಅವರು ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ ಅಂದರೂ ಒಬ್ಬನೂ ಹಿಂದಕ್ಕೆ ನೋಡುವದಿಲ್ಲ. |
9. | ಬೆಳ್ಳಿಯನ್ನು ಸುಲುಕೊಳ್ಳಿರಿ; ಬಂಗಾರವನ್ನು ಸುಲುಕೊಳ್ಳಿರಿ; ಕೂಡಿಸಿಟ್ಟ ಧನಕ್ಕೂ ಸಕಲ ವಿಧವಾದ ಶ್ರೇಷ್ಠ ವಸ್ತುಗಳ ನಿಧಿಗೂ ಪಾರವೇ ಇಲ್ಲ. |
10. | ಅದು ಬರಿದಾಗಿಯೂ, ಬೈಲಾಗಿಯೂ, ಹಾಳಾ ಗಿಯೂ ಇತ್ತು; ಹೃದಯ ಕರಗುತ್ತದೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ. ಎಲ್ಲಾ ನಡುವುಗಳಲ್ಲಿ ಹೆಚ್ಚು ಸಂಕಟ ಉಂಟು; ಎಲ್ಲಾ ಮುಖಗಳು ಕಳೆ ಗುಂದುತ್ತವೆ. |
11. | ಸಿಂಹದ ಗವಿಯೂ ಎಳೇ ಸಿಂಹಗಳು ಮೇಯುವ ಸ್ಥಳವು ಎಲ್ಲಿ? ಅಲ್ಲಿ ಮುದಿಸಿಂಹ, ಸಿಂಹಿಣಿ ಸಿಂಹದ ಮರಿಗಳು ನಡೆದಾಡಿದರೂ ಯಾರೂ ಹೆದರಿ ಸಲಿಲ್ಲವಲ್ಲಾ? |
12. | ಸಿಂಹವು ತನ್ನ ಮರಿಗಳಿಗೆ ಸಾಕಾ ಗುವಷ್ಟು ಸೀಳಿ ತನ್ನ ಸಿಂಹಿಣಿಗಳಿಗೋಸ್ಕರ ಕೊರಳು ಹಿಸುಕಿ ಕೊಳ್ಳೆಯಿಂದ ತನ್ನ ಗವಿಗಳನ್ನೂ ಸುಲಿಗೆಯಿಂದ ತನ್ನ ಗುಹೆಗಳನ್ನೂ ತುಂಬಿಸುತ್ತಿತ್ತು. |
13. | ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ. |
← Nahum (2/3) → |